ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Government) ದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (Shakti Scheme) ಗೆ ಈಗಾಗಲೇ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇದೀಗ ಈ ಹೆಸರಿನ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ಉದ್ಘಾಟನೆ ಮಾಡಿದ ಬಳಿಕ ತಮ್ಮ ಭಾಷಣದ ವೇಳೆ ‘ಶಕ್ತಿ’ ಎಂದು ಹೆಸರು ಇಟ್ಟಿದ್ದು ಯಾಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹೆಣ್ಣುಮಕ್ಕಳಿಗೆ ಶಕ್ತಿ ತುಂಬೋಕೆ ಅಂತ ಈ ಹೆಸರು ಇಟ್ಟೆವು. ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಅಸಮತೋಲನ ಕಡಿಮೆ ಮಾಡಬಹುದು. 5 ಗ್ಯಾರಂಟಿ ಪೈಕಿ 4 ಗ್ಯಾರಂಟಿ ಮಹಿಳೆಯರಿಗೆ ಸೀಮಿತ, ಅವರಿಗೆ ಸಂಬಂಧಿಸಿದೆ. ಕೆಲವರು ಇದಕ್ಕೆ ಗೇಲಿ ಮಾಡಿ, ಕುಹಕ ಮಾತು ಆಡ್ತಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ಗೇಲಿ ಮಾಡೋರಿಗೆ, ಕುಹಕ ಮಾಡೋರಿಗೆ ಸೊಪ್ಪು ಹಾಕಲ್ಲ ಎಂದು ಹೇಳಿದರು. ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದ್ರೆ ಪುರುಷರಷ್ಟೆ ಮಹಿಳೆಯರಿಗೆ ಅವಕಾಶ ಸಿಗಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಲ್ಲದೆ ಹೋದ್ರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದೇ ಅಭಿವೃದ್ಧಿ…
Author: Prajatv Kannada
ಬೀದರ್: ಇಂದು ಕಾಂಗ್ರೆಸ್ ಸರ್ಕಾರ ಮೊದಲ ಶಕ್ತಿ ಯೋಜನೆ ಜಾರಿಯಾಗಿದೆ. ಮಹಿಳೆಯರಿಗೆ ಸಬಲಿಕರಣ ಮಾಡುವ ಈ ಶಕ್ತಿ ಯೋಜನೆಯಾಗಿದೆ. ಕಾರ್ಮಿಕ ವರ್ಗ, ಕೆಲಸ ಕಾರ್ಯಗಳಿಗೆ ತೆರಳುವ ಮಹಿಳೆಯರಿಗೆ ಈ ಯೋಜನೆ ಅನುಕುಲವಾಗಲಿದೆ. ಮಹಿಳೆಯರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸಿದ್ದರಾಮಯ್ಯ ಐದು ವರ್ಷ ಪುರ್ಣ ಅವದಿ ಸಿಎಂ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ ಪ್ರಶ್ನೆಯಾಗಿದೆ. 136 ಜನ ಶಾಸಕರು ಗೆದ್ದಿದ್ದಾರೆ. ಈ ಸರ್ಕಾರಕ್ಕೆ ಯಾರಿಂದಲೂ ಅಲಿಗಾಡಿಸಲು ಸಾಧ್ಯವಿಲ್ಲ. ಸರ್ಕಾರ ಯಾವ ರೀತಿ ಆಡಳಿತ ನಿಡುತ್ತಿದೆ ಅನ್ನುವುದು ಪ್ರಮುಖವಾದದ್ದು. ಹಗರಣ ರಹಿತ, ಪಾರದರ್ಶಕ ಆಡಳಿತ ನಿಡುವ ನಮ್ಮ ಸರ್ಕಾರ ಬಂಡೆಯಂತಿದೆ ಎಂದರು.
ಮಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಷರತ್ತುಗಳನ್ನು ವಿಧಿಸುವ ಮೂಲಕ ಜನತೆಗೆ ಚುನಾವಣೆ ವೇಳೆ ನೀಡಿದ ಭರವಸೆಯಂತೆ ನಡೆದುಕೊಂಡಿಲ್ಲ. ಉಚಿತ ವಿದ್ಯುತ್ ಯೋಜನೆಯೂ ಸುಳ್ಳಾಗಿದ್ದು, ಜನತೆ ಯಾರೂ ಕರೆಂಟ್ ಬಿಲ್ ಪಾವತಿಸಬಾರದು, ಒಂದು ವೇಳೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರೆ ನಾವಿದ್ದೇವೆ, ಜನರೊಂದಿಗೆ ಸೇರಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ದ.ಕ. ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಉಚಿತ ಪ್ರಯಾಣ, ಉಚಿತ ವಿದ್ಯುತ್, ಉಚಿತ ಗೃಹಲಕ್ಷ್ಮಿ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ಶರ್ತ ವಿಧಿಸಿ ಜಾರಿಗೊಳಿಸುತ್ತಿದ್ದಾರೆ. ಈಗ ವಿದ್ಯುತ್ ಬಿಲ್ ಕೂಡ ದುಪ್ಪಟ್ಟು ಬರಲಾರಂಭಿಸಿದೆ. ಇದರಿಂದ ಜನತೆ ಆಕ್ರೋಶಗೊಂಡಿದ್ದು, ಜನತೆಯ ಜತೆ ನಾವಿದ್ದೇವೆ. ಚುನಾವಣೆ ವೇಳೆ ಯಾವುದೇ ಮಾರ್ಗಸೂಚಿಯನ್ನು ಹೊಂದದೆ ಎಲ್ಲರಿಗೆ ಉಚಿತ ಎಂದು ಸಿದ್ದರಾಮಯ್ಯ ಹೇಳಿ ಈಗ ಜನರನ್ನು ವಂಚಿಸುವುದು ಸರಿಯಲ್ಲ ಎಂದರು. ದ.ಕ. ಸೇರಿದಂತೆ ಕರಾವಳಿಯಲ್ಲಿ ಖಾಸಗಿ ಬಸ್‌ಗಳಲ್ಲಿ ಮಹಿಳೆಯರು ಸಂಚರಿಸುತ್ತಿದ್ದಾರೆ. ಸರ್ಕಾರ ಉಚಿತ ಪ್ರಯಾಣ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯಿಸಬೇಕು.…
ಬೆಂಗಳೂರು: ಚುನಾವಣೆ ಪೂರ್ವದಲ್ಲಿ 5 ಗ್ಯಾರಂಟಿ ಘೋಷಣೆ ಮಾಡಿದ್ದೇವು. ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕೆಂಬುದು ನಮ್ಮ ಉದ್ದೇಶ. ಚುನಾವಣಾ ಪ್ರಣಾಳಿಕೆಯಲ್ಲಿ ಅನೇಕ ಭರವಸೆ ಕೊಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳು ಪ್ರಮುಖವಾದದ್ದು. ನಾನು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆ ಮನೆಗೆ ಗ್ಯಾರಂಟಿ ವಿತರಿಸಿದ್ದೇವು. ಗ್ಯಾರಂಟಿ ಕಾರ್ಡ್ ಕೊಟ್ಟಿದ್ದನ್ನು ವಿಪಕ್ಷಗಳು ಗೇಲಿ ಮಾಡಿದ್ದರು. ವಿಪಕ್ಷಗಳ ಟೀಕೆಗೆ ನಾವು ವಿಚಲಿತರಾಗಲಿಲ್ಲ. ರಾಜ್ಯದ ಜನರ ಆಶೀರ್ವಾದಿಂದ ನಮಗೆ ಸ್ಪಷ್ಟ ಬಹುಮತ ಸಿಕ್ಕಿತು. ಮೊದಲ ಕ್ಯಾಬಿನೆಟ್ನಲ್ಲೇ ಗ್ಯಾರಂಟಿಗಳಿಗೆ ಒಪ್ಪಿಗೆ ನೀಡಿದ್ದೆವು ಯಾವ್ಯಾವ ಗ್ಯಾರಂಟಿ ಯಾವ ದಿನ ಜಾರಿ ಎಂದು ಆದೇಶ ಹೊರಡಿಸಿದ್ದೇವೆ. ಅದರಂತೆಯೇ ಇಂದು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನೂ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಪಾಲ್ಗೊಂಡಾಗ ಮಾತ್ರ ದೇಶ ಅಭಿವೃದ್ದಿ. ಬಡವರ ಜೇಬಿಗೆ ದುಡ್ಡು ಹಾಕುವುದೇ ನಮ್ಮ ಸರ್ಕಾರದ ಉದ್ದೇಶ. 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳು ಮಹಿಳೆಯರಿಗೆ ಸೀಮಿತವಾಗಿದೆ. ಹೆಣ್ಣು ಸಮಾಜದ ಕಣ್ಣು ಇದ್ದಂತೆ ಎಂದು…
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಳ ಒಪ್ಪಂದದ ರಾಜಕೀಯದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿರುವ ಬಗ್ಗೆ ಸರ್ಕಾರ ತನಿಖೆ ಮಾಡಿಸುತ್ತದೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಎಲ್ಲ ತೀರ್ಮಾನಗಳನ್ನು ಈಗಿನ ಸರ್ಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ ಚುನಾವಣೆ ಒಳ ಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ? ಸಿ.ಟಿ.ರವಿ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂದಿದ್ದಾರೆ. ಹಾಗಾಗಿ ಯಾರ ಜತೆ ಒಪ್ಪಂದ ಮಾಡಿಕೊಂಡಿದ್ದೀರಿ. ಇದರ ಬಗ್ಗೆ ತನಿಖೆ ಮಾಡುತ್ತೀರಾ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು. ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಂಗಳೂರು ಮಹಾನಗರದ ಮುಖಂಡರ ಸಭೆಯನ್ನು ನಡೆಸಲಾಗಿದೆ. ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಪಕ್ಷದ ಸಂಘಟನೆಯಲ್ಲಿ ಭಾಗಿಯಾಗದವರನ್ನು ಪಕ್ಷದಿಂದ ತೆಗೆಯುತ್ತೇವೆ. ಅರ್ಹತೆ ಆಧಾರದ ಮತ್ತು ಸಮುದಾಯದ ಆಧಾರದ ಮೇಲೆ ನಾನು ಅಧಿಕಾರ ಹೊಣೆಗಾರಿಕೆ ನೀಡುತ್ತೇವೆ ಎಂದರು. ಕಾಂಗ್ರೆಸ್‌ನದು 45 ಪರ್ಸೆಂಟ್ ಸರ್ಕಾರ: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದ 675 ಕೋಟಿ…
ಬೆಂಗಳೂರು: ಕಪ್ಪು ಹಣ ತಂದು ನಮ್ಮ ಅಕೌಂಟ್‌ಗೆ ಹಾಕಲೇ ಇಲ್ಲ. ಈಗ ನಾವು ಅವರ ಮೇಲೆ ಅಭಿಯಾನ ಶುರು ಮಾಡಬೇಕಾಗುತ್ತದೆ ಎಂದು ಬಿಜೆಪಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಕಿಡಿಕಾರಿದರು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಸವಣ್ಣನ ನಾಡಿನಲ್ಲಿದ್ದೇವೆ. ನುಡಿದಂತೆ ನಡೆಯೋದು ಕಾಂಗ್ರೆಸ್ ಶಕ್ತಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಟೀಕೆ ಮಾಡೋದ್ರಿಂದ ವಿರೋಧ ಪಕ್ಷಗಳನ್ನು ತಿದ್ದೋ ಕೆಲಸ ಮಾಡ್ತೀವಿ ಎಂದು ತಿಳಿಸಿದರು. ಬಿಜೆಪಿಯವರು ಕಪ್ಪು ಹಣ ತಂದು ಅಕೌಂಟ್‌ಗೆ ಹಾಕಲಿಲ್ಲ. ಆದಾಯ ಡಬಲ್ ಮಾಡಲಿಲ್ಲ. ಯುವಕರಿಗೆ ಉದ್ಯೋಗಗಳನ್ನು ಕೊಡಲಿಲ್ಲ. ನಾವು ಬಿಜೆಪಿ ವಿರುದ್ದ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಲೇವಡಿ ಮಾಡಿದರು. ಇವತ್ತು ಪವಿತ್ರವಾದ ದಿನ. ಜನರನ್ನು ಸಂತೋಷ ಪಡಿಸುವುದೇ ನಿಜವಾದ ಈಶ್ವರನ ಪೂಜೆ. ನಾನು ಈಗ ಈಶ್ವರನ ಪೂಜೆ ಮಾಡಿ ಬಂದಿದ್ದೇನೆ. ಜನರಲ್ಲಿ ಈಶ್ವರನನ್ನ ನೋಡುತ್ತಿದ್ದೇನೆ ಎಂದು ಹೇಳಿದರು. ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ…
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ (Free Bus Travel) ಒಂದೇ ವರ್ಷ ಇರೋದು ಅಂತ ಬಿಜೆಪಿಯವರು ಹೇಳ್ತಾರೆ. ಆದರೆ ಈ ಯೋಜನೆ 5 ವರ್ಷ ಪೂರ್ತಿ ಇರುತ್ತೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದರು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ವಿಧಾನಸೌಧದಲ್ಲಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತ್ತೆ ಚುನಾವಣೆ ಆಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಆಮೇಲೂ ಉಚಿತ ಕೊಡ್ತೀವಿ. 10 ವರ್ಷವೂ ಉಚಿತ ಕೊಡ್ತೀವಿ ಎಂದು ಭರವಸೆ ನೀಡಿದರು. ಬಸ್ ಸ್ಟಾಪ್ ಇರೋ ಕಡೆ ಬಸ್ ಕಡ್ಡಾಯವಾಗಿ ನಿಲ್ಲಿಸಬೇಕು. ನಮ್ಮ ಇಲಾಖೆಗೆ ಒಳ್ಳೆ ಹೆಸರು ತರಬೇಕು. ನನ್ನ ಅವಧಿಯಲ್ಲಿ 203 ಪ್ರಶಸ್ತಿ ಇಲಾಖೆಗೆ ಬಂದಿತ್ತು. ಬಿಜೆಪಿ ಅವಧಿಯಲ್ಲಿ 50 ಪ್ರಶಸ್ತಿ ಮಾತ್ರ ಬಂದಿದೆ. ಕಾರ್ಪೋರೇಷನ್ ನಷ್ಟದಲ್ಲಿ ಇದೆ, ಹೇಗೆ ನಡೆಸುತ್ತಾರೆ ಅಂತ ಹೇಳ್ತಾರೆ. ಪ್ರತಿ ತಿಂಗಳು ಲೆಕ್ಕ ಕೊಡ್ತೀವಿ. ಎಷ್ಟು ಜನ ಓಡಾಡುತ್ತಾರೆ ಅಂತ ಲೆಕ್ಕ ಕೊಡ್ತೀವಿ. ಮಹಿಳೆಯರ ಸಬಲೀಕರಣಕ್ಕೆ…
ಬೆಂಗಳೂರು: ವಿಧಾನಸೌಧದಿಂದ ಮೆಜೆಸ್ಟಿಗೆ ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಮೆಜೆಸ್ಟಿಕ್ನಲ್ಲಿ ಟಿಕೆಟ್ ನೀಡಿ ಮತ್ತೆ ಯೋಜನೆಗೆ ಚಾಲನೆ ನೀಡಿದ್ದಾರೆ. ಬಿಎಂಟಿಸಿಯ ಡಿಪೋ 10ರ ಕೆಎ 57 ಎಫ್ 5324 ಸಂಖ್ಯೆಯ ಬಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಇಲಾಖೆ ಅಧಿಕಾರಿಗಳು ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಬಸ್ ವಿಧಾನಸೌಧದಿಂದ ಹೋಟೆಲ್ ಕ್ಯಾಪಿಟಲ್, ರಾಜಭವನ ರಸ್ತೆ, ಮಹಾರಾಣಿ ಕಾಲೇಜ್ ಬಳಿ ಇರುವ ಅಂಡರ್ ಪಾಸ್ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್, ಕೆ.ಜಿ.ರೋಡ್ ಮೂಲಕ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತಲುಪಿದೆ.
ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಎಷ್ಟೇ ಕಷ್ಟ ಬರಲಿ ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ 5 ಗ್ಯಾರಂಟಿಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ ಎಂದು ಶಪಥ ಮಾಡಿದರು. ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ 600 ಭರವಸೆ ಕೊಟ್ಟಿತ್ತು. 60 ಭರವಸೆ ಕೂಡ ಕೊಟ್ಟಿಲ್ಲ. ಅದರ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಗ್ಯಾರಂಟಿ ಬಗ್ಗೆ ಚರ್ಚೆ ಮಾಡುತ್ತಾರೆ. ಅದಕ್ಕೆ ಕೆಲವು ಮಾಧ್ಯಮಗಳು ಕೈ ಜೋಡಿಸಿವೆ. ನಮಗೆ ಯಾವುದೇ ಜಾತಿ, ಧರ್ಮದ ಎಲ್ಲೆ ಇಲ್ಲ. ಎಲ್ಲಾ ಜಾತಿ-ಧರ್ಮದ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕ ಶಕ್ತಿ ತುಂಬೋ ಕೆಲಸ ಮಾಡುತ್ತೆ. ಗೇಲಿ ಮಾತುಗಳಿಂದ ವಿಚಲಿತರಾಗಿಲ್ಲ. ಹಿಂದೆ ನುಡಿದಂತೆ ನಡೆದಿದೆ ಎಂದರು. ಗೃಹಜ್ಯೋತಿ ಜುಲೈ 1 ರಿಂದ ಜಾರಿ ಆಗುತ್ತದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 16 ಕ್ಕೆ ಜಾರಿ ಆಗುತ್ತೆ. ಸದ್ಯ 40 ಸಾವಿರ ಕೋಟಿ ಹಣ ಬೇಕು. ಎಷ್ಟು ಹಣ ಖರ್ಚು ಮಾಡ್ತೀವಿ…
ಬೆಂಗಳೂರು: ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಹೆಚ್ಚು ಭಾಗಿಯಾಗಬೇಕು. 5 ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಗ್ಯಾರಂಟಿಗಳ ಟೀಕೆಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಜುಲೈ 1ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.