ಬೆಂಗಳೂರು ;– ಇನ್ನೂ 15 ದಿನದಲ್ಲಿ ಶಕ್ತಿ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಿಳೆಯರು ಶಕ್ತಿ ಯೋಜನೆಯಡಿ ಒಂದೇ ಬಾರಿ ತೆರಳುವುದು ಬೇಡ. ಇದರಿಂದ ಇತರ ಪ್ರಯಾಣಿಕರಿಗೆ ಸಮಸ್ಯೆ ಆಗುತ್ತದೆ. ಈ ಸಂಬಂಧ 15 ದಿನ ನೋಡಿ, ಬಳಿಕ ಕೆಲವು ಬದಲಾವಣೆ ಮಾಡುತ್ತೇವೆ ಎಂದರು. ಜೂನ್ 11 ರಂದು 5 ಲಕ್ಷ 70 ಸಾವಿರ ಜನ ಓಡಾಡಿದ್ರು. ನಂತರ 40 ಲಕ್ಷ ಜನ, ಆಮೇಲೆ 3 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಆದರೆ ಒಮ್ಮೆಲೆ ಹೋಗೋದು ಬೇಡ ಅಂತ ಮಹಿಳಾ ಪ್ರಯಾಣಿಕರಿಗೆ ಮನವಿ ಮಾಡುತ್ತೇನೆ. ದೇವಸ್ಥಾನಕ್ಕೆ ಹೋಗಲು ಒಂದೇ ಸಲ ತೆರಳಿ ಬಸ್ ರಷ್ ಹೆಚ್ಚಾಗಿದೆ. ಈ ಕಾರ್ಯಕ್ರಮ ಐದು ವರ್ಷ ಇರಲಿದೆ. ಒಂದೇ ಬಾರಿಗೆ ಹೋಗಬೇಡಿ. ಆತಂಕಪಡುವ ಅಗತ್ಯ ಇಲ್ಲ. ಮತ್ತೆ ಚುನಾವಣೆ ನಡೆದ ಬಳಿಕ ಇನ್ನೂ 10 ವರ್ಷ ಕಾರ್ಯಕ್ರಮ ಇರಲಿದೆ. ಕೆಲ ಬಿಜೆಪಿ…
Author: Prajatv Kannada
ಬೆಂಗಳೂರು ;- ಸೇಫ್ ಸಿಟಿಯತ್ತ ರಾಜಧಾನಿ ಬೆಂಗಳೂರು ಬದಲಾಗುತ್ತಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ತುರ್ತು ಸಹಾಯವಾಣಿ ಸೇವೆ ಆರಂಭವಾಗಿವೆ. ನಗರದಲ್ಲಿ ಪೊಲೀಸರಿಂದ ತುರ್ತು ಸಹಾಯ ನಿರ್ಮಾಣ ಮಾಡಿದ್ದು, ತುರ್ತು ಸಹಾಯವಾಣಿ ಉಪಯೋಗದಿಂದ ಮಹಿಳೆಯರು ನಿಂತ ಸ್ಥಳದಿಂದಲೇ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ. ನೀವು ಮಾಡಬೇಕಾದದ್ದು ಇಷ್ಟೇ, ಒಂದು ಬಟನ್ ಪ್ರೆಸ್ ಮಾಡಿದರೆ ಸಾಕು ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್ ಆಗತ್ತೆ. ನೇರವಾಗಿ ಕಮಾಂಡ್ ಸೆಂಟರ್ಗೆ ಕರೆ ಹೋಗುವ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗುತ್ತದೆ.
ಬೆಂಗಳೂರು ;– ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರ. ಇದರ ವಿರುದ್ಧ ನಾವು ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ನಾನೂ ಪಾಲ್ಗೊಳ್ಳುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇನ್ನು ಸಂಸದ ಡಿ.ಕೆ.ಸುರೇಶ್ಗೆ ಯಾವುದೇ ವೈರಾಗ್ಯ ಇಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಗೆ ಟಾಂಗ್ ನೀಡಿದರು.
ಬೆಂಗಳೂರು ;– ಡಾ. ಬಿಆರ್ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವರಾಮ ಕಾರಂತ ಬಡಾವಣೆಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಡಾ. ಬಿ.ಆರ್ ಹರೀಶ್ ಕಾರ್ಯನಿರ್ವಹಿಸುತ್ತಿದ್ದರು.. ಇದೀಗ ಹರೀಶ್ ಅವರನ್ನು ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ.
ಬಾಲಿವುಡ್ ಬ್ಯೂಟಿ ನಟಿ ಆಲಿಯಾ ಭಟ್ ಈಗಾಗ್ಲೆ ಹಾಲಿವುಡ್ ಗೆ ಎಂಟ್ರಿಕೊಟ್ಟು ದೊಡ್ಡ ಮಟ್ಟಿಗೆ ಸದ್ದು ಮಾಡ್ತಿದ್ದಾರೆ. ಸದ್ಯ ಆಲಿಯಾ ನಟನೆಯ ಮೊದಲ ಹಾಲಿವುಡ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಟ್ರೈಲರ್ ಅದ್ಭುತವಾಗಿ ಮೂಡಿ ಬಂದಿದೆ. ಹಾಲಿವುಡ್ ನ ‘ಹಾರ್ಟ್ ಆಫ್ ಸ್ಟೋನ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ನಿನ್ನೆ ಅದ್ದೂರಿಯಾಗಿ ಟ್ರೈಲರ್ ರಿಲೀಸ್ ಆಗಿದೆ. ಇದೊಂದು ಸಾಹಸ ಪ್ರಧಾನ ಸಿನಿಮಾವಾಗಿದ್ದು, ಭರ್ಜರಿ ಆಕ್ಷನ್ ದೃಶ್ಯಗಳು ಇರುವುದು ಟ್ರೈಲರ್ ನಿಂದ ಗೊತ್ತಾಗಿದೆ. ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಆಲಿ ಹಸಿರು ಬಣ್ಣದ ಡ್ರೆಸ್ ನಲ್ಲಿ ಬಂದಿದ್ದರು. ಮತ್ತು ಸಖತ್ ಗ್ಲಾಮರ್ ಆಗಿಯೂ ಅವರು ಕಾಣುತ್ತಿದ್ದರು. ಈ ಸಿನಿಮಾದಲ್ಲಿ ಆಲಿಯಾ ವಿಭಿನ್ನ ಪಾತ್ರದಲ್ಲಿ ನಟಿಸಿದ್ದು, ವಿಲನ್ ರೀತಿಯ ಪಾತ್ರ ಅದಾಗಿದೆ ಎಂದು ಹೇಳಲಾಗುತ್ತಿದೆ. ಹಾರ್ಟ್ ಆಫ್ ಸ್ಟೋನ್ ಸಿನಿಮಾ ಆಗಸ್ಟ್ 11 ರಿಂದ ನೆಟ್ ಫ್ಲಿಕ್ಸ್ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಟಾಮ್ ಹಾರ್ಪರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ಗಾಲ್ ಗಡೋಟ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು ;- ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಭಾನುವಾರಗಿಂದ ಶುರುವಾಗಿದೆ. ಮೊದಲ ದಿನ ಸುಮಾರು 55,000 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿದೆ. ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಮಾಡಲಾಗಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಅರ್ಜಿ ಸಲ್ಲಿಕೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಭಾನುವಾರ ರಜಾ ದಿನವಾದರೂ, ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆಗಾಗಿ ಅರ್ಜಿ ನೋಂದಾಯಿಸಿಕೊಂಡರು. ಗ್ರಾಹಕರು ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ಗಳಲ್ಲಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಿ, ಇಲ್ಲವೆ 24×7 ಸಹಾಯವಾಣಿ ಸಂಖ್ಯೆ 1912ಕ್ಕೆ…
ಬೆಂಗಳೂರು ;- ನಗರದ ಆರ್ಚ್ ಬಿಷಪ್ ರೆವರೆಂಡ್ ಡಾ. ಪೀಟರ್ ಮಚಾದೋ ಅವರನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಕೆ.ಜೆ. ಜಾರ್ಜ್ ಹಾಗೂ ಝಮೀರ್ ಅಹ್ಮದ್ ಖಾನ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಡುಪಿ: ಪೇಜಾವರ ಶ್ರೀ (Pejawar Sri) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ (Cat) ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಮುಚ್ಲಕೋಡು ಬಳಿ ನಡೆದಿದೆ. ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಉಡುಪಿ ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ತೆರಳಿದ್ದರು. ಈ ಸಂದರ್ಭದಲ್ಲಿ ಬೆಕ್ಕೊಂದು ಬಾವಿಗೆ ಬಿದ್ದ ವಿಷಯ ತಿಳಿದ ಸ್ವಾಮೀಜಿ, ತಾವೇ ಸ್ವತಃ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ್ದಾರೆ. ಕೂಡಲೇ ಹಿಂದೆ ಮುಂದೆ ನೋಡದೆ ಹಗ್ಗದ ಸಹಾಯದಿಂದ ಸ್ವಾಮೀಜಿ ಬಾವಿಗಿಳಿದಿದ್ದಾರೆ. ಗೋವಿನ ರಕ್ಷಣೆಯಲ್ಲಿ ಈಗಾಗಲೇ ಮುಂಚೂಣಿಯಲ್ಲಿರುವ ಪೇಜಾವರ ಸ್ವಾಮೀಜಿ ಹಾವು, ಹದ್ದು ಹೀಗೆ ಸಕಲ ಪ್ರಾಣಿ ಪಕ್ಷಿಗಳ ರಕ್ಷಣೆ ಮಾಡುತ್ತಿರುತ್ತಾರೆ. ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಈ ಪ್ರಾಣಿ ಪ್ರೀತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಬೆಂಗಳೂರು ;-ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಡಿಕೆಶಿ ಗಿಂತ ಪವರ್ ಫುಲ್. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಳ ಜಗಳ ಹೊರ ಬರುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ತರ ನಾನು ಗ್ಯಾರಂಟಿಯಾಗಿ ಹೇಳುತ್ತೇನೆ, ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟುಕೊಡಲ್ಲ. ಅಧಿಕಾರ ಹಂಚಿಕೆ ಒಂದು ನಾಟಕ ಅಷ್ಟೇ. ಮುಖ್ಯಮಂತ್ರಿ ಆಗೋದು ಡಿಕೆ ಶಿವಕುಮಾರ್ ಅವರ ಒಂದು ಕನಸು ಅಷ್ಟೇ’ ಎಂದರು. ಇನ್ನೂ ಡಿ.ಕೆ.ಸುರೇಶ್ ಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲವೆಂದು ಗೊತ್ತಾಗಿದೆ. ಅದಕ್ಕಾಗಿಯೇ ಅವರು ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಆರ್ ಅಶೋಕ್ ಟೀಕೆ ಮಾಡಿದ್ದಾರೆ,
ಕರಾಚಿ: ಶ್ರೀಲಂಕಾ ವಿರುದ್ದದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಲಿಷ್ಠ 16 ಆಟಗಾರರನ್ನೊಳಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಮಾರಕ ವೇಗಿ ಶಾಹೀನ್ ಅಫ್ರಿದಿ ತಂಡ ಕೂಡಿಕೊಂಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇಂದು ಲಂಕಾ ಪ್ರವಾಸಕ್ಕೆ ಪಾಕ್ ತಂಡವನ್ನು ಪ್ರಕಟಿಸಿದೆ. ಇನ್ನು ಇದೇ ವೇಳೆ ಇಬ್ಬರು ಅನ್‌ಕ್ಯಾಪ್ ಆಟಗಾರರಿಗೂ ತಂಡದಲ್ಲಿ ಸ್ಥಾನ ನೀಡಿದ್ದು, ಬ್ಯಾಟರ್ ಮೊಹಮ್ಮದ್ ಹೊರೈರಾ ಹಾಗೂ ಆಲ್ರೌಂಡರ್ ಅಮಿರ್ ಜಮಾಲ್ ಇದೇ ಮೊದಲ ಬಾರಿಗೆ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಬಾಬರ್ ಅಜಂ ನಾಯಕರಾಗಿ ಮುನ್ನಡೆಸಲಿದ್ದು, ತಂಡದಲ್ಲಿ ಹಲವು ಅನುಭವಿ ಹಾಗೂ ಯುವ ಆಟಗಾರರ ದಂಡೇ ಇದೆ. ಲಂಕಾ ಪ್ರವಾಸಕ್ಕೆ ಪಾಕ್ ತಂಡದಲ್ಲಿ ಮೊಹಮ್ಮದ್ ರಿಜ್ವಾನ್, ಅಬ್ದುಲ್ಲಾ ಶಫೀಕ್, , ಇಮಾಮ್ ಉಲ್ ಹಕ್, ಹಸನ್ ಅಲಿ ಹಾಗೂ ನಸೀಂ ಶಾ ತಂಡ ಕೂಡಿಕೊಂಡಿದ್ದಾರೆ. ಇನ್ನು ಎಡಗೈ ಮಾರಕ ವೇಗಿ ಶಾಹೀನ್ ಶಾ ಅಫ್ರಿದಿ ತಂಡ ಸೇರ್ಪಡೆ ಬಾಬರ್ ಅಜಂ ಪಡೆಯ ಆತ್ಮವಿಶ್ವಾಸ…