Author: Prajatv Kannada

ಯಾದಗಿರಿ: ಅಪರೂಪದ ಹಸಿರು ಬಣ್ಣದ ಕಪ್ಪೆಗಳು ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸಂಬರ ಗ್ರಾಮದಲ್ಲಿ ನಡೆದಿದೆ. ಹಸಿರು ಬಣ್ಣದ ಫಾಂಡ್ ಹೆಸರಿನ ಕಪ್ಪೆಗಳು ಪತ್ತೆಯಾಗಿದ್ದು, ಗ್ರಾಮದ ಯುವಕ ವಿಜಯ ಭಾಸ್ಕರರೆಡ್ಡಿ ಮೊಬೈಲ್ ನಲ್ಲಿ ಎರೆಯಾಗಿದೆ. ನಿನ್ನೆ ಗುರುಮಠಕಲ್ ಭಾಗದಲ್ಲಿ ಮಳೆಯಾದ ಹಿನ್ನಲೆ ಅಪರೂಪದ ಹಸಿರು ಬಣ್ಣದ ಕಪ್ಪೆಗಳು ಪತ್ತೆಯಾಗಿದೆ.

Read More

ಬೆಳಗಾವಿ: ವಿಧಾನಸಭೆ ಚುನಾವಣೆ ಸೋಲು ಮರೆತು, ಲೋಕಸಭೆ ಚುನಾವಣೆಯಲ್ಲಿ ಪುಟಿದೇಳಲು ಸಜ್ಜಾದ ಬಿಜೆಪಿ ಹೌದು ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ನಡೆಯುತ್ತಿದೆ. ಮೋದಿ 9 ವರ್ಷದ ಆಡಳಿತದಲ್ಲಿನ ಸಾಧನೆ ಬಗ್ಗೆ ಕಾರ್ಯಕ್ರಮದಲ್ಲಿ ಕೊಂಡಾಡಲಾಗುತ್ತಿದೆ. ಮಾಜಿ ಸಿಎಂ ಬೊಮ್ಮಾಯಿ, ಶಾಸಕ ಬಸನಗೌಡ ಪಾಟೀಲ್, ಭೈರತಿ ಬಸವರಾಜ, ಮಾಜಿ ಸಚಿವ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ರಮೇಶ್ ಜಿಗಜಿಣಗಿ, ಅಣ್ಣಾಸಾಹೇಬ್ ಜೊಲ್ಲೆ, ಮಂಗಳಾ ಅಂಗಡಿ, ಈರಣ್ಣ ಕಡಾಡಿ, ಬಾಲಚಂದ್ರ ಜಾರಕಿಹೊಳಿ, ಅಭಯ್ ಪಾಟೀಲ್ ಸೇರಿ ಮಾಜಿ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಈ ಬಾರಿಯೂ ಗೈರಾಗಿದ್ದಾರೆ.

Read More

ಬೆಂಗಳೂರು: ಕಾಂಗ್ರೆಸ್​ನ ಮಹಾತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಭವಿಷ್ಯ ಒಂದು ವಾರದಲ್ಲಿ ನಿರ್ಧಾರವಾಗಲಿದೆ. ಮೂರು ಕೇಂದ್ರೀಯ ಸ್ವಾಮ್ಯದ ಸಂಸ್ಥೆಗಳು ಅಕ್ಕಿ ನೀಡಲು ಮುಂದಾಗಿದ್ದು ಇವುಗಳ ನಿರ್ಧಾರದ ಮೇಲೆ ರಾಜ್ಯ ಸರ್ಕಾರ ತನ್ನ ತೀರ್ಮಾನ ಕೈಗೊಳ್ಳಲಿದೆ. ಹೀಗಾಗಿ ಸರ್ಕಾರ ಒಂದು ವಾರಗಳ ಕಾಲ ಸಮಯಾವಕಾಶ ನೀಡಿದೆ. FCI ನೀಡುತ್ತಿದ್ದ ದರಕ್ಕಿಂತ ಈ ಏಜೆನ್ಸಿಗಳ ದರ ಸ್ವಲ್ಪ ಹೆಚ್ಚಳ. FCI ಪ್ರತಿ ಕೆ.ಜಿ ಅಕ್ಕಿಗೆ ಸಾಗಾಣಿಕೆ ವೆಚ್ಚ ಸೇರಿ 36.60 ಪೈಸೆ ನಿಗದಿ ಮಾಡಿತ್ತು. ದರ ಮತ್ತು ಸಾಗಾಣಿಕೆ ವೆಚ್ಚ ಗಮನಿಸಿ ಸರ್ಕಾರ ತೀರ್ಮಾನಕ್ಕೆ ಬರಲಿದೆ. ಸದ್ಯಕ್ಕೆ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅಸಾಧ್ಯ.

Read More

ಬೆಂಗಳೂರು: ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ​​​ ಆಗಿದ್ದೇನೆ ಎಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ (Bengaluru) ಬಿಜೆಪಿ (BJP) ಕಚೇರಿಯಲ್ಲಿ ಭಾನುವಾರ ಮಾತಾಡಿದ ಅವರು, ನಾನು ಸನ್ಯಾಸಿ ಅಲ್ಲ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು. ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದಿದ್ದಾರೆ. ಪಕ್ಷ ಕೊಟ್ಟಿರುವ ಟಾಸ್ಕ್‌ಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ. ಇಲ್ಲಿಯವರೆಗೂ…

Read More

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ ಹಾಗೆ ಅದಕ್ಕಾಗಿ ನಾನು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕೂತು ಪ್ರತಿಭಟನೆ ಮಾಡ್ತೇನೆ. ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ. ಎಷ್ಟು ಬೇಗ ಸಾಧ್ಯವೋ ಅಷ್ಟುಬೇಗ ಈ ಸರ್ಕಾರವನ್ನ ಕಿತ್ತೊಗೆಯೋಣ. ನಾವು ಮನಸ್ಸು ಮಾಡಿದ್ರೆ, ವಿಧಾನ ಮಂಡಲವನ್ನೇ ನಡುಗಿಸಬಹುದು. ಮುಂದಿನ ಸರ್ಕಾರ ರಚನೆ ಮಾಡುವವರೆಗೂ ಪಕ್ಷ ಕಟ್ಟೋಣ, ಹೋರಾಟ ಮಾಡೋಣ. ಲೋಕಸಭಾ ಚುನಾವಣೆ ಗೆಲ್ಲೋಣ ಎಂದು ಕಾರ್ಯಕರ್ತರನ್ನ ಹುರಿದುಂಬಿಸಿದ್ದಾರೆ. ನಂತರ ದಾಸರಹಳ್ಳಿ ಶಾಸಕ ಮುನಿರಾಜು ಭಾಷಣ ಮಾಡುತ್ತಿದ್ದ ವೇಳೆ ರೊಚ್ಚಿಗೆದ್ದ ಕಾರ್ಯಕರ್ತರು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶಗಳು ಸಿಗ್ತಿಲ್ಲ. ಕಾರ್ಯಕರ್ತರು ತಪ್ಪು ಮಾಡಿದಾಗ ಬುದ್ದಿ ಹೇಳ್ತೀರಾ, ಅದೇ ನಾಯಕರು ತಪ್ಪುಮಾಡಿದಾಗ ಯಾಕೆ ಬುದ್ದಿ ಹೇಳಲ್ಲ? ಹಿಂದೆ ಯಡಿಯೂರಪ್ಪ ಅವರನ್ನ ಕೆಳಗಿಳಿಸಿದಾಗ ಯಾಕೆ ನಾಯಕರು ಮಾತನಾಡಲಿಲ್ಲ? ಎಂದು ಗದ್ದಲ ಶುರು ಮಾಡಿದರು. ಈ ವೇಳೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.ಉಚಿತ ಪ್ರಯಾಣ ಶುರುವಾಗಿದ್ದೇ ಆಗಿದ್ದು ಮಹಿಳೆಯರ ಕಾಲು ಮನೆಯಲ್ಲಿ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ಮಹಿಳೆಯರ ಪ್ರವಾಸ ಜೋರಾಗಿದೆ.ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನ ಜಾರಿಗೊಳಿಸಿ ಇವತ್ತಿಗೆ ಹದಿನೈದು ದಿನವಾಗಿದ್ದು, ಮೊದಲ ವೀಕೆಂಟ್ ಕ್ಕಿಂತ ಇವತ್ತಿನ ವೀಕೆಂಡ್ಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಯ್ತು. ಹಾಗಾದ್ರೆ ಸೆಕೆಂಟ್ ವೀಕೆಂಡ್ ನಲ್ಲಿ ಹೇಗಿತ್ತು ಶಕ್ತಿಗೆ ಡಿಮ್ಯಾಂಡ್ ಬನ್ನಿ ನೋಡಿಕೊಂಡು ಬರೋಣ… ಶಕ್ತಿ ಸ್ತ್ರೀಯರ ಪ್ರಯಾಣಕ್ಕೆ ಬಲ ತುಂಬಿದ ಯೋಜನೆ.ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಆರಂಭವಾದ ಜೂನ್ 11ರಿಂದ ತುಂಬಿ ತುಳುಕಿದ ಬಸ್ಗಳು ಈಗಲೂ ರಶ್ ಆಗಿಯೇ ಓಡಾಡ್ತಿವೆ. ಸದ್ಯ, ಜನರ ಅಂತೂ ಮಹಿಳೆಯರ  ಆತುರ ಕಡಿಮೆ ಆಗಿದೆ. ಪ್ರಯಾಣಿಕರ ಒತ್ತಡವನ್ನ ನಿಭಾಯಿಸುವ ಶಕ್ತಿ ಕೂಡ ಕೆಎಸ್ಆರ್ಟಿಸಿಗೆ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಸ್ತ್ರೀಯರು ಸಾರಿಗೆ ಬಸ್ಗೆ ಶಕ್ತಿ ತುಂಬಿದ್ದಾರೆ. ಸರ್ಕಾರಿ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮತ್ತೊಂದು ಮಹತ್ವದ ಯೋಜನೆ ಜಾರಿಗಾಗಿ ಮುಹೂರ್ತ ಫಿಕ್ಸ್ ಆಗಿದೆ. ಇಷ್ಟುದಿನ ರಾಜ್ಯದ ಮಹಿಳೆಯರು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ. ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಂದುಕೊಂಡಂತೆ ಆದ್ರೆ ಸ್ವಾತಂತ್ರೋತ್ಸವ ದಿನಕ್ಕೆ ಲಕ್ಷ್ಮೀಯರ ಖಾತೆಗೆ ಲಕ್ಷ್ಮೀಯ ಆಗಮನವಾಗಲಿದೆ. ಹಾಗಾದ್ರೆ ಗೃಹಲಕ್ಷ್ಮೀ ಯೋಜನೆ ಜಾರಿಗೆ ಹೇಗೆಲ್ಲಾ ಸರ್ಕಾರ ಸಿದ್ದವಾಗ್ತಿದೆ ಅನ್ನೋ ರಿಪೋರ್ಟ್ ಇಲ್ಲಿದೆ ಮಹಿಳಾ ಮಣಿಗಳಿಗೆ ಶಕ್ತಿಯ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ದೊಡ್ಡ ಗಿಫ್ಟ್ ಕೊಡೋಕೆ ಮುಂದಾಗಿದೆ. ಎಲ್ಲೆಂದರಲ್ಲಿ ಫ್ರೀ ಬರ್ಡ್ನಂತೆ ಓಡಾಡಿ ಅಂತ ನಾರಿಯರಿಗೆ ಫ್ರೀ ಬಸ್ ಪ್ರಯಾಣ ಕಲ್ಪಿಸಿದ್ದ ಸರ್ಕಾರ ಈಗ ಖರ್ಚಿಗೆ ರಾಜ್ಯದ ಎಲ್ಲಾ ಗೃಹಗಳ ಲಕ್ಷ್ಮೀಯರ ಖಾತೆಗೆ ಹಣ ಹಾಕಲು ಮುಂದಾಗಿದೆ.ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆ ನೋಂದಾಣಿ ಪ್ರಕ್ರಿಯೆ ಆರಂಭವಾಗಲಿದ್ದು,ಇದಕ್ಕೆ ಅಂತ ಸರ್ಕಾರ…

Read More

ಬೆಂಗಳೂರು : ಗೃಹ ಜ್ಯೋತಿ,ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅರ್ಜಿದಾರರಿಂದ ಹಣ ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ” ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನ ಮಾಡ್ತೇವೆ.‌ ಅರ್ಜಿ ಸಲ್ಲಿಕೆ ಉಚಿತವಾಗಿ ಮಾಡಿಕೊಡಬೇಕು. ಯಾರಾದರೂ ಸಂಘ ಸಂಸ್ಥೆಗಳು ಹಣ ವಸೂಲಿ ಮಾಡಿದ್ರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ” ಎಂದು ಎಚ್ಚರಿಕೆ ನೀಡಿದರು. 200 -500 ರೂಪಾಯಿ ವಸೂಲಿ ಈಗಾಗಲೇ 200 ರಿಂದ 500 ರೂಪಾಯಿ ಹಣ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಅದು ಗೊತ್ತಾದ್ರೆ ಅವರ ಏಜೆನ್ಸಿ ಕೂಡ ಕ್ಯಾನ್ಸಲ್ ಮಾಡ್ತೀವಿ. ಈ ಸ್ಕೀಮ್‌ಗಳಲ್ಲಿ ಯಾರು ಕೂಡ ಒಬ್ಬರಿಗೆ ಲಂಚ ಕೊಡಬಾರದು ಎಂದು ಮನವಿ ಮಾಡಿದರು. ಸಹಾಯವಾಣಿ ಆರಂಭ ಯೋಜನೆ ಪಡೆದುಕೊಳ್ಳಲು ಯಾರಾದರೂ ಲಂಚ ಕೇಳಿದರೆ ಅಥವಾ ಕೊಟ್ಟರೆ ನಾವು ಒಂದು ಸಹಾಯವಾಣಿ ( ಹೆಲ್ಪ್ ಲೈನ್) ನಂಬರ್ ಕೊಡ್ತೀವಿ. ಅದಕ್ಕೆ ಕಾಲ್ ಮಾಡಿ ದೂರು ಕೊಡಿ…

Read More

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy)ಶಾಂತಿನಗರದ ಕೆಎಸ್‌ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಇವತ್ತು ಒಂದೇ ದಿನ 1.05 ಕೋಟಿ ಜನ ಪ್ರಯಾಣ ಮಾಡಿದ್ದಾರೆ. ಸಾರಿಗೆ ಬಸ್ ಗಳಲ್ಲಿ ಒಂದೇ ದಿನ 1.05 ಕೋಟಿ ಜನ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ನಡೆಸಿದ ಅವರು, ಸಾರಿಗೆ ಇಲಾಖೆಯ ಬಲವರ್ಧನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹೊಸ ಬಸ್ ಗಳ ಸೇರ್ಪಡೆ ಮತ್ತು ಬಸ್ ಗಳ ಪುನಶ್ಚೇತನ ಕಾರ್ಯ ನಡೆಸಬೇಕು. ಪರಿಣಾಮಕಾರಿ ಮಾಹಿತಿ ತಂತ್ರಜ್ಞಾನ ಬಳಕೆ, ಕಾರ್ಮಿಕ ಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು. ಆದ್ಯತೆ ಮೇರೆಗೆ ಸಿಬ್ಬಂದಿ ನೇಮಕ ಮಾಡಬೇಕು. ಸರ್ಕಾರಿ ಬಸ್ ಗಳು ಮತ್ತು ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ  ಕೃಷ್ಣಾಮೃಗ ಎಂಬ ಪ್ರಾಣಿಗೆ ಕಾಲಿಗೆ ಪೆಟ್ಟಾಗಿ ನರಲಾಟ ಒಳಪಟ್ಟಿದ್ದು ಹಿನ್ನೆಲೆಯಲ್ಲಿ ಇಂದು ಅದಕ್ಕೆ ಶಸ್ತ್ರ ಚಿಕಿತ್ಸೆ ನೀಡಿ ವಿಶೇಷ ಹಾರೈಕೆಯನ್ನು ಮಾಡಲಾಗಿದೆ ಎಂದು ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್  ಉಮಾಶಂಕರ್ ಮಾಹಿತಿ ನೀಡಿದರು. ಹೌದು ಬೆಂಗಳೂರು ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕೃಷ್ಣಾಮೃಗ ಪಾರ್ಕ್ ನಲ್ಲಿ ಗುಂಪು ಇರುವಾಗ ಕಳೆದ ಎರಡು ದಿನಗಳ  ಹಿಂದೆ ಎರಡು ಕೃಷ್ಣಾಮೃಗ ಗಳು  ಕಿತ್ತಾಟ ಮಾಡಿಕೊಂಡಿವೆ. ಹಾ ವೇಳೆ ಕೃಷ್ಣಾಮೃಗ ಒಂದಕ್ಕೆ ಕಾಲು ಮುರಿದು  ಒಂದೇ ಜಾಗದಲ್ಲಿ ಕುಳಿತು ನರಲಾಟ ಅನುಭವಿಸುತ್ತಿತ್ತು  ಇದನ್ನು ಕಂಡ ಪ್ರಾಣಿ ಪಾಲಕ ಗಮನಿಸಿ ವೈದ್ಯರಿಗೆ ಮಾಹಿತಿ ನೀಡಿ ಅದನ್ನು ಲ್ಯಾಬ್ ಗೆ ಕರೆತಂದು ಅದಕ್ಕೆ  ಇಂದು ಶಸ್ತ್ರ ಚಿಕಿತ್ಸೆ ಮಾಡಿ ವಿಶೇಷ ಹಾರೈಕೆ ಮಾಡಲಾಗಿದೆ ಎಂದು ಡಾಕ್ಟರ್ ಉಮಾ ಶಂಕರ್  ಮಾಹಿತಿ ನೀಡಿದರು ಇನ್ನು ಕಾಲಿನ ಮೂಳೆ ಮುರಿದುಕೊಂಡಿದ್ದ ಕೃಷ್ಣಾಮೃಗ ಶಸ್ತ್ರ ಚಿಕಿತ್ಸೆಯಲ್ಲಿ ಉಮಾಶಂಕರ್ ವಿಜಯದಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

Read More