Author: Prajatv Kannada

ಕೋಲಾರ: ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ವ್ಯಂಗ್ಯವಾಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ (Narendra Modi) ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀದಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು. 7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್‍ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. 84 ವರ್ಷದ ಮಹಾತ್ಮ ಗಾಂಧಿಯವರನ್ನು…

Read More

ಮಂಡ್ಯ: ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ (Muslim Reservation) ನೀಡಿದ್ದು ನಾನೇ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Deve Gowda) ಹೇಳಿದರು. ಜಿಲ್ಲೆಯ ಕೆ.ಆರ್​.ಪೇಟೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆಗೆ ನೀರು ತಂದು ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದರು. ಅಲ್ಲದೆ, ಜೆಡಿಎಸ್ (JDS)​ ಮುಗಿದು ಹೋಗಿದೆ ಅಂತಾ ಹೇಳಿದವರಿಗೂ ಟಾಂಗ್ ಕೊಟ್ಟರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ಮಂಡ್ಯದ ಎಲ್ಲಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಿಸುವಂತೆ ಮನವಿ ಮಾಡಿದರು. ಕಾಶ್ಮೀರಕ್ಕೆ ಹೋಗಬಾರದು ಎಂದು ಹೇಳಿದ್ದರೂ ನಾನು 3 ಬಾರಿ ಹೋಗಿದ್ದೆ. ಆದರೆ ನನ್ನನ್ನು ಯಾವ ಮುಸ್ಲಿಮರೂ ಸಾಯಿಸಲಿಲ್ಲ. ಮುಸ್ಲಿಂ ಬಾಂಧವರು ಯಾವಾಗಲೂ ನನ್ನ ಜೊತೆಯೇ ಇದ್ದಾರೆ ಎಂದು ದೇವೇಗೌಡ ಹೇಳಿದರು. ಬಿಜೆಪಿಯ ಕೆಸಿ ನಾರಾಯಣಗೌಡ ಅವರಿಗೆ ವಲಸೆ ರಾಜಕಾರಣಿ ಎಂದು ಟಾಂಗ್ ಕೊಟ್ಟ ದಳಪತಿ, ಜೆಡಿಎಸ್ ಮುಗಿದೆ ಹೋಯ್ತು ಅಂತ ಇತ್ತೀಚೆಗೆ ಒಬ್ಬರು ಹೇಳುತ್ತಿದ್ದರು. ಅವರ ಮಾತನ್ನ ಕೇಳಿದರೆ ನನ್ನ ರಕ್ತ ಕುದಿಯುತ್ತದೆ. ಏನು ಜೆಡಿಎಸ್ ಮುಗಿದೆ ಹೋಯಿತೇ? ನನ್ನ ಮಂಡ್ಯ ಜಿಲ್ಲೆಯಲ್ಲಿ 7 ಸ್ಥಾನದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲೇಬೇಕು…

Read More

ಮೈಸೂರು: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ್ರೆ ತಾನೇ ಬಜರಂಗದಳವನ್ನು (Bajarang Dal) ಬ್ಯಾನ್ ಮಾಡೋದು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಬಿಜೆಪಿ (BJP) ಅಭ್ಯರ್ಥಿ ವಿಜಯಶಂಕರ್ ಪರವಾಗಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬಜರಂಗದಳವನ್ನು ಬ್ಯಾನ್ ಮಾಡಲು ಅವರಿಗೆ ಅವಕಾಶ ಕೊಡುವವರು ಯಾರು? ಬಜರಂಗದಳವು ದೇಶಭಕ್ತಿಯ ಸಂಘಟನೆ. ಹಿಂದೂ ಪರ ಕಾಳಜಿ ಇರುವ ಸಂಘಟನೆ. ಒಂದು ಸಂಘಟನೆ ಬಗ್ಗೆ ಕಾಂಗ್ರೆಸ್ ಮನಬಂದಂತೆ ಮಾತನಾಡಿದರೆ ರಾಜ್ಯದ ಜನರು ಬುದ್ಧಿ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಈ ಚುನಾವಣೆಯಲ್ಲಿ (Election)ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರುವುದರಿಂದ ಬ್ಯಾನ್ ಮಾಡುವ ವಿಚಾರ ಉದ್ಭವ ಆಗಲ್ಲ. ಕಾಂಗ್ರೆಸ್ ಪಕ್ಷದಿಂದ ಯಾವ ನಿರೀಕ್ಷೆ ಮಾಡಲು ಆಗುತ್ತದೆ? ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿರುವಾಗ ಎಷ್ಟು ಹಿಂದೂ ಯುವಕರ ಹತ್ಯೆ ಆಯಿತು. ಅವರಿಗೆ ವಿನಾಶ ಕಾಲೇ ವಿಪರೀತ ಬುದ್ಧಿ ಇರುವುದರಿಂದ ರಾಜ್ಯದ ಜನರು ಅವಕಾಶ ಮಾಡಿಕೊಡುವುದಿಲ್ಲ ಎಂದರು. ವರುಣಾದಲ್ಲಿ…

Read More

ಶಿವಮೊಗ್ಗ: ಚುನಾವಣೆಯ ರಂಗು ಜೋರಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಅವರು ಕಾಂಗ್ರೆಸ್ ಪರ ಪ್ರಚಾರ ಮಾಡ್ತಿದ್ದಾರೆ. ‘ಕೈ’ಗೆ ಶಿವಣ್ಣ ಸಾಥ್ ಕೊಡ್ತಿದ್ದಂತೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಇದೀಗ ಈ ಬಗ್ಗೆ ನಟ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣ ಅವರು ಸಿದ್ದರಾಮಯ್ಯ ಪರ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಗೀತಾ ಶಿವರಾಜ್‌ಕುಮಾರ್- ಮಧು ಬಂಗಾರಪ್ಪ ಜೊತೆಗೂಡಿ ಚುನಾವಣಾ ಅಖಾಡದಲ್ಲಿ ಶಿವಣ್ಣ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗ ಬಿಜೆಪಿ ನಾಯಕರ (Bjp)  ಅಸಮಾಧಾನಕ್ಕೆ ನಟ ರಿಯಾಕ್ಟ್ ಮಾಡಿದ್ದಾರೆ. ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಇನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  (Dr Shivaraj Kumar)ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದಿದ್ದಾರೆ. ಮೊನ್ನೇ ಅಷ್ಟೇ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಜೊತೆ ವೇದಿಕೆ ಹಂಚಿಕೊಂಡಿದ್ದ ಶಿವಣ್ಣ, ನಾನು ರಾಹುಲ್…

Read More

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಂಭ್ರಮ, ಸಡಗರದಿಂದ ನಡೆಯಿತು. ಈ ಬಾರಿ ವಿಶೇಷವಾಗಿ 52 ಜೋಡಿಗಳು ಅಂತರ್ಜಾತಿ ವಿವಾಹವಾಗಿದ್ದಾರೆ. ಮೇ.3ರ ಸಂಜೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ದೇವಾಲಯದ ಸಮೀಪದ ಅಮೃತವರ್ಷಿಣಿ ಸಭಾಭವನದಲ್ಲಿ 201 ಜೋಡಿ ವಧೂ-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ಮಂಗಳವಾರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ(ಡಾ.ಹೆಗ್ಗಡೆ ಅವರ ನಿವಾಸದಲ್ಲಿ) ವಧುವಿಗೆ ಸೀರೆ ಮತ್ತು ರವಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಿದರು. ಬುಧವಾರ ಸಂಜೆ ಭವ್ಯ ಮೆರವಣಿಗೆಯಲ್ಲಿ ವಧು- ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ.ಸುರೇಂದ್ರ ಕುಮಾರ್‌, ಹರ್ಷೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಸುಪ್ರಿಯ ಹರ್ಷೇಂದ್ರ ಕುಮಾರ್‌, ಶ್ರದ್ದಾ ಅಮಿತ್‌, ಶ್ರುತಾಜಿತೇಶ್‌, ಎಂಎಲ್ಸಿ ಪ್ರತಾಪಸಿಂಹ ನಾಯಕ್‌, ಹೆಗ್ಗಡೆ ಕುಟುಂಬಸ್ಥರು ಮತ್ತು ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು. 6.40 ರ ಗೋಧೂಳಿ ಲಗ್ನ…

Read More

ಇಂದು ದೇಶದಾದ್ಯಂತ ಸಾಕಷ್ಟು ವಿವಾದ ಹುಟ್ಟುಹಾಕಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಕಥಾವಸ್ತುವಿನ ಕಾರಣದಿಂದಾಗಿ ವಿವಾದಕ್ಕೀಡಾಗಿರುವ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದಿ ಕೇರಳ ಸ್ಟೋರಿ ಆತಂಕವಾದದ ಕಥಾವಸ್ತುವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ. ಹಲವು ವರ್ಷಗಳಿಂದ ಆತಂಕವಾದದ ಸ್ವರೂಪ ಬದಲಾಗಿದೆ’ ಎಂದಿದ್ದಾರೆ. ‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಆತಂಕವಾದದ ಮತ್ತೊಂದು ಮುಖವನ್ನು ಪರಿಚಯಿಸಲಾಗಿದೆ. ಇದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, ಕಾಂಗ್ರೆಸ್ ಪಕ್ಷ ಈ ಕುರಿತು ಮಾತನಾಡದೇ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಆತಂಕವಾದದ ಪರವಾಗಿಯೇ ಮಾತನಾಡುತ್ತಿದೆ’ ಎಂದರು. ಅಲ್ಲದೆ ಕೇರಳ ರಾಜ್ಯ ಒಂದು ಸುಂದರ ರಾಜ್ಯ ಅಲ್ಲಿ ಪರಿಶ್ರಮಿಗಳು ಇದ್ದಾರೆ ಎಂದು ಕೇರಳವನ್ನು ಹೊಗಳಿದರು. ದೇಶದಾದ್ಯಂತ ಇಂದು ‘ದಿ ಕೇರಳ ಸ್ಟೋರಿ’ ಸಿನಿಮಾ ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.  ಕೇರಳದಲ್ಲಿ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದಾರೆ.

Read More

ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಸಿನಿಮಾಗಳ ಜೊತೆಗೆ ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಸದ್ಯ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್ 2’ ಸಿನಿಮಾ ಸೂಪರ್ ಹಿಟ್ ಆಗಿದ್ದು ಇದರ ಜೊತೆಗೆ ಸ್ಮಾಲ್ ಸ್ಕ್ರೀನ್ ನಲ್ಲಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ನಿರೂಪಣೆಯನ್ನೂ ಮಾಡುತ್ತಿದ್ದಾರೆ. ಈ ಮಧ್ಯೆ ರಮೇಶ್ ಅರವಿಂದ್ ರಾಜಕೀಯಕ್ಕೆ ಬರುತ್ತಾರಾ ಎಂಬ ಮಾತಿಗೆ ನಟ ಸ್ಪಷ್ಟನೆ ನೀಡಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕನಾಗಿ ಗುರುತಿಸಿಕೊಂಡಿರುವ ರಮೇಶ್ ಅರವಿಂದ್ ಯಾವಾಗಲೂ ವಿಭಿನ್ನ ಸಿನಿಮಾಗಳ ಮೂಲಕ ಖ್ಯಾತಿ ಘಳಿಸಿದ್ದಾರೆ. ತಮ್ಮ ಮುಂದಿನ ನಡೆ ಸಿನಿಮಾ- ರಾಜಕೀಯ ಎಂಟ್ರಿ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ವೀಕೆಂಡ್ ವಿತ್ ರಮೇಶ್ ಶೋ ಮುಗಿದ ಬಳಿಕ ಹೊಸ ಸಿನಿಮಾ ಮಾಡುತ್ತೇನೆ. ಕರೋನಾ ಸಮಯದಲ್ಲಿ ಮೂರು ಕಥೆಗಳನ್ನ ಮಾಡಿಕೊಂಡಿದ್ದೇನೆ. ಅವುಗಳಲ್ಲಿ ಒಂದು ಕಥೆಯನ್ನ ಪ್ರಾರಂಭಿಸುವ ಆಲೋಚನೆಯಿದೆ ಎಂದು ರಮೇಶ್ ಹೇಳಿದ್ದಾರೆ. ಇದೀಗ ಚುನಾವಣೆ ಕಣ ಜೋರಾಗಿರುವ ಕಾರಣ, ಸ್ಟಾರ್ ನಟ- ನಟಿಯರು ಪಕ್ಷಗಳ ಪರ ಪ್ರಚಾರ ಮಾಡ್ತಿದ್ದಾರೆ.…

Read More

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಲ್ಲಿ ಬಿಜೆಪಿ (BJP) ಸರ್ಕಾರದ ವಿರುದ್ಧ ಮತ್ತೊಂದು ಭ್ರಷ್ಟಾಚಾರದ ಅಸ್ತ್ರವನ್ನು ಕಾಂಗ್ರೆಸ್‌ (Congress) ಪ್ರಯೋಗಿಸಿದೆ. ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಪ್ರಕಟಿಸಿ, ಡಬಲ್‌ ಎಂಜಿನ್‌ ಸರ್ಕಾರವನ್ನು ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಕಾಂಗ್ರೆಸ್‌ ವ್ಯಂಗ್ಯ ಮಾಡಿದೆ. ವಿವಿಧ ಇಲಾಖೆಗಳ ನೇಮಕಾತಿ ದರ ಪ್ರಕಟಿಸಿ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು‌ ಕೊಟ್ಟಿದೆ. 40 ಪರ್ಸೆಂಟ್ ಸರ್ಕಾರದಲ್ಲಿ ಎಲ್ಲವೂ ಮಾರಾಟವಾಗಿದೆ. ನೇಮಕಾತಿಗಳಲ್ಲಿ ಅಕ್ರಮ, ಸಿಎಂ ಸ್ಥಾನಕ್ಕೂ ದರ ನಿಗದಿಯಾಗಿದೆ ಎಂದು ಕುಹಕವಾಡಿದೆ. ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಎಐಸಿಸಿ ನಾಯಕರು ಸಹ ರೇಟ್‌ ಕಾರ್ಡ್‌ ಬಿಡುಗಡೆ ಮಾಡಿ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಪವನ್ ಖೇರ, ಇಂದು ಅತ್ಯಂತ ಮಹತ್ವದ ದಿನ. ಬಿಜೆಪಿ ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಪ್ರಾರಂಭ ಮಾಡಿದೆ. ಆದರೆ ಕರ್ನಾಟಕದ ಜನ ಮಾತ್ರ ಪದೇ ಪದೇ ಎಲ್ಲ ವಿಚಾರಗಳನ್ನು ನೆನಪಿನಲ್ಲಿ…

Read More

ಬೆಂಗಳೂರು: ಪ್ರಧಾನಿ ಮೋದಿ ಅವರು ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Opposition leader Siddaramaiah) ಆರೋಪಿಸಿದ್ದಾರೆ. ಈ ಸಂಬಂಧ ಶಿವಾನಂದ ವೃತ್ತದ ನಿವಾಸದಲ್ಲಿ ಪ್ರಕಟಣೆ ಹೊರಡಿಸಿದ ಅವರು, ಮೋದಿ ಸಹಿತ ಬಿಜೆಪಿ ನಾಯಕರು ‘ಕರ್ನಾಟಕವನ್ನು ನಂಬರ್ ಒನ್ ಮಾಡುತ್ತೇವೆ’ ಎನ್ನುತ್ತಾರೆ. ಮೋದಿಯವರು ಹೋದ ಎಲ್ಲ ರಾಜ್ಯಗಳಲ್ಲೂ ಹೀಗೆ ಹೇಳುತ್ತಾರೆ. ಇಷ್ಟಕ್ಕೂ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿಯೆ ಕರ್ನಾಟಕವು ಅನೇಕ ವಿಚಾರಗಳಲ್ಲಿ ನಂಬರ್ ಒನ್ ಆಗಿತ್ತು. ಕೈಗಾರಿಕೆ, ಸೇವಾ ವಲಯಗಳಲ್ಲಿ ನಾವು ಮುಂದೆಯೇ ಇದ್ದೆವು. ಈ ಪ್ರತಿಷ್ಠೆಯನ್ನು ಹಾಳು ಮಾಡಿದ್ದೆ ಬಿಜೆಪಿ ಸರಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೆ ಸ್ಥಾನದಲ್ಲಿದೆ. ಎಪ್ರಿಲ್ ತಿಂಗಳ ಜಿಎಸ್‍ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ 33.19ಸಾವಿರ ಕೋಟಿ ರೂ. ಸಂಗ್ರಹಿಸಿದ್ದರೆ, ಕರ್ನಾಟಕ 14.59ಸಾವಿರ ಕೋಟಿ ರೂ.ಸಂಗ್ರಹಿಸಿದೆ. ತಮಿಳುನಾಡು 11.55, ಗುಜರಾತ್ 11.72 ಸಾವಿರ ಕೋಟಿ ರೂ.ಸಂಗ್ರಹಿಸಿವೆ. ರಾಜ್ಯದಿಂದ ಈ ವರ್ಷ 2.4-2.5 ಲಕ್ಷ ಕೋಟಿ ರೂ.ಗಳಷ್ಟು ಆದಾಯ ತೆರಿಗೆ ಸಂಗ್ರಹವಾಗುವ ನಿರೀಕ್ಷೆಯಿದೆ. ಈ ಎರಡರಿಂದಲೆ…

Read More

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ(Sonia Gandhi) ಅವರು ಮೇ 6ರಂದು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಅಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹೈಕಮಾಂಡ್‌ನ ಹಲವು ನಾಯಕರು ರಾಜ್ಯದ ವಿವಿಧ ಭಾಗಗಳಲ್ಲಿ ರಾಜ್ಯ ನಾಯಕರುಗಳೊಂದಿಗೆ ಭಾಗವಹಿಸಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದರ ಜತೆಗೆ ಪಕ್ಷದ ಸ್ಟಾರ್‌ ಪ್ರಚಾರಕರಲ್ಲಿ ಪ್ರಮುಖರಾದ ಸೋನಿಯಾ ಗಾಂಧಿ ಅವರು ಇದೇ ಮೊದಲ ಬಾರಿಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಶನಿವಾರ ಬೆಳಗ್ಗೆ ದೆಹಲಿಯಿಂದ ರಾಜ್ಯಕ್ಕೆ ಆಗಮಿಸಲಿರುವ ಅವರು ಹುಬ್ಬಳ್ಳಿಯಲ್ಲಿ ಪಕ್ಷ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಬಳಿಕ ಸಂಜೆ ದೆಹಲಿಗೆ ವಾಪಸ್ಸಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

Read More