ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮಾತನಾಡಿ, ಕೋಲಾರ ತಾಲ್ಲೂಕು ಸುಗಟೂರು ಹೋಬಳಿ ಉರಿಗಲಿ ಗ್ರಾಮದ ಸರ್ವೆ ನಂ 106 ರಲ್ಲಿ ಫಾರಂ ನಂ 53 ಸಲ್ಲಿಸದೇ ಇದ್ದರೂ ಲಕ್ಷಾಂತರ ಹಣ ಪಡೆದು ನಕಲಿ ದಾಖಲೆ ಸೃಷ್ಟಿಸಿ ಕೋಲಾರ ನಗರದ ನಾರಾಯಣಸ್ವಾಮಿ ಎಂಬುವವರಿಗೆ ಜಮೀನು ಮಂಜೂರು ಮಾಡಿದ್ದಾರೆ. ಈ ಬಗ್ಗೆ ನಾವು ಕೋರ್ಟ್ ಮೊರೆ ಹೋಗಿದ್ದು ಅಕ್ರಮವಾಗಿ ಜಮೀನು ಮಂಜೂರು ಮಾಡಿರುವ ಆರೋಪ ಸಾಬೀತಾಗಿದೆ. ಅಂದಿನ ಕೋಲಾರ ತಹಶೀಲ್ದಾರ್ ಆಗಿದ್ದ ಶೋಬಿತಾ, ರಾಜಸ್ವ ನಿರೀಕ್ಷಕ ರಮೇಶ್ ಮತ್ತು ಗ್ರಾಮ ಲೆಕ್ಕಾಧಿಕಾರಿ ಆನಂದ್ ಬಾಬು ದಾಖಲೆ ಪರಿಶೀಲನೆ ನಡೆಸಿ ಇವರ ವಿರುದ್ಧ ಉಪ ವಿಭಾಗಾಧಿಕಾರಿಗಳು…
Author: Prajatv Kannada
ಯಾದಗಿರಿ:- ರಾತ್ರೋ ರಾತ್ರಿ ದನಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಯಾದಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾತ್ರಿ ವೇಳೆ ಹಸುಗಳನ್ನ ಕಳ್ಳತನ ಮಾಡಿ ವಾಹನಗಳಲ್ಲಿ ಸಾಗಿಸುವಾಗ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪಿಎಸ್ಐ ದೇವಿದ್ರರೆಡ್ಡಿ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಯಾದಗಿರಿ ತಾಲೂಕಿನ ವೆಂಕಟೇಶ ನಗರ ಬಳಿ ಎಂಟು ಜನ ದನಗಳ್ಳರನ್ನು ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಾಳಿ ವೇಳೆ ಕರುಗಳು ಸೇರಿ 25 ಹಸುಗಳನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆರೋಪಿಗಳು, ರಾತ್ರಿ ವೇಳೆ ದನಗಳನ್ನು ಕಳ್ಳತನ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದರು. ಯಾದಗಿರಿ ತಾಲೂಕಿನ ಹೊನಗೇರಾ, ಯಡಹಳ್ಳಿ ಕಡೆ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಂಧಿತ ಎಂಟು ಜನ ದನಗಳ್ಳರು ಕಲಬುರ್ಗಿ ಜಿಲ್ಲೆಯ ಮೂಲದವರು ಎನ್ನಲಾಗಿದ್ದು, ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಂಗಳೂರು: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್ ಆದೇಶ ವಿಚಾರ ‘ ನನಗೆ ಸೇರಿದ್ದ 150 ಆಸ್ತಿಗಳನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡಿತ್ತು. ಅದರಲ್ಲಿ 80ಕ್ಕೂ ಅಧಿಕ ಆಸ್ತಿಗಳನ್ನು ಕೋರ್ಟ್ ನಿನ್ನೆ ಬಿಡುಗಡೆ ಮಾಡಿದೆ. ಉಳಿದ 72 ಆಸ್ತಿಗಳು ಕೇಸ್ ಇತ್ಯರ್ಥದ ಬಳಿಕ ಪರಿಹಾರವಾಗಲಿದೆ ಎಂದು ಧರ್ಮಸ್ಥಳದಲ್ಲಿ ಕೆಆರ್ಪಿಪಿ ಸ್ಥಾಪಕ, ಶಾಸಕ ಜನಾರ್ದನರೆಡ್ಡಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮಾತನಾಡಿದ ಅವರು ‘ನನ್ನ ಮೇಲೆ ದೇವರು ಮತ್ತು ಮಂಜುನಾಥ ಸ್ವಾಮಿಯ ಕೃಪೆ ಇದೆ. ನ್ಯಾಯದ ಮೇಲೆ ನನಗೆ ಮೊದಲಿನಿಂದಲೂ ನಂಬಿಕೆ ಇತ್ತು. ಮಂಜುನಾಥನ ಆಶೀರ್ವಾದದಿಂದ 80ಕ್ಕೂ ಹೆಚ್ಚು ಆಸ್ತಿ ವಾಪಸ್ ಬಂದಿದೆ. 2009ರ ಪೂರ್ವದಲ್ಲಿ ನನ್ನ ಆಸ್ತಿಗಳನ್ನು ಸಿಬಿಐ ಜಪ್ತಿ ಮಾಡಿತ್ತು. ಆಗ ಜಪ್ತಿಯಾಗಿದ್ದ 80ಕ್ಕೂ ಹೆಚ್ಚು ಆಸ್ತಿಗಳನ್ನು ಬಿಡುಗಡೆ ಮಾಡಿದೆ ಎಂದರು.
ಹುಬ್ಬಳ್ಳಿ: ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ. ಸೋಲಿನ ಬಗ್ಗೆ ವರಿಷ್ಠರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ನಾನೇ ವಿಧಾನಸಭೆ ಚುನಾವಣೆ ಸೋಲಿನ ಹೊಣೆ ಹೊತ್ತಿದ್ದೇನೆ ಎಂದರು. ಇನ್ನು ಕೆಲ ಶಾಸಕರ ಸೋಲಿಗೆ ಬೊಮ್ಮಾಯಿ ಕಾರಣ ಆರೋಪ ವಿಚಾರ ‘ ಸೋಲಿನ ಹೊಣೆ ಹೊತ್ತಿದ್ದೇನೆ ಎಂದಮೇಲೆ ಆರೋಪಕ್ಕೆ ಉತ್ತರಿಸಬೇಕಿಲ್ಲ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಎದ್ದಿದೆ. ಈ ಹಿಂದೆ ಅನೇಕ ಬಾರಿ ದಲಿತ ಸಿಎಂ ಕೂಗು ಎದ್ದಿದ್ದು ಪರಮೇಶ್ವರ್ ನಾನು ಕೂಡ ಸಿಎಂ ಆಕಾಂಕ್ಷಿ ಎಂದು ಹೇಳಿಕೊಂಡು ಬಂದಿದ್ದು ಈಗ ಅದೇ ರೀತಿ ಮತ್ತೆ ಪರಮೇಶ್ವರ್ ಅವರು ಪ್ರಶ್ನೆ ಮಾಡುತ್ತಿದ್ದಾರೆ. ನಾನು ಯಾಕೆ ಸಿಎಂ (Chief Minister) ಆಗಬಾರದು? ಮುನಿಯಪ್ಪ ಯಾಕಾಗಬಾರದು? ಮಹಾದೇವಪ್ಪ ಯಾಕೆ ಆಗಬಾರದು ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಪ್ರಶ್ನಿಸಿದ್ದಾರೆ. ದಲಿತಪರ ಸಂಘಟನೆಗಳು ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರದ ದಲಿತ ಸಮುದಾಯದ ಸಚಿವರುಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾವೇಶದಲ್ಲಿ ಪರಮೇಶ್ವರ್ ಮಾತನಾಡಿದರು. ನಮ್ಮಲ್ಲಿ ಕೀಳರಿಮೆ ಇರಬಾರದು. ಅದಕ್ಕೆ ನಾನು ಯಾವಾಗಲೂ ನಾನು ಸಿಎಂ ಆಗಬೇಕು ಅಂತ ಹೇಳುತ್ತೇನೆ. ನಮಗೆ ಸಿಎಂ ಆಗುವ ಅವಕಾಶಗಳನ್ನು ತಪ್ಪಿಸಿದ್ದಾರೆ. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ನಾವು ಉಳಿದುಕೊಳ್ಳುತ್ತೇವೆ. ಅದು ಬಿಟ್ಟು ಎಡ, ಬಲ ಎಂದು ಹೇಳುತ್ತಿದ್ದರೆ ನಾವು ಏನು ಸಾಧನೆ ಮಾಡುವುದಿಲ್ಲ. ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಇರಬೇಕು ಎಂದರು.…
ಬೆಂಗಳೂರು: ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆ, ಆರತಕ್ಷತೆ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಮುಗಿಸಿಕೊಂಡಿರುವ ನಟ ಅಭಿಷೇಕ್ ಅಂಬರೀಶ್ ಹಾಗೂ ಮಾಡೆಲ್ ಅವಿವಾ ಜೂನ್ 16 ರಂದು ಮಂಡ್ಯದ ಜನತೆಗೆ ಅದ್ದೂರಿ ಬೀಗರೂಟ ಏರ್ಪಡಿಸಿದ್ದಾರೆ. ಈ ಹಿಂದೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾಗ, ಯಾವ ಜಾಗದಲ್ಲಿ ಅವರಿಗೆ ಕಾರ್ಯಕ್ರಮ ಮಾಡಲು ತಯಾರಿ ಮಾಡಿಕೊಳ್ಳಲಾಗಿತ್ತೋ, ಅದೇ ಜಾಗದಲ್ಲೇ ಇದೀಗ ಅಭಿಷೇಕ್ ಹಾಗೂ ಅವಿವಾ ಬೀಗರೂಟವನ್ನು ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿಯ 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಲಾಗುತ್ತಿದ್ದು, ಅಲ್ಲಿಯೇ ಬೀಗರೂಟ ನಡೆಯಲಿದೆ. ಈಗಾಗಲೇ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಟೆಂಟ್ ಹಾಕಲಾಗುತ್ತಿದ್ದು ಖುದ್ದು ಸುಮಲತಾ ಅಂಬರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಗರೂಟದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದ್ದು ಭರ್ಜರಿ ಬಾಡೂಟದ ವ್ಯವಸ್ಥೆ ಇರಲಿದೆ. ಬೀಗರೂಟವನ್ನು ಪಕ್ಕಾ ಮಂಡ್ಯ ಶೈಲಿಯಲ್ಲಿ ಆಯೋಜಿಸುತ್ತಿದ್ದು, ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಗೀ…
ಬೆಂಗಳೂರು: ಕಳೆದ ಒಂದು ವಾರದ ಹಿಂದಷ್ಟೇ ನಗರ ಪ್ರದಕ್ಷಿಣೆ ಹಾಕಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದೂ ಕೂಡ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಲಿದ್ದಾರೆ. ಬಿಡಿಎ ಕಚೇರಿಯಲ್ಲಿ DCM ಡಿಕೆ ಸಭೆ ನಡೆಸಿ ನಂತರ ಹೆಬ್ಬಾಳ ಫ್ಲೈ ಓವರ್ ಬಳಿ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ. ವಾಹನಗಳ ದಟ್ಟಣೆ ಸ್ಥಳ ಪರಿಶೀಲನೆ ಕೂಡ ಮಾಡಲಿದ್ದಾರೆ. ಹಾಗೆ ಬೆಂಗಳೂರಿನ ಕೆಲವು ಕಡೆ ಮಳೆಗೆ ಮನೆಗಳಿಗೆ ನುಗ್ಗಿದ ನೀರು ಹಾಗೂ ಚರಂಡಿ ಪರಿಶೀಲನೆ ಸಹ ನಡೆಸಲಿದ್ದಾರೆ.
ಬೆಂಗಳೂರು : ನನ್ನ ಸೋಲಿಗೆ ಮುಸ್ಲಿಂ ಸಮುದಾಯವೇ ಕಾರಣ ಎಂದು ಎಂಟಿಬಿ ನಾಗರಾಜ್ ಅವರು ಆತ್ಮಾವಲೋಕನಾ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಾತನಾಡಿದ್ದ ಅವರು ‘ಬಿಜೆಪಿಯ ಹಣ ತೆಗೆದುಕೊಂಡು ಕಾಂಗ್ರೆಸ್ಗೆ ವೋಟು ಹಾಕಿದ್ದೀರಿ. ಅಲ್ಲಾ ಮೇಲೆ ಪ್ರಮಾಣ ಮಾಡಿ ನನ್ನ ಬೆನ್ನಿಗೇ ಚೂರಿ ಹಾಕಿದ್ರಿ, ಮುಸ್ಲಿಮರಿಗೆ ಹಣ ಕೊಡಬೇಡಿ ಮತ ಹಾಕಲ್ಲ, ಅದೇ ಹಣವನ್ನ ಹಿಂದೂ ಸಮುದಾಯಗಳಿಗೆ ಕೊಡಿ ಎಂದಿದ್ದರು. ಇನ್ಮುಂದೆ ಭಯ ಪಡುವ ಪ್ರಮೇಯ ಇಲ್ಲ ಎಂದಿದ್ದಾರೆ.
ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರವಾಗಿ ರಾಜ್ಯ ಉಸ್ತುವಾರಿ ಸುರ್ಜೇವಾಲ ಅವರು ಗಂಭೀರ ಚರ್ಚೆ ನಡೆಸಿದ್ದಾರೆ. ಸುರ್ಜೇವಾಲ ಅವರು ಬೆಂಗಳೂರು ಕಾಂಗ್ರೆಸ್ ಶಾಸಕರ ಅಭಿಪ್ರಾಯ ಪಡೆದಿದ್ದು. ಈ ವೇಳೆ ‘ಈಗ ಒಳ್ಳೆಯ ವಾತಾವರಣ ಪಕ್ಷದ ಪರವಾಗಿ ಇದೆ. ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ಮಾಡುವುದು ಒಳ್ಳೆಯದು. ಸರ್ಕಾರ ನಮ್ಮದೆ ಇರುವುದರಿಂದ ಕಾನೂನು ತೊಡಕುಗಳನ್ನು ಬೇಗ ಸರಿಪಡಿಸಬೇಕು. ಮೀಸಲಾತಿ ಮತ್ತು ವಾರ್ಡ್ ಮರು ವಿಂಗಡಣೆ ಕಾನೂನು ತೊಡಕು ನಿವಾರಣೆ ಆಗಬೇಕು. ಈ ಮೊದಲೇ ಬಿಜೆಪಿ ಮಾಡಿದ ವಾರ್ಡ್ ವಿಂಗಡಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದೇವು. ಬಿಜೆಪಿಯವರು ಮತ ವಿಭಜನೆ ವಿಚಾರವಾಗಿ ತಾರತಮ್ಯ ಮಾಡಿ, ಅವರಿಗೆ ಅನುಕೂಲ ಆಗುವ ಹಾಗೆ ವಿಂಗಡಣೆ ಮಾಡಿದ್ದಾರೆ. ಹಾಗಾಗಿ ವಾರ್ಡ್ ಮರು ವಿಂಗಡಣೆ ಆಗಲೇಬೇಕು ಜೊತೆಗೆ ಪಾಲಿಕೆಯನ್ನು ಕೂಡ ವಿಂಗಡಣೆ ಮಾಡುವುದರೊಂದಿಗೆ ಬಿ ಎಸ್ ಪಾಟೀಲ್ ಸಮಿತಿ ಕೊಡುವ ವರದಿ ಒಪ್ಪಿಕೊಳ್ಳಬೇಕು ಎಂದು ಬೆಂಗಳೂರು ಕಾಂಗ್ರೆಸ್ ಶಾಸಕರು ಸುರ್ಜೇವಾಲ ಮತ್ತು ಡಿಕೆಶಿಗೆ ಸಲಹೆ ಕೊಟ್ಟಿದ್ದಾರೆ.
ಬೆಂಗಳೂರಿನ ಘನತೆಗೆ ಕಪ್ಪುಚುಕ್ಕೆಯಾಗಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂಕಲ್ಪ ಮಾಡಿರುವ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಇಂದು ನಗರದ ಪ್ರಮುಖ ಸಂಚಾರಿ ದಟ್ಟಣೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಡಿಎ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಕಮಿಷನರ್ ಕುಮಾರ್ ನಾಯಕ್, ಡಿಸಿಎಂ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಹಾಗೂ ಮತ್ತಿತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಂತರ ಬೆಂಗಳೂರು ಪ್ರದಕ್ಷಣೆ ಹಾಕಿದ ಶಿವಕುಮಾರ್ ಅವರು ಮೊದಲು ಹೆಬ್ಬಾಳ ಜಂಕ್ಷನ್ ಗೆ ಭೇಟಿ ನೀಡಿ ಮೇಲ್ಸೇತುವೆ ನಿರ್ಮಾಣ, ಸುತ್ತಮುತ್ತಲ ಪ್ರದೇಶದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಈ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ, ಮೇಲ್ಸೇತುವೆ ಅಗಲೀಕರಣ ಹಾಗೂ ಹೆಬ್ಬಾಳ ಕೆರೆಯ ಸೌಂದರ್ಯಕ್ಕೆ ಕೈಗೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು. ಅಲ್ಲದೆ 2047ರ ವೇಳೆಗೆ ಹೆಚ್ಚಾಗುವ ವಾಹನ ದಟ್ಟಣೆಗೆ ಯಾವ ರೀತಿ ಕ್ರಮ…