ಬೆಂಗಳೂರು: ವಿದ್ಯಾರ್ಥಿಗಳು ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವವರು. ಹೀಗಾಗಿ ಡ್ರಗ್ಸ್ನಂತಹ ಮಾದಕ ವಸ್ತುಗಳಿಂದ ದೂರವಿರಿ. ಕಾಲ್ನಡಿಗೆ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾದಕವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ದಿನ ಆಚರಣೆ ಮಾಡುತ್ತಿದ್ದೇವೆ. ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕೃತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ಇಂದು ವಿಶ್ವಮಟ್ಟದಲ್ಲಿ ಹೆಸರು ಬಂದಿದೆ. ಇಲ್ಲಿರುವ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಡಿ ಕೆ ಶಿವಕುಮಾರ್ ಕೂಡ ಆಗಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತ ದುಶ್ಚಾಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಗುರಿ ಸೇರಿ, ಸಾಧನೆ ಮಾಡಲು ಸಾಧ್ಯ. ಇಂದು ನಾನು ನಿಮ್ಮ ಜೊತೆ ಜಾಥಾದಲ್ಲಿ ಹೆಜ್ಜೆ ಹಾಕುತ್ತೇನೆ. ಈ ಜಾಥಾ ನಿಮ್ಮ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯಲಿದೆ. ಮಾದಕ ವಸ್ತುಗಳ ವಿರುದ್ಧ…
Author: Prajatv Kannada
ಬೆಂಗಳೂರು: ಮಾದಕ ಮುಕ್ತ ರಾಜ್ಯ ಮಾಡುವುದಕ್ಕೆ ನಾವು ಪಣ ತೊಟ್ಟಿದ್ದೇವೆ. ಪ್ರತಿ ದಿನ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಬಹಳಷ್ಟು ದೊಡ್ಡ ದೊಡ್ಡ ವ್ಯಕ್ತಿಗಳು ಮಾದಕ ವ್ಯಸನಿಗಳಾಗಿದ್ದಾರೆ. ಇಲಾಖೆ ಮಾದಕ ವಸ್ತು ಮುಕ್ತ ರಾಜ್ಯ ಮಾಡಲು ಹೊಣೆ ಹೊತ್ತಿದೆ. ಡ್ರಗ್ಸ್ ಮಾರಾಟ ಮಾಡುವವರ ಮೇಲೆ ಕಠಿಣ ಕೇಸ್ ಹಾಕುತ್ತೇವೆ. ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಲು ಸಹಾಯವಾಣಿ ಓಪನ್ ಮಾಡುತ್ತೇವೆ. ಸಹಾಯವಾಣಿಗೆ ಕರೆ ಮಾಡುವವರ ಹೆಸರನ್ನು ಬಹಿರಂಗಪಡಿಸಲ್ಲ ಎಂದು ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಆಯೋಜಿಸಲಾಗಿದ್ದ ಮಾದಕವಸ್ತು ವಿರೋಧಿ ದಿನ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ಬೆಂಗಳೂರು: ಶಾಲಾ ಮಕ್ಕಳಲ್ಲಿ ಡ್ರಗ್ ಬಗ್ಗೆ ಜಾಗೃತಿ ಮೂಡಿಸುವ ತಂತ್ರಕ್ಕೆ ಮುಂದಾಗಿದ್ದಾರೆ. ಡ್ರಗ್ಸ್ ಸೇವನೆ, ಅದರಿಂದಾಗುವ ದುಷ್ಪರಿಣಾಮ ಹಾಗೂ ಆರೋಗ್ಯದಲ್ಲಾಗುವ ನಷ್ಟ, ಡ್ರಗ್ಸ್ನಿಂದ ಆಗುವ ಅನಾಹುತಗಳ ಬಗ್ಗೆ ಶಿಕ್ಷಕರಿಂದಲೇ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಪಠ್ಯದಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಸೇರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ ಪೊಲೀಸರು ಡ್ರಗ್ಸ್ ಸಂಬಂಧ ಹಲವು ಕಾರ್ಯಾಚರಣೆ ನಡೆಸುತ್ತಿದ್ದು ಯುವಕರು ಹೆಚ್ಚಾಗಿ ಮಾದಕ ಲೋಕಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಪತ್ತೆಯಾಗಿದೆ. ಯುವಜನತೆ ಹೆಚ್ಚು ಮಾದಕ ವ್ಯಸನಿಗಳಾಗುತಿದ್ದಾರೆ. ಕಾಲೇಜು ಹಂತದಲ್ಲಿರುವ ಮಕ್ಕಳೇ ಹೆಚ್ಚು ಮಾದಕ ದುಷ್ಚಟಕ್ಕೆ ಬಲಿಯಾಗುತಿದ್ದಾರೆ. ಹೀಗಾಗಿ ಶಾಲಾ ಹಂತದಲ್ಲೇ ಮಕ್ಕಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು ಪ್ರಯತ್ನದ ಹಂತವಾಗಿ ಬೆಂಗಳೂರು ಪೊಲೀಸ್ ಕಮಿಷನರ್, ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಿದ್ದಾರೆ.
ಬೆಂಗಳೂರು: ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗ. ಇದರಿಂದ ನಮ್ಮ ಸಮಾಜವನ್ನುರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ಮಾತಾಡಿದರು. ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ತುಂಬಿದರು. ನಂತರ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೂ ಜಾಗೃತಿ ಜಾಥಾದಲ್ಲಿ ಮಕ್ಕಳ ಜತೆ ಹೆಜ್ಜೆ ಹಾಕಿದರು.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನೈತಿಕ ಸಂಬಂಧ ಶಂಕೆಗೆ ಬೇಸತ್ತು ಪತ್ನಿ ಪ್ರಿಯಾಂಕಾಳ ಗುಪ್ತಾಂಗಕ್ಕೆ ಚಾಕು ಇರಿದಿರುವ ಪತಿ ದಯಾನಂದ ಈ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಪತ್ನಿ ಪ್ರಿಯಾಂಕ ಅತಿಯಾಗಿ ಪೋನ್ ನಲ್ಲಿ ಮಾತಾಡ್ತಿದ್ಲು ಅಂತಾ ಗಲಾಟೆ ತೆಗೆದು ಚಾಕು ಇರಿದಿದ್ದಾನೆ ಈ ರಭಸಕ್ಕೆ ತೀವ್ರ ರಕ್ತಸ್ರಾವ ವಾಗಿದ್ದ ಗಾಯಾಳು ಪ್ರಿಯಾಂಕಾ ಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆದಿದೆ. ಚಾಕು ಇರಿತ ಪತಿ ದಯಾನಂದನನ್ನು ಆಡುಗೋಡಿ ಪೊಲೀಸರು ಬಂಧಿಸಿ ವಿಚಾರನೆ ಮುಮದುವರೆಸಿದ್ದಾರೆ.
ತುಮಕೂರು: ಮಕ್ಕಳಲ್ಲಿ ದಿಢೀರನೆ ಕಾಣಿಸಿಕೊಂಡ ಕಪ್ಪು ಚುಕ್ಕೆಗಳು ಕಾಣಿಸಿಕೊಂಡ ಘಟನೆಯೊಂದು ತುಮಕೂರು ಜಿಲ್ಲೆ ತುರುವೇಕೆರೆ ಹಾಗೂ ಕೊರಟಗೆರೆಯಲ್ಲಿ ಗ್ರಾಮದಲ್ಲಿ ವರದಿಯಾಗಿದೆ. ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳಲ್ಲಿ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಯಲಚೇನಹಳ್ಳಿ ಗ್ರಾಮದ 5 ಮಕ್ಕಳಲ್ಲಿ ಕಾಣಿಸಿಕೊಂಡಿವೆ. ಮಕ್ಕಳ ಅಂಗಾಲು- ಅಂಗೈಲ್ಲಿ ಕಾಣಿಸಿಕೊಂಡಿದ್ದು, ಇದೀಗ ಇಬ್ಬರು ಶಿಕ್ಷಕರೂ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ತುರುವೇಕೆರೆ ತಾಲೂಕು ಆಸ್ಪತ್ರೆಯ ಚರ್ಮ ತಜ್ಞೆ ಡಾ.ಮಧುಮತಿ ಗ್ರಾಮಕ್ಕೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಭೇಟಿ ಮಾಡಿ ತಪಾಸಣೆ ನಡೆಸಿದರು.
ಹುಬ್ಬಳ್ಳಿ: 5 ಕೆಜಿ ಅಕ್ಕಿ ಕೊಡಲು ಆರಂಭ ಮಾಡಿದ್ದು ಯುಪಿಎ ಸರ್ಕಾರ. ಇದು ನರೇಂದ್ರ ಮೋದಿ ಅಕ್ಕಿ ಅಲ್ಲ, ಯುಪಿಎ ಅಕ್ಕಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರತೆ ಕಾಯ್ದೆ ತಂದಿದ್ದೇವೆ. ಈ ಕಾಯ್ದೆ ಮೂಲಕ ಎಲ್ಲರಿಗೂ ತಲಾ 5 ಕೆಜಿ ಅಕ್ಕಿ ನೀಡಿದ್ದೇವೆ. ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೇವೆ. ಕೇಂದ್ರದ 5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದೇವು. ಮಾತುಕೊಟ್ಟಂತೆ ರಾಜ್ಯದ ಜನರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಅಡೂರು : ಅಡೂರಿನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಪ್ರೌಢಶಾಲಾ ವಿಭಾಗದ ಸೋಶಿಯಲ್ ಸಯನ್ಸ್ ಪಠ್ಯವನ್ನು ಕಲಿಸಲು ಕನ್ನಡ ತಿಳಿಯದ ಮಲಯಾಳಿ ಶಿಕ್ಷಕಿಯನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಅಡೂರು ಶಾಲೆಯ ಕನ್ನಡ ವಿದ್ಯಾರ್ಥಿಗಳು ಹಾಗೂ ಕನ್ನಡ ಪೋಷಕರು ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ. ಪ್ರತೀ ಮಗುವಿಗೂ ಕೂಡಾ 6ರಿಂದ 14ನೇ ವಯಸ್ಸಿನ ತನಕ ಮಗುವಿನ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕೆಂಬ ಕಾನೂನು ಇದೆ. ಆದರೆ ಅಡೂರು ಶಾಲೆಯಲ್ಲಿ ಕೇರಳ ಶಿಕ್ಷಣ ಇಲಾಖೆಯು ಮಕ್ಕಳ ಮಾತೃಭಾಷಾ ಶಿಕ್ಷಣದ ಹಕ್ಕನ್ನು ಕಸಿಯುತ್ತಿದೆ. ಕನ್ನಡ ಮಕ್ಕಳಿಗೆ ಕನ್ನಡ ಮಾತೃಭಾಷೆಯಲ್ಲೇ ಶಿಕ್ಷಣ ದೊರೆಯಬೇಕಿದೆ. ಈಗ ನೇಮಕವಾದ ಶಿಕ್ಷಿಕಿಗೆ ಸರಿಯಾಗಿ ಕನ್ನಡ ಬರೆಯಲು ಹಾಗೂ ಓದಲು ಬರುತ್ತಿಲ್ಲ. ಅವರ ಪಾಠ ಏನೇನೂ ಅರ್ಥವಾಗುತ್ತಿಲ್ಲ ಎಂದು ಮಕ್ಕಳು ಹೇಳುತ್ತಿದ್ದಾರೆ. 10ನೇ ತರಗತಿಯ ತಮ್ಮ ಜೀವನದ ನಿರ್ಣಾಯಕ ಪರೀಕ್ಷೆಯನ್ನು ಎದುರಿಸಲು ಸಿದ್ಧರಾದ ಕನ್ನಡ ಮಕ್ಕಳಿಗೆ ನೇಮಕವಾದ ಮಲಯಾಳಿ ಮಾತೃಭಾಷೆಯ ಶಿಕ್ಷಕಿಯಿಂದ ಕಲಿಸಲು ಸಾಧ್ಯವಿಲ್ಲ. ಕನ್ನಡ ಮಕ್ಕಳ ಶೈಕ್ಷಣಿಕ ಅಗತ್ಯವನ್ನು ಸರ್ಕಾರ ಒದಗಿಸಬೇಕು. ಈಗಾಗಲೇ ನೇಮಕವಾದ…
ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು (Training Aircraft) ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆ ಪೈಲಟ್ ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಷ (Emergency Landing) ಮಾಡಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಕಲಬುರಗಿ ವಿಮಾನ ನಿಲ್ದಾಣದ ಟ್ರೈನಿಂಗ್ ವಿಮಾನ ಹಾರಾಟ ಪ್ರಾರಂಭಿಸಿದ ನಂತರ ಅದರ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿಮೀ ಹಾರಾಟದ ಬಳಿಕ ವಿಮಾನದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆ ಪೈಲಟ್ ತಕ್ಷಣವೇ ಹತ್ತಿರದ ಜಮೀನಿನಲ್ಲಿ ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್ ಪೈಲಟ್ ಹಾಗೂ ಟ್ರೈನಿ ಪೈಲಟ್‌ಗಳು ಅಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ: ಗಂಡ-ಹೆಂಡತಿ (Husband- Wife Fight Hassan) ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತೇ ಇದೆ. ಆದರೆ ಇಲ್ಲೊಂದು ದಂಪತಿಯ ಕಲಹ ಬೀದಿಗೆ ಬಂದಿದೆ. ಈ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಹೌದು. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ ಮೇಲೆ ಪತಿ ಅಮಾನುಷವಾಗಿ ಹಲ್ಲೆ ಮಾಡುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆಗೈದಿದ್ದು ಯಾಕೆ..?: 18 ವರ್ಷಗಳ ಹಿಂದೆ ವಿವಾಹವಾಗಿದ್ದ ಶ್ರೀನಿವಾಸ್ ಹಾಗೂ ಸವಿತಾ ಕಳೆದ ಎರಡು ವರ್ಷಗಳಿಂದ ಒಂದೇ ಮನೆಯಲ್ಲಿ ವಿಭಾಗ ಮಾಡಿಕೊಂಡು ವಾಸ ಮಾಡುತ್ತಿದ್ದರು. ಪತಿಯಿಂದ ವಿಚ್ಛೇದನಕ್ಕಾಗಿ ಕಾನೂನು ಹೋರಾಟ ನಡೆಸುತ್ತಿರುವ ಸವಿತಾ ಆಸ್ತಿ ವಿಭಾಗಕ್ಕೂ ಪತಿ ಮೇಲೆ ಕೇಸ್ ಹಾಕಿದ್ದಳು. ಶನಿವಾರ ಸಂಜೆ ಸೈಟ್ ಸೇಲ್ ಸಂಬಂಧ ಸವಿತಾ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದಾನೆ. ಈ ವೇಳೆ ಎದುರು ಮಾತನಾಡಿದ ಪತ್ನಿ ಮೇಲೆ ಮಚ್ಚು ಹಾಗೂ ರಾಡ್‍ನಿಂದ ಹಲ್ಲೆ…