Author: Prajatv Kannada

ಕೆಆರ್ ಪುರ: ಜನತಾ ರೈತ ಸಂಘದ ವತಿಯಿಂದ ಪದಾಧಿಕಾರಿಗಳಿಗೆ ಇಂದು ನೇಮಕಾತಿ ಪತ್ರ ಮತ್ತು ಗುರುತಿನ ಚೀಟಿಯನ್ನು ಗೌರವಾಧ್ಯಕ್ಷ ಮಾರುತಿ, ರಾಜ್ಯಾಧ್ಯಕ್ಷ ಆರ್.ಈರೇಗೌಡ, ಉಪಾಧ್ಯಕ್ಷ ಹಾಗು ಶ್ರೀನಿವಾಸ್ ಸುಬ್ಬು ಹಾಗು ರಾಜ್ಯ ಪದಾಧಿಕಾರಿಗಳ ವಿತರಿಸಿದರು‌. ಕೆಆರ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರ ವಿತರಿಸಿದ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಆರ್.ಈರೇಗೌಡ, ರಾಜ್ಯಮಟ್ಟದಲ್ಲಿ ಜನತಾ ರೈತ ಸಂಘವನ್ನು ಸದೃಡ ಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದೆ. ರಾಜ್ಯದ ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ನೇಮಕವಾಗಿರುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ಹಾಗು ಗುರುತಿನ ಚೀಟಿ ವಿತರಿಸಲಾಗಿದೆ, ಮುಂದಿನ ದಿನಗಳಲ್ಲಿ ಸರ್ಕಾರ ರೈತರ ಪರ ನಿಲ್ಲಬೇಕು, ರೈತರಿಗೆ ಅನುಕೂಲವಾಗುವ ಎಲ್ಲ ಯೋಜನೆಗಳನ್ನು ತರಬೇಕು ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದರು. ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್ ಸುಬ್ಬು ಮಾತನಾಡಿ, ರಾಜ್ಯದ ವಿವಿಧ ಭಾಗಗಳ ಜಿಲ್ಲಾಧ್ಯಕ್ಷರು, ತಾಲೂಕು ಪದಾಧಿಕಾರಿಗಳ ನೇಮಕಾತಿ ಮಾಡಲಾಗಿದೆ. ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿಗಳು…

Read More

ಶಿಕಾರಿಪುರ: ರಾಜ್ಯ ಸರ್ಕಾರ 5 ಗ್ಯಾರಂಟಿ ಪೂರೈಸಲು ಸಂಕಷ್ಟಕ್ಕೆ ಸಿಲುಕಿದೆ. ಈಗ 6ನೇ ಗ್ಯಾರಂಟಿ ಬಗ್ಗೆ ಚರ್ಚೆ ಶುರುವಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಡಿಕೆ ಶಿವಕುಮಾರ್​ ಮುಂದಿನ ಸಿಎಂ ವಿಚಾರವಾಗಿ ಸಚಿವರ ನಡುವೆ ಚರ್ಚೆ ಶುರುವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೋವು ಅರ್ಥ ಮಾಡಿಕೊಳ್ಳಬೇಕು. ಡಿಕೆ ಸಿಎಂ ಸ್ಥಾನಕ್ಕೆ ಹೋರಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ನಾಳೆ ಕೇಂದ್ರದ ವಿರುದ್ಧ ಕಾಂಗ್ರೆಸ್​ನವರು ಪ್ರತಿಭಟನೆ ಮಾಡಿದ್ದಾರೆ ಎಂದಿದ್ದಾರೆ.

Read More

ಬೆಳಗಾವಿ: ಕರ್ನಾಟಕದಲ್ಲಿ ಕೆಲವೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ ಮುಂಗಾರು ಚುರುಕು ಆಗುತ್ತೆ ಎಂದು ಬೆಳಗಾವಿ ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನಿಡಿದ್ದಾರೆ. ಮುಂದಿನ 7 ದಿನ ರಾಜ್ಯದಲ್ಲಿ ಮಳೆ ಆಗುತ್ತೆ ಅಂತಾ ವರದಿಯಲ್ಲಿದೆ. ನೀರಿನ ಸಮಸ್ಯೆ ಬಗೆಹರಿಸಲು ಆಯಾ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತೆ. ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ ಜಲಾಶಯ ಸಹ ಖಾಲಿ ಆಗಿದೆ. ಜಲಾಶಯ ಮಟ್ಟ ಕುಸಿದಿದ್ರೂ ಟ್ಯಾಂಕರ್‌ಗಳಿಂದ ನೀರು ಪೂರೈಕೆ ಮಾಡಲಾಗುತ್ತೆ. ಮಳೆಯಾಗದಿದ್ರೆ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ಮಾಡುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆ ಎಂದು ತಿಳಿಸಿದರು.

Read More

ಮಂಡ್ಯ: ಶಕ್ತಿ ಯೋಜನೆ ಹಿನ್ನೆಲೆ ಬಸ್‌ ಸಾಕಷ್ಟು ಭರ್ತಿಯಾಗಿ ಸಂಚರಿಸುತ್ತಿವೆ. ನಿಲ್ದಾಣಗಳಲ್ಲಿ ಬಸ್‌ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್‌ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್‌ ಫುಲ್‌ ರಶ್‌ ಇರುವ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಲುವೇಗೌಡ (75) ಮೃತ ವ್ಯಕ್ತಿ. ಇವರು ಹರಕನಕೆರೆ ಗ್ರಾಮದ ನಿವಾಸಿಯಾಗಿದ್ದರು. ಬಸ್ ರಶ್ ಇದ್ದ ಕಾರಣ ಬಾಗಿಲ‌ ಬಳಿ ನಿಂತಿದ್ದ ವ್ಯಕ್ತಿ ಬಿದ್ದು ಸಾವನ್ನಪ್ಪಿದ್ದಾರೆ. ಚಲುವೇಗೌಡ ಬಸ್ ರಶ್ ಇದ್ದ ಕಾರಣ ಬಾಗಿಲ‌ ಬಳಿ ನಿಂತಿದ್ದರು. ರಸ್ತೆಯಲ್ಲಿನ ಗುಂಡಿಗೆ ಬಸ್ ಇಳಿಯುತ್ತಿದ್ದಂತೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್​​ನಿಂದ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಚಲುವೇಗೌಡ ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮೈಸೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ (Dr. Mahadevappa) ತಿಳಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿತ್ತು. ಆ ನಂತರ ಅಕ್ಕಿ ಪೂರೈಸಲ್ಲ ಎಂದು ಹೇಳಿದೆ. ಎಲ್ಲಾ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ (Protest)  ನಡೆಸಲಾಗುತ್ತೆ. ನಾಳೆ ದೆಹಲಿಗೆ ಹೋಗ್ತಿದ್ದೇನೆ, ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ. ಹೀಗಾಗಿ ನಮ್ಮ ಜಿಲ್ಲೆಯ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

Read More

ಬೆಂಗಳೂರು ; ಭಾವಾಸಾರ ಕೊ ಅಪರೇಟೀವ್ ಬ್ಯಾಂಕಿನಿಂದ ಸಾಲ ಪಡೆದು ಮನೆ ಓನರ್ ತಲೆಮರೆಸಿಕೊಂಡಿದ್ದ ಹಿನ್ನೆಲೆ ಪೋಲಿಸರ ಸಮ್ಮುಖದಲ್ಲಿ ಬ್ಯಾಂಕ್ ಅಧಿಕಾರಿಗಳು ಲೀಜ್ ಗೆ ವಾಸವಿದ್ದ ಆರು ಕುಟುಂಬಗಳನ್ನು ಖಾಲಿ ಮಾಡಿಸಿದ್ದಾರೆ. ಆರು ಮನೆಗಳಲ್ಲಿ ಆರು ಕುಟುಂಬಗಳು ಲೀಜ್ ಗೆ ವಾಸವಿದ್ದರು. ಆದರೆ ಇದ್ದಕ್ಕಿದ್ದಂತೆ ಏಕಾಏಕಿ ಮನೆಯಲ್ಲಿದ್ದವರನ್ನ ಅಧಿಕಾರಿಗಳು ಖಾಲಿ ಮಾಡಿಸುತ್ತಿದ್ದಾರೆ. ಮನೆಯಲ್ಲಿ ವಯಸ್ಸಾದವರು‌ ಇದ್ದರೂ ಸಹ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದ್ದು, ಮನೆ ಓನರ್ ರತ್ನಮ್ಮ ಎಸ್ಕೇಪ್ ‌ಆಗಿರುವ ಹಿನ್ನೆಲೆ ಆರು ಕುಟುಂಬಗಳು ಬೀದಿಗೆ ಬಂದಿದೆ. ಅಗ್ರಹಾರ ದಾಸರಹಳ್ಳಿಯ 13 ನೆ ಕ್ರಾಸ್ ನ ಬಳಿಯಿರುವ ಮನೆಗಳಿಗೆ ಬೀಗ ಹಾಕಿ ಸೀಲ್ ಮಾಡಿ ಅಧಿಕಾರಿಗಳು ಹೋಗಿದ್ದಾರೆ. ಇನ್ನೂ ಆರು ಮನೆಯವರು ಒಂದೊಂದು ಮನೆಗೂ 4 ಲಕ್ಷಕ್ಕೆ ಲೀಜ್ ಗೆ ಇದ್ದರು. ಆದರೆ ಇದೀಗ ಅವರ ಜೀವನ ಬೀದಿಗೆ ಬಂದಿದೆ.

Read More

ಬೆಂಗಳೂರು ;- ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ ಕೆಂಚಪ್ಪಗೌಡ ಮತ್ತು ಪದಾಧಿಕಾರಿಗಳು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಪದಾಧಿಕಾರಿಗಳು ಈ ವೇಳೆ ಡಿಕೆಶಿ ಅವರ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಬೆಂಗಳೂರು ;- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಅಮಿತ್ ಮಾಳವೀಯ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕಿದ ಹಿನ್ನೆಲೆ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಜೂನ್ 17ರಂದು ಆಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ವೀಡಿಯೋ ಹರಿಬಿಟ್ಟ ಹಿನ್ನೆಲೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬಳಿಕ ಮಾತನಾಡಿದ ಸಚಿವರು, ಬಡವರ ಏಳಿಗೆಗಾಗಿ ಕೆಲಸ ಮಾಡ್ತಿರೋದು ಬಿಜೆಪಿಗರಿಗೆ ಇಷ್ಟ ಆಗುತ್ತಿಲ್ಲ. ಅದಕ್ಕೆ ಈ ರೀತಿ ಸುಳ್ಳು ಆರೋಪಿಸಿ ಪೋಸ್ಟ್ ಮಾಡ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ಕೊಟ್ಟಿದ್ದೇವೆ. ಅವರು ತಾಕತ್ ಇದ್ದರೆ ಕರ್ನಾಟಕಕ್ಕೆ ಬಂದು ಹೇಳಲಿ. ನಾವು ಹೇಗೆ ಆಯಂಟಿ ಇಂಡಿಯಾ ಆಕ್ಟಿವಿಟಿ ಮಾಡ್ತಿದ್ದೀವಿ ಅಂತಾ ಹೇಳಲಿ” ಎಂದು ಸವಾಲು ಹಾಕಿದರು.

Read More

ಬೆಂಗಳೂರು ;ಇಂದು ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದಲ್ಲಿ ಸರ್ಚ್ ವಾರೆಂಟ್ ಪಡೆದು ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕ ಸಾಬೂನು ಹಾಗೂ ಮಾರ್ಜಕ‌ ನಿಗಮದಲ್ಲಿ ವ್ಯಾಪಕ‌ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಡಾಳ್ ವಿರುಪಾಕ್ಷಪ್ಪ ಅವರ ಅವಧಿಯಲ್ಲಿ ಸಾಬೂನು ಹಾಗೂ ಮಾರ್ಜಕ ತಯಾರಿಸಲು ರಾಸಾಯನಿಕವನ್ನು ಆಮದು ಮಾಡಿಕೊಳ್ಳಲು ಕರೆಯಲಾಗಿದ್ದ ಟೆಂಡರ್​ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. ಶಿವಶಂಕರ್ ಸೇರಿದಂತೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯದಿಂದ ದಾಳಿಗೆ ಅನುಮತಿ ಪಡೆಯಲಾಗಿತ್ತು. ಓರ್ವ ಡಿವೈಎಸ್ಪಿ ಹಾಗೂ 10 ಮಂದಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಕೆಎಸ್​​ಡಿಎಲ್‌ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

Read More

ಬೆಂಗಳೂರು ;- ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದೆ.ಸಾಮಾನ್ಯವಾಗಿ ಎರಡು ವರ್ಷಗಳಿಗೊಮ್ಮೆ ಮಾರ್ಗಸೂಚಿ ದರ ಏರಿಕೆ ಮಾಡಲಾಗುವುದು. ಆದರೆ, ರಾಜ್ಯದಲ್ಲಿ ನಾಲ್ಕು ವರ್ಷ ಆದರೂ ಮಾರ್ಗಸೂಚಿ ದರ ಏರಿಕೆ ಮಾಡಿಲ್ಲ. ಹೀಗಾಗಿ ದರ ಏರಿಕೆ ಮಾಡುವ ಚಿಂತನೆ ಇದೆ ಎಂದರು. ಇನ್ನೂ ಇದೇ ವೇಳೆ ಮಳೆ ಕೊರತೆ ಮುಂದುವರಿದರೆ ಜುಲೈ ಮೊದಲ ವಾರದಲ್ಲಿ ಬರಗಾಲ ಘೋಷಣೆ ಮಾಡಬೇಕಾ ಅಥವಾ ಬೇಡ್ವಾ ಎಂದು ತೀರ್ಮಾನಿಸುತ್ತೇವೆ ಎಂದರು. ಎಲ್ಲ ಜಿಲ್ಲೆಗಳಲ್ಲೂ ಮಳೆ ಕೊರತೆ ಕಾಡಿದೆ. ಮುಂಗಾರು ತಡವಾಗಿ ಪ್ರವೇಶ ಮಾಡಿದ ಕಾರಣ ಸಮಸ್ಯೆ ಎದುರಾಗಿದೆ. ಚಂಡಮಾರುತ ತೇವಾಂಶ ಎಳೆದುಕೊಂಡಿದ್ದರಿಂದ ದಕ್ಷಿಣ ಭಾರತಕ್ಕೆ ಮುಂಗಾರು ತಡವಾಗಿದೆ. ಹವಾಮಾನ ಇಲಾಖೆಯ ತಜ್ಞರ ವೈಜ್ಞಾನಿಕ ಮಾಹಿತಿ ಪ್ರಕಾರ, ನಿನ್ನೆಯಿಂದ ಮುಂಗಾರು ಚುರುಕು ಆಗ್ತಿದೆ. ಉಡುಪಿ, ಕಾರವಾರದಲ್ಲಿ ಮಳೆ ಕಡಿಮೆ ಇತ್ತು. ಈಗ…

Read More