ಮಂಡ್ಯ : ಸಕ್ಕರೆನಾಡಿನ ಮದ್ದೂರು ವಿಧಾನಸಭಾ ಕ್ಷೇತ್ರ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಹಾಲಿ – ಮಾಜಿ ಪ್ರಧಾನಿಗಳೇ ಇಲ್ಲಿ ಚುನಾವಣಾ ಪ್ರಚಾರಕ್ಕಿಳಿದಿರುವ ಈ ಕ್ಷೇತ್ರದ ವಿಶೇಷತೆಯಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮತದಾರರಿಗೆ ಬಾರಿ ಬೇಡಿಕೆ ಸೃಷ್ಟಿಯಾಗಿದ್ದು, ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿದೆ. ಕೆಲ ತಿಂಗಳುಗಳ ಹಿಂದಷ್ಟೇ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಬೃಹತ್ ಸಮಾವೇಶ ನಡೆಸಿ ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಹಾಕಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್, ನಟಿ ತಾರಾ ಅವರುಗಳು ಕೆಲ ದಿನಗಳ ಹಿಂದೆ ಭರ್ಜರಿ ಪ್ರಚಾರ ನಡೆಸಿ ಕಮಲ ಪಾಳಯಕ್ಕೆ ಜೀವ ತುಂಬಿದ್ದರು. ಇಂದು ( ಶನಿವಾರ ) ಮದ್ದೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಖುದ್ದು ಅಖಾಡಕ್ಕೆ ಧುಮುಕಿದ್ದು, ಬೃಹತ್ ರೋಡ್ ಶೋ ನಡೆಸಿ ಎಸ್.ಪಿ.ಸ್ವಾಮಿ ಪರ…
Author: Prajatv Kannada
ವಿಜಯನಗರ: ಹರಪ್ಪನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಎಂ.ಪಿ ಲತಾ ಪರ ಕ್ಷೇತ್ರದ ಮತದಾರರ ಒಲವು ಹೆಚ್ಚುತ್ತಲೆ ಇದೆ, ಒಂದು ಕಡೆ ಬಿಜೆಪಿ ಮತ್ತು ಕಾಂಗ್ರೆಸ್ ಘಟಾನು ಘಟಿ ನಾಯಕರನ್ನ ಕರೆಸಿ ರೋಡ್ ಶೋ ಮಾಡ್ತಾ ಇದ್ದಾರೆ,ಇತ್ತ ಕನ್ನಡತಿ ಧಾರವಾಹಿ ಖ್ಯಾತಿಯ ಕಿರುತೆರೆ ನಟಿ ರಂಜನಿ ಎಂ.ಪಿ ಲತಾಗೆ ಸಾಥ್ ಕೊಟ್ಡಿದ್ದು ವಿಶೇಷವಾಗಿತ್ತು. ತಾಲೂಕಿನ ಮತ್ತಿಹಳ್ಳಿ ಎನ್ ಶೀರನಹಳ್ಳಿ, ಆಲದಹಳ್ಳಿ ,ಹಗರಿಶೀರನಹಳ್ಳಿ ಗ್ರಾಮದಲ್ಲಿ ತಾರ ಮೆರಗು ಹೆಚ್ಚಿಸಿತ್ತು,ನಟಿ ರಂಜನಿ ಎಂಪಿ ಲತಾಗೆ ನಿಮ್ಮ ಮತ ನೀಡಬೇಕು ಕ್ಷೇತ್ರದಲ್ಲಿ ಅಭಿವೃದ್ದಿಗೆ ನೀವು ಮತ ಹಾಕಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು, ಒಟ್ನಲ್ಲಿ ಇನ್ನೆನು ನಾಲ್ಕು ದಿನಗಳು ಮತದಾನಕ್ಕೆ ಸಮಯ ಉಳಿದಿದ್ದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಮತದಾರನ ಒಲವು ವ್ಯಕ್ತವಾಗುತ್ತಿದೆ, ಅಲ್ಲದೆ ಸ್ವಾಭಿಮಾನದ ಪ್ರತೀಕವಾಗಿರುವ ಈ ಚುನಾವಣೆಯಲ್ಲಿ ಎಂ.ಪಿ ಲತಾಗೆ ವಿಜಯ ಪ್ರಾಪ್ತಿಯಾಗಲೆಂದು ಕ್ಷೇತ್ರದ ಮತದಾರರು ಹಾರೈಸುತ್ತಿದ್ದ ದೃಶ್ಯ ಕಂಡು ಬಂತು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ವರ್ಷದ ಪದವಿಪೂರ್ವ (NEET-UG) 2023 ಪರೀಕ್ಷೆಗಾಗಿ ಈ ವರ್ಷದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ನಾಳೆ, ಮೇ 7, 2023 ರಂದು ನಡೆಸುತ್ತಿದೆ. 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು (Candidates) ಭಾರತದ ಏಕೈಕ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. NEET UG ಅನ್ನು 13 ಭಾಷೆಗಳಲ್ಲಿ ನಡೆಸಲಾಗುತ್ತದೆ, ಅದರ ಮೂಲಕ MBBS ಸೇರಿದಂತೆ 10 ಕೋರ್ಸ್‌ಗಳಿಗೆ ಪ್ರವೇಶವನ್ನು ನೀಡಲಾಗುತ್ತದೆ. ದೇಶದಾದ್ಯಂತ 499 ಸ್ಥಳಗಳಲ್ಲಿ ಲಿಖಿತ ರೂಪದಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ದಿನಾಂಕ ಮತ್ತು ಅವಧಿ: ನೀಟ್ ಪರೀಕ್ಷೆಯು ಮೇ 7 ರಂದು ಮಧ್ಯಾಹ್ನ 2 ರಿಂದ ಸಂಜೆ 5:20 ರವರೆಗೆ ನಡೆಯಲಿದೆ. ಪರೀಕ್ಷೆಯ ಅವಧಿಯು ಮೂರು ಗಂಟೆ ಇಪ್ಪತ್ತು ನಿಮಿಷಗಳು ಇದರಲ್ಲಿ ಅಭ್ಯರ್ಥಿಗಳು ಒಟ್ಟು 720 ಅಂಕಗಳನ್ನು ಹೊಂದಿರುವ 180 ಪ್ರಶ್ನೆಗಳನ್ನು ಪ್ರಯತ್ನಿಸಬೇಕು. ಪ್ರವೇಶ ಕಾರ್ಡ್/ಹಾಲ್ ಟಿಕೆಟ್: NEET UG 2023 ಗಾಗಿ ಪ್ರವೇಶ ಕಾರ್ಡ್‌ಗಳನ್ನು neet.nta.nic.in ನಿಂದ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಡೌನ್‌ಲೋಡ್…
ಬೆಂಗಳೂರು: ಚುನಾವಣೆ ದಿನ ಸನ್ನಿಹಿತವಾಗುತ್ತಿದ್ದಂತೆ ಮಿನಿ ಬಸ್‌ಗಳು, ಟೆಂಪೋ ಹಾಗೂ ಕಾರುಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಸುಮಾರು 6 ಸಾವಿರಕ್ಕೂ ಹೆಚ್ಚು ವಾಹನಗಳನ್ನು ಈಗಾಗಲೇ ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ. ಮಂಡ್ಯದ ನಾಗಮಂಗಲ, ಚಾಮರಾಜನಗರ, ಮಲೆನಾಡು, ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಭಾಗಗಳಿಂದ ಸಾವಿರಾರು ಕಾರ್ಮಿಕರು ಉದ್ಯೋಗಕ್ಕಾಗಿ ನಗರಕ್ಕೆ ಬಂದು ನೆಲೆಸಿದ್ದಾರೆ. ಮೇ 10ರಂದು ಮತದಾನ ನಡೆಯುವುದರಿಂದ ಆಯಾ ಕ್ಷೇತ್ರದ ಅಭ್ಯರ್ಥಿಗಳು ತಮ್ಮೂರಿನ ಮತದಾರರನ್ನು ಕರೆಸಿಕೊಳ್ಳಲು ಪೈಪೋಟಿಗಿಳಿದಿದ್ದಾರೆ. ಹಾಗಾಗಿ, ಈಗಿನಿಂದಲೇ ಕಾರ್ಮಿಕರನ್ನೆಲ್ಲಒಂದೊಂದು ಗುಂಪಾಗಿ ಸೇರಿಸಿ ಊರಿಗೆ ಬರಲು ಅವರಿಗೆ ಮಿನಿಬಸ್, ಟಿಂಪೋ, ಕಾರುಗಳನ್ನು ಬುಕ್ ಮಾಡುತ್ತಿದ್ದಾರೆ. ಹಲವಾರು ಅಭ್ಯರ್ಥಿಗಳು ಕಾರ್ಮಿಕರಿರುವ ಸ್ಥಳಕ್ಕೆ ಭೇಟಿ ನೀಡಿ, ತಾವೇ ಅವರನ್ನು ಊರಿಗೆ ಕರೆಸಿಕೊಳ್ಳುವುದರೊಂದಿಗೆ ಹೋಗುವ, ಬರುವ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ. ಬೆಂಗಳೂರಿನಿಂದ ರಾಜ್ಯದ ನಾನಾ ಜಿಲ್ಲೆಗಳಿಗೆ ಪ್ರತಿದಿನ 2 ಸಾವಿರದಿಂದ 2,500 ಖಾಸಗಿ ಬಸ್‌ಗಳು ಸಂಚರಿಸುತ್ತವೆ. ಮಲೆನಾಡು, ಕರಾವಳಿ, ಮಧ್ಯಕರ್ನಾಟಕ ಭಾಗಗಳಿಗೆ ಹೆಚ್ಚಿನ ಬಸ್‌ಗಳು ಸಂಚರಿಸುತ್ತವೆ. ಚುನಾವಣೆ ಇರುವುದರಿಂದ ಅಕ್ಕಪಕ್ಕದ ಜಿಲ್ಲೆಗಳ…
ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ (Congress Manifesto) ಬಜರಂಗದಳ ಸಂಘಟನೆಯನ್ನು (Bajrang Dal) ನಿಷೇಧ ಮಾಡುವುದಾಗಿ ಭರವಸೆ ಕೊಟ್ಟಿರುವುದೇ, ಬಿಜೆಪಿ ಗೆ ಮತ್ತಷ್ಟು ಬಲ ಬರಲು ಕಾರಣ ಆಗಿದೆ ಎಂಬ ವಿಚಾರ ಇದೀಗ ಗೊಂದಲ ಸೃಷ್ಟಿ ಮಾಡಿದೆ. ಮುಸ್ಲಿಂ ಮತಗಳನ್ನೇ ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಜೊತೆ ಬಜರಂಗದಳ ಸಂಘಟನೆಯನ್ನು ಹೋಲಿಸಿ ನಿಷೇಧಿಸಲು ಮುಂದಾಗಿದೆ. ಆ ಪರಿಣಾಮ ಮುಸ್ಲಿಂ ಮತಗಳನ್ನು ಕಸಿದುಕೊಳ್ಳಲು ಬಜರಂಗದಳ ನಿಷೇಧ ವಿಷಯವನ್ನು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಳ್ಳಾಗಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಇನ್ನು ಬಜರಂಗದಳ ಸಂಘಟನೆಯನ್ನು (Bajrang Dal) ನಿಷೇಧದ ಆಶ್ವಾಸನೆಯ ಬೆನ್ನಲ್ಲೇ ಕರ್ನಾಟಕದಲ್ಲಿ ಬಿಜೆಪಿ (BJP) ಮತ್ತು ಹಿಂದೂಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದಲ್ಲದೆ, ರಾಜ್ಯದೆಲ್ಲೆಡೆ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕುವ ಮೂಲಕ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹನುಮಾನ್ ಚಾಲಿಸ್ ಪಠಣದಂತಹ ಕಾರ್ಯಕ್ರಮ ಆಯೋಜಿಸಿ ಕಾಂಗ್ರೆಸ್ ನಡೆಯನ್ನು ಹಿಂದೂಪರ ಕಾರ್ಯಕರ್ತರು ವಿರೋಧಿಸುತ್ತಿದ್ದಾರೆ. ಅಲ್ಲದೆ…
ಬೆಂಗಳೂರು: ಮನೆ ಬಾಗಿಲಿಗೆ ಮೋದಿ ಪರಿಕಲ್ಪನೆಯ ಅಡಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ರೋಡ್ ಶೋ (Road Show) ಆಯೋಜನೆಗೊಂಡಿದೆ. ಬೆಂಗಳೂರು ರೋಡ್ ಶೋನಲ್ಲಿ ಕೇಂದ್ರ ಸರ್ಕಾರದ ಸಾಧನೆ ಹಾಗೂ ಬೆಂಗಳೂರಿಗೆ (Bengaluru) ಸರ್ಕಾರ ನೀಡಿದ ಕೊಡುಗೆಗಳ ಫ್ಲೆಕ್ಸ್ ಅಳವಡಿಸಲಾಗಿದೆ. ನಾಯಕರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕುವುದು ಸಾಮಾನ್ಯ. ಆದರೆ ಈ ರೋಡ್ ಶೋನಲ್ಲಿ ಮೋದಿಗೆ ಸ್ವಾಗತ ಕೋರುವ ಬದಲಾಗಿ ಕೇಂದ್ರ, ರಾಜ್ಯ ಸರ್ಕಾರದ ಸಾಧನೆಯ ಫ್ಲೆಕ್ಸ್ ಅಳವಡಿಸಿ ಮತ ಬೇಟೆಗೆ ಬಿಜೆಪಿ ಮುಂದಾಗಿದೆ. ಮೋದಿ ರೋಡ್ ಶೋ ನಡೆಸುವ ರಸ್ತೆಯುದ್ಧಕ್ಕೂ ಬೆಂಗಳೂರಿಗೆ ನೀಡಿದ ಕೊಡುಗೆಗಳ ವಿವರ ಇರುವ ಫ್ಲೆಕ್ಸ್ ಹಾಕಲಾಗಿದೆ. ಶನಿವಾರ ಬೆಳಗ್ಗೆ 10ಕ್ಕೆ ಆರಂಭವಾಗಿ ಮಧ್ಯಾಹ್ನ 12:30 ಗಂಟೆಯವರೆಗೆ 26.5 ಕಿಲೋ ಮೀಟರ್ ರೋಡ್ ಶೋ ನಡೆಯಲಿದೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಹಿನ್ನೆಲೆ ರಾಜ್ಯದಲ್ಲಿ ಅಧಿಕಾರಕ್ಕೇರಲು ಕಾಂಗ್ರೆಸ್ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ(Sonia Gandhi), ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇಂದು(ಮೇ.6) ಕೂಡ ವಿವಿಧ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ, ರೋಡ್ ಶೋ ನಡೆಸಲಿದ್ದಾರೆ. ಹಾಗಿದ್ದರೆ ಯಾವ ನಾಯಕರು ಯಾವ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ? ಇಲ್ಲಿದೆ ಮಾಹಿತಿ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು(ಮೇ.6) ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಯಮಕನಮರಡಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಮಧ್ಯಾಹ್ನ 2 ಕ್ಕೆ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ , ಬಳಿಕ ಸಂಜೆ 4 ಕ್ಕೆ ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ ಪರ ಮತಯಾಚನೆ ನಡೆಸಲಿದ್ದಾರೆ. ಹುಬ್ಬಳ್ಳಿಗೆ ಬರಲಿದ್ದಾರೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಚುನಾವಣೆ ಘೋಷಣೆಯಾದ…
ಬೆಂಗಳೂರು: ಚುನಾವಣಾ ಪ್ರಚಾರದ ಅಂತಿಮ ಘಟ್ಟದಲ್ಲಿ ಮತಶಿಕಾರಿ ನಡೆಸಲು ವಾರದ ಕೊನೆಯಲ್ಲಿ ಮೂರನೇ ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ (Narendra Modi) ಬಂದಿದ್ದಾರೆ. ಬೆಂಗಳೂರಿನ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ (Road Show) ಪ್ರಾರಂಭಗೊಂಡಿದೆ. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 26.5 ಕಿ.ಮೀ ನಡೆಸುತ್ತಿದ್ದಾರೆ. ಬ್ರಿಗೇಡ್ ಮಿಲೇನಿಯಂ ರಸ್ತೆಯಿಂದ ಮಲ್ಲೇಶ್ವರಂ 18ನೇ ಕ್ರಾಸ್ ವರೆಗೆ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯುತ್ತಿದೆ. ತೆರೆದ ವಾಹನದಲ್ಲಿ ಮೋದಿ ಅಬ್ಬರದ ರೋಡ್ ಶೋ ನಡೆಯುತ್ತಿದ್ದು, ಸಹಸ್ರಾರು ಜನರತ್ತ ಮೋದಿ ಕೈಬೀಸುತ್ತಿದ್ದಾರೆ. ರೇಷ್ಮೆಯ ಕೇಸರಿ ಮೈಸೂರು ಪೇಟಾದಲ್ಲಿ ಕಂಗೊಳಿಸುತ್ತಿದ್ದಾರೆ. ಪಿಸಿ ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡುತ್ತಿದ್ದಾರೆ. ಮೋದಿ ರೋಡ್ ಶೋಗೆ ಕಲಾತಂಡಗಳು ಮೆರುಗು ತಂದುಕೊಟ್ಟಿದೆ. ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮುಗಿಲು ಮುಟ್ಟಿದೆ. ಹೂಮಳೆ ಸುರಿಸಿ ಸಂಭ್ರಮಿಸಿದ್ದಾರೆ. ಮೋದಿ ಮೋದಿ ಜೈಕಾರ ಘೋಷಣೆ ಜೋರಾಗಿದೆ. ಮೋದಿ ಸಂಚರಿಸುವ ರಸ್ತೆಗಳು: ಬ್ರಿಗೇಡ್ ಮಿಲೇನಿಯಂ ರೋಡ್, ಟಿಎಂಸಿ ಲೇಔಟ್, ಮಾರೇನಹಳ್ಳಿ ರೋಡ್, ಜೆಪಿನಗರ 5ನೇ ಹಂತ,…
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಮತ್ತೋರ್ವ ಜೋರಾಗಿದೆ. ಅದರಲ್ಲೂ ಮೋದಿ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಓಡಾಡುತ್ತಿದ್ದಾರೆ. ಮೇ 8ರಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದರಿಂದ ಮೋದಿ, ಕೊನೆ ಕ್ಷಣದಲ್ಲಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ಮಾಡಲಿದ್ದಾರೆ. 28 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬೆಂಗಳೂರು ನಗರದಲ್ಲಿ ಎರಡು ಹಂತಗಳಲ್ಲಿ ಸುಮಾರು 30ರಿಂದ 35 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಇಂದು ಹಾಗೂ ಮೇ 07(ಭಾನುವಾರ) ರೋಡ್ ಶೋ ಇರುವುದರಿಂದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಮಾರ್ಗ ಸೂಚಿ ಬಿಡುಗಡೆ ಮಾಡಿದ್ದು, ಇಂದು ಒಟ್ಟು ಮೂವತ್ತನಾಲ್ಕು ರಸ್ತೆಗಳನ್ನು ಬಳಸದಂತೆ ಸೂಚಿಸಿದ್ದಾರೆ. ಯಾವೆಲ್ಲ ರಸ್ತೆಗಳು ಬಳಸಬಾರದು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನಲೆಯಲ್ಲಿ ಒಟ್ಟು 34 ರಸ್ತೆಗಳನ್ನು ಬಳಸದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಚಿಸಿದ್ದು, ಇಂದು (ಶನಿವಾರ) ಬೆಳಗ್ಗೆ 8…
ಕೋಲ್ಕತ್ತಾ: ಪ್ರೀತಿಯಿಂದ ಸಾಕಿದ್ದ ಗಿಳಿ (Parrot) ಮೃತಪಟ್ಟ ಹಿನ್ನೆಲೆಯಲ್ಲಿ ಕೃತಜ್ಞತೆಯ ಸಂಕೇತವಾಗಿ ವ್ಯಕ್ತಿಯೊಬ್ಬ ಹಿಂದೂ ಧಾರ್ಮಿಕ ವಿಧಿಗಳ ಪ್ರಕಾರ ಅಂತಿಮ ವಿಧಿಗಳನ್ನು ನೆರವೇರಿಸಿದ ಘಟನೆ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದಿದೆ. ಪಶ್ಚಿಮ ಬಂಗಾಳದ ಹೆಬ್ರಾದ ಆಯ್ರಾ ಗ್ರಾಮದ ನಿವಾಸಿ ಮಜುಂದಾರ್ ಎಂಬಾತ ಕಳೆದ 25 ವರ್ಷಗಳಿಂದ ಗಿಳಿಯೊಂದನ್ನು ಸಾಕಿದ್ದ. ಅದಕ್ಕೆ ಪ್ರೀತಿಯಿಂದ ಭಕ್ತೋ ಎಂದು ಹೆಸರಿಟ್ಟು, ಅದನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದ. ಆದರೆ ಅದು ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಸಾವನ್ನಪ್ಪಿದೆ. ಪ್ರೀತಿಯ ಗಿಳಿಯನ್ನು ಮಗುವಿನಂತೆ ನೋಡಿಕೊಂಡಿದ್ದ ಹಿನ್ನೆಲೆಯಲ್ಲಿ ಮಜುಂದಾರ್ ಕುಟುಂಬವು ಹಿಂದೂ ಸಂಪ್ರದಾಯಗಳ ಪ್ರಕಾರ ಅದರ ಅಂತ್ಯಕ್ರಿಯೆಯನ್ನು ನಡೆಸಲು ನಿರ್ಧರಿಸಿತ್ತು. ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಸಹಾಯ ಮಾಡಿದ್ದರು. ಅದಾದ ಬಳಿಕ ಮಜುಂದಾರ್ ಕುಟುಂಬವು ಅರ್ಚಕರನ್ನು ಕರೆದು ಹಿಂದೂ ಸಂಪ್ರದಾಯದಂತೆ ಮನೆಯಲ್ಲಿ ತಮ್ಮ ಪ್ರೀತಿಯ ಸಾಕು ಗಿಳಿಯ ಅಂತಿಮ ವಿಧಿಗಳನ್ನು ನೆರವೇರಿಸಿದರು. ನಂತರ, ಪಾರ್ಥಿವ ಶರೀರವನ್ನು ನೈಹಟಿಯ ಹೂಗ್ಲಿ ನದಿ ಘಾಟ್‍ಗೆ ಕೊಂಡೊಯ್ಯಲಾಯಿತು. ಅಲ್ಲಿ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು. ಈ ವೇಳೆ 25 ಜನರನ್ನು ಕರೆಸಿ ಊಟ ಹಾಕಿಸಿದ್ದಾರೆ.