ಬೆಂಗಳೂರು: ಅಪ್ಪನ ಸರ್ಕಾರಿ ಕಾರಿನಲ್ಲಿ ಮಗಳ ದರ್ಬಾರ್. ಹೌದು ಸದಾಶಿವನಗರದಲ್ಲಿ ಜವಳಿ ಮತ್ತು ಸಕ್ಕರೆ ಖಾತೆ ಸಚಿವರಾದ ಸಚಿವ ಶಿವಾನಂದ ಪಾಟೀಲ್ (Shivanada Patil Daughter) ಅವರ ಪುತ್ರಿ ಸಂಯುಕ್ತ ಪಾಟೀಲ್ ಸರ್ಕಾರದ ಕಾರಲ್ಲಿ ಓಡಾಟ ನಡೆಸಿದ್ದಾರೆ. ಸಚಿವರು ತಮ್ಮ ಸರ್ಕಾರಿ ಕಾರನ್ನ ಮಗಳಿಗೆ ನೀಡಿದ್ದಾರೆ. ಸರ್ಕಾರಿ ಕಾರಿನಲ್ಲಿ ಸಚಿವರ ಪುತ್ರಿ ಫುಲ್ ಸುತ್ತಾಟ ನಡೆಸುತ್ತಿದ್ದಾರೆ. ಸರ್ಕಾರಿ ವಾಹನವನ್ನು ಸ್ವಂತ ಕಾರ್ಯಕ್ಕೆ ಬಳಸಿಕೊಳ್ಳುವ ಕುರಿತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
Author: Prajatv Kannada
ಬೆಂಗಳೂರು: ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ(Bangalore Crime) ನೀಡಿ ಪರಿಶೀಲಿಸಿದ್ದಾರೆ. ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಮಲ್ಲೇಶ್ವರಂ ರೈಲ್ವೆ ಪೊಲೀಸರು, ಗುರುತು ಪತ್ತೆಗಾಗಿ ಯತ್ನಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಗಳಿಗೂ ಮಾಹಿತಿ ರವಾನಿಸಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆಯೂ ಅನುಮಾನವಿದ್ದು, ಈ ನಿಟ್ಟಿನಲ್ಲಿಯೂ ತನಿಖೆ ನಡೆಸಿದ್ದಾರೆ.
ದಾವಣಗೆರೆ: 5 ಗ್ಯಾರಂಟಿಗಳನ್ನು ಜಾರಿಗೆ ತರಲು ಆಗದಿದ್ರೆ ಅಧಿಕಾರ ಬಿಟ್ಟು ತೊಲಗಲಿ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa) ವಾಗ್ದಾಳಿ ನಡೆಸಿದ್ದಾರೆ. ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ರಾ?. ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್ನವರೇ ಭರವಸೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ ಕೊಡ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಬಿಎಸ್ವೈ (BS Yediyurappa)ಆಕ್ರೋಶ ಹೊರ ಹಾಕಿದ್ದಾರೆ.
ದಾವಣಗೆರೆ: ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರೆಂಟಿಗಳನ್ಮ ಪೂರೈಸಲು ಆಗುತ್ತಿಲ್ಲ. ಇಷ್ಟರಲ್ಲಿಯೇ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ(MP Renukacharya) ಭವಿಷ್ಯ ನುಡಿದಿದ್ದಾರೆ. ಕೇಂದ್ರ ಸರ್ಕಾರವನ್ನು ಕೇಳಿ ಚುನಾವಣೆಯಲ್ಲಿ ಅನ್ನ ಭಾಗ್ಯ ಘೋಷಣೆ ಮಾಡಿದ್ದಾರಾ? ಕೇಂದ್ರ ಐದು ಕೆಜಿ ಸೇರಿ 15 ಕೆಜಿ ಅಕ್ಕಿ ರಾಜ್ಯ ಸರ್ಕಾರ ಕೊಡಬೇಕು. ರಾಜ್ಯ ಸರ್ಕಾರ ನೀಡಿದ ಐದು ಗ್ಯಾರೆಂಟಿ ಪೂರೈಕೆ ಸಿದ್ದರಾಮಯ್ಯ ಅವರಿಂದ ಆಗಲ್ಲ. ರಾಜ್ಯ ಸುಳ್ಳು ಭರವಸೆ ನೀಡಿದೆ ಎಂಬುವುದು ಸ್ಪಷ್ಟವಾಗುತ್ತದೆ. ರಾಜ್ಯ ಬಿಜೆಪಿಗೆ ನಾಯಕತ್ವ ಇದೆ. ಜುಲೈ ಮೂರರಂದು ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಆರಂಭ ಆಗುವುದಕ್ಕೂ ಮೊದಲು ಪ್ರತಿ ಪಕ್ಷದ ನಾಯಕನ ಆಯ್ಕೆ ಆಗುತ್ತದೆ ಎಂದರು.
ಚಾಮರಾಜನಗರ: 13 ಬಾರಿ ಬಜೆಟ್ ಮಂಡಿಸಿದ ತಕ್ಷಣ ಭತ್ತ ಬೆಳೆದು ಅಕ್ಕಿ ಕೊಡಲು ಆಗಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಆದವರಿಗೆ ಮುಂದಾಲೋಚನೆ ಇರಬೇಕು. ದೇಶಾದ್ಯಂತ ಮಳೆ ಅಭಾವ ಇದೆ, ಆಹಾರ ಕೊರತೆ ಇದೆ. ಆಹಾರ ಭದ್ರತೆಗಾಗಿ ಕೇಂದ್ರ ಸರ್ಕಾರ ಮೊದಲೇ ನಿರ್ಧಾರ ಮಾಡಿದೆ. ಕಾಂಗ್ರೆಸ್ ಸರ್ಕಾರ ಬರುವ ಮುನ್ನ ತೆಗೆದುಕೊಂಡ ನಿರ್ಧಾರ ಇದು. ಸರ್ವರ್ ಹ್ಯಾಕ್ ಮಾಡ್ತಾರೆ ಅಂತಾ ಸಚಿವರು ಆರೋಪ ಮಾಡಿದ್ದಾರೆ. ಇಂತಹ ಸರ್ಕಾರ ಬಂದಿದೆಯಲ್ಲ ಅಂತಾ ಬೇಸರವಾಗುತ್ತೆ. ಕರ್ನಾಟಕಕ್ಕೆ ಎಂತಹ ದುರ್ದೈವ ಸ್ಥಿತಿ ಬಂತು ಅಂತಾ ಬೇಸರವಾಗುತ್ತೆ ಎಂದರು.
ಹಾಸನ: ಮಗಳ ಸಾವಿನ ಸುದ್ದಿ ಕೇಳಿ ತಾಯಿಯೂ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ನಗರದ, ದಾಸರಕೊಪ್ಪಲಿನಲ್ಲಿ ನಡೆದಿದೆ. ಮನೆಯ ಒಡತಿಗೆ ಭೋಗ್ಯದಾರರ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮನೆಯ ಒಡತಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು,ಮಗಳ ಸಾವಿನ ಸುದ್ದಿ ಕೇಳಿ ಅಘಾತದಿಂದ ತಾಯಿ ಕೂಡ ಸಾವನ್ನಪ್ಪಿದ್ದಾರೆ. 55 ವರ್ಷದ ಲಲಿತಾ ಹಾಗೂ 75 ವರ್ಷದ ತಾಯಿ ಲಕ್ಷ್ಮಮ್ಮ ಮೃತ ದುರ್ದೈವಿ ಗಳಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ . ದಾಸರಕೊಪ್ಪಲು ಬಡಾವಣೆಯಲ್ಲಿ ವಾಸಕ್ಕೆ ಹಾಗೂ ಬಾಡಿಗೆ, ಭೋಗ್ಯಕ್ಕಾಗಿ ಲಲಿತಾ ಹಾಗೂ ಪತಿ ನಾಗರಾಜ ಮನೆಗಳನ್ನು ನಿರ್ಮಿಸಿಕೊಂಡಿದ್ದರು ಮನೆಯ ಕೆಳಭಾಗದ ನೆಲ ಮಹಡಿಯಲ್ಲಿ ಲಲಿತಾ ಹಾಗೂ ನಾಗರಾಜ ವಾಸವಾಗಿದ್ದ ವೇಳೆ ಮೇಲ್ಭಾಗದ ಮನೆಗಳನ್ನು ಲಲಿತಾ ಬಾಡಿಗೆ ಮತ್ತು ಭೋಗ್ಯಕ್ಕೆ ನೀಡಿದ್ದರು. ಮೊದಲ ಮಹಡಿಯ ಉತ್ತರ ಭಾಗದ ಮನೆಯನ್ನು, ಎರಡು ವರ್ಷದ ಹಿಂದೆ ಉದ್ದೂರು ಕೊಪ್ಪಲು ಗ್ರಾಮದ ಸುಧಾರಾಣಿ-ನಟರಾಜ ದಂಪತಿಗೆ ಐದು ಲಕ್ಷ ರೂ ಹಣ ಪಡೆದು ಮೂರು ವರ್ಷದ ಅವಧಿಗೆ ಭೋಗ್ಯಕ್ಕೆ ನೀಡಿದ್ದು ಒಂದು…
ಚಿಕ್ಕಮಗಳೂರು: 2 ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಪ್ರಧಾನ ಮಂತ್ರಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಿಗಾಗಲಿ ಬೇಡಿಕೆ ಇಡಲೇ ಇಲ್ಲ. ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸಪಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಸಿ.ಟಿ.ರವಿ ಆರೋಪಿಸಿದರು. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‌ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ ಜೂ.9ರಂದು ಪತ್ರ ಬರೆದಿದೆ. ಇದಕ್ಕೆ ಜೂ.12ರಂದು ಅನುಮತಿಯನ್ನೂ ನೀಡಲಾಗಿದೆ. ಜೂ.13 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್‌ಸಿಐ ಕೇಂದ್ರ ಕಚೇರಿಗೆ ಎಂಓಎಸ್‌ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿಬಂರ್‍ಧಿಸಿರುವ ಬಗ್ಗೆ ಆದೇಶ ಬಂದಿದೆ. ಜೂ.8ರಂದು ನಡೆದ ಸಭೆಯಲ್ಲೇ ಇದು ತೀರ್ಮಾನವಾಗಿದೆ ಎಂದರು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ, ಬದಲಿಗೆ ಎಫ್‌ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರ. ಅಂದರೆ, ಇದು ರಾಜ್ಯ ಸರ್ಕಾರ ಎಫ್‌ಸಿಐಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿಯೇ…
ಕೋಲಾರ: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ವಿಚಾರ ಸಂಬಂಧಿಸಿದಂತೆ ಕೋಲಾರದಲ್ಲಿ ಮಹಿಳೆಯರ ಆಕ್ರೋಶ ತಾರಕಕ್ಕೇರಿದೆ. ಹೌದು ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರ ದಲ್ಲಿ (Kolar) ಇಂದು ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಿಳೆಯರು ಗೋಕುಂಟೆ ಸೊಸೈಟಿಯಲ್ಲಿ ಸಾಲ ಪಡೆದಿದ್ದರು. ಸಾಲ ವಸೂಲಿಗೆ ಸೊಸೈಟಿ ಸಿಬ್ಬಂದಿ ಜೋಸೆಫ್ ತೆರಳಿದ್ದರು. ಈ ವೇಳೆ ಸಾಲ ಕಟ್ಟೋದಿಲ್ಲ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಮಹಿಳೆಯರು ಹೇಳಿದ್ದಾರೆ. ಅಲ್ಲದೇ ಮಹಿಳೆಯರಿಂದ ಸಿಬ್ಬಂದಿಯ ಮೇಲೆ ಹಲ್ಲೆಯ ಯತ್ನ ಕೂಡ ನಡೆದಿದೆ.
ವಿಜಯಪುರ: ರಾಜ್ಯದಲ್ಲಿ ವಿದ್ಯುತ್ ದರ(Current bill)ಏರಿಕೆ ಮಾಡಿದ್ದು ನಮ್ಮ ಸರ್ಕಾರ ಅಲ್ಲ ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ (MB Patil)ತಿಳಿಸಿದ್ದಾರೆ. ಕೆಇಆರ್ಸಿ ವಿದ್ಯುತ್ ದರ ಹೆಚ್ಚಳ ಮಾಡಿದೆ. ನಾವು ಅಧಿಕಾರಕ್ಕೆ ಬರುವ ಮೊದಲೇ ವಿದ್ಯುತ್ ದರ ಹೆಚ್ಚಳ ಆಗಿದೆ. ಬೆಲೆ ಏರಿಕೆಗೂ ನಮಗೂ ಯಾವ ಸಂಬಂಧವಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಹಿಂಪಡೆಯಲು ಆಗಲ್ಲ ಎಂದಿದ್ದಾರೆ. ಆದರೂ ಸಹ ನಾನು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕೈಗಾರಿಕೋದ್ಯಮಿಗಳು ಸಹಕರಿಸಿ ಎಂದು ವಿನಂತಿ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಜಾರ್ಜ್ ಜತೆ ಚರ್ಚಿಸುತ್ತೇನೆ ಎಂದರು.
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಪಾಪಿ ತಂದೆ ಇಬ್ಬರು ಪುಟ್ಟ ಮಕ್ಕಳ ಕುತ್ತಿಗೆ ಕೂದು ಕೊಲೆ ಮಾಡಿ ತನ್ನ ಮಡದಿಗೂ ಮಾರ ಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದ ಫಾಂ ಹೌಸ್‌ನಲ್ಲಿ ಜರುಗಿದೆ. ನಾಲ್ಕು ವರ್ಷದ ಆದರ್ಶ ಹಾಗೂ ಎರಡು ಅಮೂಲ್ಯ ತಂದೆಯಿಂದ ಕೊಲೆಯಾದ ದುರ್ದೈವಿ ಮಕ್ಕಳಾಗಿದ್ದಾರೆ. ಶ್ರೀಕಾಂತ್ ಎಂಬ ಪಾಪಿ ತಂದೆ ತನ್ನ ಇಬ್ಬರು ಮಕ್ಕಳನ್ನು ಕೊಂದು ತನ್ನ ಪತ್ನಿ ಲಕ್ಷ್ಮೀಗೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಶ್ರೀಕಾಂತ್ ಗುಲ್ಬರ್ಗ ಜಿಲ್ಲೆಯ ಗಾಣಗಪುರ ಗ್ರಾಮದವರಾಗಿದ್ದು, ಲಕ್ಷ್ಮಿ, ಶ್ರೀಕಾಂತ್ ಮದುವೆಯಾಗಿ 6 ವರ್ಷಗಳಾಗಿತ್ತು. ಮದುವೆಯಾ ದಾಗಿನಿಂದ ಒಂದೆಲ್ಲಾ ಒಂದು ವಿಚಾರಕ್ಕೆ ಗಲಾಟೆಯಾಗುತ್ತಿತ್ತು. ನಿನ್ನೆ ಶ್ರೀಕಾಂತ್ ತನ್ನ ತಂದೆ ತಾಯಿ ಜೊತೆ ಗಲಾಟೆ ಮಾಡಿಕೊಂಡು ಶ್ರೀರಂಗಪಟ್ಟಣ ಸಮೀಪದ ಮರಳಗಾಲ ಗ್ರಾಮದ ವಿರುಪಾಕ್ಷ ಎಂಬುವವರ ತೋಟದ ಮನೆಯಲ್ಲಿ ಕೆಲ ಮಾಡುತ್ತಿದ್ದ ಅತ್ತೆ-ಮಾವನ ಮನೆಗೆ ಬಂದಿದ್ದಾರೆ. ಬಳಿಕ ಇಲ್ಲೇ ಒಂದು ಕೆಲಸ ಕೊಡಿಸಿ ನಾವು ಇಲ್ಲಿಯೇ ಇರುತ್ತೇವೆ ಎಂದು ಶ್ರೀಕಾಂತ್…