Author: Prajatv Kannada

ಬೆಂಗಳೂರು;– ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಅಂಡರ್​ ಪಾಸ್​ ಬಂದ್ ಮಾಡಲಾಗಿದೆ. ಹೀಗಾಗಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರ್ಪೋರೇಷನ್, ಮಜೆಸ್ಟಿಕ್, ಹೆಬ್ಬಾಳ, ಶಾಂತಿನಗರ, ವಿಲ್ಸನ್‌ಗಾರ್ಡನ್ ಸೇರಿದಂತೆ ಹಲವಡೆ ಧಾರಾಕಾರ ಮಳೆ ಹಿನ್ನೆಲೆ ಭಾರಿ ಟ್ರಾಫಿಕ್ ಜಾಮ್ ಆಗಿದೆ. ನೂರಾರು ವಾಹನಗಳು ಜಾಮ್‌ನಲ್ಲಿ ಸಿಲುಕಿದ್ದು, ಗಂಟೆಗಟ್ಟಲೆ ವಾಹನಗಳು ಟ್ರಾಫಿಕ್‌ನಲ್ಲಿ ನಿಂತಿದ್ದವು. ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಮೈಸೂರು ರಸ್ತೆ, ಕೆ.ಆರ್.ಮಾರುಕಟ್ಟೆ, ಮಾಗಡಿ ರಸ್ತೆ, ವಿಜಯನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಔಟರ್​​ ರಿಂಗ್​ ರೋಡ್​ ಬಿಇಎಲ್ ವೃತ್ತದಿಂದ ಕುವೆಂಪು ವೃತ್ತದಿಂದ ಹೆಬ್ಬಾಳ ಫ್ಲೈಓವರ್‌ವರೆಗೆ ರಸ್ತೆ ಜಲಾವೃತವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ವೃತ್ತ ಮತ್ತು ರಾಣಿ ಪ್ರತಿಮೆ ಬಳಿಯೂ ಜಲಾವೃತವಾಗಿದೆ. ಮಳೆರಾಯನ ಆರ್ಭಟ ಜೋರದ ಹಿನ್ನೆಲೆ ಬೆಂಗಳೂರಿಗರು ರಸ್ತೆಗಳಲ್ಲಿ ಸುರಕ್ಷಿತವಾಗಿ ಮತ್ತು ನಿಧಾನವಾಗಿ ಸಂಚರಿಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ. ವೈಟ್‌ಫೀಲ್ಡ್ ಟ್ರಾಫಿಕ್ ಪೊಲೀಸ್…

Read More

ಬೆಂಗಳೂರು ;– ರಾಜ್ಯ ಕಾಂಗ್ರೆಸ್ ನಾಯಕರು ಮೋದಿ ಕಡೆ ಬೆರಳು ಮಾಡದೆ ಅಕ್ಕಿ ಕೊಡಿ ಎಂದು ಮಾಜಿ ಶಾಸಕ ಸಿ ಟಿ ರವಿ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಪೂರೈಸಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು. ಕೇಂದ್ರ ಸರ್ಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿಯನ್ನು ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ. ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರ್ಕಾರವೇ ಪೂರೈಸುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಬಡ ಕುಟುಂಬಗಳಿಗೆ…

Read More

ಸಿಯೋಲ್: ಉತ್ತರ ಕೊರಿಯಾದ ಉನ್ನತ ಅಧಿಕಾರಿಗಳು ದೇಶದ ಪ್ರಥಮ ಗೂಢಚರ್ಯೆ ಉಪಗ್ರಹ ಉಡಾವಣೆಯ ವೈಫಲ್ಯ ಈ ವರ್ಷದ ಅತ್ಯಂತ ಗಂಭೀರ ಲೋಪ ಎಂದು ಕರೆದಿದ್ದು ಇದಕ್ಕೆ ಜವಾಬ್ದಾರರಾದವರನ್ನು ಕಠಿಣ ಶಬ್ದಗಳಿಂದ ದೂಷಿಸಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿದೆ. ಮೇ ತಿಂಗಳ ಕೊನೆಯಲ್ಲಿ ಮಿಲಿಟರಿ ಗುಪ್ತಚರ ಉಪಗ್ರಹವನ್ನು ಹೊತ್ತಿದ್ದ ಉತ್ತರ ಕೊರಿಯಾದ ರಾಕೆಟ್ ಉಡಾವಣೆಗೊಂಡ ಕೆಲವೇ ಹೊತ್ತಿನಲ್ಲಿ ಪತನಗೊಂಡಿತ್ತು. ಇದು ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಮೇಲೆ ನಿಗಾ ಇರಿಸಲು ಬಾಹ್ಯಾಕಾಶ ಆಧರಿತ ಕಣ್ಗಾವಲು ವ್ಯವಸ್ಥೆಯನ್ನು ಸ್ಥಾಪಿಸುವ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್-ಜಾಂಗ್-ವುನ್ ಅವರ ಮಹತ್ವಾಕಾಂಕ್ಷೆಗೆ ಹಿನ್ನಡೆ ಉಂಟು ಮಾಡಿತ್ತು.

Read More

ದಕ್ಷಿಣ ಅಮೇರಿಕ: ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಶವ ಪೆಟ್ಟಿಗೆಯಲ್ಲಿ ಇರಿಸಿ ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಎನ್ನುವಷ್ಟರಲ್ಲಿ ಮೃತ ಮಹಿಳೆಯೇ ಶವಪೆಟ್ಟಿಗೆಯ ಬಾಗಿಲು ಬಡಿದ ಘಟನೆ ದಕ್ಷಿಣ ಅಮೇರಿಕದ ಈಕ್ವೆಡಾರ್ ಪ್ರದೇಶದಲ್ಲಿ ನಡೆದಿದೆ. 76 ವರ್ಷದ ಬೆಲ್ಲಾ ಮೊಂಟೊಯಾ ಎಂಬ ಮಹಿಳೆ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಏಳು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದರು ಮಹಿಳೆ ಜೂನ್ 8 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದರಿಂದ ಆಕೆಯ ಕುಟುಂಬಸ್ಥರು ಅಂತ್ಯಕ್ರಿಯೆಗೆ ತಯಾರಿ ನಡಿಸಿದ್ದಾರೆ. ಮಹಿಳೆಯನ್ನು ಶವ ಪೆಟ್ಟಿಗೆಯಲ್ಲಿ ಇರಿಸಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಶವ ಪೆಟ್ಟಿಗೆಯ ಬಾಗಿಲು ಬಡಿದ ಸದ್ದು ಕೇಳಿದೆ ಇದನ್ನು ಗಮನಿಸಿದ ಕುಟುಂಬ ಸದಸ್ಯರು ಶವ ಪೆಟ್ಟಿಗೆ ಬಾಗಿಲು ತೆರೆದಾಗ ಮೃತ ಮಹಿಳೆ ಜೀವಂತವಾಗಿ ಎದ್ದು ಕೂತಿದ್ದಾರೆ, ಇದನ್ನು ಕಂಡ ಕುಟುಂಬ ಸದಸ್ಯರಿಗೆ ಒಂದು ಕಡೆ ಖುಷಿ, ಇನ್ನೊಂದು ಕಡೆ ಇದು ಹೇಗೆ ಸಾಧ್ಯ ಎಂಬ ಆತಂಕ ಎದುರಾಗಿದೆ, ಕೂಡಲೆ ಮಹಿಳೆಯನ್ನು ಹತ್ತಿರದ…

Read More

ಇಸ್ಲಾಮಾಬಾದ್‌:  ಜೂನ್‌ 14ರಂದು ಗ್ರೀಸ್‌ನ ಕರಾವಳಿ ಪ್ರದೇಶದಲ್ಲಿ ನಡೆದ ದೋಣಿ ದುರಂತದಲ್ಲಿ 300 ಮಂದಿ ಪಾಕಿಸ್ತಾನದ ನಾಗರೀಕರು ಸಾವನ್ನಪ್ಪಿದ್ದು, ಕೇವಲ 12 ಮಂದಿ ಮಾತ್ರವೇ ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು ಪಾಕಿಸ್ತಾನ ಸಚಿವಾಲಯ ತಿಳಿಸಿದೆ. ಪ್ರತಿ ವರ್ಷ ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಯುವ ಸಮೂಹ ಉತ್ತಮ ಜೀವನ ಕಂಡುಕೊಳ್ಳುವ ಕಾರಣದಿಂದಾಗಿ ಯೂರೋಪ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಕಳೆದ ವಾರ ವಲಸೆ ಹೋಗುತ್ತಿದ್ದ ವೇಳೆ ಗ್ರೀಸ್‌ ನ ಕರಾವಳಿ ಪ್ರದೇಶದಲ್ಲಿ ನೂರಾರು ಜನರಿದ್ದ ಬೋಟ್‌ ಮುಳುಗಿ 300 ಮಂದಿ ಪಾಕ್‌ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ಪಾಕ್‌ ಪ್ರಜೆಗಳು ಮಾತ್ರ ಬದುಕುಳಿದಿದ್ದಾರೆ ಎಂದು ಪಾಕ್‌ ಸಚಿವಾಲಯ ಹೇಳಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ 10 ಮಂದಿಯನ್ನ ಬಂಧಿಸಲಾಗಿದ್ದು, ಪಾಕ್‌ ಆಡಳಿತ ಕಾಶ್ಮೀರದ 9 ಜನರನ್ನು ಬಂಧಿಸಲಾಗಿದೆ. ಅಲ್ಲದೆ ಮತ್ತೋರ್ವನನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ. ಬೋಟ್‌ ದುರಂತದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಪಾಕ್ ನಲ್ಲಿ ಇಂದು ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಯಿತು.…

Read More

ಕಠ್ಮಂಡು: ಪೂರ್ವ ನೇಪಾಳದಲ್ಲಿ ಮಾನ್ಸೂನ್ – ಪ್ರಚೋದಿತ ಭೀಕರ ಪ್ರವಾಹ ಮತ್ತು ಭೂಕುಸಿತಗಳು ವಿನಾಶವನ್ನು ಉಂಟಾದ ಪರಿಣಾಮ ಇದುವರೆಗೂ ಐದು ಮಂದಿ ಮೃತ ಪಟ್ಟಿದ್ದು,  ಮಂದಿ ಕಾಣೆಯಾಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಚೈನ್‌ಪುರ್ ಪುರಸಭೆ-4ರಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ ಹೆವಾ ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಮತ್ತು 21 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ಪತ್ರಿಕೆ ವರದಿ ಮಾಡಿದೆ. ಭಾನುವಾರ ಬೆಳಗ್ಗೆ ಪ್ರಧಾನಿ ಪುಷ್ಪ ಕಮಲ್ ದಹಲ್ ಅವರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವರದಿಯಾದ ಘಟನೆಗಳ ಬಗ್ಗೆ ದುಃಖ ವ್ಯಕ್ತಪಡಿಸಿದ ಅವರು “ದೇಶದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ಆಸ್ತಿ ನಷ್ಟದಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಜೊತೆಗೆ ಭದ್ರತಾ ಏಜೆನ್ಸಿಗಳು ಮತ್ತು ರಾಷ್ಟ್ರೀಯ ಸೇವಾ ಸಿಬ್ಬಂದಿಗೆ ನಾಪತ್ತೆಯಾದವರನ್ನು ರಕ್ಷಿಸಲು ನಾನು ಪ್ರಾಮಾಣಿಕವಾಗಿ ಮನವಿ ಮಾಡುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಪ್ರವಾಹದ ನಂತರ…

Read More

ಖ್ಯಾತ ನಟಿ ರಶ್ಮಿಕಾ ಮಂದಣ್ಣಗೆ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಲಕ್ಷಾಂತರ ರೂಪಾಯಿ ವಂಚಿಸಿದ್ದಾರೆ.  ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದ ಆರಂಭದಿಂದಲೂ ಆಕೆಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಇದೀಗ ಆಕೆಗೆ ಬರೋಬ್ಬರಿ 80 ಲಕ್ಷ ರೂಪಾಯಿ ವಂಚಿಸಿದ್ದಾರೆ. ರಶ್ಮಿಕಾಗೇ ಗೊತ್ತಿಲ್ಲದಂತೆ ಸುಮಾರು 80 ಲಕ್ಷ ರೂಪಾಯಿಗಳಷ್ಟು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪ ಮ್ಯಾನೇಜರ್‌ ಮೇಲೆ ಕೇಳಿಬಂದಿದ್ದು, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮ್ಯಾನೇಜರ್‌ ನನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಆದರೆ ಈ ಮ್ಯಾನೇಜರ್‌ ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಇಷ್ಟೊಂದು ದೊಡ್ಡ ಮೊತ್ತದ ವಂಚನೆ ಆಗಿದ್ದರೂ ಕೂಡ ರಶ್ಮಿಕಾ ಈ ಪ್ರಕರಣವನ್ನು ಸೈಲೆಂಟ್ ಆಗಿ ಹ್ಯಾಂಡಲ್ ಮಾಡಿದ್ದಾರೆ. ಯಾವುದೇ ಸೀನ್ ಕ್ರಿಯೆಟ್ ಮಾಡದೇ, ಮ್ಯಾನೇಜರ್‌ ಹುದ್ದೆಯಿಂದ ಆತನನ್ನು ಕಿತ್ತೆಸೆದಿದ್ದಾರೆ ಎನ್ನಲಾಗುತ್ತಿದೆ.

Read More

ಚಂಡೀಗಢ: ಹಗಲು ರಾತ್ರಿ ಮದ್ಯಪಾನ ಮಾಡುತ್ತಾರೆ ಎಂಬ ವಿಪಕ್ಷಗಳ ಆರೋಪಕ್ಕೆ, ನನ್ನ ಲಿವರೇನೂ ಕಬ್ಬಿಣದ್ದಾ? ಎಂದು ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಟಿವಿ ಸಂದರ್ಶನವೊಂದರಲ್ಲಿ ತಿರುಗೇಟು ಕೊಟ್ಟಿದ್ದಾರೆ. ಕಳೆದ 12 ವರ್ಷಗಳಿಂದ ಅವರು ಇಡೀ ಹಗಲು ರಾತ್ರಿ ಕುಡಿಯುತ್ತಾರೆ ಎಂದು ಅವರ ವಿರುದ್ಧ ವಿಪಕ್ಷಗಳು ಆರೋಪಿಸಿದ್ದವು. ಇದಕ್ಕೆ ಮಾನ್, ಒಬ್ಬ ವ್ಯಕ್ತಿ ಕಳೆದ 12 ವರ್ಷಗಳಿಂದ ಹಗಲಿರುಳು ಕುಡಿಯುತ್ತಿದ್ದರೆ ಅವನು ಇನ್ನೂ ಬದುಕಿರುತ್ತಾನಾ? ಹಾಗಾದರೆ ನನ್ನ ಲಿವರ್ ಕಬ್ಬಿಣದ್ದಾ ಎಂದು ಪ್ರಶ್ನಿಸಿದ್ದಾರೆ. ವಿಪಕ್ಷಗಳಿಗೆ ವಿರೋಧಿಸಲು ಕಾರಣ ಇಲ್ಲದಿರುವಾಗ ನಾನು ಯಾವಾಗಲೂ ಕುಡಿಯುತ್ತೇನೆ ಎನ್ನುತ್ತಾರೆ. ನಾನು ಬೆಳಿಗ್ಗೆ 6 ಗಂಟೆಗೆ ಎದ್ದು ಮೊದಲು ಫೈಲ್ ಕೇಳುತ್ತೇನೆ. ಕಳೆದ 70 ವರ್ಷಗಳಲ್ಲಿ ಆಗದ ಕೆಲಸಗಳನ್ನು ಕಳೆದ ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸಿದ್ದೇನೆ ಎಂದಿದ್ದಾರೆ. ಜನವರಿ 2019ರ ಸಾರ್ವಜನಿಕ ರ್ಯಾಲಿಯಲ್ಲಿ ತನ್ನ ತಾಯಿ ಮತ್ತು ಎಎಪಿ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಭಗವಂತ್ ಮಾನ್ ಮದ್ಯಪಾನವನ್ನು ತ್ಯಜಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಆದರೂ…

Read More

ಲಕ್ನೋ: ವ್ಯಕ್ತಿಯೊಬ್ಬನ ತಲೆ ಬೋಳಿಸಿ ಮರಕ್ಕೆ ಕಟ್ಟಿ ಹಾಕಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಥಳಿಸಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ (Bulandshahr) ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಸಂತ್ರಸ್ತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಜೇಂದ್ರ, ಸೌರಭ್ ಮತ್ತು ಧನ್ನಿ ಎಂದು ಗುರುತಿಸಲಾಗಿದೆ. ಇದರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಕಳ್ಳತನದ ಶಂಕೆಯಲ್ಲಿ ಮುಸ್ಲಿಂ (Muslim) ಕಾರ್ಮಿಕನನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಲ್ಲದೇ ಇದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಂತ್ರಸ್ತನನ್ನು ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಘಟನೆಯ ನಂತರ ಸಾಹಿಲ್‍ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆತನ ತಂದೆ ಶಕೀಲ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದ (Uttar Pradesh) ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ…

Read More

ಗಂಗ್ತೊಕ್: ಉತ್ತರ ಸಿಕ್ಕಿಂನಲ್ಲಿ (Sikkim) ಭಾರೀ ಮಳೆಯಿಂದಾಗಿ‌ (Rain) ಉಂಟಾದ ಭೂಕುಸಿತದಿಂದ (Landslides) ತೊಂದರೆಗೆ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ಚುಂಗ್‍ಥಾಂಗ್‍ನಲ್ಲಿ ಸಿಕ್ಕಿಬಿದ್ದ 300 ಪ್ರವಾಸಿಗರಿಗೆ ಸ್ಟ್ರೈಕಿಂಗ್ ಲಯನ್ ಡಿವಿಷನ್‍ನ ತ್ರಿಶಕ್ತಿ ಕಾರ್ಪ್ಸ್ (Trishakti Corps) ಪಡೆಗಳು ಗಂಗ್ತೊಕ್‍ಗೆ (Gangtok) ತೆರಳಲು ತಾತ್ಕಾಲಿಕ ಸೇತುವೆ (Temporary Bridge) ಮೂಲಕ ದಾಟಲು ಸಹಕರಿಸಿದೆ. ಅಲ್ಲದೇ ಪ್ರವಾಸಿಗರಿಗೆ ಸೇನೆಯಿಂದ ಆಹಾರ, ವೈದ್ಯಕೀಯ ಸೌಕರ್ಯಗಳನ್ನು ಒದಗಿಸಿ ವಿಶ್ರಾಂತಿಗೆ ಅವಕಾಶ ಮಾಡಿಕೊಡಲಾಗಿದೆ. ಸಿಲುಕಿರುವ ಪ್ರವಾಸಿಗರ ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಇದಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ 3,500 ಪ್ರವಾಸಿಗರನ್ನು ರಕ್ಷಿಸುವಲ್ಲಿ ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಪಡೆಗಳು ಸಿಕ್ಕಿಂ ಸರ್ಕಾರಕ್ಕೆ ಸಹಾಯ ಮಾಡುತ್ತಿದೆ. ಈಗ ಸದ್ಯದ ಪರಿಸ್ಥಿತಿಯಲ್ಲಿ ಭೂಕುಸಿತದಿಂದಾಗಿ ವ್ಯಾಪಕವಾಗಿ ಹಾನಿಗೀಡಾದ ರಸ್ತೆಗಳು ಹಾಗೂ ಮಳೆ ಕಡಿಮೆ ಆಗುವ ವರೆಗೂ ಜಿಲ್ಲೆಗೆ ಯಾವ ಪ್ರವಾಸಿಗರಿಗೂ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಭಾರೀ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆಗಳನ್ನು ಸರಿ ಪಡಿಸಿದ ನಂತರ ಪ್ರವಾಸಿಗರಿಗೆ ಬರಲು ಅವಕಾಶ…

Read More