ಬೆಳಗಾವಿ: ‘ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ’ ಎಂದು ಸಂಸದೆ ಮಂಗಲಾ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ 13 ಸ್ಥಾನ ಗೆಲ್ಲುತ್ತೇವೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಸರ್ಕಾರ ಬರಲಿದೆ’ ಎಂದರು. ನಿಮ್ಮ ಬೀಗರಾದ ಜಗದೀಶ ಶೆಟ್ಟರ್ ಬಗ್ಗೆ ಹೇಳಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಅದು ಹುಬ್ಬಳ್ಳಿ ರಾಜಕಾರಣ, ಅಲ್ಲಿ ಶೆಟ್ಟರ್ ಅವರು ಗೆಲ್ಲುತ್ತಾರೆ’ ಎಂದರು
Author: Prajatv Kannada
ಶಿಗ್ಗಾವಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಮತ ಚಲಾಯಿಸುವ ಮುನ್ನ ಕಾವೇರಿಯ ಗಾಯತ್ರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102 ರ ಸರ್ಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. . ಸತತ ಮೂರು ಬಾರಿ ಜಯ ಗಳಿಸಿರುವ ಬೊಮ್ಮಾಯಿ ನಾಲ್ಕನೇಯ ಬಾರಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2.25 ಲಕ್ಷ ಮತದಾರರಿದ್ದಾರೆ. ಪುರುಷರು 1,15,453 ಮತ್ತು ಮಹಿಳೆಯರು 1,08,321 ಮತ ಚಲಾಯಿಸಲಿದ್ದಾರೆ. ಇದಕ್ಕೂ ಮುನ್ನ ಅವರು ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನರಿಗೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ರ್ಯಾಲಿಗಳು ಮತ್ತು ರೋಡ್‌ಶೋಗಳನ್ನು ಒಳಗೊಂಡಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಚುನಾವಣಾ ಪ್ರಚಾರದ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿದರು. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿವರ ಜೊತೆಗೆ ಅವರ ಕುಟುಂಬ ವರ್ಗದವರು ಕೂಡ ಸಾಥ್ ನೀಡಿದರು. ಇನ್ನೂ ಸಿಎಂ ಮತದಾನ ಮಾಡುವ ಕೇಂದ್ರಕ್ಕೆ ಅವರ ಅಭಿಮಾನಿಯೊಬ್ಬರು ಪೂಜೆ ಮಾಡಿದ್ದು ವಿಶೇಶವಾಗಿತ್ತು.
ಚಿಕ್ಕಮಗಳೂರು : ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಮದುವೆಗೂ ಮುನ್ನ ಚಿಕ್ಕಮಗಳೂರಿನ ಮತಗಟ್ಟೆ ಸಂಖ್ಯೆ 165ರಲ್ಲಿ ತನ್ನ ಕುಟುಂಬ ಸಮೇತರಾಗಿ ಬಂದ ವಧು ಮತ ಚಲಾಯಿಸಿ ಸಂಭ್ರಮಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ.
ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಮತದಾನ ಆರಂಭವಾದ ಬೆನ್ನಲ್ಲೇ ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡಲು ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಗೆ ಆಗಮಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಹೌದು ಲ್ಯಾಮಿಂಗಟನ್ ಶಾಲೆ ಮತಗಟ್ಟೆಯಲ್ಲಿ ವಿಧಾನ ಪರಿಷತ್ತ ಸಭಾಪತಿ ಬಸವರಾಜ ಹೊರಟ್ಟಿ ಮತ ಚಲಾವಣೆ ಮಾಡಿದ್ದು, ಪುತ್ರ ಹಾಗೂ ಪತ್ನಿಯಿಂದಿಗೆ ಮತಗಟ್ಟೆಗೆ ಆಗಮಿಸಿದ ಬಸವರಾಜ ಹೊರಟ್ಟಿ ಮತದಾನ ಮಾಡಿದ್ದಾರೆ.
ರಾಯಚೂರು: ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಮತಗಟ್ಟೆ ಸಂಖ್ಯೆ 105 ಇದರಲ್ಲಿ ಮತದಾನ ಪ್ರಾರಂಭವಾಗಿಲ್ಲ. ಯಂತ್ರ ಕೆಟ್ಟಿದ್ದು, 8 ಗಂಟೆಯಾದರೂ ಇಲ್ಲಿಯವರೆಗೆ ಮತದಾನ ಮಾಡದೇ ಮತದಾರರು ಮರಳಿ ಮನೆ ಹೋಗುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ವಿಷಯ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸಲಾಗಿದೆ ಇನ್ನು ಬಂದಿಲ್ಲ ಎಂದು ಸಮಜಾಯಿಷಿ ಕೊಡುತ್ತಾ ಕಾಲಹರಣ ಮಾಡುತ್ತಿದ್ದಾರೆಂದು ಅನಿಸುತ್ತಿದೆ.
ಮೈಸೂರು: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ (Karnataka Assembly Election) ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಮೈಸೂರಿನ ರಾಜಮಾತೆ ಪ್ರಮೋದಾದೇವಿಯವರು ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತವನ್ನ ಚಲಾಯಿಸಿದ್ದಾರೆ. Video Player 00:00 02:50 ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಇಂದು ಬೆಳಗ್ಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪೆರೇಸಂದ್ರದಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಹಾಗೂ ತಂದೆ ಕೂಡ ಉಪಸ್ಥಿತರಿದ್ದು ವೋಟ್ ಹಾಕಿದರು.
ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಮತದಾನ ಆರಂಭಗೊಂಡ ಹಿನ್ನೆಲೆಯಲ್ಲಿ ಮತದಾನಕ್ಕೆ ತೆರಳುವ ಮುನ್ನವೇ ಸಿಎಂ ಬಸವರಾಜ ಬೊಮ್ಮಾಯಿಯವರು ಟೆಂಪಲ್ ರನ್ ಮಾಡುವ ಮೂಲಕ ಅಶೋಕ ನಗರದಲ್ಲಿನ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ಅಶೋಕನಗರದಲ್ಲಿ ಆಂಜನೇಯನ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿಯವರು, ಮತದಾನಕ್ಕೆ ತೆರಳುವ ಮೊದಲು ದೇವರ ದರ್ಶನ ಮಾಡಿದ್ದಾರೆ. ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅವರ ಪುತ್ರ ಭರತ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು
ಯಾದಗಿರಿ: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರಿನಲ್ಲಿ ಮತಗಟ್ಟೆಗೆ ಆಗಮಿಸಿದ 105 ವರ್ಷದ ದೇವಕ್ಕಮ್ಮ ಸಿದ್ದರಾಮರೆಡ್ಡಿ ಅವರು ತಮ್ಮ ಮೊಮ್ಮಗನ ಮೊದಲ ಮತದಾರರಾಗಿ ಬಂದು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು. ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಬೆಂಗಳೂರು:ಶಾಂತಿ ನಗರದ ಸೇಂಟ್ ಜೋಸೆಫ್ ಶಾಲೆಯ ಮತಗಟ್ಟೆಯಲ್ಲಿಂದು ನಟ ಪ್ರಕಾಶ್ ರಾಜ್ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ನಾವು ಕೋಮುವಾದಿ ರಾಜಕಾರಣದ ವಿರುದ್ಧ ಮತ ಚಲಾಯಿಸಬೇಕು. ಕರ್ನಾಟಕ ಸುಂದರವಾಗಿರುವುದು ಮುಖ್ಯ” ಎಂದರು. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಮತಗಟ್ಟೆಗಳ ಮುಂದೆ ಮತದಾರರು ಸರದಿ ಸಾಲಿನಲ್ಲಿ ನಿಂತಿದ್ದಾರೆ. ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೂ ಮುನ್ನವೇ ಜನ ಆಗಮಿಸಿದ್ದರು. ಉತ್ಸಾಹದಿಂದ ಮತದಾನ ನಡೆಯುತ್ತಿದೆ. ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 13ರಂದು ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಕಣದಲ್ಲಿ 2615 ಅಭ್ಯರ್ಥಿಗಳಿದ್ದಾರೆ. 2429 ಪುರುಷ, 185 ಮಹಿಳಾ, 1 ತೃತೀಯ ಲಿಂಗಿ, 918 ಪಕ್ಷೇತರರು ಇದ್ದಾರೆ. ಇದರಲ್ಲಿ ಮೂರು ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಸಕಲ ಪ್ರಯತ್ನ ಮಾಡಿವೆ. ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಹೈಕಮಾಂಡ್ಗಳನ್ನು ಪ್ರಚಾರಕ್ಕೆ ಇಳಿಸಿ ಮತಬೇಟೆ ಮಾಡಿದರೆ, ಪ್ರಾದೇಶಿಕ ಪಕ್ಷ ಜೆಡಿಎಸ್ ಅಭ್ಯರ್ಥಿಗಳ…