ಮೈಸೂರು: ಎಲ್ಲೆಡೆ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಅರಮನೆ ನಗರ ಮೈಸೂರಿನಲ್ಲಿ ದಸರಾ ಆನೆಗಳಿಗೂ ಪೂಜೆ ನೆರವೇರಿಸಲಾಯಿತು. ನಾಡಹಬ್ಬ ದಸರಾ ಮಹೋತ್ಸವಕ್ಕಾಗಿ ಮೈಸೂರಿಗೆ ಬಂದಿರುವ ಆನೆಗಳಿಗೆ ಅರಮನೆಯ ಆವರಣದಲ್ಲಿ ಪೂಜೆ ನೆರವೇರಿಸಲಾಯಿತು. ಆನೆಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ನೆರವೇರಿಸಲಾಗಿದೆ. ಮಳೆಯ ನಡುವೆಯೇ ಗಣಪತಿಗೇ ಇಷ್ಟವಾದ ಮೋದಕ, ಬೆಲ್ಲ, ಕಬ್ಬು ಹೀಗೆ ಅನೇಕ ಭಕ್ಷ್ಯಗಳನ್ನು ನೈವೇದ್ಯವಾಗಿ ಅರ್ಪಿಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಿಸಿಎಫ್ ಮಾಲತಿ ಪ್ರಿಯಾ, ಡಿಸಿಎಫ್ ಡಾ.ಪ್ರಭುಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಸುಗ್ರೀವ, ಮಹೇಂದ್ರ, ಗೋಪಿ, ಭೀಮ, ಲಕ್ಷ್ಮಿ, ವರಲಕ್ಷ್ಮಿ ಸೇರಿದಂತೆ ಎಲ್ಲ 14 ಆನೆಗಳೂ ಪಾಲ್ಗೊಂಡಿದ್ದವು. ಗಣೇಶ ಹಬ್ಬದ ದಿನ ದಸರಾ ಆನೆಗಳಿಗೆ ಪೂಜೆ ಸಲ್ಲಿಸೋದು ವಾಡಿಕೆ. ಹಬ್ಬದ ದಿನ ಅಧಿಕಾರಿಗಳು ಕುಟುಂಬ ಸಮೇತರಾಗಿ ಪೂಜೆಯಲ್ಲಿ ಪಾಲ್ಗೊಂಡರು. ಆನೆಗಳಿಗೆ 21 ಬಗೆಯ ನೈವೇದ್ಯ ರೂಪದ ತಿನಿಸುಗಳನ್ನು ನೀಡಲಾಯಿತು.
Author: Prajatv Kannada
ತುಮಕೂರು : ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಕರಿ ಮಾಲೀಕ ಬಲಿಯಾಗಿರುವ ಘಟನೆ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ನಡೆದಿದೆ. ಹೌದು.. ಮೊಬೈಲ್ ವಿಡಿಯೋ ಮಾಡಿಟ್ಟು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದು ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಬೇಕರಿ ನಡೆಸುತ್ತಿದ್ದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಸವರಾಜು. ಸಾವಿಗೂ ಮುನ್ನ ಮೀಟರ್ ಬಡ್ಡಿ ದಂಧೆ,ಕಿರುಕುಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ಮೃತ ಬಸವರಾಜು ಚೆಕ್ ನೀಡಿ ಮೀಟರ್ ಬಡ್ಡಿ ನಾಗ ಎನ್ನುವವನಿಂದ ಸಾಲ ಪಡೆದಿದ್ದ ಕೊಟ್ಟ ಸಾಲಕ್ಕೆ ಮೀಟರ್ ಬಡ್ಡಿ ನೀಡುವಂತೆ ಮೀಟರ್ ಬಡ್ಡಿ ನಾಗ ಎಂಬ ವ್ಯಕ್ತಿಯಿಂದ ಕಿರುಕುಳ ಆರೋಪ ತನಗೆ ಕಿರುಕುಳ ನೀಡುತ್ತಿರುವ ಬಗ್ಗೆ ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ. ತನ್ನ ಬೇಕರಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣು ತುಂಬಾ ರೌಡಿಸಂ ಮಾಡುತ್ತಿದ್ದಾನೆ,ಎಷ್ಟೋ ಜನ ಇವನಿಂದ ಹೆದರಿ ಓಡಿ ಹೋಗಿದ್ದಾರೆ ಎಂದು ವಿಡಿಯೋದಲ್ಲಿ ಅಳಲು.. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದಕ್ಕೆಲ್ಲಾ ಕಡಿವಾಣ ಹಾಕ್ತಾರಾ ನೋಡಬೇಕಿದೆ.
ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. https://youtu.be/hYcxmNWwMRU?si=eAXwErVmiu4Z0-HG ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಹಾಗಿದ್ದರೂ ಪತಿ ಶ್ರೀಹರಿ ಇತರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಳು. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು…
ಬಾಗಲಕೋಟೆ : ಜಿಲ್ಲೆಯಾದಂತ ಗೌರಿ ಗಣೇಶನ ಹಬ್ಬ ಸಂಭ್ರಮ ಮುಗಿಲು ಮುಟ್ಟಿದೆಪ್ರತಿಯೊಬ್ಬರು ಬಂದು ಗಣೇಶ್ ಮೂರ್ತಿಯನ್ನ ಮಾರುಕಟ್ಟೆಯಲ್ಲಿ ಖರೀದಿ ಮಾಡಿ ಸಂಭ್ರಮದೊಂದಿಗೆ ಗಣಪತಿ ಬಪ್ಪಾ ಮೋರಯ್ಯ ಎಂದು ಘೋಷಣೆ ಕೂಗಿ ವಾದ್ಯ ಮೇಳದೊಂದಿಗೆ ತಮ್ಮ ತಮ್ಮ ಮನೆಗಳಿಗೆ ಗಣಪತಿಯನ್ನು ಬರಮಾಡಿಕೊಂಡರು ಮಾರುಕಟ್ಟೆಯಲ್ಲಿ ಜನವೋ ಜನ ಗಣೇಶ್, ಹೂವು ಹಣ್ಣು ಖರೀದಿಸಿ ಗಣೇಶ ಮೂರ್ತಿ ಕೊಂಡೊಯ್ಯುತ್ತಿರೋ ಜನರು.
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಕೊನೆಗೂ ಟಿವಿ ಭಾಗ್ಯ ಸಿಕ್ಕಿದೆ. ಸತತ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಸಿದ್ದಾರೆ. ಕೊನೆಗೂ ದರ್ಶನ್ ಸೆಲ್‌ಗೆ ಟಿವಿ ಬಂದಿದೆ. ಕಳೆದ ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ಬಳಿಕ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ. ಜಾರ್ಜ್‌ಶೀಟ್ ಸಲ್ಲಿಕೆ ಸೇರಿದಂತೆ ಹೊರ ಜಗತ್ತಿನ ವಿಷಯ ತಿಳಿದುಕೊಳ್ಳವ ಕುತೂಹಲ ಇರುವ ಹಿನ್ನೆಲೆ, ಕಳೆದ ಮಂಗಳವಾರ ಟಿವಿ ನೀಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಜೈಲು ನಿಯಮದ ಪ್ರಕಾರ ಟಿವಿ ನೀಡಬಹುದು. ಅದರೆ ಟಿವಿ ರಿಪೇರಿ ಇದ್ದ ಹಿನ್ನೆಲೆ ಈವರೆಗೂ ನೀಡಿರಲಿಲ್ಲ. ಆದರೆ, ಇಂದು ದರ್ಶನ್ ಇರುವ ಸೆಲ್‌ಗೆ ಟಿವಿ ನೀಡಲಾಗಿದೆ. ಹೈಯರ್ ಕಂಪನಿಯ 32 ಇಂಚಿನ ಟಿವಿಯನ್ನು ದರ್ಶನ್ ಇರುವ ಸೆಲ್‌ಗೆ ನೀಡಲಾಗಿದೆ. ಸದ್ಯ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಕೇಳಿದ್ದ ಮೂರು ಬೇಡಿಕೆಗಳು ಈಡೇರಿದಂತಾಗಿದೆ. ಸರ್ಜಿಕಲ್ ಚೇರ್ ಮೊದಲನೆಯದ್ದು.…
ಬಳ್ಳಾರಿ: ದರ್ಶನ್ ಇರುವ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ. ಆದರೆ ಆರೋಪಿ ದರ್ಶನ್‌ಗೆ ಗಣೇಶನ ದರ್ಶನ ಭಾಗ್ಯ ಇಲ್ಲದಂತಾಗಿದೆ. ಗಣೇಶ ಮೂರ್ತಿ ಕೂರಿಸಲು ಜೈಲು ಒಳಭಾಗದಲ್ಲಿ ಪೂರ್ತಿ ಅಲಂಕಾರ ಮಾಡಲಾಗಿದೆ. ಬಾಳೆ ಕಂಬ, ಬಲೂನ್, ಲೈಟಿಂಗ್, ಹಣ್ಣು, ಚಿತ್ತಾರದ ಹಾಳೆ ಅಲಂಕಾರದ ಮಧ್ಯೆ ಗಣೇಶನನ್ನು ಕೂರಿಸಲಾಗಿದೆ. ಗಣೇಶ ಚತುರ್ಥಿ ಹಿನ್ನೆಲೆ ಕೈದಿಗಳಿಗಾಗಿ ಸಿಹಿ ತಿಂಡಿಗಳು ಸಿದ್ಧವಾಗಿವೆ. ಮೋದಕ, ಬೆಲ್ಲದ ಕಡುಬು, ರವೆ ಪಾಯಿಸ ಸಿಹಿ. ಒಂಬತ್ತು ಗಂಟೆಗೆ ಗಣೇಶ ಪೂಜೆ ನಡೆದಿದೆ.ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಆರೋಪಿ ನಟ ದರ್ಶನ್ ಇರುವ ಕಾರಣದಿಂದ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕೇವಲ ಜೈಲು ಸಿಬ್ಬಂದಿ ಮಾತ್ರ ಗಣೇಶ ಮಂಟಪ ಅಲಂಕಾರ ಮಾಡಿದ್ದಾರೆ. ಗಣೇಶ ಕೂರಿಸುವುದು ಜೈಲು ಸಿಬ್ಬಂದಿ ಮಾತ್ರ. ಆದರೆ, ಪ್ರತಿ ವರ್ಷ ಎಲ್ಲಾ ಕೈದಿಗಳು ಸೇರಿ ಅದ್ದೂರಿಯಾಗಿ ಅಲಂಕಾರ ಮಾಡಿ ಹಬ್ಬ ಮಾಡುತ್ತಿದ್ದರು. ಈ ವರ್ಷ ದರ್ಶನ್ ಜೈಲಿನಲ್ಲಿರುವ ಹಿನ್ನೆಲೆ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಗಣೇಶನ ದರ್ಶನ, ಕೈ ಮುಗಿದು ಪ್ರಾರ್ಥನೆ…
ಪೋಷಕಾಂಶಗಳ ಅಮೃತ ಭಂಡಾರವಾದ ಈ ಡ್ರೈ ಫ್ರೂಟ್ ಮಳೆಗಾಲದಲ್ಲಿ ನಿತ್ಯ ಸೇವಿಸಿದರೆ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯೋದು ಇಲ್ವಂತೆ. ಮಳೆಗಾಲದಲ್ಲಿ ಅಂಜೂರದ ಹಣ್ಣುಗಳನ್ನು ತಿನ್ನುವುದು ದೇಹಕ್ಕೆ ವಿಶೇಷವಾಗಿ ಪ್ರಯೋಜನಕಾರಿ ಎಂದು ಆಯುರ್ವೇದ ವೈದ್ಯ ಅನಿಲ್ ರೈ ಹೇಳುತ್ತಾರೆ. ಇದು ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಇತರ ಪ್ರಮುಖ ಜೀವಸತ್ವಗಳನ್ನು ಹೊಂದಿರುತ್ತದೆ. ಅಂಜೂರದಲ್ಲಿರುವ ಪೋಷಕಾಂಶಗಳು ದೇಹಕ್ಕೆ ಶಕ್ತಿ ಮತ್ತು ಪೋಷಣೆಯನ್ನು ನೀಡುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ದೇಹವು ಬೆಚ್ಚಗಿರುತ್ತದೆ, ಇದು ಋತುಮಾನದ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಅಂಜೂರದಲ್ಲಿ ಫೈಬರ್ ಸಮೃದ್ಧವಾಗಿದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹೃದ್ರೋಗಕ್ಕೂ ಅಂಜೂರವು ತುಂಬಾ ಉಪಯುಕ್ತವಾಗಿದೆ ಡಾ. ರೈ ಪ್ರಕಾರ, ಅಂಜೂರದಲ್ಲಿರುವ ಆಂಟಿಆಕ್ಸಿಡೆಂಟ್ ಗಳು ಮತ್ತು ಖನಿಜಗಳು ದೇಹವನ್ನು ಸೋಂಕುಗಳು ಮತ್ತು ಕಾಲೋಚಿತ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ತಿನ್ನುವುದು ಸಹ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದು ಚರ್ಮವನ್ನು ಹೈಡ್ರೇಟ್ ಮಾಡಲು…
ಮಧುಮೇಹಿಗಳಿಗೆ ಕೆಲವು ಹಣ್ಣುಗಳು ಔಷಧದಂತೆ ಕೆಲಸ ಮಾಡುತ್ತವೆ.. ಅಂತವುಗಳಲ್ಲಿ ಅಂಜೂರವೂ ಒಂದು.. ಈ ಹಣ್ಣುದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳುತ್ತವೆ.. ಹಾಗಾದ್ರೆ ಇವುಗಳನ್ನು ತಿನ್ನುವುದು ಹೇಗೆ ಎಂದು ಇಲ್ಲಿ ತಿಳಿಯೋಣ ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಅಂಜೂರದಲ್ಲಿ ನಾರಿನಂಶ ಅಧಿಕವಾಗಿದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ನೇರವಾಗಿ ತಿನ್ನುವುದಕ್ಕಿಂತ ರಾತ್ರಿ ನೀರಲ್ಲಿ ನೆನಸಿಟ್ಟು ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಮಧುಮೇಹ ಎಷ್ಟೇ ಇದ್ದೂ ನಿಯಂತ್ರಣಕ್ಕೆ ಬರುತ್ತದೆ.. ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ, ದೇಹದಲ್ಲಿ ಗ್ಲೂಕೋಸ್ ಮಟ್ಟವು ಕ್ರಮೇಣ ಹೆಚ್ಚಾಗುತ್ತದೆ, ಅದರೊಂದಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಅಂಜೂರದಲ್ಲಿ ನಾರಿನಂಶ ಹೆಚ್ಚಿದ್ದು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ಅಂಜೂರದ ನಿಯಮಿತ ಸೇವನೆಯು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ
ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಹಾಗೂ ಧನುಷ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಇನ್ನಿತರ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರವಾದ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ…