ಬೆಂಗಳೂರು: ಕರ್ನಾಟಕ ಸರ್ಕಾರವು ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಿತು. ಈ ಯೋಜನೆಯ ಅಡಿ ಮಹಿಳೆಯರು ರಾಜ್ಯ ಸಾರಿಗೆಯ ನಾಲ್ಕು ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆ ಮತ್ತು ಸುರಕ್ಷಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲು ಈ ವರ್ಷ 1,894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಯೋಚಿಸಿವೆ. ಶಕ್ತಿ ಯೋಜನೆ ಅನುಷ್ಠಾನದ ನಂತರ, ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ಬಸ್‌ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸಾರಿಗೆ ನಿಮಗ ಮುಂದಾಗಿದೆ. ಹೆಚ್ಚಿನ ಬಸ್‌ಗಳ ಅಗತ್ಯವಿರುವ ಕೆಲವು ಮಾರ್ಗಗಳಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಅಂತಹ ಸಂದರ್ಭಗಳಲ್ಲಿ, ಬೇಡಿಕೆಯನ್ನು ಪೂರೈಸಲು ವೇಳಾಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ ಮತ್ತು ವೇಳಾಪಟ್ಟಿಗಳನ್ನು ತರ್ಕಬದ್ಧಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ. ನಾಲ್ಕು ನಿಗಮಗಳು 1,04,450 ಸಿಬ್ಬಂದಿ ಹೊಂದಿವೆ. ಮತ್ತು ಪ್ರಸ್ತುತ, ನಾಲ್ಕು ನಿಗಮಗಳು ರಾಜ್ಯದಾದ್ಯಂತ 23,989 ಬಸ್‌ಗಳನ್ನು ಹೊಂದಿದ್ದು, ಒಂದು ದಿನಕ್ಕೆ ಸರಾಸರಿ 65.02…
Author: Prajatv Kannada
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮಾನ್ಸೂನ್ ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದ್ದು, ಹೀಗಾಗಿ 5 ದಿನ ಮಳೆಯ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು (Fisherman) ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ವಿಜಯಪುರ…
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುನ್ನ ಪಂಚ ಗ್ಯಾರಂಟಿಗಳನ್ನ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇವತ್ತು ಮೊದಲ ಗ್ಯಾರಂಟಿಯನ್ನ ಜಾರಿ ಮಾಡಿದೆ. ಇವತ್ತು ಮಧ್ಯಾಹ್ನದಿಂದ್ಲೇ ಶಕ್ತಿ ಯೋಜನೆ ಜಾರಿಯಾಗಿದ್ದು, ಮಹಿಳೆಯರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಫ್ರೀಯಾಗಿ ಜರ್ನಿ ಮಾಡ್ತಿದ್ದಾರೆ. ಹಾಗಾದ್ರೆ ಮೊದಲ ದಿನದ ಫ್ರೀ ಬಸ್ ಜರ್ನಿ ಹೇಗಿತ್ತು. ಫಸ್ಟ್ ಡೇ ಬಸ್ ಹತ್ತಿದ್ದ ಲೇಡಿಸ್ ಏನು ಹೇಳಿದ್ರು, ಓಡೋಟ ನಡೆಸೋ ಮಹಿಳೆಯರಿಗೆ ಏನೆಲ್ಲ ರೂಲ್ಸ್ ಫಾಲೋ ಮಾಡಬೇಕು ಅನ್ನೋ ರಿಪೋರ್ಟ್ ಇಲ್ಲಿದೆ. ಚುನಾವಣೆ ಮುನ್ನ ಪಂಚ ಗ್ಯಾರಂಟಿಗಳನ್ನ ಘೋಷಿಸಿ ಅಧಿಕಾರದ ಗದ್ದಗೆ ಹಿಡಿದ ಕಾಂಗ್ರೆಸ್ ಇವತ್ತು ಮೊದಲ ಗ್ಯಾರಂಟಿ ಪೈಕಿ ಒಂದಾದ ಶಕ್ತಿ ಯೋಜನೆ ಜಾರಿ ಮಾಡಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕ ಬೆನ್ನಲ್ಲೇ ಮಹಿಳೆಯರು ಹಣ ನೀಡದೆ ಫ್ರೀ ಟಿಕೆಟ್ ತಕ್ಕೊಂಡು ಓಡಾಟ ನಡೆಸಿದರು.ಮಧ್ಯಾಹ್ನ ಮೆಜೆಸ್ಟಿಕ್ ಕೆಬಿಎಸ್ ಬಸ್ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡದ ಬಳಿಕ ಲಕ್ಷಾಂತರ ಮಹಿಳಾ ಪ್ರಯಾಣಿಕರು ಖುಷಿಯಿಂದ ಬಸ್ ಹತ್ತಿ ಓಡಾಟ…
ಸೂರ್ಯೋದಯ: 05.53 AM, ಸೂರ್ಯಾಸ್ತ : 06.46 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ನವಮಿ 10:34 AM ತನಕ ನಂತರ ದಶಮಿ ನಕ್ಷತ್ರ: ಇವತ್ತು ಉತ್ತರಾ ಭಾದ್ರ 01:49 PM ತನಕ ನಂತರ ರೇವತಿ ಯೋಗ: ಇವತ್ತು ಆಯುಷ್ಮಾನ್ 07:53 AM ತನಕ ನಂತರ ಸೌಭಾಗ್ಯ ಕರಣ: ಇವತ್ತು ಗರಜ 10:34 AM ತನಕ ನಂತರ ವಣಿಜ 09:58 PM ತನಕ ನಂತರ ವಿಷ್ಟಿ ರಾಹು ಕಾಲ: 07:30ನಿಂದ 09:00 ವರೆಗೂ ಯಮಗಂಡ:10:30 ನಿಂದ 12:00 ವರೆಗೂ ಗುಳಿಕ ಕಾಲ:03:00 ನಿಂದ 04:30 ವರೆಗೂ ಅಮೃತಕಾಲ: 09.10 AM to 10.43 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:49 ನಿಂದ ಮ.12:41 ವರೆಗೂ ಮೇಷ ರಾಶಿ ಮಕ್ಕಳ ವಿಚಾರದಲ್ಲಿ ಮನಃಸ್ತಾಪ. ಸಂಗಾತಿಯ ಮನಸ್ತಾಪ. ಪರರಿಗೆ ನಿಂದಿಸುವಿರಿ, ಇದರಿಂದ ದೊಡ್ಡ ಆಘಾತ ಸಂಭವ. ಸ್ನೇಹಿತರಿಂದ ಬೇಸರ. ಏಕಾಂಗಿತನದ…
ನವದೆಹಲಿ: ಭಾರತ-ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ. ಟೆಸ್ಟ್ ವಿಶ್ವಕಪ್ ಫೈನಲ್ ಪಂದ್ಯದ ಎರಡನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ 31 ಎಸೆತಗಳನ್ನು ಎದುರಿಸಿ ಕೇವಲ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿ ತಂಡದ ಸಹ ಆಟಗಾರರ ಜತೆ ಊಟ ಮಾಡುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ನೆಟ್ಟಿಗರು ವಿರಾಟ್ ಕೊಹ್ಲಿಯನ್ನು ಸಾಕಷ್ಟು ಟ್ರೋಲ್ ಮಾಡಿದ್ದರು. ಇದೀಗ ವಿರಾಟ್ ಕೊಹ್ಲಿ ಒಂದು ಗೂಢಾರ್ಥದ ಪೋಸ್ಟ್ ಮಾಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಆಸ್ಟ್ರೇಲಿಯಾ ತಂಡವನ್ನು 469 ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, 30 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್‌ಗಳಾದ ಶುಭ್‌ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಇಬ್ಬರು ಪೆವಿಲಿಯನ್ ಸೇರಿದ್ದರು. ಹೀಗಾಗಿ ಟೆಸ್ಟ್ ಸ್ಪೆಷಲಿಸ್ಟ್…
ಕನ್ನಡ ಕಿರುತೆರೆ ಮತ್ತು ಹಿರಿತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ಕಾವ್ಯ ಶಾ ಸಾಕಷ್ಟು ದಿನಗಳ ನಂತರ ಹೊಸ ಫೋಟೋ ಶೂಟ್ ಮಾಡಿಸಿದ್ದು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮದುವೆಯ ಬಳಿಕ ಮೊದಲ ಫೋಟೋ ಶೂಟ್ ಮಾಡಿಸಿದ್ದು ಫೋಟೋಗಳಲ್ಲಿ ನಟಿ ಕಾವ್ಯ ಶಾ ಸಖತ್ತಾಗಿ ಮಿಂಚಿದ್ದಾರೆ. ಕನ್ನಡ, ತಮಿಳು ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳನ್ನು ಮಾಡಿರುವ ಕಾವ್ಯ ಶಾ ಬಂಗಾರ, ಚಿ.ಸೌ ಸಾವಿತ್ರಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದು, ಮನರಂಜನೆ ವಾಹಿನಿಗಳಲ್ಲಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದಾರೆ. ಕಳೆದ ವರ್ಷವಷ್ಟೇ ಕಾವ್ಯ ಶಾ ಮಾಧ್ಯಮ ಕ್ಷೇತ್ರದಲ್ಲೇ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ವರುಣ್ ಎಂಬುವವರ ಜೊತೆ ಹಸೆಮಣೆ ಏರಿದ್ದಾರೆ. ವರುಣ್ ಗೆ ಕನ್ನಡದ ಬಹುತೇಕ ಸ್ಟಾರ್ ನಟರ ಜತೆ ಒಡನಾಟವಿದೆ. ಜೀ ಕನ್ನಡ ವಾಹಿನಿ ಸೇರಿದಂತೆ ಕನ್ನಡದ ನಾನಾ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ವರುಣ್ ಕೆಲಸ ಮಾಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ಸದಾ ಕ್ರಿಕೆಟ್ ಆಡುತ್ತಿದ್ದ ವಿಷ್ಣು ದಾದ ವೃತ್ತಿಪರ ಕ್ರಿಕೆಟ್ ಆಟಗಾರರ ಜೊತೆಯೂ ಪಂದ್ಯಾವಳಿಗಳನ್ನು ಆಡುತ್ತಿದ್ದರು. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ. ಈ ಬಾರಿಯ ಕ್ರಿಕೆಯ ಪಂದ್ಯಾವಳಿಯು ಇದೇ ಜೂನ್ 24 ಹಾಗೂ 25 ರಂದು ಬಿಐಸಿಸಿ ಇನ್ಫಿನಿಟಿ ಔಟ್ ಡೋರ್ ಗ್ರೌಂಡ್ ಮಾಗಡಿ ರಸ್ತೆ, ಬೆಂಗಳೂರಿನಲ್ಲಿ ನಡೆಯಲಿದೆ. ಈ ಮಾಹಿತಿಯನ್ನು ಮೊನ್ನೆಯಷ್ಟೇ ಕಿಚ್ಚ ಸುದೀಪ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ‘ನಮ್ಮ ಉದ್ದೇಶಗಳು ಸರಿಯಾಗಿದ್ದರೆ, ಅವು ನಮ್ಮ ನಂತರವೂ ಜೀವಂತವಾಗಿರುತ್ತವೆ ಎಂಬುದಕ್ಕೆ ಉದಾಹರಣೆ ಈ ಯಜಮಾನ ಪ್ರೀಮಿಯರ್ ಲೀಗ್’ ಎಂದು ಬರೆದುಕೊಂಡಿದ್ದರು. ಡಾ.ವಿಷ್ಣು ಸೇನಾ ಸಮಿತಿಯು ಹಮ್ಮಿಕೊಂಡಿರುವ ಎರಡನೇ ಸೀಸನ್ ಇದಾಗಿದ್ದು, ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ವಿಷ್ಣು ಸೇನಾನಿಗಳು ಪಂದ್ಯಗಳನ್ನು ಆಡಲಿದ್ದಾರೆ.…
ಕೆಲವು ಹೂವುಗಳು ತೋಟಗಾರರಿಗೆ ಸಂತೋಷವನ್ನು ನೀಡುತ್ತವೆ ಏಕೆಂದರೆ ಅವುಗಳು ಎಲ್ಲವನ್ನೂ ಹೊಂದಿವೆ ಸಾಮಾನ್ಯವಾಗಿ ಮಲ್ಲಿಗೆ ಹೂವು ಅಂದರೆ ಮಹಿಳೆಯರಿಗೆ ಬಹಳ ಇಷ್ಟ. ಸೀರೆಯೊಂದಿಗೆ ಮಲ್ಲಿಗೆ ಹೂವು ಮುಡಿದ ಹೆಣ್ಣು ಮಕ್ಕಳನ್ನು ನೋಡಲು ಎರಡು ಕಣ್ಣು ಸಾಲದು ಎಂದೇ ಹೇಳಬಹುದು. ಅಷ್ಟೇ ಅಲ್ಲದೇ ಮಲ್ಲಿಗೆ ಹೂವಿಗೆ ಹಲವರ ಮೂಡ್ ಬದಲಾಯಿಸುವಷ್ಟು ಸಾಮರ್ಥ್ಯವಿದೆ ಎಂದು ಹೇಳಿದರೂ ತಪ್ಪಾಗುವುದಿಲ್ಲ. ಮಲ್ಲಿಗೆಯನ್ನು ಹೂವುಗಳ ರಾಣಿ ಎಂದು ಕರೆಯಲಾಗುತ್ತದೆ. ಇದು ಮನಸ್ಸಿಗೆ ಸಂತೃಪ್ತಿಗೊಳಿಸುವ ಮತ್ತು ಉಲ್ಲಾಸವನ್ನು ಉಂಟು ಮಾಡುವ ಸೊಗಸಾದ ಪರಿಮಳವನ್ನು ಹೊಂದಿದೆ. ಹಾಗಾಗಿ ಮಲ್ಲಿಗೆ ಹೂವನ್ನು ಬೆಲ್ಲೆ ಆಫ್ ಇಂಡಿಯಾ ಅಥವಾ ಸುಗಂಧದ ರಾಣಿ ಎಂದು ಕರೆಯಲಾಗುತ್ತದೆ. ಮಲ್ಲಿಗೆ ಹೂ ಹಲವಾರಿ ಔಷಧಿಯ ಗುಣಗಳನ್ನು ಕೂಡ ಹೊಂದಿದೆ. ಮಲ್ಲಿಗೆ ಹೂವನ್ನು ಚಹಾ, ಜ್ಯೂಸ್, ಕ್ಯಾಂಡಿಗಳು ಮತ್ತು ವಿವಿಧ ಆಹಾರಗಳೊಂದಿಗೆ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ತೂಕ ಇಳಿಕೆ: ಬೇಗ ತೂಕ ಇಳಿಸಿಕೊಳ್ಳಲು ಇಚ್ಛಿಸುವವರು ಮಲ್ಲಿಗೆ ಆಧಾರಿತ ಆಹಾರ ಸೇವಿಸಬೇಕು. ಎಪಿಗಲ್ಲೊಕಾಟೆಚಿನ್ ಗ್ಯಾಲೇಟ್ ಮತ್ತು ಗ್ಯಾಲಿಕ್ ಆಮ್ಲದ ಉಪಸ್ಥಿತಿಯು ಚಯಾಪಚಯವನ್ನು ವೇಗಗೊಳಿಸುತ್ತದೆ…
ವಾಷಿಂಗ್ಟನ್: ಸಲಿಂಗಿಗಳು, ದ್ವಿಲಿಂಗಿಗಳು, ಲಿಂಗ ಪರಿವರ್ತಿತರಿಗೆ ಭಾರತದಲ್ಲಿ ಸಮಾನ ಹಕ್ಕುಗಳನ್ನು ಒದಗಿಸಬೇಕು ಎಂದು ವಾಷಿಂಗ್ಟನ್ ನ ಎಲ್‌ಜಿಬಿಟಿಕ್ಯೂ ಸಮುದಾಯದವರು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಜೋ ಬೈಡನ್ ಅವರ ಆಹ್ವಾನದ ಮೇರೆಗೆ ಜೂನ್ 21ರಿಂದ ನಾಲ್ಕು ದಿನ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದು,.22ರಂದು ಮೋದಿ ಗೌರವಾರ್ಥ ಬೈಡನ್ ದಂಪತಿ ಔತಣಕೂಟ ಆಯೋಜಿಸಿದ್ದಾರೆ. ‘ಸಲಿಂಗ ವಿವಾಹ, ಎಲ್‌ಜಿಬಿಟಿಕ್ಯೂ ಸಮುದಾಯದವರ ವಿವಾಹ ಕುರಿತ ಪ್ರಕರಣದ ವಿಚಾರಣೆಯನ್ನು ಭಾರತದ ಸುಪ್ರೀಂ ಕೋರ್ಟ್ ಕೆಲ ತಿಂಗಳಿನಿಂದ ನಡೆಸುತ್ತಿದೆ. ವಿವಾಹ ಕುರಿತ ಬೇಡಿಕೆಗೆ ಪ್ರಧಾನಿ ಬೆಂಬಲಿಸಬೇಕು ಹಾಗೂ ಸಮಾನ ಹಕ್ಕುಗಳನ್ನು ನೀಡಬೇಕು ಎಂದು ಒತ್ತಾಯಿಸುತ್ತೇವೆ. ನಾವೆಲ್ಲರೂ ಮನುಷ್ಯರೇ ಆಗಿದ್ದು, ಎಲ್‌ಜಿಬಿಟಿಕ್ಯೂ ಸಮುದಾಯದವರು ಸಮಾನ ಹಕ್ಕುಗಳಿಗೆ ಅರ್ಹರು’ ಎಂದು ದೇಸಿ ರೇನ್‌ಬೋ ಸಂಘಟನೆ ಕಾರ್ಯನಿರ್ವಾಹಕ ನಿರ್ದೇಶಕ ಅರುಣಾ ರಾವ್ ಸುದ್ದಿಸಂಸ್ಥೆಗೆ ತಿಳಿಸಿದರು. ಶ್ವೇತಭವನದಲ್ಲಿ ನಡೆದ ಐತಿಹಾಸಿಕ ಪ್ರೈಡ್ ರ್ಯಾಲಿಯಲ್ಲಿ ಭಾಗವಹಿಸಲು ಆಹ್ವಾನ ಪಡೆದಿದ್ದ ಹಲವು ಭಾರತೀಯ ಅಮೆರಿಕನ್ನರಲ್ಲಿ ಅರುಣಾ ಕೂಡಾ ಒಬ್ಬರು. ರ್ಯಾಲಿ ಉದ್ದೇಶಿಸಿ ಅಧ್ಯಕ್ಷ…
ಪಾಕಿಸ್ತಾನ: ವಾಯವ್ಯ ಪಾಕಿಸ್ತಾನದಲ್ಲಿ ಬಿರುಗಾಳಿ ಹಾಗೂ ಧಾರಾಕಾರ ಮಳೆಯಿಂದಾಗಿ ಎಂಟು ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಮೃತಪಟ್ಟಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಾರ, ಈ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬನ್ನು, ದಿಖಾನ್, ಲಕ್ಕಿ ಮಾರ್ವತ್ ಮತ್ತು ಕರಕ್ ಜಿಲ್ಲೆಗಳಲ್ಲಿ ಒಟ್ಟು 34 ಜನರು ಸಾವಿಗೀಡಾಗಿದ್ದಾರೆ ಎಂದಿದ್ದಾರೆ. ಮನೆಗಳ ಚಾವಣಿ, ಗೋಡೆಗಳು ಕುಸಿದಿದ್ದು, ಮರಗಳು ಬುಡಸಮೇತ ಬಿದ್ದ ಪರಿಣಾಮ ಸಾವು, ನೋವು ಹೆಚ್ಚಾಗಿದೆ. ಗಾಯಗೊಂಡಿರುವ 110ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 69 ಮನೆಗಳಿಗೆ ಹಾನಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಾಲ್ಕು ಜಿಲ್ಲೆಗಳಲ್ಲೂ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಪಾಕಿಸ್ತಾನದಲ್ಲಿ 1700 ಕ್ಕೂ ಜನರು ಮೃತಪಟ್ಟಿದ್ದರು.