Author: Prajatv Kannada

ರಾಂಚಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಶನಿವಾರ ರಾಂಚಿ ಸಿವಿಲ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ವಿಭಾಗದ ನ್ಯಾಯಾಧೀಶ ಡಿ.ಎನ್. ಶುಕ್ಲಾ ನಟಿ ಅಮೀಶಾ ಪಟೇಲ್ ಗೆ ಜಾಮೀನು ಮಂಜೂರು ಮಾಡಿದ್ದು, ಜೂನ್ 21ರಂದು ಮತ್ತೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. 2018ರಲ್ಲಿ ಜಾರ್ಖಂಡ್ ಮೂಲದ ಚಲನಚಿತ್ರ ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅವರು ನಟಿ ಅಮೀಶಾ ಪಟೇಲ್‌ ವಿರುದ್ಧ ವಂಚನೆ ಮತ್ತು ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನ್ಯಾಯಾಲಯ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಕೂಡ ನಟಿ ಕೋರ್ಟ್​ಗೆ ಹಾಜರಾಗಿರಲಿಲ್ಲ. ಆ ಬಳಿಕ, ನ್ಯಾಯಾಲಯ ಅಮೀಶಾ ವಿರುದ್ಧ ವಾರೆಂಟ್ ಜಾರಿ ಮಾಡಿತ್ತು ಎಂದು ದೂರುದಾರರ ಪರ ವಕೀಲ ವಿಜಯ ಲಕ್ಷ್ಮಿ ಶ್ರೀವಾಸ್ತವ ತಿಳಿಸಿದ್ದಾರೆ. ಸಿನಿಮಾ ನಿರ್ಮಾಪಕ ಅಜಯ್ ಕುಮಾರ್ ಸಿಂಗ್ ಅವರು ‘ದೇಸಿ ಮ್ಯಾಜಿಕ್‌’ ಎಂಬ ಶೀರ್ಷಿಕೆಯ ಚಲನಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ಈ ಸಿನಿಮಾದಲ್ಲಿ…

Read More

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಈ ಮಧ್ಯೆಯೂ ಚಿತ್ರ ಮೊದಲ ದಿನವೇ ಬರೋಬ್ಬರಿ 120 ಕೋಟಿ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಬಾಕ್ಸ್ ಆಫೀಸ್ ರಿಪೋರ್ಟ್ ಪ್ರಕಾರ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಹಾಗೂ ಕೇರಳ ಮತ್ತು ತಮಿಳುನಾಡಿನಲ್ಲಿ ಅತಿ ಕಡಿಮೆ ಕಲೆಕ್ಷನ್ ಮಾಡಿರುವ ಕುರಿತು ವರದಿಯಾಗಿದೆ. ಉತ್ತರ ಪ್ರದೇಶದಲ್ಲಿ 40 ಕೋಟಿ ರೂಪಾಯಿ, ಆಂಧ್ರ ಪ್ರದೇಶದಲ್ಲಿ 25 ಕೋಟಿ ರೂಪಾಯಿ, ತೆಲಂಗಾಣದಲ್ಲಿ 20 ಕೋಟಿ ರೂಪಾಯಿ, ಕರ್ನಾಟಕದಲ್ಲಿ 7 ಕೋಟಿ ರೂಪಾಯಿ, ಕೇರಳ ಮತ್ತು ತಮಿಳುನಾಡಿನಲ್ಲಿ 2 ಕೋಟಿ ರೂಪಾಯಿ ಮತ್ತು ವಿದೇಶಗಳ ಒಟ್ಟು ಕಲೆಕ್ಷನ್ 25 ಕೋಟಿ ಎಂದು ಅಂದಾಜಿಸಲಾಗಿದೆ. ಒಟ್ಟಾರೆ ಮೊದಲ ದಿನದ ಕಲೆಕ್ಷನ್ 120 ಕೋಟಿ ರೂಪಾಯಿ ಆಗಿದೆ. ಒಂದು ಕಡೆ ಬಾಕ್ಸ್ ಆಫೀಸನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದರೆ, ಮತ್ತೊಂದು ಕಡೆ ಸಿನಿಮಾ ಬಗ್ಗೆ ನೆಗೆಟಿವ್ ಕಾಮೆಂಟ್ ಮತ್ತು ಸಿನಿಮಾವನ್ನು ನಿಲ್ಲಿಸಬೇಕು ಎನ್ನುವ ಒತ್ತಾಯ ಕೂಡ ಕೇಳಿ ಬಂದಿದೆ.  ಸಿನಿಮಾದ…

Read More

ಅಪ್ಪ ಅಂದರೆ ಆಸರೆ, ಅಪ್ಪ ಅಂದರೆ ಪ್ರೀತಿ, ಅಪ್ಪ ಅಂದರೆ ಗಾಂಭೀರ್ಯ. ಹೀಗೆ ಅಪ್ಪನನ್ನು ಪದಗಳಲ್ಲಿ ವರ್ಣಿಸಲು ಹೊಗಳಲು ಸಾಧ್ಯವೇ ಇಲ್ಲ. ಅಪ್ಪ ದೇವರು ಕೊಟ್ಟ ದೇವರು. ಎಲ್ಲಾ ಕಷ್ಟಗಳನ್ನ ತನ್ನ ಮಡಿಲಿಗೆ ಹಾಕೊಕೊಂಡು ತನ್ನವರಿಗಾಗಿ ಶ್ರಮಿಸುವ ಏಕೈಕ ಜೀವ ಅಪ್ಪ. ಅಪ್ಪನ ಶ್ರಮಕ್ಕೆ ಸರಿಸಾಟಿ ಇಲ್ಲ. ಅಪ್ಪನ ನಿಷ್ಕಲ್ಮಷ ಪ್ರೀತಿಯನ್ನು ಯಾರಿಂದಲೂ ಭರಿಸಲು ಸಾಧ್ಯವಿಲ್ಲ ಒಳ್ಳೆ ಕೆಲಸಗಳಲ್ಲಿ ಕೈ ಜೋಡಿಸುವ, ಕೆಟ್ಟ ಕೆಲಸಗಳ ಬಗ್ಗೆ ತಿಳಿ ಹೇಳುವ ಗುರು ಅಪ್ಪ. ಪ್ರೀತಿ ಮತ್ತು ಕಾಳಜಿಯುಳ್ಳ ಅಪ್ಪನ ಮಹತ್ವವನ್ನು ನೆನೆಯಲು ತಂದೆಯ ದಿನವನ್ನು ಆಚರಿಸಲಾಗುತ್ತದೆ. ಇಲ್ಲಿದೆ ತಂದೆ ದಿನದ ಶುಭಾಶಯಗಳು. ವಿಶ್ವ ಅಪ್ಪಂದಿರ ದಿನದ ಶುಭಾಶಯಗಳು ಮತ್ತು ಸಂದೇಶಗಳು *ನೀವು ನಿಜವಾದ ಪ್ರೀತಿ, ಸ್ನೇಹಿತ, ಶಿಕ್ಷಕ, ಮಾರ್ಗದರ್ಶಕ, ಪ್ರೋತ್ಸಾಹಿ *ಈ ದಿನದಂದು ನಿಮಗೆ ಸಂತೋಷವನ್ನು ಬಯಸುತ್ತೇನೆ. ನಾನು ನಿನ್ನನ್ನು ಯಾವಾಗಲೂ ಪ್ರೀತಿಸುವೆನು. * ನಿಮ್ಮ ಜೀವನ ಸೂರ್ಯನಷ್ಟೇ ಪ್ರಕಾಶಮಾನವಾಗಿರಲಿ. ಸಂತೋಷದಿಂದ ಕೂಡಿರಲಿ ಎಮದು ಹಾರೈಸುತ್ತೇನೆ. *ನಾವು ನಿಮ್ಮ ಬಗ್ಗೆ ತೋರುವ ಪ್ರೀತಿ…

Read More

ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟ, ಆಹಾರ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನದಲ್ಲಿ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಂದಿನ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ರನ್ನು ಮಣಿಸಲು ನವಾಜ್‌ ಶರೀಫ್ ಅವರನ್ನೇ ಕಣಕ್ಕಿಳಿಸಲು ಆಡಳಿತಾರೂಢ ಪಕ್ಷ ಪಿಎಂಎಲ್‌-ಎನ್‌ ನೇತೃತ್ವದ ಸರ್ಕಾರ ಸಜ್ಜುಗೊಂಡಿದೆ. ಪಾಕಿಸ್ತಾನ ಪಿಎಂ ಶೆಹಬಾಜ್‌ ಶರೀಫ್ ಪಾಕಿಸ್ತಾನ್‌ ಮುಸ್ಲಿಂ ಲೀಗ್‌ -ನವಾಜ್‌ (ಪಿಎಂಎಲ್‌-ಎನ್‌) ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ಪಕ್ಷದ ಮುಂದಾಳತ್ವ ವಹಿಸಲು ನನ್ನ ಹಿರಿಯ ಸಹೋದರ ನವಾಜ್‌ ಶರೀಫ್ ದೇಶಕ್ಕೆ ಮರಳುವುದನ್ನೇ ಕಾಯುತ್ತಿದ್ದೇನೆ ಎಂದಿದ್ದಾರೆ. 2019ರಿಂದಲೂ ಲಂಡನ್‌ನಲ್ಲಿರುವ ಮಾಜಿ ಪ್ರಧಾನಿ ನವಾಜ್‌, ಪನಾಮಾ ಪೇಪರ್ಸ್‌ ಹಗರಣದ ಹಿನ್ನೆಲೆಯಲ್ಲಿ ಪಾಕ್‌ಗೆ ಮರಳಿದರೂ ಯಾವುದೇ ಪಕ್ಷದ ನೇತೃತ್ವ ವಹಿಸುವಂತಿಲ್ಲ. ಆದರೆ ಇದನ್ನು ಮರುಪರಿಶೀಲಿಸಲು ಶೆಹಬಾಜ್‌ ಶರೀಫ್ ಅನುಮತಿ ನೀಡಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್‌ನಲ್ಲಿ ತಮ್ಮ ವಿರುದ್ಧದ ತೀರ್ಪು ಪ್ರಶ್ನಿಸಲು ನವಾಜ್‌ಗೆ 60 ದಿನಗಳ ಕಾಲವಕಾಶ ನೀಡಲಾಗಿದೆ. ಇನ್ನು ರಾಜಕೀಯ ಗೊಂದಲಗಳೆಲ್ಲದರ ನಡುವೆ ಪಾಕಿಸ್ತಾನದ ವಿದೇಶಿ ಮೀಸಲು ನಿಧಿ…

Read More

ಉಕ್ರೇನ್: ನೋವಾ ಕಾಖೋವ್ಕಾ ಅಣೆಕಟ್ಟು ಕುಸಿತಗೊಂಡು ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಸುಮಾರು 16 ಜನರು ಸಾವನ್ನಪ್ಪಿದ್ದು, 31 ಮಂದಿ ನಾಪತ್ತೆಯಾಗಿದ್ದಾರೆ ಎಂದು ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ದಕ್ಷಿಣ ಉಕ್ರೇನ್‌ನಲ್ಲಿನ ಅಣೆಕಟ್ಟು ಜೂನ್ 6 ರಂದು ಕುಸಿದಿದ್ದು ಇದರಿಂದ ಹಲವು ಹಳ್ಳಿಗಳು ನಾಶಗೊಂಡಿತ್ತು. ಪ್ರವಾಹದಿಂದ ಕೃಷಿ ಭೂಮಿ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದ್ದು ಇದರಿಂದ ಸಾವಿರಾರು ಜನರ ಬದುಕು ಬೀದಿಗೆ ಬಿದ್ದಿತ್ತು. ಅಲ್ಲದೆ ವಿದ್ಯುತ್ ಮತ್ತು ಶುದ್ಧ ನೀರಿನ ಪೂರೈಕೆ ಕಡಿತಗೊಂಡು ಜನ ಸಾಮಾನ್ಯರು ಕಂಗಾಲಾಗಿದ್ದರು. ಅಣೆಕಟ್ಟನ್ನು ಉದ್ದೇಶಪೂರ್ವಕವಾಗಿ ಕೆಡವಲಾಗಿದೆಯೇ ಅಥವಾ ಅದರ ಕುಸಿತದ ಹಿಂದೆ ರಚನಾತ್ಮಕ ವೈಫಲ್ಯವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಉಕ್ರೇನ್‌ನ ಆಂತರಿಕ ಸಚಿವಾಲಯವು, ಪ್ರವಾಹ ಪ್ರದೇಶಗಳಿಂದ 3,614 ಜನರನ್ನು, 474 ಮಕ್ಕಳು ಸೇರಿದಂತೆ 80 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಿದೆ. ಖೇರ್ಸನ್ ಮತ್ತು ಮೈಕೊಲೈವ್ ಪ್ರದೇಶಗಳಲ್ಲಿ 1,300 ಮನೆಗಳು ಜಲಾವೃತವಾಗಿವೆ ಎಂದು ತಿಳಿಸಿದೆ. ‘ದುರದೃಷ್ಟವಶಾತ್, ಸಾವಿನ ಸಂಖ್ಯೆ 29 ಜನರಿಗೆ ಏರಿದೆ. ಒಲೆಶ್ಕಿಯಲ್ಲಿ ಹನ್ನೆರಡು ಜನರು, ಹೋಲಾ ಪ್ರಿಸ್ತಾನ್‌ನಲ್ಲಿ 13 ಜನರು ಮತ್ತು ನೋವಾ ಕಾಖೋವ್ಕಾದಲ್ಲಿ 4 ಜನರು. ಸಂಬಂಧಿಕರನ್ನು ಕಳೆದುಕೊಂಡಿರುವ ಪ್ರತಿ ಕುಟುಂಬಕ್ಕೆ ನಾವು ಅಗತ್ಯ ನೆರವು ನೀಡುತ್ತೇವೆ’…

Read More

ನವದೆಹಲಿ: ಎರಡು ವಿಸ್ಕಿ ಬಾಟ್ಲಿಗಳಲ್ಲಿ 13 ಕೋಟಿ ರೂ. ಮೌಲ್ಯದ ಕೊಕೇನ್ ತೆಗೆದುಕೊಂಡು ದೆಹಲಿಗೆ (New Delhi) ಬಂದಿದ್ದ 25 ವರ್ಷದ ಕಿನ್ಯಾ (Kenya ) ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. Backward Skip 10s ಆರೋಪಿ ಇಥಿಯೋಪಿಯಾನಿಂದ (Ethiopia) ಬಂದಿದ್ದು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಬಂಧಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದ ನಂತರ 13 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಕೊಕೇನ್‍ನ್ನು ನೈರೋಬಿ ವಿಮಾನ ನಿಲ್ದಾಣದಲ್ಲಿ ಅವಳಿಗೆ ನೀಡಲಾಯಿತು. ಅದನ್ನು ದೆಹಲಿಯಲ್ಲಿರುವ ವ್ಯಕ್ತಿಗೆ ನೀಡಲು ಬಂದಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಜೈಪುರ್: 11 ವರ್ಷದ ಬಾಲಕಿಯ ಮೇಲೆ ಆಕೆಯ ಇಬ್ಬರು ಸೋದರ ಸಂಬಂಧಿಗಳೇ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ (Rajasthan) ಉದಯಪುರದಲ್ಲಿ (Udaipur) ನಡೆದಿದೆ. ಇಬ್ಬರು ಸೋದರ ಸಂಬಂಧಿಗಳೂ ಅಪ್ರಾಪ್ತರಾಗಿದ್ದು 13 ಮತ್ತು 15 ವರ್ಷದವರಾಗಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉದಯಪುರದ ಅಂಬಾಮಾತಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯ ಎಸಗಿದ ಇಬ್ಬರನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆವರೆಗೂ ಬಾಲಾಪರಾಧಿ ಕೇಂದ್ರಕ್ಕೆ ವರ್ಗಾಯಿಸಲು ನಿರ್ಧಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿ ತನ್ನ ತಂದೆಯ ಚಿಕ್ಕಮ್ಮನ ನಿವಾಸಕ್ಕೆ ಭೇಟಿ ನೀಡಿದ್ದಳು. ಅಲ್ಲಿ ಆಕೆಯ 13 ಮತ್ತು 15 ವರ್ಷ ವಯಸ್ಸಿನ ಇಬ್ಬರು ಸೋದರ ಸಂಬಂಧಿಗಳು ಅತ್ಯಾಚಾರ ಎಸಗಿದ್ದಾರೆ. ಸ್ವಲ್ಪ ಸಮಯದ ನಂತರ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಕೂಡಲೇ ಆಕೆಯ ಸಂಬಂಧಿಕರು ಅವಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಎಸ್‍ಪಿ ಚೇತನಾ ಭಾಟಿ ಅವರು ಘಟನೆಯ ಬಗ್ಗೆ…

Read More

ಹೈದರಾಬಾದ್: ತೆಲಂಗಾಣದ ಗೃಹ ಸಚಿವ ಮಹಮೂದ್ ಅಲಿ (Mahmood Ali) ಯವರು ಮಹಿಳೆಯರು ತುಂಡುಡುಗೆ ಧರಿಸಿದ್ರೆ ಮಾತ್ರ ಸಮಸ್ಯೆ ಆಗುತ್ತೆ ಎಂದು ಹೇಳಿದ್ದಾರೆ. ಹೈದರಾಬಾದ್‍ (Hyderabad) ನ ಸಂತೋಷ್ ನಗರದಲ್ಲಿರುವ ಕೆವಿ ರಂಗಾರೆಡ್ಡಿ ಕಾಲೇಜಿ (Women’s Degree College in Santosh Nagar) ನಲ್ಲಿ ವಿದ್ಯಾರ್ಥಿನಿಯರನ್ನು ಬುರ್ಕಾ ತೆಗೆದಿರಿಸಿ ಪರೀಕ್ಷೆ ಬರೆಯಲಾಗಿತ್ತು. ಈ ವಿಚಾರ ಅಲ್ಲಿ ಭಾರೀ ಚರ್ಚೆಗೀಡಾಗಿತ್ತು. ಈ ಸಂಬಂಧ ಕೆಲ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಮಧ್ಯೆ ಗೃಹ ಸಚಿವರು ಕೂಡ ಪ್ರತಿಕ್ರಿಯಿಸಿ, ಮಹಿಳೆಯರು ಸಾಧ್ಯವಾದಷ್ಟು ದೇಹವನ್ನು ಮುಚ್ಚಿಕೊಂಡು ಬರಬೇಕು. ಮಹಿಳೆಯರು ಧರಿಸುವ (Women Dress) ಸಣ್ಣ ಸಣ್ಣ ಉಡುಪುಗಳಿಂದ ಮಾತ್ರ ಸಮಸ್ಯೆಯಾಗುತ್ತದೆ ಎಂದಿದ್ದಾರೆ. ನಮ್ಮದು ಸಂಪೂರ್ಣ ಜಾತ್ಯಾತೀತ ನೀತಿಯಾಗಿದೆ. ಪ್ರತಿಯೊಬ್ಬರಿಗೂ ಯಾವ ಬಟ್ಟೆ ಬೇಕಾದರೂ ಧರಿಸುವ ಹಕ್ಕಿದೆ. ಆದರೆ ಹಿಂದೂ ಅಥವಾ ಇಸ್ಲಾಮಿಕ್ ಪದ್ಧತಿಗಳ ಪ್ರಕಾರವೇ ಬಟ್ಟೆ ತೊಡಬೇಕು. ಯುರೋಪಿಯನ್ ಸಂಸ್ಕೃತಿಯನ್ನು ಅನುಸರಿಸಬಾರದು. ನಾವು ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಗೌರವಿಸಬೇಕು. ವಿಶೇಷವಾಗಿ ಮಹಿಳೆಯರು ಸಣ್ಣ ಉಡುಪುಗಳನ್ನು…

Read More

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ (Anti Conversion Bill) ರದ್ದು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸ್ವಾಮೀಜಿಯೊಬ್ಬರ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಸ್ವಾಮೀಜಿಯ ಸೇವಕರು ಎನ್ನಲಾಗಿದ್ದು ಅವರ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಲ್ಲಿ (Belagavi) ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ (Bajrang Dal) ನಡೆಸುತ್ತಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚಿಕ್ಕಮಗಳೂರು: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ (Gruhalakshmi Scheme) ಮತ್ತಷ್ಟು ವಿಳಂಬವಾಗಿದ್ದು, ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ. ಕೊಪ್ಪ ತಾಲೂಕಿನ ಗೌರಿಗದ್ದೆ (Gowrigadde) ದತ್ತಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಲಿಕೇಶನ್ ಹಾಕಲು ಮತ್ತಷ್ಟು ವಿಳಂಬ ಆಗಲಿದೆ. ಆಗಸ್ಟ್ 17 ಅಥವಾ 18ಕ್ಕೆ ಖಂಡಿತಾ ಹಣ ಅವರ ಖಾತೆ ಸೇರುತ್ತೆ. ಯೋಜನೆಯ ಬದಲಾವಣೆಯಿಂದ ವಿಳಂಬವಾಗುತ್ತಿದೆ ಅಷ್ಟೇ ಎಂದು ವಿವರಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಜನರಿಗೆ ಸರಳವಾಗಿ ಸಿಗಬೇಕು. ಹಾಗಾಗಿ ಅಧಿಕಾರಿಗಳಿಗೆ ಕೆಲ ಬದಲಾವಣೆಗಳ ಸೂಚನೆ ನೀಡಿದ್ದೇವೆ. ಗ್ರಾಮ 1 ಕರ್ನಾಟಕ, ಬೆಂಗಳೂರು 1 ನಲ್ಲಿ ಇದರ ಸೇವೆ ಲಾಭ ಪಡೆಯಬಹುದಾಗಿತ್ತು. ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ ಎ0ದು ತಿಳಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ (Bapuji Seva Centre) ಇದೆ. ಸರ್ಕಾರದ ಯೋಜನೆಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರೋರಿಗೆ ಪ್ರಜಾಪ್ರತಿನಿಧಿ ಮಾಡುತ್ತೇವೆ. ಅವರಿಗೆ ಯಾವ…

Read More