ಮೈಸೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ವಿಪಕ್ಷಗಳ ಟೀಕೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಮಾನತೆ ವಿರೋಧಿಸಿದವರೇ ಶಕ್ತಿ ಯೋಜನೆ ವಿರೋಧಿಸ್ತಿದ್ದಾರೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.H.C.ಮಹದೇವಪ್ಪ ವಾಗ್ದಾಳಿ ನಡೆಸಿದರು. ಅಂದು ಮನುವಾದಿಗಳು ಮಹಿಳೆಯರ ಸಮಾನತೆಯನ್ನ ವಿರೋಧಿಸಿದ್ದರು. ಇಂದು ಮಹಿಳೆಯರ ಉಚಿತ ಬಸ್ ಸೌಲಭ್ಯವನ್ನೂ ಟೀಕೆ ಮಾಡ್ತಿದ್ದಾರೆ. ಮಹಿಳೆಯರ ಉಚಿತ ಬಸ್ ಸೌಲಭ್ಯದ ಬಗ್ಗೆಯೂ ವ್ಯಂಗ್ಯವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Author: Prajatv Kannada
ಚಿತ್ರದುರ್ಗ: ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿಯಾಗಿ ಪರಿಣಾಮ ಮೂರು ತಿಂಗಳ ಕಂದಮ್ಮ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಘಟನೆಯು ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಅತೀ ವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಮೃತಪಟ್ಟಿ ದ್ದಾರೆ. ಮೃತರನ್ನು ಜಾಕೀರ್ ಆಹಮದ್,( 60) ತಬಸಮ್, (28)ಮತ್ತು ಹಯತ್ ಫಾತೀಮಾ (03) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಜೀಯಾ (22), ಇಮ್ರಾನ್ ಖಾನ್ (32) ಶೋಯೆಬ್ ಆಹಮದ್( 30) ತಬ್ರೇಜ್ ಆಹಮದ್ (27) ಮತ್ತು ಸಬಾ (26) ಎಂದು ಗುರುತಿಸಿದ್ದು, ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಕೂಡ ಗೋವಾದಿಂದ ಬೆಂಗಳೂ ರಿಗೆ ಪ್ರಯಾಣ ಮಾಡುತ್ತಿದ್ದರು. ಎಂದು ತಿಳಿದು ಬಂದಿದೆ. ಭರ ಮಸಾಗರ ಪೊಲೀಸರು ಪರಿ ಶೀಲ ನೆ ನಡೆಸುತ್ತಿದ್ದಾರೆ.
ಬೆಂಗಳೂರು: ಶಕ್ತಿ ಯೋಜನೆಯನ್ನು ಮತ್ತಷ್ಟು ಸರಳೀಕೃತ ಮಾಡಿದ ಸರ್ಕಾರ.ಫ್ರೀ ಬಸ್ ಸಂಚಾರಕ್ಕೆ ಮೂಲ ಗುರುತಿನ ಚೀಟಿ ಕಡ್ಡಾಯ ಇಲ್ಲ ಇನ್ಮೇಲೆ ಐಡಿ ಕಾರ್ಡ್ ನಕಲಿ ಪ್ರತಿಯನ್ನ ತೋರಿಸಿ ಪ್ರಯಾಣ ಮಾಡಬಹುದು. ಹಾರ್ಡ್ ಅಥವಾ ಸಾಫ್ಟ್ ಕಾಪಿ ಹಾಜರಿ ಪಡಿಸಿ ಟಿಕೆಟ್ ಪಡೆಯಲು ಅವಕಾಶ ಈ ಮೊದಲು ಮೂಲ ಗುರುತಿನ ಚೀಟಿ ಕಡ್ಡಾಯ ಎಂದಿದ್ದ ಸಾರಿಗೆ ನಿಗಮಗಳು. ಇದೀಗ ಮತ್ತಷ್ಟು ಸರಳೀಕೃತ ಗೊಳಿಸಿ ಆದೇಶ ಹೊರಡಿಸಿದ ಕೆಎಸ್ಆರ್ಟಿಸಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ(Congress Government) ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ(Free Bus Travel For Women Scheme) ಎರಡನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್ಆರ್ಟಿಸಿ, ಸರ್ಕಾರಿ ಬಸ್ಗಳು ಫುಲ್ ಆಗಿದ್ದು ಖಾಸಗಿ ಬಸ್ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಇದೀಗ ವರದಿ ಬಗ್ಗೆ ಕೇಂದ್ರ ಸರ್ಕಾರವೂ ಉತ್ತರ ನೀಡಿದೆ. ಈಗ ಅದಕ್ಕೆ ಕರ್ನಾಟಕ ಸರ್ಕಾರ ಮರು ಉತ್ತರ ಕೊಡಬೇಕಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಡಾ.ಶಿವಾನಂದ ಜಾಮದಾರ ಆಗ್ರಹಿಸಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಲಿಂಗಾಯತ ಧರ್ಮ ವಿಚಾರದಲ್ಲಿ ಏನೆಲ್ಲ ನಡೆದಿದೆ ಗೊತ್ತು. ಹೆಚ್.ಡಿ ಕುಮಾರಸ್ವಾಮಿ ಲಿಂಗಾಯತ ಧರ್ಮದ ಫೈಲ್ ಮುಟ್ಟಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ. ಬಿಎಸ್ ಯಡಿಯೂರಪ್ಪ ಸಹ ಲಿಂಗಾಯತ ವಿರೋಧಿಗಳಂತೆ ನಡೆದುಕೊಂಡರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಏನೆಲ್ಲ ಮಾಡಿದ್ರು ಅಂತಾ ಗೊತ್ತಿದೆ. ಲಿಂಗಾಯತ ಧರ್ಮದ ವಿಚಾರವಾಗಿ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣದಲ್ಲಿ ಹಲವು ಹೋರಾಟಗಳು ನಡೆದಿವೆ ಎಂದರು.
ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಸಿಮಿ ಮರಿಯಂ ಜಾರ್ಜ್, ಎಐಜಿಪಿ, ಅಪರಾಧ ವಿಭಾಗ, ಬೆಂಗಳೂರು, ಅರುಣ್ ರಂಗರಾಜನ್, ಎಸ್ಪಿ, ಐಎಸ್ಡಿ, ಉತ್ತರ ವಿಭಾಗ, ಹುಬ್ಬಳ್ಳಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು: ಅವರಿಬ್ಬರೂ ಪರಸ್ಪರ ಎರಡು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು ಜೊತೆಯಲ್ಲೇ ಸುತ್ತಾಡಿದರು ಆದರೆ ಈಗ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಅನ್ಯ ಕೋಮಿನ ಯುವಕ ಅಂತ ತಿಳಿದ ಬಳಿಕ ಈಗ ಯುವತಿ ಪೊಲೀಸ್ ಮೆಟ್ಟಿಲೇರಿದ್ದಾಳೆ.. ಅಷ್ಟಕ್ಕೂ ಈ ಘಟನೆ ನಡೆದಿದ್ದಾದರೂ ಎಲ್ಲಿ ಅಂತೀರಾ ಸ್ಟೋರಿ ನೋಡಿ.. ಹೌದು ಇತ್ತೀಚೆಗೆ ದೆಹಲಿ, ಕೇರಳ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಯಲ್ಲಿ ಲವ್ ಜಿಹಾದ್ ಗಾಳಿ ಬೀಸಿದೆ. ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಕಿರಾತಕ ಯುವತಿಯನ್ನ ವಂಚಿಸಿದ್ದಾನೆ. ರೈಮಂಡ್ ಮತ್ತು ಬ್ಲಾಕ್ ಬೇರಿಸ್ ಗಾರ್ಮೆಂಟ್ಸ್ ರಿಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಯುವತಿ ನಗರದಲ್ಲಿ ವಾಸವಾಗಿದ್ದಾರೆ. ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರಿಂದ ಪ್ರಾರಂಭದಲ್ಲಿ ಕ್ರಿಶ್ಚಿಯನ್ ಧರ್ಮ ಮೆಲ್ಬಿನ್ ಎಂದು ಹೆಸರು ಹೇಳಿಕೊಂಡು…
ಬೆಂಗಳೂರು: ಗೌರ್ಮೆಂಟ್ ಬಸ್‌ನಲ್ಲಿ ಫ್ರೀ ಆಗಿ ಓಡಾಡೋ ಟೈಮ್ ಕೊನೆಗೂ ಬಂದೇ ಬಿಟ್ಟಿದೆ. ಹೌದು.. ಇಷ್ಟು ದಿನ 5 ಗ್ಯಾರಂಟಿ ಯೋಜನೆಗಳಲ್ಲಿ, ಒಂದಾದ್ರೂ ಜಾರಿ ಆದರೆ ಸಾಕು ಅಂತಿದ್ದವರಿಗೆ, ಈಗ ಉತ್ತರ ಸಿಕ್ಕಿದೆ. ನಿನ್ನೆ ಶಕ್ತಿ ಯೋಜನೆಗೆ ಚಾಲನೆ ಸಿಕ್ಕ ಬೆನ್ನಲ್ಲೇ ಇವತ್ತು ಉಚಿತ ಪ್ರಯಾಣ ಅನ್ನೊ ಜೋಷ್‌ನಲ್ಲಿ ಮಹಿಳಾಮಣಿಗಳು ಸರ್ಕಾರಿ ಬಸ್‌ಗಳತ್ತ ದೌಡಾಯಿಸಿಕೊಂಡು ಬಂದರು. ಮುಂಜಾನೆಯಿಂದ್ಲೇ ನಗರದ ಬಸ್ಗಳೆಲ್ಲವೂ ಫುಲ್ ರಶ್ ಆಗಿದ್ದು,ಶಕ್ತಿ ಯೋಜನೆಗೆ ರಾಜಧಾನಿಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಯ್ತು.ಹಾಗಾದ್ರೆ ಎರಡನೇಯ ದಿನದ ಶಕ್ತಿ ಯೋಜನೆಗೆ ಹೇಗಿತ್ತು ರೆಸ್ಪಾನ್ಸ್ ಬನ್ನಿ ನೋಡೋಣ.. ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಯನ್ನ ಜನರ ಮುಂದೆ ಇಟ್ಟಿತ್ತು.ಆದ್ರೆ ಅಧಿಕಾರ ಹಿಡಿದ ಬೆನ್ನಲ್ಲೇ ಗ್ಯಾರಂಟಿಗಳಿಗೆ ಕ್ಯಾಬಿನೆಟ್ ನಲ್ಲಿ ತಾತ್ವಿಕ ಒಪ್ಪಿಗೆ ಪಡೆದು,ನಿನ್ನೆ ಮೊದಲ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನ ಜಾರಿ ಮಾಡಿದೆ.ನಿನ್ನೆ ಸಿಎಂ ಶಕ್ತಿ ಯೋಜನೆಗೆ ಚಾಲನೆ ಸಿಕ್ಕ ಬೆನ್ನಲ್ಲೇ ಇವತ್ತು ಬಸ್ ಗಳಲ್ಲಿ ಮಹಿಳೆಯರು ಫ್ರೀ ಸಂಚಾರಕ್ಕೆ ಮುಗಿಬಿದ್ದಿದ್ರು..ಆಟೋ, ಕಾರು,ಮೆಟ್ರೋ ಬಿಟ್ಟು ಸರ್ಕಾರಿ ಬಸ್ ಮೊರೆ ಹೋದರು..ಬಿಎಂಟಿಸಿ…
ಬೆಂಗಳೂರು: ಹಳೇ ಇಂದಿರಾ ಕ್ಯಾಂಟೀನ್‍ಗೆ ಹೊಸ ರೂಪ ಕೊಟ್ಟು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತೀರ್ಮಾನ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 250 ಕ್ಯಾಂಟಿನ್ ಪ್ರಾರಂಭಕ್ಕೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳಲ್ಲಿನ ಮೆನು ಬದಲಾವಣೆ ಮಾಡುವ ಮೂಲಕ ಹೊಸದಾಗಿ ಟೆಂಡರ್ ಕರೆಯಲು ಸರ್ಕಾರ ತೀರ್ಮಾನ ಮಾಡಿದೆ ಎಂದರು. ಹಳೇ ದರದಲ್ಲೇ ಇಂದಿರಾ ಕ್ಯಾಂಟೀನ್ ಊಟ ಸಿಗಲಿದೆ. ಟೆಂಡರ್ ಪ್ರಕ್ರಿಯೆ ಆದ ಕೂಡಲೇ ರೀ ಲಾಂಚ್ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರು: ನನಗೆ ರಾಜ್ಯ ರಾಜಕಾರಣದ ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣ ಮಾಡುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದರು. ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ (BJP) ಜೊತೆ ಮೈತ್ರಿ ಬಗ್ಗೆ ಕೇಳಿದ್ದಕ್ಕೆ, ಇದೆಲ್ಲವೂ ಗಾಳಿ ಸುದ್ದಿ. ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು ಹಾಗೂ ಸೋತವರ ಜೊತೆ ಚರ್ಚೆ ಮಾಡಿದ್ದೇನೆ. ಚುನಾವಣಾ ಸಂದರ್ಭದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಉತ್ತರಿಸಿದರು
ಬೆಂಗಳೂರು: ನಿವೇಶನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಹಮ್ಮದ್ ಜಾವಿದ್(47), ಪತ್ನಿ ನಸೀಮ್ ತಾಜ್(43), ಸೋದರ ಮಹಮ್ಮದ್ ಆಬಿದ್(43) ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಜಮೀರ್ ಎನ್ನುವಾತ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.