ಬೆಂಗಳೂರು: ಬೆಂಗಳೂರು ನಗರದ ಬಿಟಿಎಂ ಲೇಔಟ್ (BTM layout of Bangalore city)ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್ನಲ್ಲಿ ನಿನ್ನೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಹಲ್ಲೆ ನಡೆಸಿದ್ದು ಸ್ಲಿಫ್ ನೀಡುವ ವಿಚಾರವಾಗಿ ಉಭಯ ಪಕ್ಷಗಳ ಮುಖಂಡರ ನಡುವೆ ಮಾರಾಮಾರಿಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡರೊಬ್ಬರು ಸ್ಲಿಪ್ ನೀಡುವ ವಿಚಾರವಾಗಿ ಕಾಂಗ್ರೆಸ್ ಮುಖಂಡರು ಮೊದಲಿಗೆ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬಂದ ಆಡುಗೋಡಿ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು ಮತ್ತು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Author: Prajatv Kannada
ಆನೇಕಲ್ : ಟಿಪ್ಪರ್ ಲಾರಿ (Lorry) ಅತಿ ವೇಗಕ್ಕೆ ಮಹಿಳೆ ಬಲಿಯಾಗಿರುವ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್ (Anekal Accident) ತಾಲೂಕಿನ ಇಂಡ್ಲವಾಡಿಯಲ್ಲಿ ನಡೆದಿದೆ. ಟಿಪ್ಪರ್ ಲಾರಿಯು ಜಿಗಣಿ ಭಾಗದಿಂದ ಆನೇಕಲ್ ಕಡೆಗೆ ವೇಗವಾಗಿ ಬರುತ್ತಿತ್ತು. ಇತ್ತ ದ್ವಿಚಕ್ರ ವಾಹನವು ಇಂಡ್ಲವಾಡಿ ಗ್ರಾಮದಿಂದ ಆನೇಕಲ್ ಪಟ್ಟಣಕ್ಕೆ ಬರುತಿತ್ತು. ಇಂಡ್ಲವಾಡಿ ಸರ್ಕಲ್ ಬಳಿ ಲಾರಿಯು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದವರ ಮೇಲೆ ಏಕಾಏಕಿ ಹರಿದಿದೆ. ಪರಿಣಾಮ ಪಲ್ಸರ್ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿ ಹಾಗೂ ಇನ್ನೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಅಪಘಾತ ಮಾಡಿ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ (Karnataka assembly election) ಮುಗಿದಿದೆ. ರಾಜ್ಯದ ವಿವಿಧ ಕ್ಷೇತ್ರಗಳ, ವಿವಿಧ ಪಕ್ಷಗಳ ಒಟ್ಟು 2615 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆಯಲ್ಲಿ (ballot box) ಭದ್ರವಾಗಿದೆ. ಮತದಾನ ಮುಗಿಯುತ್ತಿದ್ದಂತೆ ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷಾ ಫಲಿತಾಂಶವೂ (Exit Poll) ಹೊರಬಿದ್ದಿದೆ. 9 ಸರ್ವೆ ಫಲಿತಾಂಶಗಳು ಕಾಂಗ್ರೆಸ್‌ಗೆ (Congress) ಮುನ್ನಡೆ ಅಂತ ಹೇಳುತ್ತಿವೆ. ಇದರಿಂದ ಕಾಂಗ್ರೆಸ್‌ನಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದ್ರು ಎನ್ನುವಂತೆ, ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗೆ ರೇಸ್ (CM race) ಜೋರಾಗಿದೆ! ಸಮೀಕ್ಷೆಗಳು ಕಾಂಗ್ರೆಸ್‌ಗೆ ಅಧಿಕಾರ ಬರುವ ಸಾಧ್ಯತೆ ಇದೆ ಅಂತ ಹೇಳುತ್ತಿದ್ದಂತೆ ಕಾಂಗ್ರೆಸ್ ನಾಯಕರು ಅಲರ್ಟ್ ಆಗಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಣದೀಪ್ ಸುರ್ವೇಜಾಲ ಅವರನ್ನು ಬೆಂಗಳೂರಿಗೆ ಕಳಿಸಿದ್ದಾರೆ. ಎಚ್ಚರಿಕೆ ಹೆಜ್ಜೆ ಇಡುವಂತೆ ಸೂಚನೆ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ ಅಂತ ಬಂದಿರೋದ್ರಿಂದ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಸುರ್ಜೆವಾಲಗೆ ಹೈಕಮಾಂಡ್ ಸೂಚನೆ ನೀಡಿದೆ.…
ಬೆಂಗಳೂರು: PSI ಹಗರಣಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ (Amrut Paul)ಅವರನ್ನು ಅಕ್ರಮವಾಗಿ ವಶದಲ್ಲಿ ಇಡಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಕೋರ್ಟ್ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ಅಲ್ಲದೆ, ಅಮೃತ್ ಪೌಲ್ ಅವರ ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ಯಾವುದೇ ಕೋರಿಕೆ ಇಲ್ಲದೇ, ವಿಚಾರಣಾಧೀನ ನ್ಯಾಯಾಲಯ ವಿಸ್ತರಣೆ ಮಾಡಿರುವುದು ಕಾನೂನುಬಾಹಿರ ಎಂದು ಆಕ್ಷೇಪಿಸಿ ನ್ಯಾಯಪೀಠವು ವಿಚಾರಣೆ ನಡೆಸಿತು. ಅಲ್ಲದೆ, ಅಪರಾಧ ತನಿಖಾ ದಳಕ್ಕೆ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ ಪೌಲ್‍ರನ್ನು ಬಂಧನ ಮಾಡಲಾಗಿದ್ದು, ಚಾರ್ಜ್‍ಶೀಟ್ ಸಲ್ಲಿಸಿ ಹಲವು ತಿಂಗಳಾದರೂ ಅವರನ್ನು ಇನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರದಿಂದ ಪ್ರಾಸಿಕ್ಯೂಷನ್ ಮಾಡಲು ಅನುಮತಿಯನ್ನೂ ಪಡೆಯಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿದ್ದು, ಈ ಬಾರಿ ದಾಖಲೆಯ 73 ಕ್ಕಿಂತ ಹೆಚ್ಚು ಮತದಾನವಾಗಿದೆ. ಕಳೆದ ಬಾರಿಗಿಂತಲೂ ಶೇಕಡಾವಾರು ಪ್ರಮಾಣದ ಮತದಾನ ಈ ಬಾರಿ ಹೆಚ್ಚಾಗಿದೆ. ಆರಂಭದಲ್ಲಿ ಮತದಾರರು ಮತದಾನವನ್ನು ಮಾಡಲು ನಿರುತ್ಸಾಹ ಕಂಡು ಬಂದಿತ್ತು, ಆದರೆ ಸಮಯ ಕಳೆದಂತೆ ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸಿ, ಮತದಾನವನ್ನು ಮಾಡಿ, ಪ್ರಜಾಪ್ರಭುತ್ವದ ಹಬ್ಬದ ಭಾಗವಹಿಸಿ ಸಂಭ್ರಮಿಸಿದರು. ಇನ್ನೂ ನಿನ್ನೆ ನಡೆದ ಮತದಾನದ ವೇಳೆಯಲ್ಲಿ,ಅಲಲ್ಲಿ ಸಣ್ಣ ಪುಟ್ಟ ಗಲಾಟೆ, ಹಾಗೂ ಮತ ಯಂತ್ರಗಳ ದೋಶವನ್ನು ಹೊರತು ಪಡಿಸಿ ಬಹುತೇಕವಾಗಿ ಶಾಂತಿಯುತವಾಗಿ ಮತದಾನ ನೇರವೇರಿದೆ. ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಶಿಗ್ಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ. ಶಿಕಾರಿ ಪುರದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯ್ಯೂರಪ್ಪ ಹಾಗೂ ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಅವರು ಮತದಾನವನ್ನು ಮಾಡಿದರು. ಹೊಳೆನರಸೀಪುರ ಕ್ಷೇತ್ರದ ಪಡುವಲಹಿಪ್ಪೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ನಿ ಚನ್ನಮ್ಮ ಅವರೊಂದಿಗೆ ಆಗಮಿಸಿ ಮತಚಲಾಯಿಸಿದರು. ಇದಲ್ಲದೇ ಸ್ಯಾಂಡಲ್‌ವುಡ್ ನಟ ನಟಿಯರು ಕೂಡ ಮತದಾನದವನ್ನು ಮಾಡಿ ಎಲ್ಲರಿಗೂ ಮಾದರಿಯಾದ್ರು. ಇನ್ನೂ ಜಿಲ್ಲಾವಾರು ಮತದಾನದ ವಿವರವನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತೆ ಇದೆ. ಬೆಂಗಳೂರು ಸೆಂಟ್ರಲ್ ಶೇ45 ಬೆಂಗಳೂರು ನಾರ್ತ್ ಶೇ02 ಬೆಂಗಳೂರು ಸೌತ್ ಶೇ15 ಬಾಗಲಕೋಟೆ ಶೇ28 ಬೆಂಗಳೂರು ಗ್ರಾಮೀಣ ಶೇ10 ಬೆಂಗಳೂರು ನಗರ ಶೇ08 ಬೆಳಗಾಂ…
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ನಿನ್ನೆ(ಮೇ.10) ಭರ್ಜರಿಯಾಗಿ ನಡೆದಿದ್ದು, ಇವಿಎಂನಲ್ಲಿ 2,615 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಮೇ.13 ರಂದು ಬೆಳಗ್ಗೆ 8 ಗಂಟೆಯಿಂದ ಮತ ಏಣಿಕೆ ನಡೆಯಲಿದ್ದು, ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಅದರಂತೆ ಬೆಂಗಳೂರಿನ 28 ಕ್ಷೇತ್ರಗಳಿಗೆ ನಾಲ್ಕು ಕಡೆ ಸ್ಟ್ರಾಂಗ್ ರೂಮ್ಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದೆ. ಬೆಂಗಳೂರಿನ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು, ಬಸವನಗುಡಿ ಬಿಎಂಎಸ್ ಕಾಲೇಜು, ಜಯನಗರದ SSMRV ಕಾಲೇಜು, ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಕಾಲೇಜು ಕೊಠಡಿಯನ್ನು ಸಂಪೂರ್ಣವಾಗಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಬಿಎಸ್ಎಫ್ ಸಿಬ್ಬಂದಿಯಿಂದ ಭದ್ರತೆ ಮಾಡಲಾಗಿದ್ದು, ಒಂದೊಂದು ಸ್ಟ್ರಾಂಗ್ ರೂಮ್ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಒಬ್ಬ ಡಿಸಿಪಿ, 5 ಎಸಿಪಿ, 10 ಇನ್ಸ್ಪೆಕ್ಟರ್ಸ್ 100 ಪೊಲೀಸರು ಸೇರಿ ಸ್ಟ್ರಾಂಗ್ ರೂಂ ಸಮೀಪ ಕೆಎಸ್ಆರ್ಪಿ ತುಕಡಿ ಸಹ ನಿಯೋಜನೆ ಮಾಡಲಾಗಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್ಆರ್ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ, ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬನವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಸಂಜೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ…
ಬೆಂಗಳೂರು: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು (Exit Polls) ಬಿಡುಗಡೆಯಾಗಿವೆ. ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ (Congress) ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಕರ್ನಾಟಕದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಟ್ವೀಟ್‌ನಲ್ಲೇನಿದೆ? ನಾನು ಕಾಂಗ್ರೆಸ್ ನಾಯಕರು ಹಾಗೂ ಸಿಂಹದಂತಿರುವ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರು ಘನತೆಯುತ ಮತ್ತು ಉತ್ತಮವಾದ ಪ್ರಚಾರ ಮಾಡಿದ್ದಾರೆ. ಪ್ರಗತಿಪರ ಭವಿಷ್ಯಕ್ಕಾಗಿ ಮತ ಹಾಕಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಕರ್ನಾಟಕದ ಜನತೆಗೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಕಂಡುಬಂದಿದ್ದರೂ ಈ ಬಾರಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಯಿದೆ. ಬಹುಮತಕ್ಕೆ 113 ಸ್ಥಾನಗಳ ಅಗತ್ಯವಿದ್ದು ಕಾಂಗ್ರೆಸ್, ಬಿಜೆಪಿ ಮಧ್ಯೆ ಭಾರೀ ಸ್ಪರ್ಧೆ ನಡೆಯುತ್ತಿರುವುದು ಸ್ಪಷ್ಟವಾಗಿದೆ.…
ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079,ವೈಶಾಖ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಷಷ್ಠಿ 11:27 AM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಉತ್ತರ ಆಷಾಢ 02:37 PM ತನಕ ನಂತರ ಶ್ರವಣ ಯೋಗ: ಇವತ್ತು ಶುಭ 03:17 PM ತನಕ ನಂತರ ಶುಕ್ಲ ಕರಣ: ಇವತ್ತು ಗರಜ 12:38 AM ತನಕ ನಂತರ ವಣಿಜ 11:27 AM ತನಕ ನಂತರ ವಿಷ್ಟಿ 10:16 PM ತನಕ ನಂತರ ಬವ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:3 ವರೆಗೂ ಅಮೃತಕಾಲ: 08.38 AM to 10.08 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:38 ವರೆಗೂ ಮೇಷ ರಾಶಿ: ಪಾತ್ರೆ ವ್ಯಾಪಾರಸ್ಥರು ವ್ಯಾಪಾರ ವಹಿವಾಟಗಳಲ್ಲಿ ನಷ್ಟ, ದಂಪತಿಗಳಿಗೆ ಸಂತಾನದ ಯೋಚನೆ,ಮದುವೆ ಕಾರ್ಯಗಳಲ್ಲಿ ಅಡತಡೆ ಸಂಭವ, ವಿದೇಶಕ್ಕೆ ಹೋಗುವ ಕನಸು ನನಸಾಗುವ ದಿನ,…
ಬೆಂಗಳೂರು: ಕರ್ನಾಟಕ ಚುನಾವಣೆಯ (Karnataka Election) ಎಕ್ಸಿಟ್ ಪೋಲ್ ಲೆಕ್ಕಾಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದಾರೆ. ಈ ಎಕ್ಸಿಟ್ ಪೋಲ್‍ಗಳನ್ನು (Exit Poll) ನಾನು ನಂಬುವುದಿಲ್ಲ. ನಾವು 141 ಸ್ಥಾನಗಳನ್ನು ದಾಟುತ್ತೇವೆ ಎಂಬ ಭರವಸೆ ಇದೆ. ಮಾಧ್ಯಮಗಳ ಲೆಕ್ಕಾಚಾರ ಬೇರೆ, ನಮ್ಮ ಲೆಕ್ಕಾಚಾರ ಬೇರೆ. ಈಗ ಮಾಧ್ಯಮಗಳು ತೋರಿಸುತ್ತಿರುವ ವರದಿಗಳು ಸುಳ್ಳಾಗುತ್ತವೆ. ಕಾಂಗ್ರೆಸ್‍ಗೆ (Congress) ಸ್ಪಷ್ಟ ಬಹುಮತ ಬರಲಿದೆ. ನಮಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬಾರಿ ಮಂಡ್ಯ, ಮೈಸೂರು ಮತ್ತು ಹಾಸನ ಭಾಗಗಳಲ್ಲೇ ಸುಮಾರು 23 ರಿಂದ 24 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಕೊಡಗಿನಲ್ಲೂ ಎರಡು ಸ್ಥಾನ ಗೆಲ್ಲುವ ಭರವಸೆ ಇದೆ ಇದರಿಂದಾಗಿ ನಮ್ಮ ಸ್ಥಾನಗಳು ಹೆಚ್ಚಲಿವೆ ಎಂದು ಅವರು ಭರವಸೆ ವ್ಯಕ್ತಪಡಿದ್ದಾರೆ.