Author: Prajatv Kannada

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿ (Congress Guarantee) ಯೋಜನೆಗಳು ಇಡಿ ದೇಶದ ಗಮನವನ್ನೇ ಸೆಳೆದಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (Free Bus Travel for Women) ಯೋಜನೆಯಾಗಿರುವ ಶಕ್ತಿ (Shakti Scheme) ಅತ್ಯಂತ ನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದೆ. ಇದೇ ಭಾನುವಾರದಂದು ಈ ಯೋಜನೆಗೆ ಚಾಲನೆ ಸಿಗಲಿದೆ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಇದೀಗ ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ (Siddaramaiah) ಸ್ವತಃ ಬಸ್‌ನ ಕಂಡಕ್ಟರ್ (Bus Conductor) ಆಗಲಿದ್ದಾರೆ. ಜೂನ್ 11 ರಂದು ಶಕ್ತಿ ಯೋಜನೆಗೆ ವಿಶೇಷ ರೂಪದಲ್ಲಿ ಚಾಲನೆ ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಮೆಜೆಸ್ಟಿಕ್‌ನಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್‌ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ. ರೂಟ್ ನಂ.43 ಬಸ್‌ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಅಂದೇ…

Read More

ಮೈಸೂರು: ಕಾರು ಪಲ್ಟಿಯಾಗಿ ಮೈಸೂರು ಬಿಜೆಪಿ(BJP) ಮುಖಂಡ ಸ್ವಾಮಿಗೌಡ ಎನ್ನುವವರು ಸಾವನ್ನಪ್ಪಿರುವ ಘಟನೆ ತಮಿಳು ನಾಡಿನ ಊಟಿ (Ooty) ಬಳಿ ನಡೆದಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವಾಮಿಗೌಡ ಅವರು ಸ್ನೇಹಿತರ ಕುಟುಂಬದವರ ಜೊತೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದುರಂತ ನಡೆದಿದ್ದು, ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

Read More

ಗದಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಅದ್ಧೂರಿ ರಥೋತ್ಸವ ತುಂತುರು ಮಳೆಯಲ್ಲಿಯೂ ಅತೀ ಸಡಗರದಿಂದ ನಡೆಯಿತು. ಅಂದ ಮಕ್ಕಳ ಆಶಾಕಿರಣ ಸಾವಿರಾರು ಅಂದ ವಿದ್ಯಾರ್ಥಿಗಳ ಬಾಳು ಬೆಳಗುತ್ತಿರೋ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ಕಲ್ಲಯ್ಯಜ್ಜನವರ ನೇತೃತ್ವದಲ್ಲಿ ಅದ್ಧೂರಿ ರಥೋತ್ಸವ ಜರುಗಿತು. 79ನೇ ಪುಣ್ಯಸ್ಮರೋತ್ಸವ ಹಾಗು ಡಾ. ಪಂಡಿತ ಪುಟ್ಟರಾಜ ಗವಾಯಿಗಳವರ 13ನೇ ಪುಣ್ಯಸ್ಮರಣೋತ್ಸವ ನಿಮಿತ್ಯ ಪ್ರತಿ ವರ್ಷ ರಥೋತ್ಸವ ನಡೆಯುತ್ತ ಬರ್ತಿದೆ. ಇನ್ನು ರಥೋತ್ಸವದಲ್ಲಿ ನಾಡಿನ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ರಥೋತ್ಸವಕ್ಕೆ ಸಾಕ್ಷಿಯಾದರು. ಕಳೆದ ಗುರುವಾರದಿಂದ ಇಂದಿನವರೆಗೂ ಜಾತ್ರೆಯ ಅಂಗವಾಗಿ ಮಠದಲ್ಲಿ ಕೀರ್ತನ, ಸಂಗೀತ, ಉಪನ್ಯಾಸ, ವಿವಿಧ ಮನರಂಜನೆ ಕಾರ್ಯಕ್ರಮಗಳನ್ನು ಜರುಗಿದವು. ಇನ್ನು ಡೊಳ್ಳು, ಕರಡಿ ಮಜಲು, ವಾದ್ಯಗಳ ಮೆರುಗು ನೀಡಿದವು. ಇನ್ನು ಗಜರಾಜ ಭಕ್ತರ ಗಮನ ಸೆಳೆದಿದ್ದು ವಿಶೇಷವಾಗಿತ್ತು. ಹಲವು ಸ್ವಾಮೀಜಿಯವರು ಸಹ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

Read More

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಾಹಾಪೌರರ 21ನೇ ಅಧಿಕಾರ ಅವಧಿ ಮುಗಿಯುತ್ತಾ ಬಂದಿದ್ದು, ಈಗ 22ನೇ ಅವಧಿಯ ಎರಡು ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ ಜೂನ್ 20, 2023 ರಂದು ಅವಳಿನಗರ ಮಾಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಕುರಿತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ (ಚುನಾವಣೆ)ಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ಅವರು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ. ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸುವ ಕಾರ್ಯ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭಿಸಲು ಸಮಯ ನಿಗದಿ ಮಾಡಲಾಗಿದೆ. 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ. ಮಹಾಪೌರ ಮತ್ತು ಉಪಮಹಾಪೌರ…

Read More

ಹುಬ್ಬಳ್ಳಿ ಧಾರವಾಡ: ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರವಾಗಿ ಸಂಪರ್ಕ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿ ಐಷಾರಾಮಿ ಎಸಿ ಬಸ್ ಸಂಚಾರಕ್ಕೆ ಚಿಗರಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ. ನಿತ್ಯ ನೂರಾರು ಚಿಗರಿ ಬಸ್‌ಗಳು ಅವಳಿ ನಗರಗಳ ಮಧ್ಯೆ ಓಡಾಡುತ್ತವೆ. ಈ ಚಿಗರಿ ಬಸ್‌ಗಳು ಹವಾನಿಯಂತ್ರಿತವಾಗಿದ್ದು, ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಈಗ ಇದೆ ಮುಳುವಾಗಿ ಪರಿಣಿಮಿಸಿದೆ. ಒಂದು ಕಡೆ ಜನರ ಒತ್ತಾಯ ಮತ್ತೊಂದು ಕಡೆ ಸರ್ಕಾರದ ಜಾಣ ನಡೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಹೆಸರು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಈಗ 5 ಯೋಜನೆ ಜಾರಿಗೆ ದಿನಕ್ಕೆ ಒಂದೊಂದು ಷರತ್ತು ಹಾಕುತ್ತಿರುವುದು ಜನರ ಅಸಮಾಧಾನಕ್ಕೆ ಸಹ ಕಾರಣವಾಗಿದೆ. ಈ ತಿಂಗಳ 11 ರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಬಹುದಾಗಿದ್ದು, ಇದು ರಾಜ್ಯದ ಮಹಿಳೆಯರಿಗೆ ಕೊಂಚ ಸಮಾಧಾನಕರ ವಿಷಯ. ಆದರೆ ಈ ಸಂತಸ ಹುಬ್ಬಳ್ಳಿ ಧಾರವಾಡದ ಮಹಿಳೆಯರಿಗೆ ಕೊಟ್ಟು ಕಸಿದಂತಾಗಿದೆ. ಬಹು ಕೋಟಿ…

Read More

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಹನುಮಂತ ಹೊಸಮನಿ ಎಂಬುವರ ಮೇಲೆ ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಹಳ್ಳಿಕೇರಿ ಗ್ರಾಮದ ಕಾರ್ತಿಕ್ ಎಂಬುವವರಿಂದ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿರೋದಾಗಿ ಆರೋಪಿಸಲಾಗಿದೆ. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಿ ಶಿಕ್ಷೆ ಕೊಡಬೇಕು ಎಂದು ಮುಂಡರಗಿ ತಾಲೂಕು ಪಂಚಾಯತಿ ಎದುರು ಪ್ರತಿಭಟನೆ ಮಾಡಿದರು. ಗ್ರಾಮ ಪಂಚಾಯಿತಿ ವಿವಿಧ ನೌಕರರು ಹಾಗೂ ತಾಲೂಕ ನೌಕರರ ಸಂಘದಿಂದ ಪ್ರತಿಭಟನೆ ‌ಮಾಡಲಾಯಿತು. ಜಿಲ್ಲೆಯಾದ್ಯಂತ ಪದೇ ಪದೇ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ದೌರ್ಜನ್ಯಗಳು ನಡೆಯುತ್ತಿದ್ದು, ನೌಕರರು ಭಯದಿಂದ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಯಾವುದೇ ಅಧಿಕಾರಿಗಳು ತಪ್ಪು ಮಾಡಿದರು ಅವರ ಮೇಲಾಧಿಕಾರಿಗಳಿಗೆ ತಿಳಿಸಲಿ ಕಾನೂನು ಪ್ರಕಾರ ಹೋರಾಟ ಮಾಡಲಿ ಆದರೆ ಕಾನೂನು ಕೈಗೆ ತೆಗೆದುಕೊಂಡು ಹಲ್ಲೆ ಮಾಡುವುದು ನೌಕರರಿಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಹಿಂದಿನ ದಿವಸ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕೂಡ ಹಲ್ಲೆ ಮಾಡಿದ್ದರು ಎಲ್ಲಾ ಗ್ರಾಮ…

Read More

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಮೂರು ತಿಂಗಳ ಮಗುವೊಂದು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಲಸಿಕೆ ಹಾಕಿದ ಒಂದು ಗಂಟೆಯೊಳಗೆ ಮಗು ಮೃತಪಟ್ಟಿದ್ದು, ಪೋಷಕರು, ಸಂಬಂಧಿಕರು ಪ್ರತಿಭಟನೆ (Protest) ನಡೆಸಿದ್ದಾರೆ. ಚುಚ್ಚುಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಮೃತಪಟ್ಟಿದೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿದೆ. ಮಗು ಅಲ್ಲಿಯವರೆಗೆ ಆರೋಗ್ಯವಾಗಿಯೇ ಇತ್ತು ಎಂದು ಆರೋಪಿಸಿ ಆಸ್ಪತ್ರೆ ಎದುರು ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಮೃತ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಡಾ. ಮಧು, ಸಿಬ್ಬಂದಿ ಸಾನಿಯಾ, ಮಮತಾ, ಶೋಭಾ, ಲಕ್ಷ್ಮೀದೇವಿ, ಚಂದ್ರಪ್ರಭಾ ವಿರುದ್ಧ ದೂರು ದಾಖಲು ಮಾಡಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Read More

ಅರಬ್ಬೀ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಪ್ರಭಾವದ ಹಿನ್ನೆಲೆ, ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂ.11 ಮತ್ತು ಜೂ.12ರಂದು ವ್ಯಾಪಕ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆಯಾಗಲಿದ್ದು, ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ. ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಹೊಳೆಹೊನ್ನೂರು, ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ರಾಜ್ಯದಲ್ಲಿಅತೀ ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಷಿಯಸ್‌ ಕಲಬುರ್ಗಿಯಲ್ಲಿ ದಾಖಲಾಗಿದೆ. ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲ ತೀರದಲ್ಲಿ 2.3 ರಿಂದ 3.2 ಮೀ. ಎತ್ತರದ ಅಲೆಗಳು ಮಂಗಳೂರಿನಿಂದ ಕಾರವಾರದ ತನಕ ಅಪ್ಪಳಿಸಲಿವೆ. ಜೂ.…

Read More

ಇದು ಭಾರತದ ಭೂಪಟದಲ್ಲಿ ಇದ್ದು ಇಲ್ಲದಂತಿರುವ ಹಳ್ಳಿಯ ಶೋಚನೀಯ ಬದುಕಿನ ನೋವಿನ ಕಥೆ-ವ್ಯಥೆ.  ಒಂದು ಕಾಲದಲ್ಲಿ ಕಂದಾಯ ಕಟ್ಟುತ್ತಿದ್ದ ಗ್ರಾಮಸ್ಥರು ಈಗ  ವಂಚಿತರಾಗಿದ್ದಾರೆ. ಗ್ರಾಮಕ್ಕೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ದುರ್ಗಮ ಕಾಡಿನಲ್ಲಿ ನಡೆದು ಹೋಗಬೇಕಾಗಿರುವುದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಲ್ಲಿನ ಸಮಸ್ಯೆಯಿಂದ ಗ್ರಾಮಕ್ಕೆ ಯಾರು ಹೆಣ್ಣು ಗಂಡು ಸಂಬಂಧ ಮಾಡಲು ಬರುತ್ತಿಲ್ಲ. ರೇಷನ್ ಕಾರ್ಡನ್ನೇ ನಂಬಿ ಬದುಕುತ್ತಿರುವ ಈ ಗ್ರಾಮಸ್ಥರ ಸ್ಥಿತಿ ಅತ್ಯಂತ ಶೋಚನೀಯ.ಅತ್ತ ಕಂದಾಯ ಭೂಮಿಯೂ ಅಲ್ಲದ ಇತ್ತ ಅರಣ್ಯ ಭೂಮಿಯೂ ಅಲ್ಲದ ತುಂಗಾ ಬ್ಯಾಕ್ ವಾಟರ್  ಬಫರ್ ಏರಿಯಾದಲ್ಲಿ ಬದುಕು ಜೀಕುತ್ತಿರುವ  ಗ್ರಾಮಸ್ಥರ ನೋವಿನ ಸಂಗತಿ ಇದು. ಶಿವಮೊಗ್ಗ ಜಿಲ್ಲೆಯ ಗಡಿಗ್ರಾಮವಾಗಿರುವ ಈ ಗ್ರಾಮದ ಚಿತ್ರಣ ಹೇಗಿದೆ ಎಂಬುದರ ಕಂಪ್ಲೀಟ್ ಡಿಟೈಲ್ ಇಲ್ಲಿದೆ. ತುಂಗಾ ಹಿನ್ನೀರಿನ ನಿಸರ್ಗದ ಸೌಂದರ್ಯದ ಮಡಿಲಿನಲ್ಲಿ ಹೊದ್ದು ನಿಂತಿರುವ ಗ್ರಾಮ ಎಂತವರನ್ನು ಆಕರ್ಷಿಸುತ್ತದೆ.. ಈ ಗ್ರಾಮಕ್ಕೆ ಮೊದಲ ಬಾರಿ ಯಾರೇ ಭೇಟಿ ನೀಡಿದರೂ ಇಲ್ಲಿನ ಸೌಂದರ್ಯಕ್ಕೆ ಬೆರಗಾಗಿ ಹೋಗುತ್ತಾರೆ. ಇಲ್ಲಿ ನೆಲಿಸಿರುವ ಜನರೇ ಧನ್ಯರು…

Read More

ಮಂಡ್ಯ: ಮೈಸೂರು ನಗರಕ್ಕೆ ಕೈಗಾರಿಕೆಗಳು ಬರಲಿ, ಸಾಂಸ್ಕೃತಿಕ ನಗರಿ ಬೆಳೆಯಲಿ. ಪ್ರತಿದಿನ ಬೆಂಗಳೂರು-ಮೈಸೂರು ಸಂಚರಿಸುವ ಜನರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ಮೈ-ಬೆಂ ದಶಪಥ ಹೆದ್ದಾರಿ (Mysuru Bengaluru Expressway) ನಿರ್ಮಾಣ ಮಾಡಲಾಗಿದೆ. ಆದರೆ ಈ ಹೆದ್ದಾರಿ ಇದೀಗ ಡೆಡ್ಲಿ ಆಕ್ಸಿಡೆಂಟ್ ಪ್ಲೇಸ್ ಆಗ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಅಪಘಾತದಲ್ಲಿ ಮೃತಪಟ್ಟಿರೋದು ಆತಂಕ ಮೂಡಿಸಿದೆ. ಹೌದು. ಮೈ-ಬೆಂ ಟೆನ್ ಲೈನ್ ಹೈವೇ ಮಂಡ್ಯ (Mandya) ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ದಶಪಥ ಹೆದ್ದಾರಿ ಇದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲಾ ವ್ಯಾಪ್ತಿಯ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ ನೋಡಿದರೆ ಜನರಲ್ಲಿ ಆತಂಕ ಮೂಡಿಸುತ್ತಿದೆ. ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ…

Read More