Author: Prajatv Kannada

ಕೊಡಗು: ತೆರೆದ ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಿನ್ನೆ (ಮೇ 10) ನಡೆದಿದೆ. ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಬಲೂನ್ ಬಾವಿಯಲ್ಲಿ ಬಿದ್ದಾಗ ಅದನ್ನು ತೆಗೆಯಲು ಮಗು ಮುಂದಾಯಿತು. ಬಾವಿಯ ಬಳಿ ಬಂದು ಬಲೂನ್​ ಅನ್ನು ಬಗ್ಗಿ ನೋಡುವ ಸಂದರ್ಭದಲ್ಲಿ ಮಗು ಬಾವಿಗೆ ಬಿದ್ದಿದೆ. ಈ ವೇಳೆ ಪಾಲಕರು ಒಳಗಿದ್ದರಿಂದ ಮಗು ಬಾವಿಗೆ ಬಿದ್ದಿರುವುದು ಅವರಿಗೆ ಗೊತ್ತಾಗಲಿಲ್ಲ. ಹೀಗಾಗಿ ಮಗು ಮೃತಪಟ್ಟಿದೆ. ಮಕ್ಕಳನ್ನು ಮನೆಯಿಂದ ಹೊರಗೆ ಆಟವಾಡಲು ಬಿಟ್ಟು ಅವರ ಬಗ್ಗೆ ಗಮನವಹಿಸದೇ ತಮ್ಮ ಕೆಲಸ ಕಾರ್ಯಗಳಲ್ಲಿ ನಿರತರಾಗುವ ಪಾಲಕರಿಗೆ ಇದೊಂದು ರೀತಿಯಲ್ಲಿ ಎಚ್ಚರಿಕೆ ಗಂಟೆಯಾಗಿದೆ.

Read More

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ (BJP Activist) ಶವ ಪತ್ತೆಯಾಗಿದೆ. ಸಲಗರ ಬಸಂತಪುರ ಗ್ರಾಮದ ರಾಮು ರಾಠೋಡ್(45) ಮೃತ ದುರ್ದೈವಿ. ರಾಮು ನಿನ್ನೆ (ಮೇ.10) ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಪೋಲಿಂಗ್ ಬೂತ್ (Polling Booth) ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ.  ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾಕಷ್ ಅನುಮಾನಗಳಿಗೆ ಕಾರಣವಾಗಿದೆ. ಇನ್ನು ರಾಮು ಅವರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಕುಟುಂಬದಸ್ಥರು ಆರೋಪ ಮಾಡಿದ್ದಾರೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಅನೇಕ ಸಮೀಕ್ಷೆಗಳು ಕಾಂಗ್ರೆಸ್ ಗೆ ಬಹುಮತ ಎಂದು ಹೇಳಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ 127 ರಿಂದ 130 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಜಿಲ್ಲೆಗಳಿಂದ ನಾವು ಮಾಹಿತಿ ಪಡೆದಾಗ 127 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನನ್ನ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 127 ರಿಂದ 130 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕರ್ನಾಟಕದಲ್ಲಿ 35 ವರ್ಷಗಳಿಂದ ಸತತವಾಗಿ ಒಂದೇ ಸರ್ಕಾರ ಎರಡು ಬಾರಿ ಅಧಿಕಾರಕ್ಕೆ ಬಂದಿಲ್ಲ ಎಂದರು. ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕರು ನಿಷ್ಠಾವಂತರಿಗೆ ನಿರ್ಲಕ್ಷ್ಯ ಆಗಿದೆ. ವ್ಯಾಪಾರೀಕರಣದಿಂದ ಬಿಜೆಪಿ ಪಕ್ಷಕ್ಕೆ ಬಹಳ ದೊಡ್ಡ ಹಾನಿಯಾಗಿದೆ. ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳಿಂದ ಬಡವರು, ಕಾರ್ಮಿಕರಿಗೆ ಬಹಳಷ್ಟು ಆಶಾ ಕಿರಣ ಮೂಡಿದೆ. ಬಡವರು ಕಾರ್ಮಿಕರು ಹಾಗೂ ಮಧ್ಯಮ ವರ್ಗದವರು ಜನಪ್ರಿಯ ಯೋಜನೆಗಳಿಂದ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.

Read More

ವಿಜಯನಗರ: ಹರಪನಹಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದ್ದು, ಭಾರಿ ಪ್ರಮಾಣದಲ್ಲಿ ಗಾಳಿ ಬಿಸಿದೆ. ಈ ಹಿನ್ನಲೆ ಮರಗಳು ನೆಲಕ್ಕಿರುಳಿದಿದ್ದು, ನೂರಾರು ಎಕರೆ ಪ್ರದೇಶದಲ್ಲಿ‌ ಬೆಳೆದಿದ್ದ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ. ಕಷ್ಟಪಟ್ಟು ಬೆಳೆದ ಬೆಳೆ ಅಕಾಲಿಕ ಮಳೆಗೆ ನೆಲಕಚ್ಚಿದ್ದು, ರೈತ ಕಂಗಾಲಾಗಿದ್ದಾನೆ. ಇನ್ನು ಈ ಕುರಿತು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಸಹಿತ ಬಿರುಗಾಳಿ; ಸರ್ಕಾರಿ ಶಾಲೆಯಲ್ಲಿ ಬಿದ್ದ ಬೃಹತ್​ ಮರ ಕಲಬುರಗಿ: ಜಿಲ್ಲೆಯಲ್ಲಿ ಮೇ.9ರಂದು ಸಂಜೆ ಬಾರಿ ಬಿರುಗಾಳಿ ಸಹಿತ ಮಳೆಯಾಗಿತ್ತು. ಈ ಕಾರಣ ನಗರದ ಕೋಟನೂರು ಡಿ ಬಡಾವಣೆಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದಿತ್ತು. ಅದು ಅಲ್ಲದೆ ನಿನ್ನೆ ಚುನಾವಣೆ ನಿಮಿತ್ತ ಕೆಲಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಧೀಡಿರನೆ ಮರ ಬಿದ್ದಿದೆ. ಇದರಿಂದ ಕೆಲಹೊತ್ತು ಸಿಬ್ಬಂಧಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬಸ್ ಮೇಲೆ ಧರೆಗುರುಳಿದ ಬೃಹತ್ ಮರ: ಯುವತಿ ಗಂಭೀರ   ಗದಗ: ಭಾರಿ ಗಾಳಿ ಮಳೆಗೆ ಬೃಹತ್ ಮರ ಧರೆಗುರುಳಿ ಸಾರಿಗೆ ಸಂಸ್ಥೆಯ ಬಸ್ ಮೇಲೆ ಬಿದಿದ್ದಿತ್ತು. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ…

Read More

ತುಮಕೂರು: ಪ್ರೀತಿ ನಿರಾಕರಿಸಿದ್ದಕ್ಕೆ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 25 ವರ್ಷದ ವಿನಯ್ ಕುಮಾರ್ ಎಂಬಾತನಿಂದ ಹಲ್ಲೆ. ಬಾಲಕಿ ಕತ್ತಿಗೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಬಾಲಕಿ ಪರಿಸ್ಥಿತಿ ಗಂಭೀರವಾಗಿದೆ. ಕೂಡಲೇ ಬಾಲಕಿಯನ್ನ ಹಾಸನ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಮತದಾನ ಬುಧವಾರ ಮುಕ್ತಾಯಗೊಂಡಿದೆ. ಆದರೂ ವಿವಾದ, ಒಳಜಗಳಗಳ ಕಾವು ಇನ್ನೂ ಇದೆ. ಮತದಾನ ವಿಚಾರವಾಗಿ ಬಜರಂಗದಳ (Bajrang Dal) ಕಾರ್ಯಕರ್ತನೊಬ್ಬ ಹಾಕಿದ ವಾಟ್ಸಪ್‌ ಸ್ಟೇಟಸ್‌ ಗ್ರಾಮದಲ್ಲಿ ರಾದ್ಧಾಂತ ಸೃಷ್ಟಿಸಿದೆ. ಚುನಾವಣೆ ಮುಗಿದರೂ ವಿವಾದ ಬಗೆಹರಿದಿಲ್ಲ. ತರೀಕೆರೆ ತಾಲೂಕಿನ ರಂಗೇನಹಳ್ಳಿ ಗ್ರಾಮದ ನಿವಾಸಿ ಕಾರ್ತಿಕ್‌ ವಾಟ್ಸಪ್‌ ಸ್ಟೇಟಸ್‌ ಹಾಕಿಕೊಂಡು ವಿವಾದ ಸೃಷ್ಟಿಸಿದ ಬಜರಂಗದಳ ಕಾರ್ಯಕರ್ತ. ಈತ ಮತದಾನದ ದಿನ, “ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕ್ತಾರೆ” ಎಂದು ವಾಟ್ಸಪ್‌ ಸ್ಟೇಟಸ್‌ ಹಾಕಿಕೊಂಡಿದ್ದ. ಇದು ವಿಪಕ್ಷಗಳ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಕೆರಳಿಸಿದೆ. ಸ್ಟೇಟಸ್ ನೋಡಿ ರೊಚ್ಚಿಗೆದ್ದ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಕಾರ್ತಿಕ್‌ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮೇ 10 ರಾಜ್ಯಾದ್ಯಂತ ಮತದಾನ ನಡೆಯಿತು. ಹಲವೆಡೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ತಮ್ಮ ಪಕ್ಷಗಳ ಪರ ಜನರಿಂದ ಮತ…

Read More

ಬೆಂಗಳೂರು: ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಭೇಟಿ ಮಾಡಿದ್ದಾರೆ. ಶಿವಾನಂದ ವೃತ್ತದಲ್ಲಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. 2023 ರ ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ ಗೆಲುವು ಎಂಬ ವರದಿಗಳು, ಬಂದಿರುವ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಗೆ ಮೇಲುಗೈ ಆದರೆ ಸರ್ಕಾರ ರಚನೆ ವಿಚಾರವಾಗಿ ಹಾಗೂ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಕೈಗೊಳ್ಳಬೇಕಿರುವ ರಣತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ಗಂಟೆಗಳಿಂದ ಇಬ್ಬರು ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಜ್ವರದಿಂದ ಬಳಲುತ್ತಿದ್ದಾರೆ. ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿಗೆ ಜ್ವರ ಬಂದಿದೆ. ಹೀಗಾಗಿ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿಗೆ ಮುಂದಾಗಿದ್ದಾರೆ. ವಿಧಾನಸಭೆ (Karnataka Assembly Election 2023) ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್‍ಗೆ ತೆರಳಿ ಇಡ್ಲಿ ಸವಿದರು. ಅದಾದ ಬಳಿಕ ಚುನಾವಣೆ ಬಗ್ಗೆ ಸ್ಥಳೀಯರ ಜೊತೆ ಮಾತುಕತೆ ನಡೆಸಿ ಕಾಲ ಕಳೆದ ಬಳಿಕ ಬೆಂಗಳೂರಿಗೆ ಆಗಮಿಸಿದ್ದರು.

Read More

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ದಿನೇಶ್‌ ಕಾರ್ತಿಕ್‌ ಅನಾರೋಗ್ಯದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟ್‌ ಮಾಡಿದ್ದರು ಎಂದು ಆರ್‌ಸಿಬಿ (RCB)ಕೋಚ್‌ ಸಂಜಯ್‌ ಬಾಂಗರ್‌ ಪಂದ್ಯದ ಬಳಿಕ ಬಹಿರಂಗಪಡಿಸಿದ್ದಾರೆ. ಔಟ್‌ ಆಗಿ ಡಗ್‌ಔಟ್‌ಗೆ ಮರಳುತ್ತಿದ್ದ ವೇಳೆ ದಿನೇಶ್‌ ಕಾರ್ತಿಕ್‌ (Dinesh Karthik)ಹಲವು ಬಾರಿ ಕೆಮ್ಮಿದ್ದರು ಹಾಗೂ ವಾಂತಿ ಕೂಡ ಮಾಡಿಕೊಂಡಿದ್ದರು. ಅಂದ ಹಾಗೆ ಪಂದ್ಯದ ಬಳಿಕ ಆರ್‌ಸಿಬಿ ಕೋಚ್‌ ಸಂಜಯ್‌ ಬಾಂಗರ್ ಅವರು ದಿನೇಶ್ ಕಾರ್ತಿಕ್ ಆರೋಗ್ಯದ ಬಗ್ಗೆ ಮಾಹಿತಿ ಒದಗಿಸಿದರು. ಕಾರ್ತಿಕ್‌ ಆನಾರೋಗ್ಯದ ಹೊರತಾಗಿಯೂ ಕ್ರೀಸ್‌ಗೆ ತೆರಳಿ ಬ್ಯಾಟ್‌ ಮಾಡಿದ್ದಾರೆ ಎಂದು ಹೇಳಿದ್ದಾರೆ. “ದಿನೇಶ್‌ ಕಾರ್ತಿಕ್‌ ಕ್ರೀಸ್‌ನಲ್ಲಿ ಬ್ಯಾಟ್‌ ಮಾಡುತ್ತಿರುವ ವೇಳೆ ಅವರು ಅಸ್ವಸ್ಥರಾದರು. ಅವರು ಸ್ವಲ್ಪಮಟ್ಟಿಗೆ ನಿರ್ಜಲೀಕರಣ ಗೊಂಡಿ ದ್ದರು ಹಾಗೂ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳುವ ವೇಳೆ ಡಗ್‌ಔಟ್‌ ಸಮೀಪ ವಾಂತಿ ಕೂಡ ಮಾಡಿಕೊಂಡಿದ್ದರು. ಮುಂದಿನ ಪಂದ್ಯಕ್ಕೆ ನಮಗೆ ಸಾಕಷ್ಟು ಅಂತರ ಇದೆ. ಹಾಗಾಗಿ, 3-4 ದಿನಗಳ ಕಾಲ ಔಷಧಿ ತೆಗೆದುಕೊಂಡರೆ ಅವರು…

Read More

ಚೆನ್ನೈ: ಆಸ್ಕರ್ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ಡಾಕ್ಯುಮೆಂಟರಿ ಖ್ಯಾತಿಯ ಬೊಮ್ಮನ್ ಮತ್ತು ಬೆಳ್ಳಿ ದಂಪತಿಗೆ ಸಿಎಸ್ ಕೆ ನಾಯಕ ಧೋನಿ ಉಡುಗೊರೆ ನೀಡಿ ಗೌರವಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮೊದಲು ಚೆನ್ನೈ ಮೈದಾನದಲ್ಲಿ ಬೊಮ್ಮನ್ ದಂಪತಿ ಹಾಗೂ ಎಲಿಫೆಂಟ್ ವಿಸ್ಪರರ್ಸ್ ನಿರ್ಮಾಪಕಿ ಕಾರ್ತಿಕಿ ಗೊನ್ಸಾಲ್ಟಿಸ್ ಅವರನ್ನು ಧೋನಿ ಸನ್ಮಾನಿಸಿದರು. ಈ ವೇಳೆ ಧೋನಿ ಬೊಮ್ಮನ್ ದಂಪತಿಗೆ ಸಿಎಸ್ ಕೆ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಚೆನ್ನೈ ತಂಡದ ಪರವಾಗಿ ಸ್ಮರಣಿಕೆ ಹಾಗೂ ದೇಣಿಗೆ ನೀಡಲಾಯಿತು.

Read More