ರಾಯಚೂರು;– ಪೊಲೀಸ್ ಭದ್ರತೆ ನಡುವೆಯೂ ತುಂಗಭದ್ರ ಎಡದಂಡೆ ಕಾಲುವೆ 51ನೇ ಉಪ ಕಾಲುವೆ ನೀರು ಕಳ್ಳತನ ನಡೆದಿರುವ ಘಟನೆ ಜರುಗಿದೆ. 144 ನಿಷೇಧಾಜ್ನೆ ಜಾರಿಯಲ್ಲಿದ್ರು ಉಪ ಕಾಲುವೆ ಗೇಟ್ ಎತ್ತಿ ನೀರು ಕಳ್ಳತನ ಮಾಡಲಾಗಿದೆ. ಪೊಲೀಸರ ಕಣ್ತಪ್ಪಿಸಿ ಉಪ ಕಾಲುವೆಗೆ ಬಲಾಢ್ಯ ರೈತರು ನೀರು ಆರಿಸಿಕೊಂಡಿದ್ದಾರೆ. ಕುಡಿಯುವ ನೀರಿನ ಕೆರೆಗಳನ್ನ ತುಂಬಿಸಲು ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದ್ದು, ಕೃಷಿ ಚಟುವಟಿಕೆಗೆ ಕಾಲುವೆ ನೀರು ಬಳಸದಂತೆ ನಿಷೇಧ ಏರಿ ಕಾಲುವೆಯುದ್ದಕ್ಕು ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.ಪೊಲೀಸ್ ಬದ್ರತೆ ನಡುವೆ ರಾಯಚೂರ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗ್ತಿದೆ. ಈ ಮಧ್ಯೆ ಮಸ್ಕಿ ಬಳಿ ಕೆಲ ಬಲಾಢ್ಯ ರೈತರು ಕಾಲುವೆ ನೀರು ದೊಚಿದ ಘಟನೆ ನಡೆದಿದೆ. ಕುಡಿಯುವ ನೀರು ಪೂರೈಕೆ ನಿರ್ವಹಣೆಯಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ಈ ಹಿನ್ನೆಲೆ ರಾಯಚೂರ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದೆ.
Author: Prajatv Kannada
ಬೆಂಗಳೂರು: ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆ ಹಾಕಿಕೊಂಡಿದ್ದರು. ಆದರೆ ಅವರದ್ದು ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ ಆ ಯೋಜನೆಗಳನ್ನು ಜಾರಿ ಮಾಡಲು ಬಿಡಲಿಲ್ಲ. ಹೀಗಾಗಿ ಅವರನ್ನು ಭೇಟಿ ಮಾಡಿ ಅವರ ಸಲಹೆ, ಅಭಿಪ್ರಾಯ ಪಡೆಯಲಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಾನು ಈ ಹಿಂದೆ ಜಗದೀಶ್ ಶೆಟ್ಟರ್, ದೇವೇಗೌಡರು, ಎಸ್.ಎಂಕೃಷ್ಣ, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಇರಲಿಲ್ಲ. ಸಾಧ್ಯವಾದರೆ ಅವರನ್ನು ಭೇಟಿ ಮಾಡುತ್ತೇನೆ. ಎಲ್ಲರ ಅನುಭವ ಅವರ ವಿಚಾರಧಾರೆ ಕೇಳಿ ಪಡೆಯುತ್ತೇನೆ. ಇದರಲ್ಲಿ ರಾಜಕಾರಣ ಯಾಕೆ ಮಾಡಬೇಕು ಎಲ್ಲರ ಅಭಿಪ್ರಾಯ ತಿಳಿದರೆ ನನಗೆ ಉಪಯೋಗವಾಗುತ್ತದೆ ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಹೇಳಿದರು.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ವಿಧಾನಸಭೆಯ ಅಧಿವೇಶನದ ಕಲಾಪಗಳನ್ನ ನೇರ ಪ್ರಸಾರ ಮಾಡಲು ಘನ ಮಾಧ್ಯಮಗಳಿಗೆ ನಿಷೇಧವನ್ನು ಏರಿತ್ತು ಈಗ ನೇರ ಪ್ರಸಾರವನ್ನು ಮುಂದುವರಿಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ನಿಷೇಧವನ್ನು ರದ್ದುಪಡಿಸಿ ನೇರಪ್ರಸಾರಕ್ಕೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ವಿನಂತಿಸಿದ್ದಾರೆ. ಏನೆಂದರೆ ಹಿಂದಿನ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರ ಕ್ರಮವನ್ನು ಖಂಡಿಸಿ ನಾವು ಸಹ ಪ್ರತಿಭಟನೆ ನಡೆಸಿದ್ದೆವು ತಾವು ಈಗ ನೂತನವಾಗಿ ಸಭಾಧ್ಯಕ್ಷರಾಗಿರುವುದರಿಂದ ತಮಗೆ ಈ ಎಲ್ಲ ವಿಷಯಗಳ ಮಾಹಿತಿ ದೊರಕಿರುತ್ತದೆ ಹಾಗೆ ತಾವು ಆ ಸಂದರ್ಭದಲ್ಲಿ ವಿರೋಧ ಪಕ್ಷದ ಉಪನಾಯಕರಾಗಿ ಕಾರ್ಯನಿರ್ವಹಿಸಿದ್ದೀರಿ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಅತೀ ಹೆಚ್ಚು ಚರ್ಚೆ ವಿಧಾನಸಭೆಯಲ್ಲಿ ನಡೆಯುತ್ತಿದ್ದರಿಂದ ಅಂದಿನ ಸಭಾಧ್ಯಕ್ಷರು ಮಾಧ್ಯಮಗಳಿಗೆ ಅವಕಾಶ ನೀಡಿರಲಿಲ್ಲ ಮಾಧ್ಯಮಗಳಿಗೆ ನಿಷೇಧವನ್ನು ಏರಿದ್ದರು ಆ ರೀತಿ ಇಂದು ಆಗ ಕೂಡದು ಆದ್ದರಿಂದ ತಾವು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ…
ಬೆಂಗಳೂರು ;- ಡೇ ಕೇರ್ ನಲ್ಲಿಮಕ್ಕಳನ್ನ ಬಿಡುವ ಪೋಷಕರೇ ಮಿಸ್ ಮಾಡ್ದೆ ಈ ದೃಶ್ಯ ನೋಡಿ. ಈ ದೃಶ್ಯ ನೋಡಿದ್ರೆ ಅಯ್ಯೋ ಅಯ್ಯೋ ಪಾಪ ಅನ್ನಿಸದೇ ಇರಲ್ಲಾ.. ಸಣ್ಣ ಮಗು ಇನ್ನೊಂದು ಸಣ್ಣ ಮಗುವಿಗೆ ಹೊಡೆದಿರೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೌದು ಸಣ್ಣ ಮಕ್ಕಳು ಬಡಿದಾಡಿಕೊಂಡರು ಅಲ್ಲಿನ ಆಯಾ ಎಷ್ಟರ ಮಟ್ಟಿಗೆ ನಿರ್ಲಕ್ಷ್ಯ ತೋರಿದ್ದಾರೆ ಎಂಬುವುದು ವಿಡಿಯೋದಲ್ಲಿ ಗಮನಿಸಬಹುದು. ಇಷ್ಟೆಲ್ಲಾ ದೃಶ್ಯ ಕಂಡು ಬಂದಿದ್ದು, ಸುಬ್ರಹ್ಮಣ್ಯ ಪುರದಲ್ಲಿ ಇರೋ ಟೆಂಡರ್ ಪೂಟ್ ಡೇ ಕೇರ್ ಸೆಂಟರ್ ನಲ್ಲಿ. ಈ ಡೇ ಕೇರ್ ಸೆಂಟರ್ ಅಲ್ಲಿ ಮಕ್ಕಳನ್ನು ನೋಡಿಕೊಳ್ತಾ ಇದ್ದ ಆಯಾ ಒಂದು ಮಗುವನ್ನು ಹೊರಗೆ ಕರೆದುಕೊಂಡು ಹೋಗಿದ್ದ ವೇಳೆ ಒಂದು ಮಗು ಇನ್ನೊಂದು ಮಗುವನ್ನು ಹಿಡಿದುಕೊಂಡು ಹೊಡೆದಿದೆ. ಸುಮಾರು ಮೂರು ನಾಲ್ಕು ನಿಮಿಷ ಹೊಡೆದ್ರೂ ಮಕ್ಕಳನ್ನ ನೋಡಿಕೊಳ್ಳಲು ಅಲ್ಲಿಗೆ ಯಾರು ಬರೋದೆ ಇಲ್ಲ. ನಾಲ್ಕೈದು ನಿಮಿಷ ಮಕ್ಕಳು ಜಗಳ ಮಾಡಿಕೊಂಡರು ಅಲ್ಲಿನ ಆಯಾ ಅಲ್ಲಿಗೆ ಬರದೇ ನಿರ್ಲಕ್ಷ್ಯ ತೋರಿದ್ದಾರೆ. ಈ ವಿಡಿಯೋ ಸಿಸಿಟಿವಿಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ. ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು. ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ ಸಾಮಾನ್ಯರ ಮೇಲೆ ಬೀಳುತ್ತದೆ. ಇದನ್ನು ತಪ್ಪಿಸಬೇಕು. ಈಗಿರುವ ಲೋಪವನ್ನು ಸರಿಪಡಿಸಲಿ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ;- ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಗೋವಿಂದಪುರ ಠಾಣಾ ಪೊಲೀಸರು ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್‌ಎಸ್‌ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್‌ಎಸ್‌ಎಲ್ ರಿಪೋರ್ಟ್ ಚಾರ್ಜ್ ಶೀಟ್ನಲ್ಲಿ ಅಟ್ಯಾಚ್ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ. ಲೋಪ ಯಾರದ್ದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್‌ಎಸ್‌ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್(KJ George) ತಿಳಿಸಿದ್ದಾರೆ. ಹಿಂದಿನ ಸರ್ಕಾರವಿದ್ದಾಗ KERC ವಿದ್ಯುತ್ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್ ಕಲೆಕ್ಟ್ ಮಾಡಲು ಹೇಳಿದ್ದಾರೆ.ಒಂದೇ ಬಾರಿ 2 ತಿಂಗಳ ವಿದ್ಯುತ್ ದರ ಏರಿಕೆಯ ಬಿಲ್ ಬಂದಿದೆ. ನಮ್ಮ ಸಾಫ್ಟ್ವೇರ್ ಹಳೆಯದು, ಹೊಸ ಸಾಫ್ಟ್ವೇರ್ ಹಾಕಬೇಕು. ಕೆಲವೆಡೆ ಮೀಟರ್ ಸಮಸ್ಯೆಯಿಂದ ವಿದ್ಯುತ್ ದರ ಹೆಚ್ಚಳ ಆಗಿದೆ. ಕೊಪ್ಪಳದಲ್ಲೂ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದೆ. ಮೀಟರ್ ಸಮಸ್ಯೆಯಿಂದ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದೆ. ಅಜ್ಜಿ ಅಷ್ಟೊಂದು ಕರೆಂಟ್ ಬಿಲ್ ಕಟ್ಟಬೇಕಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದರು
ಬೆಂಗಳೂರು: ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಸುಮಾರು 27 ವರ್ಷದ ಅಮೃತಾ ಶರ್ಮ ಅಪಾರ್ಟ್‌ಮೆಂಟ್ ನ ಹತ್ತನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ನಡೆದ ಘಟನೆಯಾಗಿದ್ದು ಸ್ಥಳೀಯರು ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಅಮೃತಾ ಶರ್ಮ. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆಗೆ ಮೃತದೇಹ ಅಂಬೇಡ್ಕರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಅಮೃತಾ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು ಹಾಗೆ ಇತ್ತೀಚಿಗೆ ತನ್ನ ತಂದೆಯನ್ನು ಕಳೆದುಕೊಂಡು ತುಂಬಾ ನೊಂದಿದ್ದರು. ಸದ್ಯ ಲಖನೌನಿಂದ ಮೃತಳ ತಾಯಿ ಆಗಮಿಸುತಿದ್ದು ಯಲಹಂಕ ನ್ಯೂಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.
ಬೆಂಗಳೂರು: ವಿದ್ಯುತ್ ದರ ಹೆಚ್ಚಳ ಹಿನ್ನೆಲೆ ನಿನ್ನೆ ಕೈಗಾರಿಕೋದ್ಯಮಿಗಳು ಪ್ರತಿಭಟನೆ ನಡೆಸಿದ್ದರು. ಹಾಗಾಗಿ ಇಂದು ಕೈಗಾರಿಕೋದ್ಯಮಿಗಳ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ಮಾಡಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದೆ. ಇಂಧನ ಇಲಾಖೆ ಅಧಿಕಾರಿಗಳು, ಕೈಗಾರಿಕೋದ್ಯಮಿಗಳು ಭಾಗಿಯಾಗಲಿದ್ದಾರೆ. ಒಂದು ಕಡೆ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಮಸ್ಯೆ ಉಂಟಾಗಿದೆ. ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ (Congress) ನಾಯಕರು ಕಿಡಿಕಾರುತ್ತಿದ್ದಾರೆ. ಇನ್ನೊಂದೆಡೆ ವಿದ್ಯುತ್ ದರ (Electricity Hike) ಏರಿಕೆ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಇವೆಲ್ಲದರ ಮಧ್ಯೆ ಹೋಟೆಲ್ ಮಾಲೀಕರು ಸಾರ್ವಜನಿಕರಿಗೆ ಶಾಕ್ ಕೊಡಲು ಮುಂದಾಗಿದ್ದಾರೆ.
ಬೆಂಗಳೂರು: ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಸಂಜೆ 6 ಗಂಟೆಗೆ ಭೇಟಿಯಾಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಬೆಂಗಳೂರು ನಗರ ಅಭಿವೃದ್ಧಿಗೆ ಪಣ ತೊಟ್ಟಿರುವ ಡಿ.ಕೆ.ಶಿವಕುಮಾರ್ ಈ ಹಿನ್ನೆಲೆ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಮಾತುಕತೆ ಮಾಡಲಿದ್ದಾರೆ ಹಾಗೆ ಕೆಲವು ಸಲಹೆಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತಿದೆ. ಬಿಜೆಪಿ ಅವಧಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.