ಬೆಂಗಳೂರು: ಸಿಎಂ ಜೊತೆ ಈಗಾಗಲೇ ಚರ್ಚೆ ಮಾಡಲಾಗಿದ್ದು, ನಾಳೆ(ಜೂ.11) ಮಧ್ಯಾಹ್ನ 12 ಗಂಟೆಗೆ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇನ್ನು ಭಾನುವಾರ ಜನರು ಫ್ರೀ ಇರ್ತಾರೆ, ಹಾಗಾಗಿ ನಾನೇ ಭಾನುವಾರ ಕಾರ್ಯಕ್ರಮ ಮಾಡೋಣ ಅಂತಾ ಹೇಳಿದ್ದೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ‘ದೇಶಕ್ಕೆ ಪ್ರಜ್ಞಾವಂತರು ಮುಖ್ಯ. ಪೆನ್ನು, ಪೇಪರ್ ಕೈಯಲ್ಲಿ ಇದ್ದಾಗ ಹೇಗೆ ಬಳಸಬೇಕೋ ಹಾಗೇ ಬಳಸಬೇಕು. ಅಧಿಕಾರ ಇದ್ದಾಗ ಜನರ ಒಳಿತಿಗಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಆರೋಗ್ಯ ಸಚಿವ ಸುಧಾಕರ್ ಉದಾಹರಣೆ ನೀಡಿದ ಡಿಕೆ ಶಿವಕುಮಾರ್, ಆರೋಗ್ಯ ಸಚಿವರಾಗಿ ಸುಧಾಕರ್ ಕನಕಪುರಕ್ಕೆ ಬಂದಿದ್ರು, ನಮ್ಮ ಕನಕಪುರಕ್ಕೆ ಇದ್ದ ಆಸ್ಪತ್ರೆಯನ್ನ ತೆಗೆದುಕೊಂಡು ಹೋದ್ರು. ಅದಕ್ಕೆ ಅಧಿಕಾರ ಇದ್ದಾಗ, ಪೆನ್ನು ಜನರ ಒಳಿತಿಗಾಗಿ ಬಳಸಬೇಕು. ಒಳ್ಳೇದು ಮಾಡೋದಿದ್ರೆ ಇವತ್ತೇ ಮಾಡಬೇಕು, ನಾಳೆ ಬಗ್ಗೆ ಯೋಚಿಸಬಾರದು ಎಂದು ಡಿಸಿಎಂ ಸಲಹೆ ನೀಡಿದರು.
Author: Prajatv Kannada
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ (Jnanabharathi Police Station) ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳು (Accused) ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನ ಕರೆತಂದು ಅಪಾರ್ಟ್ಮೆಂಟ್ ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು
ಬೆಂಗಳೂರು: ನಾಳೆ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವರು, ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು, ಮಹಿಳೆಯರಿಗೆ ಉಚಿತ ಟಿಕೆಟ್ ವಿತರಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ರಾಮಲಿಂಗ ರೆಡ್ಡಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಉಚಿತ ಬಸ್ ನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡಲ್ಲ. ಬಸ್ ನಲ್ಲಿ ಟಿಕೆಟ್ ಕೊಡಲು ಕಂಡಕ್ಟರ್ ಇರ್ತಾರೆ, ಬಸ್ ಓಡಿಸಲು ಡ್ರೈವರ್ ಇರ್ತಾರೆ. ಉದ್ಘಾಟನೆ ಬಳಿಕ ಬಸ್ ನಲ್ಲಿ ಒಂದು ರೌಂಡ್ ಹೋಗ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಚುನಾವಣೆ ಪೂರ್ವದಲ್ಲಿ ನಾವು ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ. ನಾವು ನುಡಿದಂತೆ ನಡೆಯುವವರು. ಏನು ಹೇಳುತ್ತೇವೆಯೋ ಅದರಂತೆ ನಾವು ನಡೆಯುತ್ತೇವೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ? ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಮಾಡಿಲ್ಲ, ರೈತರ ಆದಾಯ ಡಬಲ್ ಮಾಡ್ತೀವಿ ಎಂದು ಮಾಡಿಲ್ಲ. ಪ್ರಧಾನಿ ಮೋದಿಯವರು ಕೊಟ್ಟ ಯಾವ ಭರವಸೆ ಈಡೇರಿಸಿದ್ದಾರೆ? ಎಂದು ಪ್ರಶ್ನಿಸಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ಡಿಕೆಶಿ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಜೊತೆ ರಾಘವೇಂದ್ರ ರಾಜ್ ಕುಮಾರ್ ಕೂಡ ಭೇಟಿ ನೀಡಿದರು. ಈ ವೇಳೆ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿರುವ ಡಿಕೆಶಿ ಅವರಿಗೆ ಅಶ್ವಿನಿ ಮತ್ತು ರಾಘಣ್ಣ ಶುಭ ಕೋರಿದ್ದಾರೆ. ಈ ಬಾರಿಯ 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಶಿವರಾಜ್ ಕುಮಾರ್ ದಂಪತಿ ಪ್ರಚಾರ ಮಾಡಿದ್ದರು. ಅದರಂತೆ ರಾಜ್ಯದಲ್ಲಿ ಬಹು ಮತಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆ ಇಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಸಿಎಂ ಅವರ ನಿವಾಸಕ್ಕೆ ಅಶ್ವಿನಿ ಎಂಟ್ರಿ ನೀಡಿದ ವಿಡಿಯೋ ಕೂಡ ಲಭ್ಯವಾಗಿದೆ.
ಬೆಂಗಳೂರು: ನಿರ್ಲಕ್ಷ್ಯದಿಂದ ರೋಗಿಗಳ ಸಾವಾದರೆ ನಾನು ಸಹಿಸುವುದಿಲ್ಲ ಎಂದು ಆರೋಗ್ಯ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ವಾರ್ನಿಂಗ್ ಕೊಟ್ಟಿದ್ದಾರೆ. ಈ ಸಂಬಂಧ ಆರೋಗ್ಯಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳ ಚಿಕಿತ್ಸೆ ಬಗ್ಗೆ ತಮ್ಮ ಸರಕಾರದ ಆದ್ಯತೆಗಳನ್ನು ತಿಳಿಸಿಕೊಟ್ಟರು. ಎಲ್ಲ ರೋಗಿಗಳಿಗೆ ಮಾನವೀಯ ದೃಷ್ಠಿಕೋನದಿಂದ ಚಿಕಿತ್ಸೆ ನೀಡಬೇಕು. ಕರ್ತವ್ಯದ ಸಂದರ್ಭದಲ್ಲಿ ನಿರ್ಲಕ್ಷತನದಿಂದ ರೋಗಿಗಳಿಗೆ ತೊಂದರೆ ಆದರೆ ಕ್ಷಮಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆರೋಗ್ಯ ಇಲಾಖೆ ಸಾರ್ವಜನಿಕ ವಲಯದಲ್ಲಿ ಅತ್ಯಂತ ಪ್ರಾಮುಖ್ಯತೆ ಪಡೆದಿರುವ ಮತ್ತು ಸೂಕ್ಷ್ಮತೆ ಹೊಂದಿರುವ ಇಲಾಖೆ. ಇಲ್ಲಿ ತುರ್ತಾಗಿ ರೋಗಿಗಳಿಗೆ ಸ್ಪಂದನೆ ಸಿಗಬೇಕು. ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿಯಿಂದಾಗುವ ಕೆಲವು ತಪ್ಪುಗಳಿಂದ ರೋಗಿಗಳಿಗೆ ಸಮಸ್ಯೆಗಳಾಗುವುದನ್ನು ನಾವು ನೋಡುತ್ತಿರುತ್ತೇವೆ. ಈ ಬಗ್ಗೆ ಜಾಗ್ರತೆಯಿಂದ ಇರಬೇಕೆಂದು ಸಚಿವ ಗೂಂಡುರಾವ್ ಹೇಳಿದರು. ತಪ್ಪುಗಳನ್ನು ಸರಿಪಡಿಸೋಣ. ಆದರೆ, ಚಿಕಿತ್ಸೆ ವೇಳೆ ನಿರ್ಲಕ್ಷ್ಯ ತೋರಬಾರದು. ಇದು ಅಕ್ಷಮ್ಯ. ಆ ರೀತಿಯ ಪ್ರಕರಣಗಳು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಚಿವರು ಅಧಿಕಾರಿಗಳಿಗೆ ನೀಡಿದ್ದಾರೆ.
ಬೆಂಗಳೂರು: RR ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ವಿದ್ಯುತ್ ಫ್ರೀ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೀಜನೆ ಅನ್ವಯವಾಗಲಿದೆ. ಮನೆ ನಿರ್ಮಾಣ, ಮನೆ ಶಿಫ್ಟ್ ಮಾಡುವವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದರು. ಜುಲೈ ತಿಂಗಳಿಂದ 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೇವೆ. ಆಗಸ್ಟ್ 1ರಿಂದ ಯೋಜನೆಗೆ ಚಾಲನೆ ದೊರೆಯಲಿದೆ. ಈ ತಿಂಗಳು ಮಾತ್ರ ವಿದ್ಯುತ್ ಬಿಲ್ ಕಟ್ಟಬೇಕು ಎಂದರು. ಆರ್ ಆರ್ ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ರೆ ಫ್ರೀ ವಿದ್ಯುತ್ ಕೊಡುತ್ತೇವೆ. ಮನೆಯ ಅಗ್ರಿಮೆಂಟ್ ಪತ್ರ ಇದ್ದರೂ ಕೊಡುತ್ತೇವೆ ಎಂದು ಹೇಳಿದರು.
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೂ ಟವರ್ ಫರ್ ಹಾರ್ಮೋನಿಯಸ್ ಕಾಲ್ ಬ್ಲಾಕಿಂಗ್ ಸಿಸ್ಟಂ ಅಳವಡಿಸುವ ರಾಜ್ಯ ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರಿಂದ ಜೈಲಿನಿಂದಲೇ ಕರೆ ಮಾಡಿ ಬೆದರಿಕೆವೊಡ್ಡುತ್ತಿದ್ದ ಪ್ರಕರಣಗಳಿಗೆ ಇನ್ಮುಂದೆ ಬ್ರೇಕ್ ಬೀಳಲಿದೆ. ಅಪರಾಧ ಪ್ರಕರಣಗಳ ಹಿನ್ನೆಲೆಯುಳ್ಳವರು, ವಿಚಾರಣಾಧೀನ ಖೈದಿಗಳು ಜೈಲಿನಿಂದಲೇ ಮೊಬೈಲ್ ಮೂಲಕ ಸಂಪರ್ಕಿಸಿ ಡೀಲ್ ನಡೆಸ್ತಿದ್ದ ಆರೋಪ, ಬೆದರಿಕೆ ವೊಡ್ಡುತ್ತಿದ್ದ ಪ್ರಕರಣಗಳು ದಾಖಲಾಗಿತ್ತಿದ್ದವು. ಇದನ್ನು ತಡೆಯುವ ದೃಷ್ಠಿಯಿಂದ ಜೈಲಿನಿಂದ ಯಾವುದೇ ಮೊಬೈಲ್ ಕರೆಗಳು ಹೋಗದಂತೆ ನಿರ್ಬಂಧಿಸಲು ಟಿಹೆಚ್ಸಿಬಿ ಟವರ್ ಸಿಗ್ನಲ್ಗಳನ್ನು ಅಳವಡಿಸಲಾಗುತ್ತಿದೆ. ಪರಪ್ಪನ ಅಗ್ರಹಾರ ಕಾರಾಗೃಹ ಆವರಣದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ 3 ಟವರ್ಗಳನ್ನು ಸ್ಥಾಪಿಸಲಾಗುತ್ತದೆ. ಇವು ಮೊಬೈಲ್ ಜಾಮರ್ಗಳಿಗಿಂತಲೂ ಸುಧಾರಿತ ಟೆಕ್ನಾಲಜಿ ವ್ಯವಸ್ಥೆ ಹೊಂದಿವೆ. ವಿವಿಧ ಮೊಬೈಲ್ ನೆಟ್ವರ್ಕ್ ಕಂಪನಿಗಳ ಆಂಟೇನಾ ಅಳವಡಿಸಲಾಗುತ್ತದೆ. ಈ ಮೂಲಕ ಮೊಬೈಲ್ ಗಳ ಸಂಪರ್ಕ ಕಡಿತಗೊಳ್ಳುತ್ತದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಶಿಕ್ಷಣ ಇಲಾಖೆ ಮತ್ತು ಮಕ್ಕಳ ಕಲಿಕೆಯ ಬಗ್ಗೆ ಕಾಳಜಿ ತೋರಿಸಿ ಎಂದು ಸರ್ಕಾರಕ್ಕೆ ಪತ್ರ ಬರೆಯಲು ಮಾಜಿ ಸಚಿವ ಬಿಸಿ ನಾಗೇಶ್ ಗೆ ಯಾವ ನೈತಿಕತೆ ಇದೆ ಎಂದು ಖಾಸಗಿ ಶಾಲಾ ಒಕ್ಕೂಟ ಪ್ರಶ್ನಿಸಿದ್ದಾರೆ. ಸೋತ ನಂತರ ಅವರಿಗೆ ಜವಾಬ್ದಾರಿ ಬಂದಿರುವುದು ವಿಶೇಷ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಟೀಕಿಸಿದ್ದಾರೆ. ಶುಕ್ರವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಬಿ.ಸಿ. ನಾಗೇಶ್ ಕಾಲಾವಧಿಯಲ್ಲಿ ಪಠ್ಯ ಪರಿಷ್ಕರಣೆ ವಿವಾದ, ಹಿಜಾಬ್ ವಿವಾದ, ಖಾಸಗಿ ಶಾಲೆಗಳ ವಿರುದ್ಧ ದ್ವೇಷ ಮತ್ತಿತರ ವಿವಾದಗಳು ಸೃಷ್ಟಿಯಾಗಿದ್ದವು. ಆದರೆ ಆಗ ಅವರು ಯಾವುದೇ ರೀತಿಯಲ್ಲಿ ಮಕ್ಕಳ ಪರ ತೀರ್ಮಾನ ತೆಗೆದುಕೊಂಡಿಲ್ಲ. ಈಗ ಪತ್ರವನ್ನು ಬರೆಯಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ರಿಯಾದ್: ಏಪ್ರಿಲ್ ಮಧ್ಯಭಾಗದಿಂದ ಸೇನೆ ಮತ್ತು ಅರೆಸೇನಾ ಪಡೆಯ ನಡುವಿನ ಭೀಕರ ಸಂಘರ್ಷಕ್ಕೆ ಸಾಕ್ಷಿಯಾಗಿರುವ ಸುಡಾನ್ನಲ್ಲಿ ಮತ್ತೆ 24 ಗಂಟೆಗಳ ಕದನ ವಿರಾಮ ಜಾರಿಗೆ ಎರಡೂ ಪಡೆಗಳು ಸಮ್ಮತಿಸಿವೆ ಎಂದು ಸೌದಿ ಅರೆಬಿಯಾ ಮತ್ತು ಅಮೆರಿಕದ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮುಂದಿನ 24 ಗಂಟೆಯ ಅವಧಿಯಲ್ಲಿ ಸುಡಾನ್ನಲ್ಲಿ ಕದನ ವಿರಾಮ ಜಾರಿಯಲ್ಲಿರುತ್ತದೆ. ನಿಷೇಧಿತ ಚಲನೆ, ವಿಮಾನ ಅಥವಾ ಡ್ರೋನ್ ಬಳಕೆಯಿಂದ ದೂರವಿರಲು, ವೈಮಾನಿಕ ಬಾಂಬ್ದಾಳಿ, ಫಿರಂಗಿ ದಾಳಿ, ಸ್ಥಾನಗಳ ಬಲವರ್ಧನೆ ಮತ್ತು ಪಡೆಗಳ ಮರುಪೂರಣ ಇತ್ಯಾದಿಗಳನ್ನು ನಡೆಸದಿರಲು ಸಂಬಂಧಿತ ಪಕ್ಷಗಳು ಒಪ್ಪಿಕೊಂಡಿವೆ. ಒಂದು ವೇಳೆ ಕದನ ವಿರಾಮದ ಉಲ್ಲಂಘನೆಯಾದರೆ ಮುಂದೆ ಸೌದಿ ಅರೆಬಿಯಾ ಈ ಮಾತುಕತೆಯಿಂದ ದೂರ ಉಳಿಯಲಿದೆ. ದೇಶದಾದ್ಯಂತ ಅಡೆತಡೆಯಿಲ್ಲದ ಚಲನೆಗೆ ಮತ್ತು ಮಾನವೀಯ ನೆರವು ವಿತರಣೆಗೆ ಅನುಕೂಲ ಮಾಡಿಕೊಡಲು ಎರಡೂ ಪಡೆಗಳು ಒಪ್ಪಿವೆ ಎಂದು ಸೌದಿ ಅರೆಬಿಯಾದ ವಿದೇಶಾಂಗ ಇಲಾಖೆ ತಿಳಿಸಿದೆ. ಈ ಹಿಂದೆ ನಡೆದಂತೆ, ಕದನ ವಿರಾಮದ ಉಲ್ಲಂಘನೆಯಾದರೆ ತೀವ್ರ ಪ್ರತಿಕ್ರಮ…