1999ರಲ್ಲಿ ನಡೆದ ಭಾರತದ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನಿ ಸೇನೆಯು ತನ್ನ ಪಾತ್ರವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ರಾವಲ್ಪಿಂಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪಾಕ್ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್, 1965, 1971 ಮತ್ತು 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ನಮ್ಮ ಅನೇಕ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸೇನಾ ಮುಖ್ಯಸ್ಥರು, 1948, 1965, 1971 ಅಥವಾ 1999ರ ಕಾರ್ಗಿಲ್ ಯುದ್ಧವಿರಲಿ, ಪಾಕಿಸ್ತಾನ ಮತ್ತು ಇಸ್ಲಾಂ ಧರ್ಮಕ್ಕಾಗಿ ಸಾವಿರಾರು ಸೈನಿಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಸೇನೆಯು ತನ್ನ ನೇರ ಪಾತ್ರವನ್ನು ಎಂದಿಗೂ ಸಾರ್ವಜನಿಕವಾಗಿ ಒಪ್ಪಿಕೊಂಡಿಲ್ಲ. ಇದು ‘ಮುಜಾಯಿದ್ದೀನ್’ಗಳ ಕೆಲಸ ಎಂದು ಯಾವಾಗಲೂ ಅಧಿಕೃತವಾಗಿ ಹೇಳಿಕೊಂಡಿದೆ. 1999ರ ಯುದ್ಧದಲ್ಲಿ ಪಾಕಿಸ್ತಾನ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಲಡಾಖ್‌ನಲ್ಲಿ ಸುಮಾರು ಮೂರು ತಿಂಗಳ ಹೋರಾಟದ ನಂತರ ಟೈಗರ್ ಹಿಲ್ ಸೇರಿದಂತೆ ಕಾರ್ಗಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿಯ ಭಾರತದ ಭಾಗದಲ್ಲಿ ನುಸುಳುಕೋರರು ವಶಪಡಿಸಿಕೊಂಡ…
Author: Prajatv Kannada
ಅಮೆರಿಕದ ಕೆಂಟುಕಿಯ ಲಾರೆಲ್ ಕೌಂಟಿಯ ಅಂತರರಾಜ್ಯ 75 ಬಳಿ ಹಲವಾರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಲಾರೆಲ್ ಕೌಂಟಿ ಶೆರಿಫ್ ಕಚೇರಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ ಕೆಂಟುಕಿ ರಾಜ್ಯ ಪೊಲೀಸ್ ಟ್ರೂಪರ್ ಸ್ಕಾಟಿ ಪೆನ್ನಿಂಗ್ಟನ್ ಜನರನ್ನು ತಮ್ಮ ಮನೆಗಳಿಂದ ಹೊರ ಬರದಂತೆ ಸೂಚನೆ ನೀಡಿದ್ದಾರೆ. “ಸಕ್ರಿಯ ಶೂಟರ್ ಪರಿಸ್ಥಿತಿಯಿಂದಾಗಿ ಐ -75 ಅನ್ನು ಮೈಲ್ ಮಾರ್ಕರ್ / ಎಕ್ಸಿಟ್ 49 ಮತ್ತು ಯುಎಸ್ 25 ಲಂಡನ್ನ ಉತ್ತರಕ್ಕೆ ಒಂಬತ್ತು ಮೈಲಿ ದೂರದಲ್ಲಿ ಮುಚ್ಚಲಾಗಿದೆ” ಎಂದು ಶೆರಿಫ್ ಕಚೇರಿ ಫೇಸ್ಬುಕ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. “ಐ -75 ಬಳಿ ಹಲವಾರು ಜನರನ್ನು ಗುಂಡಿಕ್ಕಿ ಕೊಲ್ಲಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆಂಟುಕಿ ರಾಜ್ಯ ಪೊಲೀಸ್ ಟ್ರೂಪರ್ ಸ್ಕಾಟಿ ಪೆನ್ನಿಂಗ್ಟನ್ ಸಾಮಾಜಿಕ ಮಾಧ್ಯಮದ ಮೂಲಕ ಶಂಕಿತನನ್ನು “ಈ ಸಮಯದಲ್ಲಿ ಹಿಡಿಯಲಾಗಿಲ್ಲ” ಎಂದು ಹೇಳಿದರು. ನಾವು ಜನರನ್ನು ಮೆನ ಒಳಗೆ ಇರುವಂತೆ ಒತ್ತಾಯಿಸುತ್ತಿದ್ದೇವೆ. ಕಾನೂನು ಜಾರಿಯು “ಲಭ್ಯವಿರುವಷ್ಟು ಮಾಹಿತಿಯನ್ನು” ಒದಗಿಸುತ್ತದೆ ಎಂದು ಅವರು ಹೇಳಿದರು. ಕೆಂಟುಕಿ ಗವರ್ನರ್…
ಉಕ್ರೇನ್-ರಷ್ಯಾ ಸಂಘರ್ಷವನ್ನು ಭಾರತ ಕೊನೆಗೊಳಿಸಬಹುದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ನಲ್ಲಿನ ಸಂಘರ್ಷವನ್ನು ಪರಿಹರಿಸುವಲ್ಲಿ ಭಾರತ ಮತ್ತು ಚೀನಾದಂತಹ ದೇಶಗಳು ಪ್ರಮುಖ ಪಾತ್ರ ವಹಿಸಬಹುದು ಎಂದಿದ್ದಾರೆ. ಉತ್ತರ ಇಟಲಿಯ ಸೆರ್ನೊಬಿಯೊ ನಗರದ ಅಂಬ್ರೊಸೆಟ್ಟಿ ಫೋರಮ್‌ನಲ್ಲಿ ಮೆಲೋನಿ ಈ ಹೇಳಿಕೆಯನ್ನು ನೀಡಿದ್ದಾರೆ. ಅವರು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಭೆ ನಡೆಸಿದರು. ಇದಕ್ಕೂ ಮುನ್ನ, ಈ ಪ್ರದೇಶದಲ್ಲಿ ನಡೆಯುತ್ತಿರುವ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಭಾರತದ ಪ್ರಯತ್ನಗಳ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಪ್ರತಿಕ್ರಿಯಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಷ್ಯಾ ಮತ್ತು ಉಕ್ರೇನ್ ಪ್ರವಾಸದ ನಂತರ ಇದೀಗ ಇಡೀ ವಿಶ್ವದ ಕಣ್ಣು ಭಾರತ ಹಾಗೂ ಪ್ರಧಾನಿ ಮೋದಿಯತ್ತ ನೆಟ್ಟಿದೆ. ಈ ಯುದ್ಧವು ಕೊನೆಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿದೆ. ನಿನ್ನೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಈ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುವ ದೇಶಗಳ ಬಗ್ಗೆ ಮಾತನಾಡಿದ್ದರು. ಪುಟಿನ್ ಭಾರತ ಮಾತ್ರವಲ್ಲದೆ ಚೀನಾ ಮತ್ತು ಬ್ರೆಜಿಲ್ ಕೂಡ ಮಧ್ಯಸ್ಥಿಕೆ ವಹಿಸುವಂತೆ…
ಬೆಂಗಳೂರು:- ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು:- ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ 10ಕ್ಕೂ ಹೆಚ್ಚು ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿದ ಘಟನೆ ಜರುಗಿದೆ.ಹಾಲು ಖರೀದಿಸಲು ಮಹಿಳೆ ಅಂಗಡಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯೋರ್ವ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನ ಹಿಡಿದು ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದಿದ್ದಾರೆ. ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಬಂದಿದ್ದು ವ್ಯಕ್ತಿಯನ್ನು ಬನ್ನೇರುಘಟ್ಟ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಗಾಯಾಳು ವ್ಯಕ್ತಿಯನ್ನು ಗೊಟ್ಟಿಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಕಲ್ಕೆರೆ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಈತ ಕಳೆದ ರಾತ್ರಿ ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆಯಲ್ಲಿ ಏರಿಕೆ ಆಗಿದೆ. ಬೆಂಗಳೂರು ನಗರ ಬೆಳೆದಂತೆ ಸಂಚಾರ ದಟ್ಟಣೆ ಹೆಚ್ಚಾಗ್ತಿದೆ. ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಾ ಇದೆ. ಟ್ರಾಫಿಕ್ ಸಮಸ್ಯೆ ಆಗ್ತಾ ಇದ್ದು, ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆ ಹೆಚ್ಚಳ ಆಗಿದೆ. 2019 ರವರೆಗೂ 300 ಟ್ರಾಫಿಕ್ ಸಿಗ್ನಲ್‌ಗಳು ಇದ್ದವು. ಬಳಿಕವೂ 50 ಟ್ರಾಫಿಕ್ ಸಿಗ್ನಲ್‌ಗಳು ನಿರ್ಮಾಣ ಆದವು. ಈಗ ಹೊಸದಾಗಿ ಮತ್ತೆ 52 ಟ್ರಾಫಿಕ್ ಸಿಗ್ನಲ್‌ಗಳು ಉದ್ಭವ ಆಗಲಿವೆ. ಅಲ್ಲಿಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ಸಂಖ್ಯೆ 402ಕ್ಕೆ ಏರಿಕೆ ಆಗುತ್ತಿದೆ. ಎಲ್ಲೆಲ್ಲಿ ಟ್ರಾಫಿಕ್ ಸಿಗ್ನಲ್ ಹೆಚ್ಚಳ? * ಬೆಂಗಳೂರು ಸೆಂಟ್ರಲ್ ಡಿವಿಷನ್ – 65 ಟ್ರಾಫಿಕ್ ಸಿಗ್ನಲ್ * ಬೆಂಗಳೂರು ಪೂರ್ವ – 56 * ಬೆಂಗಳೂರು ಉತ್ತರ – 38 * ಬೆಂಗಳೂರು ದಕ್ಷಿಣ – 86 * ಈಶಾನ್ಯ ವಿಭಾಗ – 86 * ಆಗ್ನೇಯ ವಿಭಾಗ – 36 * ಬೆಂಗಳೂರು ಪಶ್ಚಿಮ ವಿಭಾಗ -…
ಬೆಂಗಳೂರು:- ಬಿ.ವೈ. ವಿಜಯೇಂದ್ರರ ನಾಯಕತ್ವವನ್ನು ಬಿಜೆಪಿ ನಾಯಕರು ಒಪ್ಪಿಕೊಂಡಿಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ. ವಿಜಯೇಂದ್ರ ಹೆಚ್ಚಿನ ದಿನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವುದಿಲ್ಲ. ಶೀಘ್ರದಲ್ಲಿಯೇ ಅವರು ಆ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಆರ್.ಅಶೋಕ್ ಮತ್ತು ಅಶ್ವತ್ಥ ನಾರಾಯಣ್ ಅವರು, ವಿಜಯೇಂದ್ರರ ನಾಯಕತ್ವವನ್ನು ಒಪ್ಪಿಕೊಂಡಿಲ್ಲ ಎಂದರು. ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತು ಮಾತನಾಡುವ ವಿಜಯೇಂದ್ರ, ಅವರ ತಂದೆ ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಹೇಗೆ ಕೆಳಗಿಳಿಸಲಾಯಿತು ಎಂಬಂತಹ ಅನೇಕ ಮಾಹಿತಿಗಳನ್ನು ಅರಿಯಬೇಕು. ಅವರ ತಂದೆಯನ್ನು ಅವರ ಪಕ್ಷದ ನಾಯಕರೇ ಅಧಿಕಾರದಿಂದ ಕೆಳಗಿಳಿಸಿದರು. ಇದನ್ನು ಮೊದಲು ಅವರು ತಿಳಿಯಬೇಕು ಎಂದರು. ಮುಡಾ ಪ್ರಕರಣ ಕುರಿತು ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಏನೂ ಇಲ್ಲದ ಕಾರಣ ರಾಜ್ಯ ಸರ್ಕಾರ ಈ ವಿವಾದವನ್ನು ಬೇರೆಡೆಗೆ ತಿರುಗಿಸುವ ಅಗತ್ಯವಿಲ್ಲ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ದುರ್ಬಳಕೆ ಮಾಡಿದೆ. ಹಾಸಿಗೆ ಮತ್ತು ಪಿಪಿಇ ಕಿಟ್‌ಗಳ ಖರೀದಿಯಲ್ಲಿ…
ವಿಜಯಪುರ:-ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಜರುಗಿದೆ. 24 ವರ್ಷದ ದೇವೇಂದ್ರ ಬಡಿಗೇರ್ ಮೃತ ದುರ್ದೈವಿ ಎನ್ನಲಾಗಿದೆ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ.
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ವರದಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಹಲವು ಹಿರಿಯ ನಟ, ನಿರ್ದೇಶಕರ ವಿರುದ್ಧ ಆರೋಪಗಳು ಕೇಳಿ ಬಂದಿವೆ. ಕೆಲವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಇದೇ ಸಂದರ್ಭವನ್ನು ಬಳಸಿಕೊಂಡು ಕೆಲ ನಟಿಯರು, ಯುವತಿಯರು ಸೆಲೆಬ್ರಿಟಿಗಳ ಮೇಲೆ ಸುಳ್ಳು ಪ್ರಕರಣ ಸಹ ದಾಖಲಿಸಲು ಮುಂದಾಗಿದ್ದಾರೆ. ಕೆಲವರು ಬ್ಲ್ಯಾಕ್ಮೇಲ್ ಸಹ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ನಟ ನಿವೀನ್ ಪೌಳಿ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ನಟಿಯೊಬ್ಬರು ಇದೀಗ ಉಲ್ಟಾ ಹೊಡೆದಿದ್ದಾರೆ. ಕೆಲ ದಿನದ ಹಿಂದೆ ಯುವತಿಯೊಬ್ಬಾಕೆ, ಮಲಯಾಳಂ ಚಿತ್ರರಂಗದ ಖ್ಯಾತ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಕೇರಳದ ಎರ್ನಾಕುಲಂನ ಒನ್ನುಕುಲ್ ನಿವಾಸಿಯಾಗಿದ್ದ ಯುವತಿ, ತಮಗೆ ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನಿವಿನ್ ಪೌಲಿ, ಸಿನಿಮಾದ ನಿರ್ಮಾಪಕ, ನಿರ್ದೇಶಕ ಮತ್ತಿತರರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ದೂರು ದಾಖಲಿಸಿದ್ದರು. ಅತ್ಯಾಚಾರವು ದುಬೈನ ಹೋಟೆಲ್…
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರ್ಶನ್ ನನ್ನು ಬಂಧಿಸುವಾಗ ಪೊಲೀಸರು ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದರು. ಪೊಲೀಸರು ಬಂಧಿಸಲು ಹೋದಾಗ ದರ್ಶನ್ ಇದ್ದ ರೂಮ್ ನಂಬರ್ ಹೇಳದೇ ಹೋಟೆಲ್ ಸಿಬ್ಬಂದಿ ಸತಾಯಿಸಿದ್ದರು ಎನ್ನಲಾಗಿದೆ. ಹೋಟೆಲ್‌ನಲ್ಲಿ ಕೆಲಕಾಲ ಕಾದಿದ್ದ ಪೊಲೀಸರಿಗೆ ದಿಢೀರನೆ ಮೂವರು ಬಾಡಿ ಗಾರ್ಡ್ಸ್ ಬಂದಿದ್ದರು. ಪೊಲೀಸರನ್ನು ಕಂಡು ತುರಾತುರಿಯಲ್ಲಿ ದರ್ಶನ್ ಕಾರಿನಲ್ಲಿ ಹೋಗುತ್ತಿದ್ದ ಬಾಡಿ ಗಾರ್ಡ್ಸ್ ಅಡ್ಡ ಹಾಕಿ ಮೊಬೈಲ್ ಪಡೆದಿದ್ದರು. ದರ್ಶನ್ ರೂಂ ತೋರಿಸುವಂತೆ ಬಾಡಿ ಗಾರ್ಡ್ಸ್‌ಗೆ ಪೊಲೀಸರು ಗದರಿಸಿದ್ದರು. ಬಳಿಕ ರೂಮ್ ತೋರಿಸಲು ಕರೆದುಕೊಂಡು ಹೋಗಿದ್ದರು. ಮತ್ತೊಂದು ಕೀ ಬಳಸಿ ದರ್ಶನ್ ಇದ್ದ ರೂಮ್ ಓಪನ್ ಮಾಡಿದ್ದರು. ಈ ವೇಳೆ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ನಟ ದರ್ಶನ್ ಎರಡೇ ನಿಮಿಷದಲ್ಲಿ ಬಾತ್ ರೂಮ್‌ನಿಂದ ಹೊರ ಬಂದಿದ್ದರು. ಪೊಲೀಸರು ನಮ್ಮ ಜತೆಗೆ ಬರಬೇಕು ಎಂದಾಗ ಬಟ್ಟೆ ಹಾಕಿಕೊಂಡು ಬರುತ್ತೇನೆ ಸಾರ್ ಎಂದಿದ್ದರು. ಬಳಿಕ ದರ್ಶನ್‌ನನ್ನು ಎಸಿಪಿ ಚಂದನ್ ಹಾಗೂ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಪೊಲೀಸ್ ಜೀಪ್ ಹತ್ತಿಸಿಕೊಂಡು…