ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸಚಿವ ಸಂಪುಟ ನಿರ್ಧಾರ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಲೋಕಸಭೆ, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವಿಚಾರ ತೆಗೆದುಕೊಂಡು ಹೋಗುತ್ತೇವೆ. ಜನರ ಮುಂದೆ ಈ ವಿಚಾರ ಇಡುತ್ತೇವೆ. ನಿಮಗೆ ದೇಶ ಭಕ್ತಿ ಇದ್ದರೆ, ತಾಕತ್ ಇದ್ದರೆ ಅಂಬೇಡ್ಕರ್ ಕಾಂಗ್ರೆಸ್ ಬಗ್ಗೆ ಏನು ಹೇಳಿದರು ಅದನ್ನು ಪ್ರಕಟಿಸಿ. ಸಾವರ್ಕರ್ ಪಾಠ ಓದಿದರೆ ಮಕ್ಕಳು ದೇಶ ದ್ರೋಹಿ ಆಗುತ್ತಾರಾ? ಸಾವರ್ಕರ್ ಹೇಡಿ ಅಲ್ಲ, ಕಾಂಗ್ರೆಸ್ನವರು ರಣ ಹೇಡಿಗಳು. ಮಾತ್ರವಲ್ಲದೆ, ದೇಶದ್ರೋಹಿಗಳು. ಟಿಪ್ಪು ಪಾಠ ಕಾಂಗ್ರೆಸ್ನವರಿಗೆ ಬೇಕು. ಏಕೆಂದರೆ ತುಷ್ಟಿಕರಣ ಮಾಡಲು ಎಂದು ಆಕ್ರೋಶ ಹೊರಹಾಕಿದರು.
Author: Prajatv Kannada
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೌಟಿಂಬಿಕ ಕಲಹದ ಹಿನ್ನಲೆ ನಡೆಯೋ ಕೊಲೆಗಳ ಸಂಖ್ಯೆ ಹೆಚ್ಚಾಗ್ತಿದೆ.. ಕೆಲ ದಿನಗಳ ಹಿಂದಷ್ಟೇ ತಾಯಿಯನ್ನೇ ಕೊಲೆ ಮಾಡಿದ ಮಗಳು ಮೃತದೇಹವನ್ನ ಪೊಲೀಸ್ ಠಾಣೆಗೆ ತಂದಿದ್ಲು.. ಆದ್ರೀಗ ಆ ಘಟನೆ ಮಾಸೊ ಮುನ್ನವೇ ಮತ್ತೊಂದು ಕೊಲೆ ನಡೆದಿದ್ದು, ತಂದೆಯನ್ನೇ ಹತ್ಯೆ ಮಾಡಿದ ಮಗ ಪೊಲೀಸರ ಮುಂದೆ ಹೈಡ್ರಾಮಾ ಮಾಡಿ ಕೊನೆಗೂ ಲಾಕ್ ಆಗಿದ್ದಾನೆ. ಬೆಂಗಳೂರಿನಲ್ಲಿ ಇತ್ತಿಚಿಗೆ ಸಂಬಂಧಗಳಿಗೆ ಬೆಲೆಯೇ ಇಲ್ಲವೇನೋ ಅನ್ನೊ ಮಟ್ಟಿಗೆ ವಾತಾವರಣ ಸೃಷ್ಟಿಯಾಗಿದೆ.. ಒಂದಲ್ಲ ಒಂದು ರೀತಿ ಗಲಾಟೆ ತಗಾದೆಗಳ ನಡುವೆ ಸಾಲು ಸಾಲು ಹಲ್ಲೆ ಕೊಲೆ ಪ್ರಕರಣಗಳು ನಡೆಯುತಿದ್ದು, ಇದರ ನಡುವೆ ಇಂದು ತಂದೆಯನ್ನೇ ಕೊಲೆ ಮಾಡಿದ ಮಗ ಕೆಲ ಗಂಟೆ ಪೊಲೀಸರ ಮುಂದೆ ನಾಟಕವಾಡಿ ತಗಲಾಕಿಕೊಂಡಿದ್ದಾನೆ.. ಈತನೇ ನೋಡಿ ತಂದೆಯನ್ನೇ ಕೊಲೆ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದ ಪುತ್ರ.. ಹೆಸರು ಚೇತನ್.. ಮಾಗಡಿರಸ್ತೆಯ ಗೊಪಾಲಪುರದ ಎರಡನೇ ಕ್ರಾಸ್ ನಲ್ಲಿ ತನ್ನ ತಂದೆ, ತಾಯಿ ಹಾಗೂ ಸಹೋದರನ ಜೊತೆ ವಾಸವಿದ್ದಾನೆ.. ಕಾಂಟ್ರಾಕ್ಟ್ ಬೇಸ್ ನಲ್ಲಿ ಸ್ವೀಪರ್ ಆಗಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಮಾರ್ಕ್ ಮಾಡಿದ್ದು, ತಹಶೀಲ್ದಾರ್ ರವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿಗಳನ್ನು ತ್ವರಿತಗತಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರಿಗೆ ಬಾಕಿ ಆರ್ಡರ್ ಪಾಸ್ ಮಾಡಬೇಕಿರುವಂತಹ ಸರ್ವೇಗಳಿಗೆ ತಹಶೀಲ್ದಾರ್ ಗಳು ಆರ್ಡರ್ ಪಾಸ್ ಮಾಡಬೇಕು. ತದನಂತರ ಹಂತ-ಹಂತವಾಗಿ ಎಲ್ಲಾ ಒತ್ತುವರಿಗಳ ತೆರವು ಮಾಡಬೇಕು. ಯಾರಾದರು ತಡೆಯೊಡ್ಡಿದರೆ ಪೊಲೀಸ್ ಭದ್ರತೆಯೊಂದಿಗೆ ಒತ್ತುವರಿಗಳ ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಭೂ ಮಾಪನ ಕಾರ್ಯ ಮಾಡಿರುವ ಕಡೆ ಗ್ರಾಮ ನಕ್ಷೆ ಮತ್ತು ಟಿಪ್ಪಣಿಗಳ ಅನ್ವಯ ಯಾವುದೇ ವ್ಯತ್ಯಾಸ ಮಾಡದೆ ಸಂಬಂಧಪಟ್ಟ ಭೂ ಮಾಪಕರು ನಕ್ಷೆಯನ್ನು ಸಿದ್ಧಪಡಿಸಿ ತಹಶೀಲ್ದಾರ್ ರವರು ಅದಕ್ಕೆ ಆದೇಶಗಳನ್ನು ಜಾರಿಮಾಡಬೇಕು. ತದನಂತರ ಒತ್ತುವರಿ ತೆರವುಗೊಳಿಸಿ ಕಾಲುವೆ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಗಾಲದಂತೂ ಸಖತ್ ಸಮಸ್ಯೆ ಆಗಿ ಈಗಾಗಲೇ ಯುವತಿ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದ್ದು ಬಿಬಿಎಂಪಿ ವತಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ ಅದೇನೆಂದರೆ ಮಳೆಗಾಲದ ವೇಳೆ ಪಾಲಿಕೆ, ಜಲಮಂಡಳಿ, ಪೊಲೀಸ್, ಬೆಸ್ಕಾಂ, ಅಗ್ನಿ ಶಾಮಕ ದಳ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಯು ಸಮನ್ವಯದಿಂದ ಕಾರ್ಯನಿರ್ವಹಿಸಿ ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಜೊತೆ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆಗಾಲದಲ್ಲಿ ಎಲ್ಲಿಯೂ ಜಲಾವೃತವಾಗದಂತೆ ರಾಜಕಾಲುವೆ, ಚರಂಡಿಗಳಲ್ಲಿ ಹೂಳನ್ನು ತೆರವುಗೊಳಿಸಬೇಕು. ಹೂಳೆತ್ತಿರುವ ಬಗ್ಗೆ ಲೊಕೇಷನ್ ಸಹಿತ ಛಾಯಾಚಿತ್ರಗಳನ್ನು ತೆಗೆದು ನಿಖರವಾದ ಮಾಹಿತಿಯನ್ನು ದಾಖಲಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ 20 ಅಗ್ನಿ ಶಾಮಕ ಠಾಣೆ ಹಾಗೂ 1 ರಾಜ್ಯ ವಿಪತ್ತು…
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆ ಮಾಡಲಾಗಿದ್ದ ಹೆಡ್ಗೆವಾರ್, ವೀರ ಸಾವರ್ಕರ್ ಪಠ್ಯಕ್ಕೆ ಬ್ರೇಕ್ ಹಾಕಿದ್ದು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಈ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, 6 ರಿಂದ ಹತ್ತನೇ ತರಗತಿಯವರೆಗೆ ಸಮಾಜ ವಿಜ್ಞಾನ ಹಾಗೂ ಕನ್ನಡ ಪಠ್ಯದಲ್ಲಿ ಕೆಲವೊಂದು ಬದಲಾವಣೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು ಬಿಜೆಪಿ ಅವಧಿಯಲ್ಲಿ ಪರಿಷ್ಕರಣೆ ಮಾಡಿದ ಪಠ್ಯ ಈಗಾಗಲೇ ಮಕ್ಕಳ ಕೈಗೆ ಹೋಗಿದೆ. ಮತ್ತೆ ಪ್ರಿಂಟ್ ಮಾಡಲು ಅಗಲ್ಲ. ಖರ್ಚು ಜಾಸ್ತಿ ಅಗುತ್ತದೆ. ಈ ಹಿನ್ನಲೆಯಲ್ಲಿ ಪಠ್ಯದಲ್ಲಿ ಯಾವುದು ಅವಶ್ಯಕತೆ ಇಲ್ಲ ಅದನ್ನು ತೆಗೆದಿದ್ದೇವೆ. ಯಾವುದು ಸೇರ್ಪಡೆ ಮಾಡಬೇಕು ಅದನ್ನು ಮಾಡಿದ್ದೇವೆ ಎಂದು ತಿಳಿಸಿದರು. ಇದಕ್ಕಾಗಿ ಐದು ಜನರ ಸಮಿತಿಯನ್ನು ರಚನೆ ಮಾಡಲಾಗಿತ್ತು. ಆರಂಭದಲ್ಲಿ 45 ಬದಲಾವಣೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಅದರೆ ಇದೀಗ ಸಾವಿತ್ರಿ ಭಾಯಿ ಪುಲೆ ಪಾಠ…
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ವಿಚಾರದ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಪಿಎಸ್ಐ ನೇಮಕಾತಿ ಹಗರಣ ಸೇರಿದಂತೆ ವಿವಿಧ ಹಗರಣಗಳ ತನಿಖೆ ಬಗ್ಗೆ ಎಸ್ಐಟಿ ರಚನೆ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಹಿಂದೆ ನಾವು ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಈಗ ತನಿಖೆ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ತನಿಖೆಗೆ ಸೂಚಿಸಿ ಎಂದು ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ. ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಧ್ವನಿಗೂಡಿಸಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸೋಣ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಕ್ಯಾಬಿನೇಟ್ನಲ್ಲಿ ತೀರ್ಮಾನ ಮಾಡಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದ್ದು, ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅಕ್ರಮದ…
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು FCI ತಿರಸ್ಕಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ ಎಂದು ಮನವಿ ಮಾಡಿದ್ದಾರೆ. ರಾಜ್ಯದ ರೈತರಿಂದ ಭತ್ತ, ರಾಗಿ, ಜೋಳವನ್ನು ನೇರವಾಗಿ ಖರೀದಿಸಿ ಅನ್ನಭಾಗ್ಯ ಯೋಜನೆಗೆ ಬಳಸಿ. ಇದರಿಂದ ರಾಜ್ಯದ ರೈತರು, ಜನರಿಗೆ ಅನುಕೂಲವಾಗಲಿದೆ ಎಂದರು. ಉಚಿತ ವಿದ್ಯುತ್ ಬದಲು ಪ್ರತಿ ಮನೆಗೆ ಸೋಲಾರ್ ವ್ಯವಸ್ಥೆ ಕಲ್ಪಿಸಿ ಅಂತಾನೂ ಸಲಹೆ ನೀಡಿದ್ದಾರೆ.
ಬೆಂಗಳೂರು: ಉಚಿತ ಯೋಜನೆಗಳನ್ನು ಜಾರಿಗೆ ತರುವುದರಲ್ಲೇ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಮಾತ್ರ ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ. ಕಾಂಗ್ರೆಸ್ ಉಚಿತ ಗ್ಯಾರಂಟಿಗಳ ಕುರಿತು ಸರಣೀ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದು, ಜನರಿಗೆ ಕತ್ತಲೆ ಭಾಗ್ಯ ನೀಡೋದು ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ. ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಎಂದು ಟೀಕಿಸಿದರು.
ಬೆಂಗಳೂರು: ಸಿನಿಮಾಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಶಿವರಾಜ್ ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು. ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್ ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ ರಿವೀಲ್ ಮಾಡಲಾಗಿದೆ. ನಿವೇದಿತಾ ಮೊದಲ ಹೆಜ್ಜೆಗೆ ಫೈರ್ ಫ್ಲೈ ಎಂಬ ಕ್ಯಾಚಿ ಟೈಟಲ್ ಹೆಸರಿಡಲಾಗಿದೆ. ಅಂದಹಾಗೇ ಈ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ. ‘ಪಿಆರ್ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು, ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು. ಈಗ ನಿವೇದಿತಾ ಬಂಡವಾಳ…
ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವರುಣನ ಆಗಮನದಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ತಂಪೇರಿದೆ. ಹಳೆ ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಬೆಂಗಳೂರು, ಕೋಲಾರ, ರಾಮನಗರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18ರಿಂದ 22ರವರೆಗೂ ತೀವ್ರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಮಂಗಳೂರು ಭಾಗದಲ್ಲಿ ಸುಮಾರು 150 ಮಿಲಿಮೀಟರ್‌ಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುವ ಕಾರಣ ಜನರು ಮನೆಯಲ್ಲಿಯೇ ಸುರಕ್ಷಿತವಾಗಿರಿ. ಅಲ್ಲದೇ ಆದಷ್ಟು ಮಳೆಯ ಸಮಯದಲ್ಲಿ ಅಂಡರ್ ಪಾಸ್‌ಗಳಲ್ಲಿ ಸಂಚರಿಸಬೇಡಿ ಎಂದು ಹವಾಮಾನ ಇಲಾಖೆ ಜನರಿಗೆ ಸಲಹೆ ನೀಡಿದೆ