ಮಂಡ್ಯ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿಯಲ್ಲಿ (Jevargi) ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ ಎಂಬಾಕೆಯನ್ನು ವರಿಸಿದ್ದ. ಮದುವೆಯಾದಾಗಿನಿಂದ ಇವರಿಬ್ಬರ ಮಧ್ಯೆ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ನಡೆಯುತ್ತಲೇ ಇತ್ತು. ಬುಧವಾರ ಈತ ತನ್ನ ತಂದೆ-ತಾಯಿಯೊಂದಿಗೆ ಜಗಳ ಮಾಡಿಕೊಂಡು ಶ್ರೀರಂಗಪಟ್ಟಣ (Srirangapatna) ಸಮೀಪದ ಮರಳಗಾಲ ಗ್ರಾಮದ ವಿರೂಪಾಕ್ಷ ಎಂಬವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ನಂತರ ಅತ್ತೆ-ಮಾವನ ಮನೆಗೆ ಬಂದಿದ್ದ. ಅಲ್ಲದೇ ನಮಗೆ ಇಲ್ಲಿಯೇ ಕೆಲಸ ಕೊಡಿಸಿ, ಕೆಲಸ ಮಾಡಿಕೊಂಡು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್ ಹೇಳಿದ್ದ. ಇದಕ್ಕೆ ಒಪ್ಪಿಕೊಂಡ ಅವರ ಅತ್ತೆ-ಮಾವ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಗ್ಗಿನ ಜಾವ ಏಕಾಏಕಿ ಶ್ರೀಕಾಂತ್ ತನ್ನ ಹೆಂಡತಿಗೆ ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲೇ ಪಕ್ಕದಲ್ಲಿದ್ದ ಆದರ್ಶ್ (4) ಮತ್ತು ಅಮೂಲ್ಯ…
Author: Prajatv Kannada
ಬೆಂಗಳೂರು: ಜೂನ್ 26 ವಿಶ್ವ ಮಾದಕ ವಸ್ತು ವಿರೋಧಿ ದಿನವಾಗಿದ್ದು ಇತ್ತೀಚಿನ ವರ್ಷಗಳಲ್ಲಿ ಯುವಕರು ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರು ಪೊಲೀಸರ ತಂಡದಿಂದ ಬರೋಬ್ಬರಿ 57 ಕೋಟಿ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. 1933 ಪ್ರಕರಣ ದಾಖಲಿಸಿ 57 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಭರ್ಜರಿ ಕಾರ್ಯಾಚರಣೆ ನಡೆಸಿದ ನಗರ ಪೊಲೀಸರು 3746 ಕೆಜಿ ಗಾಂಜಾ ಹಾಗೂ 167 ಕೆಜಿ ಇತರೆ ಮಾದಕವಸ್ತು ಹಾಗೂ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆಂಧ್ರ, ಒಡಿಶಾ, ತಮಿಳುನಾಡು, ಗೋವಾ, ಆಫ್ರಿಕಾ, ಹಾಗೂ ಡಾರ್ಕ್ ವೆಬ್ ಮೂಲಕ ನಗರಕ್ಕೆ ಡ್ರಗ್ಸ್ ಸಫ್ಲೈ ಆಗುತ್ತಿದ್ದು ಬೇರೆ ಬೇರೆ ಕಡೆಗಳಿಂದ ನಗರಕ್ಕೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ್ದಾರೆ. ಇವರು ಯುವತಿಯರು, ಟೆಕ್ಕಿಗಳು, ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು. ಇಂದು ಮಾದಕವಸ್ತು ಮಾರಾಟ & ಸೇವನೆ ವಿರೋಧಿ ದಿನ ಹಿನ್ನೆಲೆ ವಶಪಡಿಸಿಕೊಂಡ ಮಾದಕವಸ್ತುಗಳನ್ನು ಪೊಲೀಸರು ದಾಬಸ್ಪೇಟೆಯ…
ಬೆಂಗಳೂರು: ಹಿರಿಯ ವಕೀಲ ಸಿ.ವಿ ನಾಗೇಶ್ ಅವರ ಪುತ್ರ ಅರುಣ್ ನಾಗೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಕುಟುಂಬದ ಜೊತೆಗೆ ಊಟಿಗ ಪ್ರವಾಸಕ್ಕೆ ತೆರಳಿದ್ದ ಅವರು, ಹೋಟೆಲ್ ಒಂದರಲ್ಲಿ ಇಂದು ಬೆಳಗ್ಗೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಆ ನಂತರ ಮೃತ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಮಧ್ಯಾಹ್ನ ವೇಳೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.
ಬೆಂಗಳೂರು: ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಬೆಂಗಳೂರಿನ ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ನೂತನ ಶಾಸಕರ ತರಬೇತಿ ಶಿಬಿರಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ನೆಲಮಂಗಲ ಸಮೀಪದ ಕ್ಷೇಮವನದಲ್ಲಿ ನಡೆಯುತ್ತಿರುವ ಶಿಬಿರ ಆಗಿದ್ದು ಶಾಸಕರ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜಭವನಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಮತಾಂತರ ನಿಷೇಧ ಕಾಯ್ದೆ..ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ ವಿಚಾರ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ . ಆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು1984 ರಲ್ಲಿಯೇ ಕಾಂಗ್ರೆಸ್ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿತ್ತುಬಿಜೆಪಿ ಅದನ್ನ ಕೆಲ ಬದಲಾವಣೆ ಮಾಡಿತ್ತು ಅಷ್ಟೇ ನೀವೇ ಕಾಯ್ದೆ ಮಾಡಿ, ಈಗ ವಿರೋಧ ಮಾಡ್ತಿರೋದು ಸರಿನಾ.?ರೈತರಿಗೆ ಅನ್ಯಾಯ ಮಾಡುವ ಕೆಲ್ಸ ಮಾಡ್ತಿದ್ದಿರಾ ಅಂತ ಆಕ್ರೋಶ. ಸೋನಿಯಾ ಗಾಂಧಿ ಒಲೈಸೋಕೆ ಈ ರೀತಿ ಮಾಡ್ತಾ ಇದ್ದೀರಾ.?ಮುಸ್ಲಿಂ ಓಲೈಕೆ ಮಾಡೋದೇ ಕಾಂಗ್ರೆಸ್ ನ ಕಾಯಕವಾಗಿದೆ ಬಿಜೆಪಿ ಮಾಡಿದ ತಪ್ಪಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಪಠ್ಯದಲ್ಲಿ ಸ್ವತಂತ್ರ್ಯ ಹೋರಾಟಗಾರರ ಪಠ್ಯ ತೆಗೆದಿರೋದು ಸರಿಯಲ್ಲಅಧಿವೇಶನದಲ್ಲಿ ಸರ್ಕಾರ ಯಾವ ನಿಲುವು ಕೈಗೊಳ್ಳೊತ್ತೋ ಕಾದು ನೋಡೋಣಾ ಒಂದು ವೇಳೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿದ್ರೆ ರಾಜ್ಯಾದ್ಯಂತ ಹೋರಾಟ ಅಧಿವೇಶನದಲ್ಲಿ ಒಪ್ಪಿಗೆ ಪಡೆದ್ರೆ ಅಂತಿಮ ಅಂಕಿತ ಹಾಕೋದು ರಾಜ್ಯಪಾಲರು ಹೀಗಾಗಿ…
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ 15 ದಿನದಲ್ಲಿ ಬರೋಬ್ಬರಿ 7 ಕೋಟಿ ಮಹಿಳೆಯರ ಪ್ರಯಾಣಿಸಿದ್ದಾರೆ. ಶನಿವಾರ ಒಂದೇ ದಿನ 58,14,524 ಮಹಿಳಾ ಪ್ರಯಾಣಿಕರ ಓಡಾಟ, ಕೆಎಸ್‌ಆರ್‌ಟಿಸಿ ಬಸ್ನಲ್ಲಿ ಶನಿವಾರ 17,29,314 ಮಹಿಳೆಯರ ಪ್ರಯಾಣ, ಬಿಎಂಟಿಸಿ ಬಸ್ನಲ್ಲಿ ಶನಿವಾರ 18,95,144 ಮಹಿಳೆಯರ ಪ್ರಯಾಣ, ವಾಯವ್ಯ ಸಾರಿಗೆ ಬಸ್ನಲ್ಲಿ 14,01,910 ಮಹಿಳೆಯರ ಪ್ರಯಾಣ, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 7,88,156 ಮಹಿಳೆಯರ ಪ್ರಯಾಣ, ಜೂ.11ರಿಂದ ಜೂ.24ರವರೆಗೆ 7,15,58,775 ಮಹಿಳೆಯರು ಪ್ರಯಾಣ ಮಾಡಿದ್ದು 7,15,58,775 ಮಹಿಳಾ ಪ್ರಯಾಣಿಕರ ಟಿಕೆಟ್ ವೆಚ್ಚ ₹166,09,27,526 ರೂ ಆಗಿದೆ. ವೀಕೆಂಡ್ ರಷ್ ತಡೆಯಲು ಮಹಿಳೆಯರ ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್ ಜಾರಿ ಹಾಗಾದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ? -ವೀಕೆಂಡ್ ನಲ್ಲಿ ಬಸ್ ಗಳ ಸಂಖ್ಯೆ ಹೆಚ್ಚಳ -KSRTCಯಲ್ಲಿ ಪುರುಷರಿಗೆ ಮೀಸಲಿಟ್ಟ ಆಸನಗಳನ್ನ ನಿರ್ವಾಹಕರು ಪುರುಷರಿಗೆ ಸಿಗುವಂತೆ ಮೇಲ್ವಿಚಾರಣೆ -ನಿಲ್ದಾಣಗಳಲ್ಲಿ ಸರತಿ ಸಾಲಿನಲ್ಲಿ ಬಸ್ ಹತ್ತುವ ವ್ಯವಸ್ಥೆ..…
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಬಿಬಿಎಂಪಿ ಸರ್ವೆಗೆ ಯೋಜಿಸಿದ್ದು ಡ್ರೋನ್ ಬಳಕೆಗೆ ಮುಂದಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ವಾಹನ ದಟ್ಟಣೆಯನ್ನು ನಿಯಂತ್ರಿಸಲು ಇತ್ತೀಚೆಗೆ ಡ್ರೋನ್ ಮೊರೆ ಹೋಗಿತ್ತು. ಇದೀಗ ಬಿಬಿಎಂಪಿ ಡ್ರೋನ್ ತಂತ್ರಜ್ಞಾನದ ಮೂಲಕ ನಾಯಿಗಳ ಗಣತಿ ಮಾಡಲು ಸಜ್ಜಾಗಿದೆ. ನಾಲ್ಕು ವರ್ಷ ನಂತರ ಬೀದಿ ನಾಯಿ ಗಣತಿಗೆ ಬಿಬಿಎಂಪಿ ಮುಂದಾಗಿದ್ದು, ಇದೀಗ ಜುಲೈ 1ರಿಂದ ಗಣತಿ ನಡೆಯಲಿದೆ. ಈ ಹಿಂದೆ 2019ರಲ್ಲಿ ನಡೆದ ಗಣತಿಯಲ್ಲಿ ಸುಮಾರು ಮೂರು ಲಕ್ಷ ಬೀದಿ ನಾಯಿಗಳು ಇರುವುದು ಪಾಲಿಕೆ ಗುರುತಿಸಿತ್ತು. ಈಗ ಪಾಲಿಕೆ ವ್ಯಾಪ್ತಿಯಲ್ಲಿ ಸಂತಾನ ಹರಣ ಚಿಕಿತ್ಸೆ ಬಳಿಕ ಎಷ್ಟು ನಾಯಿಗಳಿವೆ ಎಂಬುದರ ಬಗ್ಗೆ ನಿಖರ ಮಾಹಿತಿ ಇಲ್ಲ. ಹೀಗಾಗಿ ನಾಯಿಗಳ ನಿಯಂತ್ರಣ ಹೇಗೆ ಮಾಡಬೇಕಾದರೆ ಗಣತಿ ಅವಶ್ಯವಾಗಿದೆ.
ಬೆಂಗಳೂರು: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಿನದಿಂದ ದಿನಕ್ಕೆ ಪೈಪೋಟಿ ಹೆಚ್ಚಾಗ್ತಾನೇ ಇದೆ, ಅಧ್ಯಕ್ಷ ಸ್ಥಾನ ನನಗೆ ಬೇಕು ಅಂತ ಮಾಜಿ ಸಚಿವ ವಿ. ಸೋಮಣ್ಣ ಪಟ್ಟು ಹಿಡಿದಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಸೋಮಣ್ಣ ಇದ್ದಕ್ಕಿದ್ದಂತೆ ಕಾರ್ಯಕಾರಿಣಿಯಲ್ಲಿ ಆ್ಯಕ್ಟೀವ್ ಆಗಿದ್ದಾರೆ, ಇತ್ತ ಮಾಜಿ ಸಿಎಂ ಬಿಎಸ್ವೈ ಪಕ್ಷದಲ್ಲಿ ಮತ್ತೆ ಸಕ್ರಿಯರಾಗ್ತಿದ್ದು ಹಿಡಿತ ಕೈತಪ್ಪದಂತೆ ಎಚ್ಚರಿಕೆ ವಹಿಸ್ತಿದ್ದಾರೆ. ಸೋಮಣ್ಣರನ್ನ ಬಿಎಲ್ ಸಂತೋಷ್ ಮುಂದೆ ಬಿಟ್ಟು ಗೇಮ್ ಶುರುಮಾಡಿದ್ರಾ ಅನ್ನೋ ಅನುಮಾನ ಶುರುವಾಗಿದ್ದು, ಮತ್ತೆ ಬಿಎಸ್ ವೈ-ಸಂತೋಷ್ ಕೋಲ್ಡ್ ವಾರ್ ತಾರಕ್ಕೇರೊ ಲಕ್ಷಣಗಳು ಕಂಡುಬರ್ತಿವೆ. ವಿಧಾನಸಭಾ ಚುನಾವಣೆಯಲ್ಲಿ ಸೋತುಸುಣ್ಣವಾಗಿರುವ ಬಿಜೆಪಿ ಪಕ್ಷ ಹೊಸ ಸಾರಥಿಯ ಹುಡುಕಾಟದಲ್ಲಿದೆ ಇಷ್ಟುದಿನ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಅಶ್ವಥ್ ನಾರಾಯಣ್, ಸಿಟಿ ರವಿ, ಶೋಭಾ ಕರಂದ್ಲಾಜೆ,ಸುನೀಲ್ ಕುಮಾರ್ ಅನ್ನೋ ಹೆಸರುಗಳು ಕೇಳಿಬರ್ತಿದ್ದೋ. ಇದೀಗ ಈ ರೇಸ್ ಗೆ ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಮಾಜಿ ಸಚಿವ ವಿ.ಸೋಮಣ್ಣ ಬಂದಿದ್ದು ರಣಾಂಗಣ ನಿಧಾನವಾಗಿ ರಂಗೇರ್ತಿದೆ. ಹೈಕಮಾಂಡ್ ಹೇಳಿದಂತೆ ಸ್ವಕ್ಷೇತ್ರ ಗೋವಿಂದರಾಜನಗರ ಬಿಟ್ಟು…
ಬೆಂಗಳೂರು: ಕಾಂಗ್ರೆಸ್ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ. ಡಾ.ಕೆ.ಸುಧಾಕರ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ ಎಂದು ಸಂಕಲ್ಪ ಮಾಡಿದರು ಹಾಗೆ ಅದಕ್ಕಾಗಿ ನಾನು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕೂತು ಪ್ರತಿಭಟನೆ ಮಾಡ್ತೇನೆ. ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ. ಎಷ್ಟು ಬೇಗ ಸಾಧ್ಯವೋ ಅಷ್ಟುಬೇಗ ಈ ಸರ್ಕಾರವನ್ನ ಕಿತ್ತೊಗೆಯೋಣ. ನಾವು ಮನಸ್ಸು ಮಾಡಿದ್ರೆ, ವಿಧಾನ ಮಂಡಲವನ್ನೇ ನಡುಗಿಸಬಹುದು. ಮುಂದಿನ ಸರ್ಕಾರ ರಚನೆ ಮಾಡುವವರೆಗೂ ಪಕ್ಷ ಕಟ್ಟೋಣ, ಹೋರಾಟ ಮಾಡೋಣ. ಲೋಕಸಭಾ ಚುನಾವಣೆ ಗೆಲ್ಲೋಣ ಎಂದು ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ. ನಂತರ ದಾಸರಹಳ್ಳಿ ಶಾಸಕ ಮುನಿರಾಜು ಭಾಷಣ ಮಾಡುತ್ತಿದ್ದ ವೇಳೆ ರೊಚ್ಚಿಗೆದ್ದ ಕಾರ್ಯಕರ್ತರು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶಗಳು ಸಿಗ್ತಿಲ್ಲ. ಕಾರ್ಯಕರ್ತರು ತಪ್ಪು ಮಾಡಿದಾಗ ಬುದ್ದಿ ಹೇಳ್ತೀರಾ, ಅದೇ ನಾಯಕರು ತಪ್ಪುಮಾಡಿದಾಗ ಯಾಕೆ ಬುದ್ದಿ ಹೇಳಲ್ಲ? ಹಿಂದೆ ಯಡಿಯೂರಪ್ಪ ಅವರನ್ನ ಕೆಳಗಿಳಿಸಿದಾಗ ಯಾಕೆ ನಾಯಕರು ಮಾತನಾಡಲಿಲ್ಲ? ಎಂದು ಗದ್ದಲ ಶುರು…