Author: Prajatv Kannada

ಹುಬ್ಬಳ್ಳಿ: ನಮ್ಮದು ಕೇಂದ್ರದಲ್ಲಿಯೂ ಸರ್ಕಾರವಿದೆ. ರಾಜ್ಯದಲ್ಲಿಯೂ ಸರ್ಕಾರ ಬಂದರೆ ಕೇಂದ್ರ ಸರ್ಕಾರ ನೀಡುವ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದು. ಅತೀ ಸಮಾನ್ಯ ವ್ಯಕ್ತಿಗೂ ಈ ಯೋಜನೆಗಳು ತಲುಪಲು ಸಹಾಯವಾಗುತ್ತದೆ ಎಂದು ರಾಷ್ಟ್ರೀಯ ವಕ್ತಾರರು ಹಾಗೂ ರಾಜ್ಯಸಭೆ ಸದಸ್ಯರಾದ ಗೋಪಾಲ್ ಕೃಷ್ಣ ಅಗರ್ವಾಲ್ ಹೇಳಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಪರಸ್ಪರ ಕೂಡಿ ಕೆಲಸ ಮಾಡಿದರೆ ನಮ್ಮ ದೇಶವು ಆರ್ಥಿಕವಾಗಿ ವಿಶ್ವಮಟ್ಟದಲ್ಲಿ ಬೆಳೆಯಲು ಸಾದ್ಯವಾಗುತ್ತದೆ. ಒಂದುವೇಳೆ ಬೇರೆ ಸರ್ಕಾರಗಳು ರಾಜ್ಯದಲ್ಲಿ ಆಡಳಿತಕ್ಕೆ ಬಂದರೆ ಕೇಂದ್ರದ ಯೋಜನೆಗಳೊಂದೆಗೆ ಸಹಕಾರ ನೀಡುವುದಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಕೇರಳ ಸರ್ಕಾರ ಕೇಂದ್ರ ಸರ್ಕಾರ ಯೋಜನೆಗಳನ್ನು ಕೇವಲ 45% ಹಾಗೂ ಪಶ್ಚಿಮ ಬಂಗಾಳವು 35% ನಷ್ಟು ಜಾರಿಗೆ ತಂದಿದ್ದಾರೆ. ಆದರೆ ಕರ್ನಾಟಕವು 94% ಹಾಗೂ ಮಧ್ಯಪ್ರದೇಶ 99% ನಷ್ಟು ಜಾರಿ ಮಾಡಿವೆ. ಈ ಮೊದಲು ಹಲವು ಯೋಜನೆಗಳ ಅಡಿಯಲ್ಲಿ ಜಾರಿಮಾಡಿದ ಹಣದಲ್ಲಿ ಕೇವಲ15% ರಷ್ಟು ಫಲಾನುಭವಿಗೆ ಸಿಗುತ್ತಿತ್ತು. ಉಳಿದ ಹಣ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ (Tweet) ಮಾಡಿ ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ. ಟ್ವೀಟ್‍ನಲ್ಲೇನಿದೆ..? ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ (BJP), ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ. ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದರು. ಶನಿವಾರ ವಿಜಯಪುರದಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ…

Read More

ಕೊಪ್ಪಳ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಹಿಂದೂ ಪೈರ್ ಬ್ರ್ಯಾಂಡ್, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿದ್ದು ಇಂದು ಕಪ್ಪಳ, ರಾಯಚೂರು, ಕಲಬುರಗಿಯಲ್ಲಿ ಭರ್ಜರಿ ಮತಬೇಟೆಗೆ ಇಳಿಯಲಿದ್ದಾರೆ. ಮೊದಲಿಗೆ ಹನುಮ ಜನ್ಮ ಭೂಮಿ ಕೊಪ್ಪಳದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಗಂಗಾವತಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ಮತಬೇಟೆಯಾಡಲಿದ್ದಾರೆ. ಜನಾರ್ದನ ರೆಡ್ಡಿಗೆ ಟಕ್ಕರ್ ಕೊಡಲು ಗಂಗಾವತಿ ನಗರಕ್ಕೆ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡಲಿದ್ದಾರೆ. ಗಂಗಾವತಿಯ ತಾಲೂಕು ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದೆ. ಸಿಎಂ ಯೋಗಿ ಆದಿತ್ಯನಾಥ್, ಲಖನೌನಿಂದ ಜಿಂದಾಲ್‌ ಏರ್‌ಪೋರ್ಟ್‌ಗೆ ಆಗಮಿಸಿ ಜಿಂದಾಲ್‌ನಿಂದ ಹೆಲಿಕಾಪ್ಟರ್‌ ಮೂಲಕ ಬೆಳಗ್ಗೆ 11 ಗಂಟೆಗೆ ಗಂಗಾವತಿಗೆ ಆಗಮಿಸಲಿದ್ದಾರೆ. ಗಂಗಾವತಿಯಲ್ಲಿ ಸಮಾವೇಶ ಮುಗಿಸಿ ಬಳಿಕ ರಾಯಚೂರಿಗೆ ತೆರಳಲಿದ್ದಾರೆ. ಬಳಿಕ ಗಡಿ ಜಿಲ್ಲೆ ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಶಿವರಾಜ್ ಪಾಟೀಲ್ ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ರಾಯಚೂರು ನಗರಕ್ಕೆ ಯೋಗಿ ಎಂಟ್ರಿ ಕೊಡಲಿದ್ದು ನಗರದ ಕೃಷಿ ವಿವಿ ಮೈದಾನದಲ್ಲಿ…

Read More

ಬೆಳಗಾವಿ: ಕರ್ನಾಟಕ ಸಾರ್ವತ್ರಿಕ ಚುನಾವಣೆಗೆ 10 ದಿನ ಉಳಿದಿದೆ.ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಗ್ರಾಮೀಣ (Belagavi Rural) ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Congress MLA Laxmi Hebbalkar), ತಮ್ಮ ಮೇಲೆ ಲೋಕಾಯುಕ್ತ (Lokayukta Raid),  ಐಟಿ ದಾಳಿ (IT Raid) ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ (Congress And JDS Leaders) ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲಿದ್ದ್ದಾರೆ ಎಂಬ ವಿಷಯವನ್ನು ಹೇಳಿದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ (Karnataka Assembly Election 2023) ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ (Congress) ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ…

Read More

ಮಂಡ್ಯ: ಇಡೀ ಪ್ರಪಂಚದಲ್ಲಿ ಭಾರತ ಸರ್ಕಾರದ ಕೆಲಸ ಅವಿಸ್ಮರಣೀಯ. ಮೋದಿ (Narendra Modi) ನೇತೃತ್ವದಲ್ಲಿ ಭಾರತ ವಿಶ್ವ ಮೆಚ್ಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು. ಶ್ರೀರಂಗಪಟ್ಟಣದ ಕೊತ್ತತ್ತಿ ಗ್ರಾಮದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಅನೇಕ ವರ್ಷಗಳ ಕಾಲ ಕಾಂಗ್ರೆಸ್ (Congress) ಆಡಳಿತ ನೋಡಿದ್ದೀರಿ. ಕಳೆದ 9 ವರ್ಷದಲ್ಲಿ ನಮ್ಮ ಸರ್ಕಾರ ಸ್ವಚ್ಛ ಆಡಳಿತವನ್ನು ನೀಡುತ್ತಿದೆ. ನಮ್ಮ ಅವಧಿಯಲ್ಲಿ ಒಬ್ಬ ಮಂತ್ರಿಯ ಮೇಲೆ ಭ್ರಷ್ಟಾಚಾರದ ಆರೋಪ ಬರಲಿಲ್ಲ. ಈ ಬಾರಿ ಪೂರ್ಣ ಪ್ರಮಾಣದ ಬಿಜೆಪಿ (BJP) ಸರ್ಕಾರ ಆಡಳಿತಕ್ಕೆ ಬರುತ್ತದೆ ಎಂಬ ಭರವಸೆ ಇದೆ. ನಾವು ಯಾವುದೇ ಮಂತ್ರಿಯನ್ನು ಭ್ರಷ್ಟಾಚಾರ ಮಾಡಲು ಬಿಡುವುದಿಲ್ಲ. ಭ್ರಷ್ಟಾಚಾರ ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದರು. ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರವಿತ್ತು. ರಾಜೀವ್ ಗಾಂಧಿ ಭ್ರಷ್ಟಾಚಾರ ತಡೆಯುವಲ್ಲಿ ನಿಸ್ಸಹಾಯಕರಾಗಿದ್ದರು. ಮೋದಿ ಪ್ರಧಾನಿ ಆಗಿ 10 ಸಾವಿರ ರೈತರಿಗೆ ಕಿಸಾನ್ ಸಮ್ಮಾನ್…

Read More

ಚಾಮರಾಜನಗರ: ಒಂದು ಕೊಡ್ರಯ್ಯ ಅಂದ್ರೆ ಎರಡು ಕೊಟ್ಟವ್ರೆ, ಚಾಮರಾಜನಗರ (Chamarajanagar) ವೋಲ್ಟೇಜ್ ಆದ್ರೆ, ವರುಣಾ (Varuna) ಹೈ ವೋಲ್ಟೇಜ್ ಎಂದು ಸಚಿವ ವಿ.ಸೋಮಣ್ಣ (V Somanna) ಎರಡು ಕಡೆ ಸ್ಪರ್ಧಿಸಿರುವ ಬಗ್ಗೆ ಮಾರ್ಮಿಕವಾಗಿ ನುಡಿದರು.ಚಾಮರಾಜನಗರ ತಾಲೂಕು ಕೊತ್ತಲವಾಡಿಯಲ್ಲಿ ರೋಡ್ ಶೋ (Road Show) ವೇಳೆ ಮಾತನಾಡಿದ ಅವರು, ಎರಡು ಕಡೆ ಓಡಾಡುವುದು ಸುಲಭದ ಕೆಲಸ ಅಲ್ಲ, ವರುಣಾ ಹೈವೋಲ್ಟೇಜ್ ಅಂತ ಅವ್ರು ಹೇಳ್ತಿದ್ರು, ಆದ್ರೆ ಎಂಟೇ ದಿನಕ್ಕೆ ಹೈಯು ಇಲ್ಲ ಪೈಯು ಇಲ್ಲ ಆಗಿದೆ. ಇನ್ನೊಂದು ಮೂರು, ನಾಲ್ಕು ದಿನ ಹೋದ್ರೆ ಎಲ್ಲಾ ವೋಲ್ಟೇಜ್ ಹೋಗಿ ಅವರು ಏನಾಗುತ್ತಾರೆ ಅಂತ ನೀವೇ ನೋಡಿ ಎಂದು ವ್ಯಂಗ್ಯವಾಡಿದರು. ಗೋವಿಂದರಾಜನಗರ ತಬ್ಬಲಿ ಆಗಿದೆ, ನೂರಾರು ಜನ ಕಾರ್ಯಕರ್ತರು ಇಲ್ಲಿ ಬಂದು ಓಡಾಡುತ್ತಿದ್ದಾರೆ. ವರುಣಾದಲ್ಲಿ ಸಾವಿರಾರು ಜನರು ಬಂದು ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಅವರು ನಾನು ನಾಮಪತ್ರ ಹಾಕಿದ್ರೆ ಮತ್ತೆ ವೋಟ್ ಹಾಕುವುದಕ್ಕೆ ಮಾತ್ರ ಬರುತ್ತೇನೆ ಎಂದು ಹೇಳಿದ್ದರು. ಆದರೆ ಅವರು ಸೋಮವಾರದಿಂದ ವರುಣಾದಲ್ಲೇ…

Read More

ಬೆಂಗಳೂರು: ಬೆಂಗಳೂರು(Bangalore) ದಕ್ಷಿಣ ಕ್ಷೇತ್ರದಲ್ಲಿ ಅನ್ಯ ಪಕ್ಷದ ಹಲವು ಮುಖಂಡರು ಬಿಜೆಪಿ ಸೇರ್ಪಡೆ ಆಗಿದ್ದಾರೆ. ಪಾಲಿಕೆ ಮಾಜಿ ಸದಸ್ಯ ಕೆ.ರಮೇಶ್‌ ರಾಜು ಸೇರಿದಂತೆ ಹಲವು ಪಕ್ಷಗಳ ಕಾರ್ಯಕರ್ತರು ಬಿಜೆಪಿ ಯುವ ಮುಖಂಡ ಪರಮೇಶ್‌ ಸಮ್ಮುಖದಲ್ಲಿ ಕಮಲ ಪಕ್ಷ ಸೇರಿದರು. ಈ ಮಧ್ಯೆ ಕ್ಷೇತ್ರ ವ್ಯಾಪ್ತಿಯ ಬೇಗೂರು ವಾರ್ಡಿನ ಅಕ್ಷಯನಗರದಲ್ಲಿ ಡಿಎಲ್‌ಎಫ್ ಅಪಾರ್ಟ್‌ಮೆಂಟ್‌ ನಿವಾಸಿಗಳ ಜತೆಗೆ ಶಾಸಕ ಎಂ.ಕೃಷ್ಣಪ್ಪ ಸಮಾಲೋಚನೆ ನಡೆಸಿದರು. ಹಾಗೆಯೇ ನಾಗರಿಕರ ಕುಂದು ಕೊರತೆಗಳನ್ನು ಆಲಿಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಪಾಲಿಕೆ ಮಾಜಿ ಸದಸ್ಯ ಕೆ. ಸೋಮಶೇಖರ್‌, ಮುಖಂಡರಾದ ಕೆಂಬತ್ತಹಳ್ಳಿ ವೆಂಕಟೇಶ್‌, ಪದಾಧಿಕಾರಿಗಳಾದ ಶ್ರೀಧರ್‌ ಮೂರ್ತಿ, ಲಕ್ಷ್ಮಮ್ಮ ಮತ್ತಿತರರಿದ್ದರು. ಈ ವೇಳೆ ಮಾತನಾಡಿದ ಶಾಸಕ ಎಂ.ಕೃಷ್ಣಪ್ಪ, ಕ್ಷೇತ್ರವ್ಯಾಪ್ತಿಯಲ್ಲಿ 110 ಹಳ್ಳಿಗಳು ಸೇರಿದ್ದು ಕಾವೇರಿ ನೀರಿನ ಪೂರೈಕೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ದಿಗೆ ಪಣತೊಡಲಾಗಿದ್ದು, ಹೀಗಾಗಿ ಕ್ಷೇತ್ರದ ಜನರು ಮತ್ತೆ ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಂಕಿ ಅವಘಡ (Fire accident in Bangalore)ಸಂಭವಿಸಿದೆ. ಕೆಂಗೇರಿ ಉಪನಗದರ ನಾಡಕಚೇರಿ ಆವರಣದ ಪ್ರವೇಶ ದ್ವಾರದ ಬಳಿಯೇ ಬೆಂಕಿ ಕಾಣಿಸಿಕೊಂಡು ನಂತರ ಇಡೀ ಕಚೇರಿಗೆ ಆವರಿಸಿದೆ. ಬೆಂಕಿ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿವೆ. ಘಟನೆ ನಂತರ ಸಂಬಂಧಿಸಿದಂತೆ ನಾಡಕಚೇರಿ ಸಿಬ್ಬಂದಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸದ್ಯ ತನಿಖೆ ಕೈಗೊಂಡಿದ್ದಾರೆ. ಕಂಪ್ಯೂಟರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಮುಖ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಮಧ್ಯರಾತ್ರಿ ಮಹಿಳೆ ಮತ್ತು ಮಕ್ಕಳಿದ್ದ ಮೆನೆಗೆ ನುಗ್ಗಿದ ಆರೋಪದಡಿ ಇನ್ಸ್ಪೆಕ್ಟರ್ ವಿರುದ್ದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಸುಬ್ರಮಣ್ಯ ನಗರ ಠಾಣೆ ಇನ್ಸ್ಪೆಕ್ಟರ್ (Subramanya Nagar Station Inspector)ಶರಣಗೌಡ ವಿರುದ್ದ  ನಗರ ಪೊಲೀಸ್ ಆಯುಕ್ತ  ಪ್ರತಾಪ್ ರೆಡ್ಡಿಗೆ ( Police Commissioner Pratap Reddy)ದೂರು ಕೊಡಲಾಗಿದೆ. ರಾಜಕುಮಾರ್ ಎಂಬುವರ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಹೆಂಡತಿ ಹಾಗೂ ಮಗಳ ಜೊತೆ ಪೊಲೀಸರು ಅಸಭ್ಯ ವರ್ತನೆ ಮಾಡಿದ ಆರೋಪವಿದೆ.  ಇದನ್ನ ಪ್ರಶ್ನೆ ಮಾಡಲು ರಾಜಕುಮಾರ್ ಇನ್ಸ್ಪೆಕ್ಟರ್ ಗೆ ಕರೆ ಮಾಡಿದ್ದ. ಈ ವೇಳೆ ರಾಜಕುಮಾರ್ ಗೆ ಯಾವುದರ ಬಗ್ಗೆ ಕಪ್ಲೆಂಟ್ ಆಗಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿಲ್ಲ. ಮಾತ್ರವಲ್ಲ ಯಾರಿಗೆ ಬೇಕಾದ್ರು ದೂರು ಕೊಡು ಎಂದು ಅವಾಜ್ ಹಾಕಿದ್ದ. ಇದೀಗ ಇನ್ಸ್ಪೆಕ್ಟರ್ ಶರಣಗೌಡ ಹಾಗೂ ರಾಜಕುಮಾರ್ ನಡುವಿನ ಸಂಭಾಷಣೆ ವೈರಲ್ ಆಗಿದೆ.

Read More

ರಿಯಾದ್: ಆಪರೇಷನ್ ಕಾವೇರಿಯಡಿಯಲ್ಲಿ (Operation Kaveri) ಸುಡಾನ್‌ನಿಂದ (Sudan) ಭಾರತೀಯರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, 229 ಭಾರತೀಯರು ಭಾನುವಾರ ಜೆಡ್ಡಾದಿಂದ (Jeddah) ಬೆಂಗಳೂರಿಗೆ (Bengaluru) ತೆರಳುವ ವಿಮಾನದಲ್ಲಿ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry Of External Affairs) ತಿಳಿಸಿದೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi)  ತಮ್ಮ ಟ್ವಿಟ್ಟರ್‌ (Twitter) ಖಾತೆಯಲ್ಲಿ ಟ್ವೀಟ್ (Tweet) ಮಾಡುವ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಪರೇಷನ್ ಕಾವೇರಿ ನಾಗರಿಕರನ್ನು ಮರಳಿ ಮನೆಗೆ ಕರೆತರುತ್ತಿದೆ. 229 ಪ್ರಯಾಣಿಕರನ್ನು ಹೊತ್ತ 7ನೇ ವಿಮಾನವು ಇದಾಗಿದ್ದು, ಜೆಡ್ಡಾದಿಂದ ಬೆಂಗಳೂರಿಗೆ ತೆರಳಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಸುಡಾನ್‌ನಲ್ಲಿ ಕದನ ವಿರಾಮವನ್ನು ಘೋಷಿಸಿರುವುದರಿಂದ, ಭಾರತ ಸೇರಿದಂತೆ ಹಲವಾರು ದೇಶಗಳು ತಮ್ಮ ನಾಗರಿಕರನ್ನು ಸಂಘರ್ಷ-ಪೀಡಿತ ರಾಷ್ಟ್ರದಿಂದ ಸ್ಥಳಾಂತಿರಸಲು ಪ್ರಯತ್ನಿಸುತ್ತಿವೆ. ಇದಕ್ಕೂ ಮೊದಲು, ಭಾರತೀಯ ನೌಕಾಪಡೆಯ ಹಡಗು, ಐಎನ್‌ಎಸ್ ಟೆಗ್ (INS Teg), ಶನಿವಾರ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ 288 ಭಾರತೀಯರನ್ನು ಆಪರೇಷನ್ ಕಾವೇರಿ ಮೂಲಕ…

Read More