ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections) ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಮತದಾನ ಮಾಡಿದರು. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು. ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ ಇಂದು ಬೀರುಸಿನಿಂದ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಿದೆ.
Author: Prajatv Kannada
ನಟ ರಮೇಶ್ ಅರವಿಂದ್ (Ramesh Aravind) ಅವರು ಬೆಂಗಳೂರಿನ ಜೆಪಿ ನಗರದಲ್ಲಿ ಇಂದು (ಮೇ 10) ಮತ ಹಾಕಿದ್ದಾರೆ. ಪತ್ನಿ ಅರ್ಚನಾ ಜೊತೆ ಬಂದ ಅವರು ತಮ್ಮ ಮತ ಚಲಾಯಿಸಿದ್ದಾರೆ. Video Player 00:00 00:06 ಸೆಲೆಬ್ರಿಟಿಗಳು ಎಂದಾಗ ಅವರಿಗೆ ಮತ ಹಾಕಲು ನೇರ ಅವಕಾಶ ಸಿಗುತ್ತದೆ. ಆದರೆ, ರಮೇಶ್ ಅರವಿಂದ್ ಅವರು ಸರತಿ ಸಾಲಿನಲ್ಲಿ ನಿಂತು ಮತ ಹಾಕಿದ್ದು ವಿಶೇಷ. ರಮೇಶ್ ಅರವಿಂದ್ ಅವರನ್ನು ನೋಡಿದ ತಕ್ಷಣ ಅನೇಕರು ಸೆಲ್ಫಿಗೆ ಮುಗಿಬಿದ್ದರು.
ಹೊಸದಿಲ್ಲಿ: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಾಯಕ್ಕೆ ತುತ್ತಾಗಿರುವ ಲಖನೌ ಸೂಪರಗ್ ಜಯಂಟ್ಸ್ ನಾಯಕ ಕೆ.ಎಲ್ ರಾಹುಲ್ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಇಶಾನ್ ಕಿಶನ್ ಆಯ್ಕೆಯ ಜೊತೆಗೆ ಮುಖೇಶ್ ಚೌಧರಿ, ಸೂರ್ಯಕುಮಾರ್ ಯಾದವ್ ಹಾಗೂ ಋತುರಾಜ್ ಗಾಯಕ್ವಾಡ್ ಅವರನ್ನು ಮೀಸಲು ಆಟಗಾರರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಅಂದಹಾಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯ ಜೂನ್ 7 ರಿಂದ 11ರವರೆಗೆ ಲಂಡನ್ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಗಾಯಾಳುಗಳ ಸಮಸ್ಯೆ ಕಾಡುತ್ತಿದೆ. ಜಸ್‌ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಸೇರಿ ಪ್ರಮುಖ ಕೀ ಆಟಗಾರರು ಗಾಯದಿಂದಾಗಿ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅಲಭ್ಯರಾಗಿದ್ದಾರೆ. ಇದೀಗ ಕೆ.ಎಲ್ ರಾಹುಲ್ ಹೊರ ನಡೆದಿರುವುದು ಭಾರತ ತಂಡಕ್ಕೆ…
ಮೈಸೂರು: ಇಂದು (ಮೇ.10) ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಅದರಂತೆ ಇದೀಗ ಮೈಸೂರಿನ ಚಾಮುಂಡಿಪುರಂ ಮತಗಟ್ಟೆ ಸಂಖ್ಯೆ 233 ರಕ್ಕೆ ಆಗಮಿಸಿದ 96 ವರ್ಷದ ಗುಂಡೂರಾವ್ ನಗರದ ಬಂಗಾರಮ್ಮ ಅವರು ಮೊದಲ ಮತದಾರರಾಗಿ ಬಂದು ಮತದಾನ ಮಾಡುವ ಮೂಲಕ ಮಾದರಿಯಾದರು. ಇಂದು ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ತುಮಕೂರು: ಇಂದು ಕರ್ನಾಟಕ ವಿಧಾನಸಭೆ (Karnataka Assembly Election 2023) ಗೆ ಚುನಾವಣೆ ನಡೆಯುತ್ತಿದೆ. ನಾಡಿನಾದ್ಯಂತ ಎಲ್ಲರೂ ತಮ್ಮ ಹಕ್ಕು ಚಲಾಯಿಸುವ ದಿನವಾಗಿದೆ. ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠ (Siddaganga Mutt) ದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು. ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ (Vote) ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಅವರವರ ಮತಗಟ್ಟೆಗೆ ಹೋಗಿ ಮತದಾನ ಮಾಡಿ. ಈ ಸಂದರ್ಭದಲ್ಲಿ ಯಾರೂ ಮನೆಯಲ್ಲಿ ಉಳಿಯಬೇಡಿ ಎಲ್ಲರೂ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ನ್ಯಾಯ ಹಾಗೂ ಮುಕ್ತವಾದ ರೀತಿಯಲ್ಲಿ ಮತದಾನ ಮಾಡುವಂತದ್ದಾಗಿದೆ.…
ಕರ್ನಾಟಕದಲ್ಲಿ ಇಂದು (ಮೇ 10) ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭ ಆಗಿದೆ. ನಟಿ ಅಮೂಲ್ಯ ಅವರು ಇಂದು ಮುಂಜಾನೆ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ಅವರು ಮತ ಚಲಾವಣೆ ಮಾಡಿದ್ದಾರೆ. ಬಳಿಕ ಎಲ್ಲರ ಬಳಿ ಮತದಾನ ಮಾಡುವಂತೆ ಅವರು ಕೋರಿದ್ದಾರೆ. ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಸದ್ಯ ಕುಟುಂಬ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
ಬೆಂಗಳೂರು: ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಟ್ಟಿರುವ ಕರ್ನಾಟಕ ಚುನಾವಣೆ (Karnataka Election) ಇಂದು ನಡೆಯಲಿದೆ. ಬೆಳಗ್ಗೆ ಏಳು ಗಂಟೆಗೆ ರಾಜ್ಯದ 224 ಮತ ಕ್ಷೇತ್ರಗಳಲ್ಲಿ ಮತದಾನ ಆರಂಭ ಆಗಲಿದೆ. ಸಂಜೆ ಆರು ಗಂಟೆಯವರೆಗೂ ನಿರಂತರವಾಗಿ ಮತದಾನ (Vote) ಮಾಡಲು ಅವಕಾಶ ಇರಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಹಿಂದೆಂದೂ ಕಾಣದಷ್ಟು ಭದ್ರತೆ ಕೂಡ ಕೈಗೊಳ್ಳಲಾಗಿದೆ ಇಂದು ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಸುಗಮವಾಗಿ ನಡೆದಿದೆ. ಪ್ರಧಾನಿ ಮೋದಿ (PM Modi), ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ಸೇರಿ ಅನೇಕರು ಬನ್ನಿ ಮತ ಚಲಾಯಿಸಿ ಎಂದು ಕರೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಾದ್ಯಂತ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿದೆ. ಸಿದ್ದಲಿಂಗ ಸ್ವಾಮೀಜಿ, ನಟ ಪ್ರಕಾಶ್ ರಾಜ್ , ಹಾಸನದಲ್ಲಿ ಅಭ್ಯರ್ಥಿ ಪ್ರೀತಂ ಗೌಡ, ಸಚಿವ ಅಶ್ವಥ್ ನಾರಾಯಣ್ ಈಗಾಗಲೇ ಮತ ಚಲಾವಣೆ ಮಾಡಿದ್ದಾರೆ. ಇನ್ನು ಮತಗಟ್ಟೆ ಸಂಖ್ಯೆ 23, ಮೈಸೂರಿನ ಚಾಮುಂಡಿಪುರಂನಲ್ಲಿ 96 ವರ್ಷದ ಅಜ್ಜಿ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ. ಇನ್ನು ವಚನಾನಂದ ಸ್ವಾಮೀಜಿ ಬೆಂಗಳೂರಿನ ಭೂಪಸಂದ್ರದಲ್ಲಿ ಮತ ಚಲಾವಣೆ ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಸರ್ಕಾರಿ ಕನ್ನಡ – ಆಂಗ್ಲ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಆರಂಭಗೊಂಡಿದೆ. ಮತದಾನಕ್ಕೆ ಸರದಿಯ ಸಾಲಲ್ಲಿ ಬಂದು ಮತದಾರರು ನಿಂತಿದ್ದಾರೆ. ಮೊಮ್ಮಗನ ಜೊತೆ ಬಂದು ಅಜ್ಜಿ, ಮೀನಾ ಬಾಯಿ 76 ವರ್ಷದವರು ಮತಚಲಾಯಿಸಿದರು. ಜನಪ್ರತಿನಿಧಿಗಳಿಂದ ಮತಚಲಾವಣೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ, ಸಚಿವರಾದ ಆರಗ ಜ್ಞಾನೇಂದ್ರ, ಸುಧಾಕರ್, ಮತಚಲಾವಣೆ ಮಾಡಿದ್ದಾರೆ. ಮತಚಲಾಯಿಸಿದ ರಾಜಮಾತೆ ಪ್ರಮೋದಾದೇವಿ ಬೆಳಗ್ಗೆಯೇ ಬಂದು, ಸರತಿ ಸಾಲಲ್ಲಿ ನಿಂತು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್…
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ.
ಇಂದು ಬೆಳಗ್ಗೆ 7 ಗಂಟೆಯಿಂದಲೇ ಕರ್ನಾಟಕ ವಿಧಾನಸಭೆ (Assembly) ಮತದಾನ ಪ್ರಕ್ರಿಯೆ ಶುರುವಾಗಲಿದೆ. ಮತದಾನ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಆಯೋಗವು ನಾನಾ ತಂತ್ರಗಳು ಹೆಣೆದಿದೆ. ಮತದಾರರ ಜಾಗೃತಿಗಾಗಿ ಸ್ಯಾಂಡಲ್ ವುಡ್ (Sandalwood) ನಟ ನಟಿಯರನ್ನು ಚುನಾವಣಾ ಪ್ರಚಾರ ರಾಯಭಾರಿಗಳನ್ನಾಗಿ ನೇಮಕ ಮಾಡಿದೆ. ಅಲ್ಲದೇ, ನೇರವಾಗಿಯೇ ಕೆಲ ಸಿಲೆಬ್ರಿಟಿಗಳು (Celebrities) ಚುನಾವಣೆ ಅಖಾಡಕ್ಕೂ ಇಳಿದಿದ್ದಾರೆ. ಹೀಗಾಗಿ ಚುನಾವಣೆ ಕಣದಲ್ಲಿ ಸ್ಯಾಂಡಲ್ ವುಡ್ ನಟ (Actors), ನಟಿಯರ (Actresses) ಹವಾ ಕೂಡ ಜೋರಾಗಿದೆ. ಕನ್ನಡ ಚಿತ್ರೋದ್ಯಮದ ಬಹುತೇಕ ನಟ, ನಟಿಯರು ಹಾಗೂ ತಂತ್ರಜ್ಞರು ಬೆಂಗಳೂರಿನಲ್ಲೇ ವಾಸವಾಗಿದ್ದರಿಂದ ಯಾರು, ಯಾವ ಕ್ಷೇತ್ರದಲ್ಲಿ ಮತದಾನ (Voting) ಮಾಡಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು. ಯಾರು, ಯಾವ ಕ್ಷೇತ್ರದಲ್ಲಿ ಇದ್ದಾರೆ ಎನ್ನುವುದು ಕೆಲವರಿಗೆ ಮಾತ್ರ ಗೊತ್ತಿದ್ದರೆ, ಇನ್ನೂ ಕೆಲವರಿಗೆ ಆ ಕುರಿತು ಕುತೂಹಲವೂ ಇದ್ದೇ ಇದೆ. ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್…