ಗದಗ: ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿರೋ ದೂರು ಬಂದಿರೋ ಹಿನ್ನೆಲೆ ಅಧಿಕಾರಿಗಳಿಗೆ ಸಚಿವ ಹೆಚ್.ಕೆ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಅನ್ನ ಭಾಗ್ಯ ಅಕ್ಕಿ ಕುರಿತು ಸಚಿವ ಹೆಚ್.ಕೆ.ಪಾಟೀಲ್ ನೇತೃತ್ವದಲ್ಲಿ ಗದಗನ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿತ್ತು. ಈ ವೇಳೆ ಅಧಿಕಾರಿಗಳಿಗೆ ಅಕ್ಕಿಯನ್ನು ತೋರಿಸಿ ಇಂತಹ ಅಕ್ಕಿ ಜನ ತಿನ್ನಲ್ಲ ಭಯ ಪಡ್ತಾರೆ. ರೇಷನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿರೋ ದೂರು ಬಂದಿದೆ. ನನಗೆ ಗ್ರಾಹಕರೊಬ್ಬರು ಅಕ್ಕಿ ತಂದು ದೂರು ನೀಡಿದ್ದಾರೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಈ ವೇಳೆ ಸಾರವರ್ಧಿತ ಅಕ್ಕಿಯನ್ನು ಪ್ಲಾಸ್ಟಿಕ್ ಅಕ್ಕಿ ಅಂತಾ ಕನ್ಪ್ಯೂಸ್ ಆಗಿದ್ದರು. ಆಹಾರ ಇಲಾಖೆಯ ಅಧಿಕಾರಿ ಗಂಗಪ್ಪ ಅವರಿಂದ ಸಚಿವರು ಅಕ್ಕಿ ಕುರಿತು ಮಾಹಿತಿ ಪಡೆದರು. ಆದ್ರೆ ಅದು ಪ್ಲಾಸ್ಟಿಕ್ ಅಕ್ಕಿ ಅಲ್ಲ ಅಂತ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
Author: Prajatv Kannada
ತುಮಕೂರು: ನಿವೃತ್ತ ಪ್ರಿನ್ಸಿಪಾಲ್ ಹುಚ್ಚಾಟದಿಂದ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ತಿಪಟೂರಿನ ಕಲ್ಪತರು ಕಾಲೇಜಿನ ನಿವೃತ್ತ ಪ್ರಿನ್ಸಿಪಾಲ್ ಶಿರೂರ್ ರಂಪಾಟ ಮಾಡಿದ ವ್ಯಕ್ತಿಯಾಗಿದ್ದು, ಬೈಕ್ ನಿಲ್ಲಿಸುವ ಕಾರಣಕ್ಕೆ ಹಾಸನ್ ಸರ್ಕಲ್ ನ ಎಸ್ಬಿಐ ಬ್ಯಾಂಕ್ ಬಳಿ ಗಲಾಟೆ ಮಾಡಿದ್ದಾರೆ. ಅದಲ್ಲದೆ ಅನಾವಶ್ಯಕವಾಗಿ ಅವಾಶ್ಚ್ಯ ಪದಗಳಿಂದ ಸಾರ್ವಜನಿಕರಿಗೆ ನಿಂದನೆ ಮಾಡಿದ್ದಾರೆ. ಇನ್ನೂ ರೊಚ್ಚಿಗೆದ್ದ ಸಾರ್ವಜನಿಕರ ಥಳಿತದಿಂದ ಪ್ರಿನ್ಸಿಪಾಲ್ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಇನ್ನೂ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಾವೇರಿ : ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್ ಫುಲ್‌ರಶ್ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ಘಟನೆ ನಡೆದಿದೆ. ಮಧು ಕುಂಬಾರ (14 ವರ್ಷ) ಮೃತ ಶಾಲಾ ಬಾಲಕಿಯಾಗಿದ್ದಾಳೆ. ಬಸ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಬಸ್‌ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ವಿದ್ಯಾರ್ಥಿನಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ ಆಯತಪ್ಪಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸ್ ಕೂಡ ಸ್ವಲ್ಪ ವೇಗವಾಗಿದ್ದರಿಂದ ನೆಲಕ್ಕೆ ಬಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗೆ ಹೊರಟಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.ಈ ಘಟನೆ ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳ ಬಸ್ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.
ಗದಗ: ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಹಿನ್ನೆಲೆಯಲ್ಲಿ ಒರಿಜಿನಲ್ ಆಧಾರ್ ಕಾರ್ಡ್ ವಿಷಯಕ್ಕೆ ಕಿರಿಕ್ ನಡೆದಿರುವ ಘಟನೆ ಗದಗಿನ ಹೊಸ ಬಸ್ ನಿಲ್ದಾಣದಲ್ಲಿನಡೆದಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಮಹಿಳೆಯೊಬ್ಬರು ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ಗದಗಿನಲ್ಲಿ ಇನ್ನೊಂದು ಬಸ್ ಹತ್ತಿರುವ ಮಹಿಳೆಯು ಅಲ್ಲಿ ಕಂಡಕ್ಟರ್ ಜತೆಗೆ ವಾಗ್ವಾದ ನಡೆಸಿದ್ದಾರೆ. ಇಷ್ಟಕ್ಕೂ ಇಬ್ಬರ ಮಧ್ಯೆ ಜಗಳಕ್ಕೆ ಕಾರಣವಾಗಿದ್ದು, ದಾಖಲೆಯ ವಿಚಾರ. ಆಕೆ ತನ್ನ ಗುರುತಿನ ಮುದ್ರಿತ ದಾಖಲೆಯನ್ನು ಇಟ್ಟುಕೊಂಡಿಲ್ಲ. ಮೊಬೈಲ್‌ನಲ್ಲಿನ ಆಧಾರ್ ಕಾರ್ಡ್ ತೋರಿಸಿದ್ದಾರೆ.ಆದರೆ, ಈ ಮೊದಲೇ ಸರ್ಕಾರದಿಂದ ಸೂಚನೆ ಇರುವ ಹಿನ್ನೆಲೆಯಲ್ಲಿ ನಿರ್ವಾಹಕ ಮೊಬೈಲ್ ಮೂಲಕ ಫೋಟೊ ದಾಖಲೆ ಇಟ್ಟುಕೊಂಡು ಉಚಿತ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ನಿರಾಕರಣೆ ಮಾಡಿದ್ದಾರೆ. ಡಿಜಿಲಾಕರ್‌ನಲ್ಲಿದ್ದರೆ ಸರಿ ಎಂದು ಹೇಳಿದ್ದಾರೆ. ಆದರೆ, ಮಹಿಳೆಗೆ ಡಿಜಿ ಲಾಕರ್ ಬಗ್ಗೆ ಮಾಹಿತಿ ಇಲ್ಲ. ಅವರ ಬಳಿ ಮೊಬೈಲ್‌ನಲ್ಲಿ ದಾಖಲೆಯ ಫೋಟೊ ಮಾತ್ರ ಇತ್ತು. ನಿರ್ವಾಹಕ ಉಚಿತ ಪ್ರಯಾಣಕ್ಕೆ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಮಹಿಳೆ, ನಿರ್ವಾಹಕನ ಮುಖಕ್ಕೆ ಮೊಬೈಲ್ ಹಿಡಿದು, ತಾನು ತೋರಿಸುತ್ತಿರುವುದೂ…
ಹುಬ್ಬಳ್ಳಿ: ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ಜಾರಿಯಿಂದ ಅಟೋ ಚಾಲಕರು ಸಂಕಷ್ಟಕ್ಕೆ ಗುರಿಯಾಗಿದ್ದು ವಿವಿಧೆ ಬೇಡಿಕೆ ಈಡೇರಿಸಲು ಆಗ್ರಹಿಸಿ ಇಂದು ನಗರದಲ್ಲಿ ಅಟೋ ಚಾಲಕರು ಪ್ರತಿಭಟನೆ ಮಾಡಿದರು. ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಆದೇಶ ಹೊರಡಿಸಿತ್ತು. ಇದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹ ಲಕ್ಷ್ಮಿ ಯೋಜನೆ ಅಡಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ, ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಇರುವ ಕುಟುಂಬದ ಪ್ರತಿ ಸದಸ್ಯನಿಗೂ ತಿಂಗಳಿಗೆ 10 ಕೆ. ಜಿ. ಉಚಿತ ಅಕ್ಕಿ ವಿತರಣೆ, ಗೃಹ ಜ್ಯೋತಿ ಯೋಜನೆ ಅಡಿ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡಿರುವ ಸಿಎಂ ಸಿದ್ದರಾಮಯ್ಯ ಸಾರಥ್ಯದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿದವರ ಬಗ್ಗೆ ಚಿಂತನೆ ಮಾಡಲೇ ಇಲ್ಲ. ಚುನಾವಣಾ ಸಂದರ್ಭದಲ್ಲಿ ಗೆಲುವು…
ಗದಗ: ಉಚಿತ ಬಸ್ ಪ್ರಯಾಣ ಜಾರಿ ಹಿನ್ನೆಲೆ ಗದಗ ಬಸ್ ನಿಲ್ದಾಣದ ತುಂಬೆಲ್ಲ ಬರೀ ಹೆಣ್ಮಕ್ಕಳದ್ದೇ ಹವಾ ಆಗಿದೆ. ಹೌದು ಪ್ರತಿ ಬಸ್’ನಲ್ಲೂ ಶೇ.50ಕ್ಕಿಂತಲೂ ಹೆಚ್ಚು ಹೆಣ್ಣುಮಕ್ಕಳ ಪ್ರಯಾಣ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬರದೇ ಕಾಯುತ್ತಾ ಬಂದ ಬಸ್ ಅತ್ತಿ ಬಸ್ ನಲ್ಲಿ ಸೀಟ್ ಪಡೆಯಲು ಮಹಿಳೆಯರು ಹರಸಾಹಸ ಪಟ್ಟಿದ್ದಾರೆ. ಅದಲ್ಲದೆ ಬಸ್ ಪ್ರಯಾಣ ಫ್ರೀ ಅಷ್ಟೇ ಅಲ್ಲ ಸರಿಯಾಗಿ ಬಸ್ ವ್ಯವಸ್ಥೆ ಆಗಲಿ ಅಂತಾರೆ ಮಹಿಳೆಯರು.
ತುಮಕೂರು: ಗುಬ್ಬಿ ತಾಲೂಕಿನ ಬಾಡೇನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮದಲ್ಲಿ ಹಲವು ಮನೆಗಳಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ. ಹಲವರ ಮನೆಗಳಲ್ಲಿ ಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿವೆ. ಗ್ರಾಮದ ಲೋಕೇಶ್ ಎಂಬುವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೈಸೂರು : ಮೈಸೂರಿನಲ್ಲಿ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆ ಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹರಿಂದ ಕಾಮಗಾರಿ ಇಂದು ವೀಕ್ಷಣೆ ಮಾಡಿದರು. ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕಾಮಗಾರಿಯ ಸ್ಥಳ ವೀಕ್ಷಿಸಿ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಸುಮಾರು 4 ಎಕರೆ ಪ್ರದೇಶದಲ್ಲಿ ಅಂದಾಜು 82.56 ಕೋಟಿ ರೂಪಾಯಿ, ಮೊತ್ತದಡಿ ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ನಿರ್ಮಾಣವಾಗುತ್ತಿದೆ. ಕಟ್ಟಡ ನಿರ್ಮಾಣ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿ ವೀಕ್ಷಿಸಿದರು. ಸರಸ್ವತಿಪುರಂ ಪೊಲೀಸ್ ಠಾಣೆಯ ಮುಂಭಾಗದಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ನಿಲಯ ಕಟ್ಟಡ ತಲೆ ಎತ್ತಲಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ JDS ಮೈತ್ರಿ ವಿಚಾರಕ್ಕೆ ಸಂಬಂಧಿಸಿ ರಾಜಕಾರಣದಲ್ಲಿ ಚರ್ಚೆ, ಊಹಾಪೋಹ ಹುಟ್ಟುವುದು ಸಹಜ. ಕೆಲವೊಮ್ಮೆ ಗಾಳಿ ಸುದ್ದಿಗಾಗಿ ಚರ್ಚೆ ಮಾಡ್ತಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇದಕ್ಕೆಲ್ಲ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಉತ್ತರ ಸಿಗಲಿದೆ. ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ನನ್ನ ಮುಂದೆ ಚರ್ಚೆ ಆಗಿಲ್ಲ. ಸದ್ಯಕ್ಕೆ ಜಿಲ್ಲಾವಾರು ಜೆಡಿಎಸ್ ಮುಖಂಡರ ಸಭೆ ಮಾಡಿದ್ದೇನೆ. ನಿಮ್ಮ ಜೊತೆ ನಿಲ್ಲುತ್ತೇವೆ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ. ಏನು ಮಾಡಬೇಕೆಂದು ಆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳು ತ್ತೇವೆ. ನನಗೆ ರಾಜಕಾಣವೇ ಒಲವಿಲ್ಲ, ಕಾರ್ಯಕರ್ತರಿಗಾಗಿ ಇದ್ದೇನೆ. ಸಿಎಂ ಸ್ಥಾನದಿಂದ ಕೆಳಗಿಳಿದಾಗಲೇ ತೀರ್ಮಾನ ಮಾಡಬೇಕೆಂದಿದ್ದೆ. ಸಿಎಂ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ತೇವೆ ಎಂದಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಯಾರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿ ಕೊಂಡಿದ್ದರೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಮ್ಮ ಆರನೇ ಗ್ಯಾರಂಟಿಯನ್ನು ಇತ್ತೀಚೆಗೆ ಘೋಷಣೆ ಮಾಡಿದ್ದರು. ಆದರೆ ರಾಜ್ಯದಲ್ಲಿ ಕೆಲವೇ ದಿನದಲ್ಲಿ ಏಳನೇ ಗ್ಯಾರಂಟಿ ಕೂಡಾ ಜಾರಿಯಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.