ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಅಭೂತಪೂರ್ವ ಗೆಲ್ಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಮುಂದಿನ ವರ್ಷ ಎದುರಾಗಲಿರುವ ಲೋಕಸಭೆ ಚುನಾವಣೆಗೆ(Loksabha Election ) ಭರ್ಜರಿ ತಯಾರಿ ನಡೆಸಿದೆ. ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಣತೊಟ್ಟಿದೆ. ಆದ್ರೆ, ಇದರ ಮಧ್ಯೆ 2019ರ ಲೋಕಸಭೆ ಚುನಾವಣೆ ರಾಜ್ಯದ ಏಕಕೈಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh), ರಾಜಕೀಯದ ಬಗ್ಗೆ ವೈರಾಗ್ಯದ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಇದೀಗ ರಾಜಕಾರಣದಿಂದ ಹಿಂದೆ ಸರಿಯುವ ಮಾತುಳನ್ನಾಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್, ರಾಜಕಾರಣದಲ್ಲಿ ನೆಮ್ಮದಿ ಎನ್ನುವುದೇ ಇಲ್ಲ. ರಾಜಕೀಯ ಅಂದರೆ ಹೊರಗೆ ಜನರ ಬಳಿಯೂ ನೆಮ್ಮದಿ ಇಲ್ಲ. ಜೊತೆಗೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ರಾಜಕಾರಣ ಸಾಕಾಗಿದೆ. ಹೀಗಾಗಿ ರಾಜಕಾರಣದಿಂದ ದೂರ ಉಳಿಯುತ್ತೇನೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟ ಪಟ್ಟವರು ಸಂತೋಷವಾಗಿದ್ದಾರೆ. ಅವರೆಲ್ಲಾ ಅಧಿಕಾರದಲ್ಲಿ ಇದ್ದಾರೆ. ಸಂತೋಷವಾಗಿ ಅನುಭವಿಸಲಿ. ನನಗೆ ರಾಜಕಾರಣ…
Author: Prajatv Kannada
ಬೆಂಗಳೂರು: ಗೃಹಲಕ್ಷ್ಮೀ (Gruha Lakshmi Scheme) ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ ಆಗುತ್ತೆ. ಬಹಳ ಸರಳವಾಗಿ ಗೃಹಲಕ್ಷ್ಮೀ ಯೋಜನೆ ಜನರಿಗೆ ತಲುಪಬೇಕೆಂದು ಯೋಜನೆಯಲ್ಲಿ ಕೆಲವು ಬದಲಾವಣೆಳಗಳನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚನೆ ನೀಡಿದ್ದೇವೆ. ಮೊದಲು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಇದರ ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿನ (Gram Panchayat) ಬಾಪೂಜಿ ಸೇವಾ ಕೇಂದ್ರದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಯೋಜನೆಯನ್ನ ಯಾರು ಮನೆ ಮನೆ ಮುಟ್ಟಿಸಲು ಪ್ರಜಾ ಪ್ರತಿನಿಧಿ ಆರಂಭಿಸುತ್ತಿದ್ದೇವೆ. ಈಗಾಗಲೆ ಅಧಿಕಾರಿಗಳು ಸಾಫ್ಟ್ವೇರ್/ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಪಡಿಸುತ್ತಿದ್ದಾರೆ. ಅತ್ಯಂತ ಶೀಘ್ರದಲ್ಲೇ ಅರ್ಜಿ ಪ್ರಕ್ರಿಯೆ ಆರಂಭವಾಗುತ್ತದೆ. ಆಗಸ್ಟ್ 17 ಅಥವಾ 18ರಂದು ಮನೆ ಯಜಮಾನಿ ಖಾತೆಗೆ ಹಣ ತಲಪುತ್ತದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಸಚಿವೆ…
ಬಾಗಲಕೋಟೆ: ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಾರ ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದೀಯಶಲಿಯ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. ಇದು ಜಾನಪದ ಹಬ್ಬದ ಆಚತಣೆಯ ಪ್ರಮೂಕ ಅಂಗವಾಗಿದೆ ಈ ಆಚರಯ ಬಹು ಮುಖ್ಯು ಉದ್ದೇಶಿತ ಸಕಲ ಜೀವಿಗಳನ್ನು ಪೊರೆದು ಪೋಸಿಸುವ ಭೂದೇವಿಗೆ ಅರ್ಚನೆ ಸಲ್ಲಿಸುವ ಚರಣೆ ಇದಾಗಿದೆ ಮಣ್ಣಿಂದ ಕಾಯ ಮಣ್ಣಿಂದ ಸಕಲ ಸಂಪದವು ಎಂದು ಪ್ರಾಚೀನ ತತ್ವಜ್ಞಾನಿಗಳು ಆಡಿ ಮಣ್ಣಿನ ಗಣ ಸಿರಿವಂತಿಕೆಯನ್ನು ಮತ್ತು ಮಣ್ಷು ಜೀವನದ ಮೂಲಾದಾರ ಎಂಬುವುದನ್ನು ಸ್ಪಷ್ಟ ಪಡೀಸಿದರು . ಮಣ್ಣಿ ಮಾತ್ರೋ ಸ್ಥಾನ ವಿರೂವುದಲ್ಲದೆ ನಿತ್ಯ ಮನಕೂಲವನ್ನು ತಾಯಿಯಂತೆ ಸಲುಹುದೆಂಭ ಕಾರಣಕೆ ನಮ್ಮ ಪೂರ್ವಜರು ಮಣ್ಣಿನ ಪೂಜೆಗೆ ಮುಂದಾಗಿ ಕೃತಜ್ಞತೆಗೆ ಮತ್ತು ಗೌರವ ಸಲ್ಲಿಸುವುದಕ್ಕಾಗಿ ಕಾರ ಹುಣ್ಣುಮೆ ಸಂದರ್ಭದಲ್ಲಿ ಮಣ್ಣಿನ ಬಸವಣ್ಣ ಮಾಡಿ ಆಶಾಡದಲ್ಲಿ ಗೂಳ್ಳವನ ಪೂಜೆ, ಭಾದ್ರಪದ ಮಾಸದಲ್ಲಿ ಗಣೇಶ ದೇವರು ಮತ್ತು ಜೋಕುಮಾರ…
ದಾವಣಗೆರೆ: ಮುಂದೆ ಸಿಎಂ ಆಗುವ ಅರ್ಹತೆ ಸತೀಶ್ ಜಾರಕಿಹೊಳಿಗೆ ಇದೆ ಎಂದು ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಸಚಿವ ಕೆ.ಎನ್.ರಾಜಣ್ಣ(K N Rajanna) ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರು ಒಮ್ಮೆ ಮುಖ್ಯಮಂತ್ರಿ ಆಗಬೇಕು. ಈಗಲೇ ಡಿಸಿಎಂ ಸ್ಥಾನ ಕೇಳುವ ಪ್ಲ್ಯಾನ್ ಇತ್ತು, ಆದರೆ ಆಗಿಲ್ಲ. ನಾನು ಮಾತ್ರ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಬಿಜೆಪಿ ಪರ ನಟ ಸುದೀಪ್ ಪ್ರಚಾರ ಮಾಡಿದ್ದಕ್ಕೆ ಬೇಸರವಾಯ್ತು. ST ಮೀಸಲು ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡಬೇಕಿತ್ತು. ನಮ್ಮ ಸಮಾಜದವರು ಎಂದು ಅಭಿಮಾನದಿಂದ ನೋಡುತ್ತೇವೆ ಎಂದರು.
ಮಂಡ್ಯ :- ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದ್ದು, ರಾಜಕೀಯ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಜೂನ್ 20ರಂದು ರಾಜ್ಯ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ಪಟ್ಟಣದ ಶಿವಪುರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಕೆ.ಎಂ.ಉದಯ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಒಂದೇ ಉದ್ದೇಶದಿಂದ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಕ್ರೆಡಿಟ್ ಸಿಗುತ್ತೆ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಹಾಳು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಮಾರಾಟವನ್ನು ನಿಲ್ಲಿಸಿದೆ ಎಂದು ವಾಗ್ಧಾಳಿ ನಡೆಸಿದರು. ಬಿಜೆಪಿಯ ದ್ವೇಷದ ರಾಜಕಾರಣ ಬಡವರ ಹೊಟ್ಟೆಯ ಮೇಲೆ ಹೊಡೆಯುವ ದುರಾಡಳಿತಕ್ಕೆ ನಾವು ಉತ್ತರ ನೀಡಲೇ ಬೇಕಿದೆ. ಭ್ರಷ್ಠ ಬಿಜೆಪಿ ಸರ್ಕಾರ ಜನರಿಗೆ ದ್ರೋಹ ಮಾಡಿ ಕಾಂಗ್ರೆಸ್ ಆಡಳಿತದ ಮೇಲೆ ದಾಳಿ ನಡೆಸುತ್ತಿದೆ…
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಪ್ರಾದ್ಯಾಪಕರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. 8-10 ಜನ ನಿಟ್ಟೆ ಕಾಲೇಜಿನ ಪ್ರಾಧ್ಯಾಪಕರು ತೀರ್ಥಮತ್ತೂರಿನ ಯೋಗ ನರಸಿಂಹ ಮಠಕ್ಜೆ ಆಗಮಿಸಿದ್ದರು. ಅಷ್ಟು ಜನ ನದಿಗೆ ಸ್ನಾನಕ್ಕೆ ಇಳಿದಿದ್ದಾರೆ. ಇಬ್ವರು ನೀರು ಪಾಲಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು ಮತ್ತೋರ್ವರ ಶೋಧ ಕಾರ್ಯ ಮುಂದು ವರೆದಿದೆ. ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸುತ್ತಿದೆ. ಪುನೀತ್ (36) ಮತ್ತು ಬಾಲಾಜಿ ಬ ಇಬ್ಬರು ಪ್ರಾಧಗಯಪಕರು ನೀರು ಪಾಲಾಗಿದ್ದಾರೆ. ಸ್ವಲ್ಪ ಹೊತ್ತಿನ ಹಿಂದೆ ಓರ್ವರ ಮೃತ ದೇಹ ಪತ್ತೆಯಾಗಿದ್ದು ಅವರ ಗುರುತು ಪತ್ತೆಯಾಗಬೇಕಿದೆ.
ಮೈಸೂರು: ಖೋ ಖೋ ಆಟದ (Kho Kho Game) ವೇಳೆ ಕುಸಿದು ಬಿದ್ದು ವಿದ್ಯಾರ್ಥಿ (Student) ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹರದನಹಳ್ಳಿ ಗ್ರಾಮದ ಶಶಾಂಕ್ (13) ಮೃತ ವಿದ್ಯಾರ್ಥಿ. ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲಾ ಅವಧಿ ಮುಗಿದ ಬಳಿಕ ಈತ ಖೋ ಖೋ ಅಭ್ಯಾಸ ಮಾಡಲು ಹೋಗಿದ್ದಾನೆ. ಖೋ ಖೋ ಆಡುತ್ತಿದ್ದ ಸಂದರ್ಭ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ವಿದ್ಯಾರ್ಥಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈ ಕುರಿತು ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಕ್ತಿ ಯೋಜನೆ (Shakti Scheme) ಜಾರಿ ಹಿನ್ನೆಲೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (KSRTC Bus) ಮಹಿಳೆಯರದ್ದೇ ದರ್ಬಾರ್. ವೀಕೆಂಡ್ ಶುರುವಾಗುತ್ತಲೇ ಬಸ್‌ಗಳಲ್ಲಿ ಕಾಲು ಇಡಲು ಸಾಧ್ಯವಾಗದಷ್ಟು ರಶ್. ಬಸ್‌ಗಳಲ್ಲಿ ಫ್ರೀ ಪ್ರಯಾಣ ಅಂತ ಮಹಿಳೆಯರು ಪ್ರವಾಸ, ಧಾರ್ಮಿಕ ಕ್ಷೇತ್ರಗಳಿಗೆ ಸಾಗರೋಪಾದಿಯಲ್ಲಿ ತೆರಳುತ್ತಿದ್ದಾರೆ. ಇಲ್ಲೊಬ್ಬ ಮಹಿಳೆ ಬಸ್ ಫುಲ್ ರಶ್ ಆಯ್ತು ಅಂತ ಡ್ರೈವರ್ ಸೀಟ್ ಮೂಲಕ ಹತ್ತಿರುವ ಘಟನೆ ಶೃಂಗೇರಿಯಲ್ಲಿ (Chikkamagaluru) ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ (Sringeri) ಬಸ್ ಹತ್ತಲು ಮಹಿಳೆಯರು ಪರದಾಡಿದ್ದಾರೆ. ಬಸ್‌ಗಾಗಿ ನಿಲ್ದಾಣದಲ್ಲಿ ಕಾದು ಕೂತು ಕೊನೆಗೆ ಬಸ್ ಬಂದಾಗ ಹತ್ತಲು ಮುಗಿಬಿದ್ದಿದ್ದಾರೆ. ಈ ವೇಳೆ ಮಹಿಳೆ ಬಸ್‌ನಲ್ಲಿ ಸೀಟ್ ಇಲ್ಲ, ಕಾಲು ಹಾಕಲು ಕೂಡಾ ಜಾಗ ಇಲ್ಲ ಅಂತ ಕೊನೆಗೆ ಡ್ರೈವರ್ ಸೀಟ್‌ನಿಂದಲೇ ಹತ್ತಿದ್ದಾರೆ. ಮಹಿಳೆ ಮೊದಲು ತನ್ನ ಮಕ್ಕಳನ್ನು ಡ್ರೈವರ್ ಸೀಟ್‌ಗೆ ಹತ್ತಿಸಿ, ಬಳಿಕ ತಾನೂ ಹತ್ತಿ ಅದೇ ಸೀಟ್‌ನಲ್ಲಿ ಕುಳಿತಿದ್ದಾರೆ. ರಾಜ್ಯಾದ್ಯಂತ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಇರುವ ಹಿನ್ನೆಲೆ ಧಾರ್ಮಿಕ ಸ್ಥಳವಾದ…
ದಾವಣಗೆರೆ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ವಿಚಾರವಾಗಿ ಪರಿಶಿಷ್ಟ ಪಂಗಡ ವ್ಯವಹಾರಗಳ ಸಚಿವ ಬಿ.ನಾಗೇಂದ್ರ ಮಾತನಾಡಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತರಲಾಗಿದೆ. ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಅಥವಾ ಮೈಸೂರು ಭಾಗದ ಹೆಚ್.ಡಿ.ಕೋಟೆಯಲ್ಲಿ ವಿವಿ ಸ್ಥಾಪನೆಗೆ ಚಿಂತನೆ ನಡೆದಿದೆ. ಬಹುದಿನಗಳಿಂದ ಬುಡಕಟ್ಟು ವಿವಿ ಸ್ಥಾಪನೆ ಬಗ್ಗೆ ಬೇಡಿಕೆ ಇತ್ತು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೂ ತರಲಾಗಿದೆ ಎಂದರು.
ಹುಬ್ಬಳ್ಳಿ: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರತಿ ಕುಟುಂಬಕ್ಕೆ ತಲಾ 10 ಕೀಲೋ ಅಕ್ಕಿ ವಿತರಣೆಗೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು ಏಕೆಂದರೆ ನಾವು ಅಂದರೆ ಕೇಂದ್ರ ಸರ್ಕಾರ ಈಗಾಗಲೇ 5 ಕೀಲೋ ಕೊಡತಾ ಇದ್ದು ಮತ್ತೆ ಅವರು ಈಗ ಕೊಡಲು ಏನು ಇಲ್ಲ ವಿನಾಕಾರಣ ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳತೀದಾರೆ ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ ಆಗುತ್ತದೆ ಎಂದರು. ರಾಜ್ಯ ಸರ್ಕಾರದವರು ಇದೀಗ ಛತ್ತೀಸಗಡದಿಂದ ಅಕ್ಕಿ ತರ್ತೀವಿ ಅಂತೀದಾರೆ. ನಮಗೆ ಬಡಜನರಿಗೆ ಒಳ್ಳೆದಾದ್ರೆ ಸಾಕು ಎಲ್ಲಿಂದ ತಗೊಬೇಕು, ಹೇಗೆ ತಗೊಬೇಕು ಅನ್ನೋ ಪ್ರಶ್ನೆ ಈಗ ಬರಲ್ಲ. ಆದರೆ ತರಸಬೇಕು ಮತ್ತು ರಾಜ್ಯದ ರೈತರು ಅಕ್ಕಿ ಕೊಡೊಕೆ ಮುಂದೆ ಬಂದ್ರೆ…