Author: Prajatv Kannada

ಬೆಂಗಳೂರು: ಕಾಂಗ್ರೆಸ್​  ಸರ್ಕಾರ ಮಹತ್ವದ 5 ಉಚಿತ  ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ  ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ‌ ‌ಗಂಟೆಯಿಂದ ಮಹಿಳೆಯರು ಉಚಿತವಾಗಿ ಬಸ್​​ನಲ್ಲಿ ಪ್ರಯಾಣ ಮಾಡಬಹುದಾಗಿದೆ ಮಹಿಳೆಯರಿಗೆ ನೀಡುವ ‘O’ ದರದ ಪಿಂಕ್ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೀಡುವ ಮೂಲಕ ಚಾಲನೆ ದೊರೆಯಲಿದೆ. ಅಲ್ಲದೇ ನಾಳೆ ಹತ್ತರಿಂದ ಹದಿನೈದು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಲಾಗುತ್ತದೆ. ನಾಳೆಯಿಂದ ಸೇವಾಸಿಂಧು ಪೋರ್ಟಲ್ ಆರಂಭ ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ.…

Read More

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಯುವತಿಗೆ ವಂಚಿಸಿದ್ದ ಆರೋಪಿ ಮುದಾಸಿರ್ ಎಂಬಾತನನ್ನ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಯುವಕನ ಹೆಸರಲ್ಲಿ ಆರೋಪಿ ಮುದಾಸಿರ್ ಪ್ರೊಫೈಲ್ ಕ್ರಿಯೇಟ್ ಮಾಡಿದ್ದ. ಆ್ಯಪ್​​ನಲ್ಲಿ ಸಂಗಾತಿ ಹುಡುಕುತ್ತಿದ್ದ ಯುವತಿಗೆ ಮೆಸೇಜ್​​ ಕಳಿಸಿದ್ದ. ಬಳಿಕ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದನು. ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ ಆರೋಪಿ ಮುದಾಸಿರ್, ನಂತರ ಯುವತಿ ಭೇಟಿ ವೇಳೆ ಆತ​ ಹಿಂದೂ ಅಲ್ಲ ಎಂಬುದು ಬೆಳಕಿಗೆ ಬಂದಿದೆ. ಜೊತೆಗೆ ​ತಾಯಿಗೆ ಹುಷಾರಿಲ್ಲವೆಂದು ಯುವತಿ ಬಳಿ 1 ಲಕ್ಷ ಹಣವನ್ನ ಪಡೆದಿದ್ದನಂತೆ. ಬಳಿಕ ತಾಯಿ ಮೃತಪಟ್ಟಿದ್ದಾರೆ ಎಂದು ಸುಳ್ಳಿನ ಕಥೆ ಕಟ್ಟಿದ್ದಾನೆ. ಇನ್ನು ಕೊನೆಗೆ ಸೋದರನನ್ನ ನೋಡಲು ದುಬೈಗೆ ಹೋಗಿ ಬರುತ್ತೆನೆಂದು ಫೋನ್ ಸ್ಪಿಚ್ ಆಫ್ ಮಾಡಿ, ಬಳಿಕ ಮುದಾಸಿರ್​ನನ್ನ ಪತ್ತೆ ಹಚ್ಚಿದ ಯುವತಿಗೆ ಡಬ್ಬಲ್ ಡಬ್ಬಲ್ ಶಾಕ್ ಎದುರಾಗಿತ್ತು. ಹೌದು ಅನಿರುದ್ದ್​ ಹೆಸರಿನವನು ಅನಿರುದ್ದ್ ಅಲ್ಲ ಮುದಾಸಿರ್ ಅನ್ನೋದರ ಜೊತೆಗೆ ಮುದಾಸಿರ್​ಗೆ ಮತ್ತೊಂದು ಮದುವೆಯಾಗಿ ಹೆಂಡತಿ ಮಕ್ಕಳು ಇದ್ದಾರೆಂಬುದು ಗೊತ್ತಾಗಿದೆ. ಕೊನೆಗೆ…

Read More

ಬೆಂಗಳೂರು: ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಫ್ರೀ ಕರೆಂಟ್ ಸಿಗುತ್ತದೆ ಎಂದು ರಾಜ್ಯದ ಜನರು ಸಂತಸಪಟ್ಟರೆ ಕೆಲವೆಡೆ ವಿದ್ಯುತ್ ಬಿಲ್ ಅನ್ನು ದುಪ್ಪಟ್ಟು ಮಾಡಿ ಶಾಕ್ ನೀಡಲಾಗಿದೆ. ಕರೆಂಟ್ ಬಿಲ್ ದರ ಏರಿಕೆ ಬೆನ್ನಲ್ಲೇ ಅಬಕಾರಿ ಇಲಾಖೆಯಿಂದ (Excise Department) ಮದ್ಯ ಪ್ರಿಯರಿಗೆ ಮತ್ತೊಂದು ಶಾಕ್ ನೀಡಿದೆ. ಅಬಕಾರಿ ಇಲಾಖೆ ಸದ್ದಿಲ್ಲದೆ ಮದ್ಯ (Alcohol) ಬೆಲೆ ಏರಿಕೆPrice Hike) ಮಾಡಿದೆ. ಸ್ಲಾಬ್‌ಗಳಲ್ಲಿ ಏರಿಕೆ ಮಾಡಲಾಗಿದ್ದು, ಬಿಯರ್‌ಗೆ 10 ರೂ. ಏರಿಕೆ ಮಾಡಲಾಗಿದೆ. ಹಾಗೂ ಹಾಟ್ ಡ್ರಿಂಕ್ಸ್‌ಗಳ ವಿವಿಧ ಬ್ರ್ಯಾಂಡ್‌ಗಳಿಗೆ ಬೇರೆ ಬೇರೆ ರೀತಿಯಾಗಿ ಬೆಲೆ ಏರಿಕೆ ಮಾಡಲಾಗಿದೆ.  ಹೌದು ಸರ್ಕಾರ ಮಾರ್ಗವನ್ನು ಕಂಡುಕೊಂಡಿದ್ದು, ಅದು ಅಬಕಾರಿ ಇಲಾಖೆಯಿಂದ (Excise Department) ಆದಾಯ ಕ್ರೋಡಿಕರಣಕ್ಕೆ ಚಿಂತನೆ ನಡೆಸಿದೆ. ಲಿಕ್ಕರ್ ಲೈಸೆನ್ಸ್ ಫೀಸ್​​ನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ. ಇದರಿಂದ ವಾರ್ಷಿಕ 175 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ. 2016 ರಿಂದ ಲಿಕ್ಕರ್ ಲೈಸೆನ್ಸ್ ದರ ಹೆಚ್ಚಿಸಿಲ್ಲ. ಹೀಗಾಗಿ ಲಿಕ್ಕರ್…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವಿರುದ್ಧ ಕುಮಾರಸ್ವಾಮಿ ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಸಚಿವರೊಬ್ಬರು ಅಧಿಕಾರ ತೆಗೆದುಕೊಳ್ಳದಂತೆ ಹೇಳಿದ್ದಾರೆ. ಸಿಎಂ ಆದೇಶ ಮಾಡಿದರೂ ಅಧಿಕಾರ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ಆ ಸಚಿವರು ಸದ್ಯ ವಿದೇಶದಲ್ಲಿ ಇದ್ದಾರೆ ಅಂತ ಕುಮಾರಸ್ವಾಮಿ ಆರೋಪಿಸಿದ್ದಾರೆ. ಹಾಗಾದ್ರೆ ಎಷ್ಟು ಹಣ ಕೊಟ್ಟು ಬಂದ್ರು ಈ ಅಧಿಕಾರಿ..?. ಈಗ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು ಎಂದು ಹೆಚ್‍ಡಿಕೆ ಅವರು ಸರ್ಕಾರವನ್ನ ಖಾರವಾಗಿ ಪ್ರಶ್ನಿಸಿದ್ದಾರೆ.

Read More

ತುಮಕೂರು: ಪ್ರಿಯತಮೆಯ ಮನೆಯ ರೂಮಿಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ.ವೀಣಾ (23) ಮೃತ ದುರ್ದೈವಿ. ಈಕೆ ಪ್ರಿಯಕರ (Lover) ನಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಮೂಲತಃ ತುರುವೇಕೆರೆ ತಾಲೂಕಿನ ಹುಲೆಕೆರೆ ಗ್ರಾಮದ ನಿವಾಸಿಯಾಗಿರುವ ಈಕೆ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದಳು. ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಈಕೆಯ ವಾಸವಿದ್ದ ರೂಮಿಗೆ ನುಗ್ಗಿ ಕತ್ತು ಕೊಯ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ.ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಉಡುಪಿಗೆ ಬಿಪರ್ ಜಾಯ್ ಚಂಡಮಾರುತ ಆತಂಕ ಹಿನ್ನಲೆ ಬೀಚ್ ಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಡುಕರೆ ಸಮುದ್ರ ತೀರದಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಜೋರಾದ ಗಾಳಿಯ ಅಬ್ಬರದ ಮಧ್ಯೆ ರಕ್ಕಸ ಗಾತ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ. ಚಂಡಮಾರುತ ಭೀತಿಯಿಂದ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಖಡಕ್ ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.

Read More

ಉತ್ತರ ಕನ್ನಡ:  ಸೈಕ್ಲೋನ್ ಎಪೆಕ್ಟ್ ಹಿನ್ನಲೆ, ಮುಂಜಾನೆಯಿಂದ ಜಿಲ್ಲೆಯ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಒಂದು ತಾಸಿನಿಂದ ಬಿಟ್ಟು ಬಿಡದೆ ಮಳೆ ಶುರುಯುತ್ತಿದೆ. ಕಾರವಾರ, ಅಂಕೋಲ, ಭಟ್ಕಳ, ಜೋಯಿಡಾ ಭಾಗದಲ್ಲಿ ಮಳೆಯಾಗುತ್ತಿದ್ದು, ರೇನ್ ಕೋಟ್, ಕೊಡೆಗಳ ಮೊರೆ ಹೋಗಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ.

Read More

ಹಾವೇರಿ: ರಾಜ್ಯ ಸರಕಾರ ವಿದ್ಯುತ್‌ ಬಳಕೆ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಶಿಡೇನೂರ ಗ್ರಾಮಸ್ಥರು ಶುಕ್ರವಾರ ಸಭೆ ನಡೆಸಿ ಯಾವುದೇ ಕಾರಣಕ್ಕೂ ವಿದ್ಯುತ್‌ ಬಿಲ್ ಪಾವತಿ ಮಾಡುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. 200 ರೂ. ಬದಲಿಗೆ 800 ರೂ.ವರೆಗೂ ಬಿಲ್‌ ಮೂರು ಪಟ್ಟು ದರ ಹೆಚ್ಚಳಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್‌ ನಿರೀಕ್ಷೆಯಲ್ಲಿದ್ದ ಜನರಿಗೆ ಜೂನ್ ನಲ್ಲಿ (ಮೇ ತಿಂಗಳ ಬಿಲ್) ಮೂರುಪಟ್ಟು ಹೆಚ್ಚಳದ ಬಿಲ್ ನೀಡಿರುವುದು ಆಘಾತ ತಂದಿದೆ ಸರಕಾರ ಹಾಗೂ ಹೆಸ್ಕಾಂ ವಿರುದ್ದ ರಾಜ್ಯಾದ್ಯಂತ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ತಾಲೂಕಿನ ಶಿಡೇನೂರ ಗ್ರಾಮಸ್ಥರು ಸಹ ಶುಕ್ರವಾರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅಧಿಕ ಬಿಲ್ ಕಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿದ್ಯುತ್‌ ದರ ಏರಿಕೆ ಖಂಡಿಸಿ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದ ದೇವಸ್ಥಾನದಲ್ಲಿ ಗ್ರಾಮಸ್ಥರು ಸಭೆ ನಡೆಸಿದ್ದಾರೆ. “ಉಚಿತ ವಿದ್ಯುತ್‌ ನೀಡುತ್ತೇವೆ ಎಂದು ಹೇಳುತ್ತಿರುವ ಸರಕಾರ ಇದೀಗ ಏಕಾಏಕಿ ಬಿಲ್ ಜಾಸ್ತಿ…

Read More

ದಾವಣಗೆರೆ: ಇಲಿ (Rat) ಸಾಯಿಸಲು ಇಟ್ಟ ಹಣ್ಣು (Poisoned Fruit) ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ನಿವಾಸಿ ಐಶ್ವರ್ಯಾ (21) (Aishwarya) ಸಾವನ್ನಪ್ಪಿದ ಯುವತಿ. ಈಕೆ ನ್ಯಾಮತಿಯ ಸರ್ಕಾರಿ ಕಾಲೇಜ್ ನಲ್ಲಿ ಬಿಎ ಓದುತ್ತಿದ್ದಳು. ಮನೆಯಲ್ಲಿ ಓಡಾಡಿ ಉಪಟಳ ಕೊಡುವ ಇಲಿಯನ್ನು ಸಾಯಿಸಲೆಂದು ಕುಟುಂಬಸ್ಥರು ಹಣ್ಣಿಗೆ ವಿಷ ಸವರಿ ಇಟ್ಟಿದ್ದರು. ಆದರೆ ಇದನ್ನು ಗಮನಿಸದೇ ಯುವತಿ ಕಾಲೇಜು ಮುಗಿಸಿ ಮನೆಗೆ ಬಂದಾಗ ನೆಲದ ಮೇಲೆ ಬಿದ್ದಿದ್ದ ಹಣ್ಣನ್ನು ತಿಂದಿದ್ದಳು. ಹಣ್ಣು ತಿಂದ ಯುವತಿಯ ಆರೋಗ್ಯದಲಲಿ ಏರುಪೇರಾಗುತ್ತಿದ್ದಂತೆಯೇ ಕುಟುಂಬಸ್ಥರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾದರೆ ಯುವತಿ ಸಾವನ್ನಪ್ಪಿದ್ದಾಳೆ.

Read More

ಬೆಂಗಳೂರು: 40% ಕಮಿಷನ್​ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಸಮಾಜ ಕಲ್ಯಾಣ ಇಲಾಖೆಯಿಂದಲೇ ತನಿಖೆಯನ್ನು ಆರಂಭಿಸಿ, ಎಲ್ಲರೂ ಸಮಾನ ಎನ್ನುವ ಕಾಂಗ್ರೆಸ್ ಗೆ, ಹಿಂದುಗಳು ಕಡಿಮೆ ಎಂದು ಯಾಕೆ ಅನ್ನಿಸುತ್ತದೆ? ಚಾಣಕ್ಯ ವಿಶ್ವ ವಿದ್ಯಾಲಯಕ್ಕೆ  ನೀಡಿದ್ದ ಭೂಮಿ ವಾಪಸ್ ಪಡೆಯುತ್ತೇವೆ ಅನ್ನೋದು ಯಾಕೆ? ಹಿಂದುಗಳು ಕಡಿಮೆ ಸಮಾನವೆಂದು ಯಾಕೆ ಯೋಚನೆ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.

Read More