ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಹೆಸರಲ್ಲಿ ದೊಖಾ ಸಿರೀಸ್ ಮುಂದುವರೆಸಿದ್ದು, ನೀಡಿದ ಭರವಸೆಯಂತೆ ಜುಲೈನಲ್ಲಿ ಜನರಿಗೆ 10 ಕೆ.ಜಿ ಅಕ್ಕಿ ನೀಡದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನರಿಗೆ ಮೋಸವಾಗಿದೆ. ಬಡವರು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರು ನೀಡಿದ ಮಾತು ತಪ್ಪಿದ್ದಾರೆ. ಅಕ್ಕಿ ಸರಬರಾಜು ಮಾಡುವ ವಿಚಾರದಲ್ಲಿ ಕೇಂದ್ರ ರಾಜಕಾರಣ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರ ಆಹಾರ ಭದ್ರತೆ ಕಾಯ್ದೆಯಡಿ ಎಲ್ಲ ರಾಜ್ಯಗಳಿಗೂ 5 ಕೆ.ಜಿ ಅಕ್ಕಿ ಕೊಡುತ್ತ ಬಂದಿದೆ ಎಂದರು. ಅಕ್ಕಿ ಜೊತೆಗೆ ಸಾರಿಗೆ ವೆಚ್ಚವನ್ನು ಕೂಡ ಕೇಂದ್ರ ಸರ್ಕಾರ ಕೊಡುತ್ತಿದೆ. ಅದು ಸುಮಾರು ಮೂರು ರೂಪಾಯಿ ಬರುತ್ತದೆ. ಅದನ್ನು ಕೂಡ ಕೇಂದ್ರ ಸರ್ಕಾರ ನಿಭಾಯಿಸುತ್ತಿದೆ. ಸಿದ್ದರಾಮಯ್ಯ 10 ಕೆ.ಜಿ ಅಕ್ಕಿ ಕೊಡುತ್ತೆನೆ ಎಂದು ಹೇಳುತ್ತಾರೆ. ಅದರಲ್ಲಿ 5 ಕೆ.ಜಿ ಅಕ್ಕಿ ಕೇಂದ್ರ ಸರ್ಕಾರ ನೀಡಿದೆ.…
Author: Prajatv Kannada
ಬೆಂಗಳೂರು: ಅವೈಜ್ಞಾನಿಕವಾಗಿ ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದೆ. ವಿದ್ಯುತ್ ದರ ಹೀಗೆ ಏರಿಕೆ ಮಾಡಿದರೆ ಕೈಗಾರಿಕೆ ಬಂದ್ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಜೊತೆ ಮಾತನಾಡಿದ ಕಾಸಿಯಾ ಅಧ್ಯಕ್ಷ ನರಸಿಂಹ ಮೂರ್ತಿ, ರಾಜ್ಯದಲ್ಲಿ 5.62 ಲಕ್ಷ ಸಣ್ಣ ಕೈಗಾರಿಕೆಗಳು ಇದೆ. ಸರ್ಕಾರದ ವಿವಿಧ ಇಲಾಖೆಗಳಿಂದ ಎಸ್ಕಾಂಗಳಿಗೆ 11 ಸಾವಿರ ಕೋಟಿ ರೂ. ಬಾಕಿ ದುಡ್ಡು ಕೊಡುವುದು ಬಾಕಿಯಿದೆ. ಮೊದಲು ಸರ್ಕಾರ ಇದನ್ನು ಪಾವತಿ ಮಾಡಲಿ ಎಂದು ಹೇಳಿದರು. ಈಗ ಅನ್ ಶೆಡ್ಯೂಲ್ಡ್ ಲೋಡ್ ಶೆಡ್ಡಿಂಗ್ (Load Shedding) ಮಾಡುತ್ತಿದ್ದಾರೆ. ಕೆಲವೊಮ್ಮೆ ಕೈಗಾರಿಕೆಗಳಿಗೆ ಒಂದು ಗಂಟೆಯಷ್ಟು ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ಯಾರಂಟಿ ಘೋಷಣೆಯ ಬಗ್ಗೆ ನಮ್ಮ ಅಕ್ಷೇಪ ಇಲ್ಲ. ಆದರೆ ನಮಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು. ಈ ಹಿಂದೆ 1 ಲಕ್ಷ ರೂ. ಬಿಲ್ ಬರುತ್ತಿದ್ದರೆ ಈಗ 1.30 ಲಕ್ಷ ರೂ., 1.40 ಲಕ್ಷ ರೂ. ಬರುತ್ತಿದೆ.…
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು FCI ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಸಿಎಂ ಆರೋಪಿಸಿದ್ದಾರೆ. ಅಕ್ಕಿ ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್ ಈಗ ಜನರಿಗೆ ಮೋಸ ಮಾಡ್ತಿದೆ. ರೈತರಿಗೆ, ಜನರಿಗೆ ಕೊಟ್ಟ ಮಾತಿಂದ ತಪ್ಪಿಸಿಕೊಳ್ಳಲು ರಾಜಕಾರಣ ಮಾಡುತ್ತಿದೆ. ಆಹಾರ ಭದ್ರತಾ ಕಾಯ್ದೆಯಡಿ ಎಲ್ಲರಿಗೂ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದೆ. ಯಾವುದೇ ಖರ್ಚು ಇಲ್ಲದೇ ಪ್ರತಿ ವ್ಯಕ್ತಿಗೆ ತಲಾ 5 ಕೆಜಿ ಅಕ್ಕಿ ನೀಡುತ್ತಿದೆ. ಸಾಗಣೆ ವೆಚ್ಚ, ನಿರ್ವಹಣಾ ವೆಚ್ಚಗಳನ್ನು ಕೇಂದ್ರ ಸರ್ಕಾರವೇ ಭರಿಸುತ್ತಿದೆ. ಸತ್ಯ ಹೇಳಬೇಕೆಂದ್ರೆ ರಾಜ್ಯ ಸರ್ಕಾರ 10 ಕೆಜಿ ಹೆಚ್ಚುವರಿ ಅಕ್ಕಿ ಕೊಡಬೇಕು. ಕೇಂದ್ರ ನೀಡುವ ಅಕ್ಕಿ ಸೇರಿ ರಾಜ್ಯ ಸರ್ಕಾರ ಒಟ್ಟು 15 ಕೆಜಿ ಅಕ್ಕಿ ನೀಡಬೇಕು. ಆದ್ರೆ ಕೇಂದ್ರದ 5 ಕೆಜಿ, ರಾಜ್ಯದ 5 ಕೆಜಿ ಸೇರಿಸಿ 10 ಕೆಜಿ ನೀಡ್ತೀವಿ ಎನ್ನುತ್ತಿದೆ ಎಂದರು.
ಬೆಂಗಳೂರು: ನಾಳೆ ರೆಬಲ್ ಸ್ಟಾರ್ ಅಂಬರೀಶ್ (Ambarish) ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ (Abhishek) ಅಂಬರೀಶ್ ಅವರ ಮದುವೆಯ ಬೀಗರ ಔತಣಕೂಟ ಮಂಡ್ಯದಲ್ಲಿ ಜರುಗಲಿದೆ. ಮಂಡ್ಯ ಜನರಿಗೆ ಬೊಂಬಾಟ್ ಬಾಡೂಟ ಹಾಕಿಸಲು ಅಂಬಿ ಕುಟುಂಬ ಭರ್ಜರಿ ತಯಾರಿ ಮಾಡಿಕೊಂಡಿದೆ. ಮಂಡ್ಯ (Mandya) ಜಿಲ್ಲೆಯ ಮದ್ದೂರು ಸಮೀಪದ ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಈ ಬೀಗರ ಔತಣಕೂಟ ನಡೆಯಲಿದೆ. ಈ ಬೀಗರ ಊಟಕ್ಕೆ ಸುಮಾರು 50 ಸಾವಿರ ಜನರು ಆಗಮಿಸಿವ ನಿರೀಕ್ಷೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha) ಕುಟುಂಬಸ್ಥರು ಇದ್ದಾರೆ. ಹೀಗಾಗಿ ವಿಶಾಲ ಜಾಗದಲ್ಲಿ ಬೃಹತ್ ಜರ್ಮನ್ ಟೆಂಟ್ ಹಾಕಿ ಜನರು ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಒಂದೇ ಬಾರಿಗೆ 4500 ಮಂದಿ ಕುಳಿತು ಊಟ ಮಾಡಲು ಆಸನದ ವ್ಯವಸ್ಥೆ ಮಾಡಲಾಗಿದೆ, ನಾಳೆ ಬೆಳಿಗ್ಗೆ 11:30ರಿಂದ ಆರಂಭವಾಗಲಿರುವ ಔತಣಕೂಟದಲ್ಲಿ 5-6 ಟನ್ ಮಟನ್, 7 ಟನ್ ಚಿಕನ್ ಬಳಸಿ ಭರ್ಜರಿ ಬಾಡೂಟ ತಯಾರಿ ಮಾಡಲಾಗುತ್ತದೆ. ಮಂಡ್ಯ…
ಬೆಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದಾಗಿತ್ತು ಆದರೆ ಈಗ ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ನೀಡಲು ಎಫ್ಸಿಐ ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಅವರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಬಡವರಿಗೆ ಸಹಾಯ ಮಾಡುವ ವಿಚಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು. ಅವರ ಈ ಧೋರಣೆ ಅವರು ಯಾರ ಪರ ಇದ್ದಾರೆ ಎಂದು ತೋರಿಸುತ್ತೆ. ನಾವು ಪುಕ್ಕಟ್ಟೆ ಕೊಡಿ ಎಂದು ಕೇಳಿಲ್ಲ, ಹಣ ಕೊಡ್ತೀವಿ. ಅದಕ್ಕೆ ಅವರು ನೀಡಬಹುದಿತ್ತು ಎಂದು ವಿಧಾನಸೌಧದಲ್ಲಿ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.
ಬೆಂಗಳೂರು: ಗೃಹಲಕ್ಷ್ಮಿ, ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು DBT ಮೂಲಕ ನೀಡುವ ಯೋಜನೆಯಾಗಿರುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ, ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಈ ಪೈಕಿ ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದರು.
ರಾಕಿಂಗ್ ಸ್ಟಾರ್ ಯಶ್ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಈಗಾಗ್ಲೇ ಸಾಕಷ್ಟು ಐಷಾರಾಮಿ ಕಾರಿನ ಒಡೆಯನಾಗಿರುವ ಯಶ್ ಇದೀಗ ಮತ್ತೊಂದು ಐಷಾರಾಮಿ ಕಾರು ಖರೀದಿಸಿದ್ದಾರೆ. ಯಶ್ ಅವರ ಮನೆಗೆ ಇದೀಗ ರೇಂಜ್ ರೋವರ್ ಕಾರು ಆಗಮಿಸಿದೆ. ಕಪ್ಪು ಬಣ್ಣದ ಕಾರು ಖರೀದಿಸಿರುವ ಯಶ್ ಪತ್ನಿ ರಾಧಿಕಾ ಹಾಗೂ ಮಕ್ಕಳಾದ ಆರ್ಯಾ ಹಾಗೂ ಯರ್ಥರ್ವ್ ಜೊತೆ ಸುತ್ತಾಡಿದ್ದಾರೆ. ಸದ್ಯ ಈ ಹೊಸ ಕಾರಿನಲ್ಲಿ ಸುತ್ತಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯಶ್ ಖರೀದಿರುವ ಕಾರಿನ ಬೆಲೆ ಎಷ್ಟು ಎಂದು ಫ್ಯಾನ್ಸ್ ಹುಡುಕಾಡುತ್ತಿದ್ದಾರೆ. ಯಶ್ ಖರೀದಿಸಿರುವ ಈ ಕಾರಿನ ಬೆಲೆ ಬರೋಬ್ಬರಿ 4ರಿಂದ 5 ಕೋಟಿ ರೂಪಾಯಿ ಆಗಿದೆ. ಅನೇಕ ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿವೆ. ಈಝೀ ಸಿಟ್ಟಿಂಗ್, ಏಸಿ, ಕಂಫರ್ಟರ್ ಆಪ್ಶನ್ಗಳನ್ನು ಹೆಚ್ಚು ಹೊಂದಿರುವ ಈ ಕಾರು ಶ್ರೀಮಂತ ಗ್ರಾಹಕರ ಮೊದಲ ಆಯ್ಕೆಯಾಗಿದೆ.
‘ಲೈಗರ್’ ಸಿನಿಮಾ ಸೋಲಿನಿಂದ ಕಂಗಾಲಾಗಿದ್ದ ನಟ ವಿಜಯ್ ದೇವರಕೊಂಡ ಅದರಿಂದ ಹೊರ ಬಂದಿದ್ದು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಮಂತಾ ಜೊತೆಗಿನ ಖುಷಿ ಚಿತ್ರದಲ್ಲಿ ತೊಡಗಿಕೊಂಡಿದ್ದ ವಿಜಯ್ ಇದೀಗ ನಟಿ ಶ್ರೀಲೀಲಾ ಜೊತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ‘ಗೀತಾ ಗೋವಿಂದಂ’ ಸಿನಿಮಾದ ನಿರ್ದೇಶಕರ ಜೊತೆ ವಿಜಯ್ ಕೈಜೋಡಿಸಿದ್ದು ಈ ಭಾರಿ ವಿಜಯ್ ಗೆ ಜೋಡಿಯಾಗಿ ರಶ್ಮಿಕಾ ಬದಲು ನಟಿ ಮೃಣಾಲ್ ಬಣ್ಣ ಹಚ್ಚುತ್ತಿದ್ದಾರೆ. ಟಾಲಿವುಡ್ ನಲ್ಲಿ ತೆರೆಕಂಡ ಗೀತಾ ಗೋವಿಂದಂ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಬಳಿಕ ನಟಿ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಜೋಡಿ ಸಾಕಷ್ಟು ಖ್ಯಾತಿ ಘಳಿಸಿತ್ತು. ಅಲ್ಲದೆ ಈ ಸಿನಿಮಾದ ಬಳಿಕ ರಶ್ಮಿಕಾಗೆ ಟಾಲಿವುಡ್ ನಲ್ಲಿ ಸಾಕಷ್ಟು ಡಿಮ್ಯಾಂಡ್ ಕ್ರಿಯೇಟ್ ಆಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿದ್ದ ಚಿತ್ರದ ನಿರ್ದೇಶದ ಇದೀಗ ವಿಜಯ್ ಜೊತೆ ಮತ್ತೊಮ್ಮೆ ಕೈ ಜೋಡಿಸುತ್ತಿದ್ದು ಈ ಭಾರಿ ರಶ್ಮಿಕಾ ಬದಲಿಗೆ ಮೃಣಾಲ್ ಗೆ…
ನಟ ಕಿಚ್ಚ ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್ ಬೆಳ್ಳಿಪರದೆಗೆ ಎಂಟ್ರಿ ಕೊಡುತ್ತಿದ್ದು, ಅವರ ಅಳಿಯ ಅಂದರೆ ಅಕ್ಕನ ಮಗ ಸಂಚಿತ್ ಸಂಜೀವ್ ಅವರು ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಲು ವೇದಿಕೆ ಸಜ್ಜಾಗಿದೆ. ಸಿನಿಮಾಗೆ ಮುಹೂರ್ತ ಕೂಡ ಫಿಕ್ಸ್ ಆಗಿದ್ದು, ದೊಡ್ಡ ಸಿನಿಮಾ ಮೂಲಕವೇ ಸಂಜಿತ್ ಪರಿಚಯವಾಗುತ್ತಿದ್ದಾರೆ. ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಫೈನಲಿ ಅದಕ್ಕೆ ವೇದಿಕೆ ಸಿದ್ಧವಾಗಿದೆ. ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಸಂಚಿತ್ ಕೆಲಸ ಮಾಡಿದ್ದರು. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಸುದೀಪ್ ಸೋದರಳಿಯ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ. ಸಕಲ ತಯಾರಿಯೊಂದಿಗೆ ಸಂಚಿತ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಈ ಬಗ್ಗೆ…