ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್ ಕಾರ್ಡ್ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಮಧ್ಯಾಹ್ನ ೧ ಗಂಟೆ ಮೇಲೆ ಉಚಿತ ಪ್ರಯಾಣ ಮಾಡಲು ಅವಕಾಶವಿದೆ. ಶೇ.90 ಕ್ಕಿಂತ ಹೆಚ್ಚು ಬಸ್ಗಳಲ್ಲಿ ರಾಜ್ಯದ ಯಾವುದೇ ಮೂಲೆಗೆ ಮಹಿಳೆಯರು ಹೋಗಬಹುದು ಸಮಾರಂಭದಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
Author: Prajatv Kannada
ಮೈಸೂರು: ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದ ಅವರು ನಂತರ ಅಲ್ಲಿಂದ ಸುತ್ತೂರು ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ವರುಣಾವನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯ ವಿಚಾರ ‘ ವರುಣಾವನ್ನ ತಾಲೂಕು ಮಾಡಿ ಎಂದು ಜನರು ಕೇಳಿಲ್ಲ. ತಾಲೂಕು ಮಾಡುತ್ತೇವೆ ಎಂದು ಹೇಳಿದ್ದು ಬಸವರಾಜ ಬೊಮ್ಮಾಯಿ. ನಾನು ಪ್ರಚಾರ ಮಾಡುವಾಗಲೂ ತಾಲೂಕು ಮಾಡಿ ಎಂದು ಕೇಳಿಲ್ಲ. ಬಸವರಾಜ ಬೊಮ್ಮಾಯಿ ತಾಲೂಕು ಮಾಡಿ ಎಂದು ಕೇಳಿದ್ರೆ ಮಾಡಲ್ಲ. ಜನ ಕೇಳಿದರೆ ಮಾತ್ರ ವರುಣವನ್ನು ತಾಲೂಕು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು: ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದು ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಕಿಡಿಕಾರಿದರು. ನಾವು ನುಡಿದಂತೆ ನಡೆಯುತ್ತಿದ್ದೇವೆ. ನಾವು ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ಬಿಜೆಪಿಯವರಂತೆ ವಚನ ಭ್ರಷ್ಟರಲ್ಲ. ಅನ್ನಭಾಗ್ಯ ಯೋಜನೆಯಡಿ ಜು.1ರಿಂದ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದರು.
ಮೈಸೂರು: ನಾವು ನುಡಿದಂತೆ ನಡೆಯುತ್ತಿದ್ದೇವೆ. ನಾವು ಹೇಳಿದಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ಬಿಜೆಪಿಯವರಂತೆ ವಚನ ಭ್ರಷ್ಟರಲ್ಲ. ಅನ್ನಭಾಗ್ಯ ಯೋಜನೆಯಡಿ ಜು.1ರಿಂದ ಉಚಿತವಾಗಿ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಬಿಪಿಎಲ್ ಕಾರ್ಡ್ ಇರುವವರಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದರು. ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಒಂದು ವರ್ಷದಲ್ಲಿ 100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡಬೇಕು? ಇದು ದುರುಪಯೋಗ ಅಲ್ವಾ? ಅಂತಾ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರು 190, 180, 70 ಯುನಿಟ್ ಬಳಸುತ್ತಾರ) ಅವರಿಗೆ ಫ್ರೀ. ಅದಕ್ಕೆ ಒಂದು ವರ್ಷದ ಆವೇರೆಜ್ ತೆಗೆದುಕೊಳ್ಳಲು ಹೇಳಿದ್ದೇನೆ. ಅದರಲ್ಲಿ ಶೇ 10 ಹೆಚ್ಚುವರಿ ನೀಡುತ್ತೇವೆ. ಯಾರು 200 ಯೂನಿಟ್ ಬಳಸುತ್ತಾರೋ ಅಂತಹವರೆಲ್ಲರಿಗೂ ಉಚಿತ ಎಂದರು.
ಬಳ್ಳಾರಿ: ಒಂಬತ್ತು ತಿಂಗಳ ಮಗು (Baby) ತಲೆ ನೋವು (Headache) ನಿವಾರಕದ ಡಬ್ಬಿ ನುಂಗಿ ದಾರುಣವಾಗಿ ಮೃತಪಟ್ಟ ಘಟನೆ ಬಳ್ಳಾರಿ (Ballari) ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿ ಏಕೈಕ ಪುತ್ರಿ ಪ್ರಿಯದರ್ಶಿನಿ ಸಾವನ್ನಪ್ಪಿದ ದುರ್ದೈವಿ. ಶುಕ್ರವಾರ ಸಂಜೆ ಆಟವಾಡುತ್ತಿದ್ದಾಗ ಪ್ರಿಯದರ್ಶಿನಿ ಚಿಕ್ಕ ಡಬ್ಬಿಯನ್ನು ನುಂಗಿದ್ದಾಳೆ. ಡಬ್ಬಿ ನುಂಗಿದ ಪರಿಣಾಮ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿದೆ. ಉಸಿರಾಟದ ತೊಂದರೆ ಹೆಚ್ಚಾದ ಬೆನ್ನಲ್ಲೇ ಗಾಬರಿಯಾದ ಪೋಷಕರು ಖಾಸಗಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ದೇಹ ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಈ ದಂಪತಿಗೆ ವಿವಾಹವಾಗಿ 10 ವರ್ಷಗಳ ನಂತರ ಈ ಮಗು ಜನಿಸಿತ್ತು.
ಬೆಳಗಾವಿ: 8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ (Soldier) ರೈಲಿನಿಂದ (Train) ಕಾಲು ಜಾರಿ ಬಿದ್ದು ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಕನಸಗೇರಿ (Kanasageri) ಗ್ರಾಮದ ವೀರ ಯೋಧರಾಗಿದ್ದು, ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದರು. ಮದುವೆಗೆಂದು (Marriage) ಪಂಜಾಬ್‌ನಿಂದ (Punjab) ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಯೋಧನ ಸಾವಿನಿಂದ ಸ್ವಗ್ರಾಮ ಕನಸಗೇರಿಯಲ್ಲಿ ಸ್ಮಶಾನ ಮೌನ ಆವರಿಸಿದ್ದು, ದುಃಖ ಮಡುಗಟ್ಟಿದೆ. ಮೃತ ಯೋಧನ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮ ಕನಸಗೇರಿಗೆ ಆಗಮಿಸಲಿದೆ.
ಬೀದರ್: ಚುನಾವಣೆ ಪ್ರಣಾಳಿಕೆ ಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೊದಲಿಗೆ ಐದು ಗ್ಯಾರಂಟಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಧಿಕೃತವಾಗಿ ಬೀದರ ಜಿಲ್ಲೆಯಲ್ಲಿ ಬಂದಿದೆ. ಅರಣ್ಯ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಈಶ್ವರ ಖಂಡ್ರೆ ಅಧಿಕಾರ ವಹಿಸಿದ ಮೊದಲ ದಿನ ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಲ್ಲಿ ಮಹಿಳೆಯ ಉಚಿತವಾಗಿ ರಾಜ್ಯದಲ್ಲಿ ಎಲ್ಲಿಬೇಕಾದರು ಸಂಚರಿಸುವ ಯೋಜನೆ ಅಧಿಕೃತ ವಾಗಿ ಚಾಲನೆ ನೀಡಲಿದ್ದಾರೆ ಬೀದರ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಚಾಲನೆ ನೀಡಲಿದ್ದಾರೆ.
ಶಿವಮೊಗ್ಗ: ರಾಜ್ಯ ಸರ್ಕಾರ ನಾಳೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುತ್ತಿದೆ. ಆದರೆ ಮಲೆನಾಡಿನ ಬಹುತೇಕ ಮಹಿಳೆಯರು ಈ ಉಚಿತ ಸೇವೆಯ ಭಾಗ್ಯದಿಂದ ವಂಚಿತರಾಗಿದ್ದಾರೆ. ಮಲೆನಾಡಿನಲ್ಲಿ ಬಹುತೇಕ ಖಾಸಗಿ ಬಸ್ ರೂಟ್ ಸಂಚಾರವಿದ್ದು ಸರ್ಕಾರಿ ಬಸ್ ಸೇವೆ ಎಂಬುದೇ ಇಲ್ಲದಂತಾಗಿದೆ. ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಸೇವೆ ಗಗನ ಕುಸುಮವಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಮಲೆನಾಡಿನ ಬಹುತೇಕ ಮಹಿಳೆಯರಿಗೆ ಲಭಿಸದಂತಾಗಿದೆ. ಇದಕ್ಕೆ ಕಾರಣ ಜಿಲ್ಲೆಯ ಬಹುತೇಕ ಎಲ್ಲಾ ಬಸ್ ರಸ್ತೆ ಸಂಚಾರ ಮಾರ್ಗಗಳು ಕೂಡ ಖಾಸಗಿ ಬಸ್ ಸೇವೆಯಾಗಿದೆ. ಶಿವಮೊಗ್ಗ ಭದ್ರಾವತಿ ಮಾರ್ಗವನ್ನು ಹೊರತು ಪಡಿಸಿದರೆ, ಇನ್ನು ಐದು ತಾಲೂಕುಗಳಲ್ಲಿ ಶೇಕಡಾ 80 ರಷ್ಟು ಖಾಸಗಿ ಬಸ್ ಗಳ ಸಂಚಾರದ್ದೇ ಕಾರುಬಾರಾಗಿದೆ. ಹೀಗಾಗಿ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಮಲೆನಾಡಿನ ಹೆಣ್ಣು ಮಕ್ಕಳಿಗೆ ಲಭಿಸದ ಭಾಗ್ಯವಾಗಿದೆ. ಈ ಹಿಂದೆ ನಕ್ಸಲ್ ಪೀಡಿತ ಪ್ರದೇಶಗಳೆಂದು ಬಿಂಬಿತವಾಗಿದ್ದ, ಮಲ್ಲಂದೂರು. ಮೇಲುಸಂಕ…
ಆನೇಕಲ್: ದೆಹಲಿಯಲ್ಲಿ ಶ್ರದ್ಧಾವಾಕರ್ ಹಾಗೂ ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಬಿಹಾರದಿಂದ ಬೆಂಗಳೂರಿಗೆ (Bengaluru) ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನ ಪೀಸ್ ಪೀಸ್ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ (Bannerghatta Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನ ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನ ಬಂಧನವಾಗಿದೆ. ಬಿಹಾರದಿಂದ ಬಂದಿದ್ದ ಯುವಕರು ಕೊಲೆಯಾದ ಮಹಿಳೆ (Women) ಗೀತಾ ಮನೆಯಲ್ಲೇ ಬಾಡಿಗೆಗೆ ಇದ್ದರು. ಕೊನೆಗೆ ಮನೆಯನ್ನು ತಮ್ಮ ಹೆಸರಿಗೇ ಮಾಡಿಕೊಡುವಂತೆ ಆಕೆಯನ್ನ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದೇ ಇದ್ದದ್ದಕ್ಕೆ ಕೊಲೆ ಮಾಡಿದ್ದಾರೆ. ಈ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಿಸಿರುವ 5 ಉಚಿತ ಯೋಜನೆಗಳ ಪೈಕಿ ನಾಳೆ ಮೊದಲ ಯೋಜನೆ ಜಾರಿಯಾಗ್ತಿದೆ. ಮಹಿಳೆಯರ ಉಚಿತ ಬಸ್ ಪ್ರಯಾಣದ ಸ್ತ್ರೀ ಶಕ್ತಿ ಯೋಜನೆಗೆ ಸಿಎಂ, ಡಿಸಿಎಂ ಚಾಲನೆ ಕೊಡ್ತಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು ಶಕ್ತಿಸೌಧ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ, ಸಿಎಂ ನಾಳೆ ಕಂಡಕ್ಟರ್ ರಾಮಯ್ಯ ಆಗಲಿದ್ದು ನಾರಮಣಿಯರಿಗೆ ಟಿಕೆಟ್ ಕೊಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ತಾವು ಕೊಟ್ಟ 5 ಉಚಿತ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಘೋಷಿಸಲಾಗಿದೆ. ಈಗಾಗ್ಲೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಆರ್ಥಿಕತೆಯ ಕ್ರೂಡೀಕರಣದ ಪ್ಲಾನ್ ಮೇಲೆ ಉಚಿತ ಯೋಜನೆಗಳನ್ನ ಹಂತ – ಹಂತವಾಗಿ ಜಾರಿಗೆ ತರಲು ಸರ್ಕಾರ ಪ್ಲಾನ್ ಮಾಡಿದೆ. ಈ 5 ಉಚಿತ ಯೋಜನೆಗಳ ಪೈಕಿ ಮೊದಲ ಯೋಜನೆ ನಾಳೆ ಜಾರಿಯಾಗ್ತಿದೆ, ಮಹಿಳೆಯರ ಉಚಿತ ಬಸ್ ಪ್ರಯಾಣದ ಸ್ತ್ರೀ ಶಕ್ತಿ ಯೋಜನೆಗೆ ವಿಧಾನಸೌಧದ ಪೂರ್ವ ದ್ವಾರದ ಗ್ರಾಂಡ್ ಸ್ಟೆಪ್ಸ್ ಮೇಲೆ ಅದ್ದೂರಿ ಚಾಲನೆ ಸಿಗಲಿದೆ……