ಬೆಂಗಳೂರು ;- ರಾಜ್ಯ ಸರ್ಕಾರವು ಸಚಿವ ಶಿವರಾಜ್ ತಂಗಡಗಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಹನ್ನೊಂದು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ. ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ದಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ದಿ ನಿಗಮ, ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
Author: Prajatv Kannada
ಬೆಂಗಳೂರು:- ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಫಲಾನುಭವಿಗಳಿಗೆ ಈ ಒಂದು ದಾಖಲೆ ಇದ್ದರೆ ಸಾಕಾಗುತ್ತದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಸಾಕು ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ವಿದ್ಯುತ್ ಬಳಕೆದಾರರು ಗೃಹ ಜ್ಯೋತಿ ಯೋಜನೆಯಡಿ ಬಾಡಿಗೆದಾರರಾಗಿದ್ದರೆ. ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ನಿವಾಸದ ವಿಳಾಸದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಮೂಲಕ ಮತ್ತು ನೋಂದಾಯಿಸಿಕೊಳ್ಳುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು. ರಾಜ್ಯ ಸರಕಾರವು ಜೂನ್ 18 ರಂದು ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿಯನ್ನು ಪ್ರಾರಂಭಿಸಲಿದೆ. ಈ ಯೋಜನೆಯಡಿಯಲ್ಲಿ, ರಾಜ್ಯದ ಪ್ರತಿ ಮನೆಯು ತಿಂಗಳಿಗೆ 200 ಯೂನಿಟ್‌ಗಳ ಗರಿಷ್ಠ ಬಳಕೆಯ ಮಿತಿಯನ್ನು ಹೊಂದಿರುತ್ತದೆ, ಗರಿಷ್ಠ ಬಳಕೆಯ ಮಿತಿ 10% ಗೆ ಒಳಪಟ್ಟಿರುತ್ತದೆ. ಮಾಸಿಕ ಸರಾಸರಿ…
ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರ ನಿವಾಸಕ್ಕೆ ಆಗಮಿಸಿ ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ ಅವರಿಗೆ ಶಾಲು ಹೊದಿಸಿ ಅಭಿನಂದಿಸಿ ಗೌರವಿಸಿದರು. ಬಳಿಕ ಕೆಲಕಾಲ ಸಮಾಲೋಚನೆ ನಡೆಸಿದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪರಿಶ್ರಮ ಅಷ್ಟೇ ಇದೆ. ಹೀಗಾಗಿ ಬಸವರಾಜ್ ರಾಯರೆಡ್ಡಿ ಅವರು ಡಿಕೆಶಿ ಅವರಿಗೆ ಅಭಿನಂದಿಸಿ ಗೌರವಿಸಿದರು.
ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಭಾರತೀಯ ಆಹಾರ ನಿಗಮ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ಸವಾಲು ಹಾಕಿದ್ದರು. ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು,ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ತಿಳಿ ಹೇಳಿದ್ದಾರೆ.
ಬೆಂಗಳೂರು ;ಬೃಹತ್ ಮತ್ತು ಮಧ್ಯಮ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಕಾಲೆಳೆದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿ.ಎಲ್. ಸಂತೋಷ್ರವರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ. ಇದೀಗ ಉಳಿದಿರುವ ಏಕೈಕ ಹಿರಿಯ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಮುಗಿಸಲು ಅವರ ವಿರುದ್ಧ ಬಸವನಗೌಡ ಪಾಟೀಲ್ ಅವರನ್ನು ಎತ್ತಿ ಕಟ್ಟುವುದರ ಜೊತೆಗೆ ನಿಮ್ಮ ಕಟ್ಟಾ ಶಿಷ್ಯ ಪ್ರತಾಪ್ ಸಿಂಹ ಅವರ ಹೆಗಲ ಮೇಲೆ ಬಂದೂಕು ಇಟ್ಟು ಗುರಿನೆಟ್ಟಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಕರ್ನಾಟಕದ ಇತ್ತೀಚಿನ ರಾಜಕಾರಣವನ್ನು ಒಂದೇ ವಾಕ್ಯದಲ್ಲಿ ಹೇಳುವುದಾದರೆ, ವಿಶ್ವೇಶ್ವರ ಭಟ್ ಅವರು ಹೇಳಿರುವಂತೆ ‘ಅತಿಯಾದ ‘ಸಂತೋಷ’ವೇ ದುಃಖಕ್ಕೆ ಕಾರಣ’ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರು:- ಅಕ್ಕಿ ಕೊಡಲ್ಲವೆಂದರೆ ನಮ್ಮ ತೆರಿಗೆ ವಾಪಸ್ಸು ಕೊಡಿ ಎಂದು ಕೇಂದ್ರದ ವಿರುದ್ಧ ಶಾಸಕ ಶಿವಲಿಂಗೇಗೌಡ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ಸ್ಥಗಿತಗೊಳಿಸುವುದಿಲ್ಲ. ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ. ಆದರೆ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಹೀಗೆ ಬಡವಿರೋಧಿ ಧೋರಣೆ ಮುಂದುವರೆಸಿದರೆ, ಲೋಕಾಸಭೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ತಿಳಿಸಿದರು. ‘ಅಲ್ಲದೆ, ಕೇಂದ್ರ ಸರಕಾರವೂ ರಾತ್ರಿ ಅಕ್ಕಿ ಕೊಡುತ್ತೇವೆಂದು ಹೇಳಿ, ಬೆಳಗ್ಗೆ ಅಕ್ಕಿ ಇಲ್ಲ ಎಂದಿದೆ. ಇವರು ನಮ್ಮಿಂದ ತೆರಿಗೆ ತೆಗೆದುಕೊಳ್ಳುವುದಿಲ್ಲವೇ?. ಹಾಗಾದರೆ ನಮ್ಮ ತೆರಿಗೆ ವಾಪಸ್ಸು ನೀಡಿ’ ಎಂದ ಅವರು, ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಿದ್ದು, ಯಾರೂ ಹಸಿವಿನಿಂದ ಇರಬಾರದೆಂರು.ಆದರೂ ಈಗ ಅಕ್ಕಿ ಇಲ್ಲವೆಂದರೆ ಹೇಗೆ?’ ಎಂದು ಪ್ರಶ್ನಿಸಿದರು. ಕೇಂದ್ರ ಸರಕಾರದಿಂದ ನಾವೂ ಅಕ್ಕಿ ಉಚಿತವಾಗಿ ಕೊಡಿ ಎಂದು ಕೇಳುತ್ತಿಲ್ಲ, ಬದಲಾಗಿ, ದರ ಪಾವತಿ ಮಾಡುತ್ತೇವೆ. ಒಂದು…
ಬೆಂಗಳೂರು:– ಕಲಬುರ್ಗಿಯಲ್ಲಿ ಮರಳು ಮಾಫಿಯಾಗೆ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣಕ್ಕೆ ಸಂಬಂಧಿಸಿದಂಕೆ ಗೃಹ ಸಚಿವ ಜಿ ಪರಮೇಶ್ವರ್ ಅವರು ತನಿಖೆಗೆ ಆದೇಶಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಚೌಹಾಣ್ ಎಂಬುವವರನ್ನು ಮರಳು ಮಾಫಿಯಾ ತಡೆಯಲು ಮುಂದಾಗಿದ್ದ ವೇಳೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮರಳು ಮಾಫಿಯಾಗೆ ಹೆಡ್ ಕಾನ್ಸ್ ಟೇಬಲ್ ಬಲಿ ಪ್ರಕರಣವನ್ನು ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಸಚಿವರು ಆದೇಶ ನೀಡಿದ್ದಾರೆ. ಅಲ್ಲದೇ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
ಬೆಂಗಳೂರು ;- ಬೆಳ್ಳಂದೂರು ಐಟಿ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿದ್ದ ಮಾಜಿ ಉದ್ಯೋಗಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನವೀನ್ ಪ್ರಸಾದ್ ಬಂಧಿತ ಆರೋಪಿ. ಜೂನ್ 13 ರಂದು ಬೆಳಗ್ಗೆ ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ ಖಾಸಗಿ ಕಂಪನಿಗೆ ಕರೆ ಮಾಡಿದ್ದ ಅನಾಮಿಕ ‘ಕಂಪನಿಯಲ್ಲಿ ಬಾಂಬ್ ಇಟ್ಟಿದ್ದು ಕೆಲ ಹೊತ್ತಿನಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ’ ಎಂದಿದ್ದ. ಆತಂಕಗೊಂಡು ಕಾರ್ಯಪ್ರವೃತ್ತರಾದ ಕಂಪನಿ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ತಂಡ ದೌಡಾಯಿಸಿ ಮೂಲೆ – ಮೂಲೆಯಲ್ಲಿ ಜಾಲಾಡಿದ ನಂತರ ಅದೊಂದು ಹುಸಿ ಬಾಂಬ್ ಕರೆ ಎಂದು ಖಚಿತವಾಗಿತ್ತು. ಪ್ರಕರಣ ದಾಖಲಿಸಿಕೊಂಡ ಬೆಳ್ಳಂದೂರು ಪೊಲೀಸರು ಬಾಂಬ್ ಕರೆ ಬಂದ ಮೊಬೈಲ್ ನಂಬರ್ ಪರಿಶೀಲಿಸಿದಾಗ ಕಂಪನಿಯ ಮಾಜಿ ಉದ್ಯೋಗಿಯಾಗಿರುವ ನವನೀತ್ ಪ್ರಸಾದ್ ಕರೆ ಮಾಡಿರುವುದು ತಿಳಿದು ಬಂದಿತ್ತು. ಕಂಪನಿ ಸಿಬ್ಬಂದಿ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು:– ಬಿಜೆಪಿ ಹಗರಣಗಳ ತನಿಖೆಯ ವಿಚಾರವಾಗಿ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಹಗರಣಗಳ ಕುರಿತು ಯಾವ ತಂಡಗಳಿಗೆ ತನಿಖೆಗೆ ಕೊಡಬೇಕು. ಈ ನಿಟ್ಟಿನಲ್ಲಿ ಸರ್ಕಾರದಲ್ಲಿ ತೀರ್ಮಾನ ಆಗ್ತಿದೆ. ಬೇರೆ ಬೇರೆ ರೀತಿಯ ಹಗರಣಗಳು ಇವೆ. ಬಿಟ್ ಕಾಯಿನ್ ಪ್ರಕರಣಕ್ಕೆ ಸೈಬರ್ ಎಕ್ಸ್‌ಪರ್ಟ್ ತಂಡ ಬೇಕು. ಕೆಲವು ಕಡೆ ಎಸ್ಐಟಿ ತನಿಖೆ ಮಾಡಲಾಗುವುದು. ಕೆಲವು ಇಲಾಖಾವಾರು ತನಿಖೆ ಆಗುತ್ತೆ. ಕೆಲವೊಂದು ನ್ಯಾಯಾಂಗ ತನಿಖೆ ಆಗುತ್ತೆ. ಯಾವ್ಯಾವ ಹಗರಣ ಯಾವ ರೀತಿಯಲ್ಲಿ ಮಾಡಿದ್ದಾರೆ. ಆ ರೀತಿಯಲ್ಲಿ ತನಿಖೆ ಆಗುತ್ತದೆ” ಎಂದರು. ನಾವು ಜನರಿಗೆ ಗ್ಯಾರಂಟಿ ಕೊಟ್ಟಿದ್ವಿ, ತನಿಖೆ ಮಾಡುಸುತ್ತೇವೆ. ಅದಕ್ಕೆ ನಾವು ಬದ್ಧ. ಬಿಟ್ ಕಾಯಿನ್ ತನಿಖೆ, ಪಿಎಸ್‌ಐ ಹಗರಣ, ಗಂಗಾ ಕಲ್ಯಾಣ ಹಗರಣ, ಕೆಪಿಟಿಸಿಎಲ್ ನೇಮಕಾತಿ ಹಗರಣ, ಸಹಾಯಕ ಪ್ರಾಧ್ಯಾಪಕ ನೇಮಕಾತಿ ಹಗರಣ, ಕೊರೊನಾ ಸಮಯದ ಭ್ರಷ್ಟಾಚಾರ, ಹೆಣದ ಮೇಲೆ ಹಣ ಮಾಡಿದ್ದು, ಈ ಎಲ್ಲ ವಿಚಾರಗಳನ್ನು ತನಿಖೆ ಮಾಡಿಸುತ್ತೇವೆ. ನಾವೇ ಹಿಂದೆ…
ಬೆಂಗಳೂರು ;- ಪ್ರಯಾಣಿಕನ ಸೋಗಿನಲ್ಲಿ ಓಲಾ, ಊಬರ್ ಬುಕ್ ಮಾಡಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಬಾಣಸವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿನಯ್ ಬಂಧಿತ ಆರೋಪಿಯಾಗಿದ್ದು, ಉತ್ತರ ಕರ್ನಾಟಕದ ಭಾಗದ ಓಲಾ, ಊಬರ್ ಚಾಲಕರೇ ಈತನ ಟಾರ್ಗೆಟ್ ಎಂದು ಹೇಳಲಾಗಿದೆ. ಪೊಲೀಸರಿಗೆ ದೂರು ಕೊಡಲ್ಲ ಅಂತ ಓಲಾ ಚಾಲಕನನ್ನ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಎಂಬುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಆರೋಪಿಯು, ಹೆಚ್ ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್, ಎಂ.ಜಿ ರೋಡ್ ಈ ಭಾಗಗಳಿಂದ ಕ್ಯಾಬ್ ಬುಕ್ ಮಾಡಿ, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ. ಚಾಲಕನ ಕಡೆಯಿಂದ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಹಣ ಹಾಕಿಸುವಂತೆಯ ಹೆದರಿಸುತ್ತಿದ್ದ. ಆಸ್ಪತ್ರೆಗೆ ಸೇರಿದ್ದೀನಿ ನನಗೆ ಹಣದ ಅವಶ್ಯಕತೆಯಿದೆ ಎಂದು ಚಾಲಕರ ಕುಟುಂಬಸ್ಥರಿಗೆ ಕರೆ ಮಾಡಿಸುತ್ತಿದ್ದ ಎಂಬುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಇನ್ನೂ ಆರೋಪಿ ಬಂಧನದಿಂದ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ…