ಚಿಕ್ಕಮಗಳೂರು: ಒಬ್ಬನೇ ಶಿಕ್ಷಕ. ಒಂದೇ ಕೊಠಡಿ. ಐದು ತರಗತಿಗಳು. ಒಂಬತ್ತೇ ಮಕ್ಕಳು. 1ನೇ ಕ್ಲಾಸಿಗೆ ಎರಡು, 2ನೇ ಕ್ಲಾಸಿಗೆ ಎರಡು, 3ಕ್ಕೆ ಇಲ್ಲ. 4ನೇ ಕ್ಲಾಸಿಗೆ ಇಬ್ರು, 5ಕ್ಕೆ ಮೂವರು. ಎಲ್ಲರಿಗೂ ಒಬ್ಬನೇ ಪಾಠ ಮಾಡ್ಬೇಕು. ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲವಕ್ಕೂ ಅವನೊಬ್ಬನೇ ಮೇಷ್ಟ್ರು. ಶಾಲೆ ಆರಂಭವಾಗಿ 8 ದಿನವಾದ್ರು ಒಂದೇ ಒಂದು ಮಗುವೂ ಶಾಲೆಗೆ ಬಂದಿಲ್ಲ. ಪೋಷಕರು ಆ ಮೇಷ್ಟ್ರು ಹೋಗೋತನಕ ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಿದ್ದಾರೆ. ಇದು ಸಮಸ್ಯೆಯ ಆಗರವಾಗಿರೋ ಕಾಫಿನಾಡ ಸರ್ಕಾರಿ ಸ್ಕೂಲ್ ಕಥೆ. ಹೌದು. ಚಿಕ್ಕಮಗಳೂರು (Chikkamagaluru School) ಜಿಲ್ಲೆ ಶೃಂಗೇರಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಗೋಳ ಸರ್ಕಾರಿ ಶಾಲೆಯಲ್ಲಿ 1 ಟು 5ನೇ ತರಗತಿಯಲ್ಲಿ 9 ಜನ ಮಕ್ಕಳಿದ್ದಾರೆ. 1ನೇ ಕ್ಲಾಸಿಗೆ ಇಬ್ಬರು, 2ನೇ ಕ್ಲಾಸಿಗೂ ಇಬ್ರು, 3ಕ್ಕೆ ಇಲ್ಲ. 4ನೇ ಕ್ಲಾಸಿಗೆ ಇಬ್ರು, 5ಕ್ಕೆ ಮೂವರು. ಎಲ್ಲರಿಗೂ ಒಬ್ಬನೇ ಪಾಠ ಮಾಡ್ಬೇಕು. ಕನ್ನಡ, ಹಿಂದಿ, ಇಂಗ್ಲೀಷ್,…
Author: Prajatv Kannada
ಮಂಗಳೂರು: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ(25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು, ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ , ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರು. ಆದ್ರೆ, ಗೃಹ ಪ್ರವೇಶವಾದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣಿಗೆ ಶರಣಾಗಿರುವುದು ದುರಂತ ಆತ್ಮಹತ್ಯೆಗೂ ಮುನ್ನ ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ. ಅಶ್ವಿನಿ ಸಾಮಾನ್ಯ ಕುಟುಂಬದವಲಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದು…
ಮಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳು ಶಿಕ್ಷಣದಲ್ಲಿ ಯಾವಾಗಲೂ ನಂಬರ್ ಒನ್.. ಅದೇ ರೀತಿ ಕೋಮು ಸಂಘರ್ಷದ ವಿಚಾರದಲ್ಲೂ ಪ್ರಥಮ ಸ್ಥಾನದಲ್ಲೇ ನಿಲ್ಲುತ್ತೆ.. ಕೋಮು ಗಲಭೆಗಳು, ಹತ್ಯೆಗಳು, ಉಗ್ರರ ಸಂಚು, ನೈತಿಕ ಪೊಲೀಸ್‌ಗಿರಿ.. ಇತ್ಯಾದಿ ವಿಚಾರಗಳಿಂದಲೇ ಹಲವು ಬಾರಿ ಮಂಗಳೂರು ಸುದ್ದಿಯಲ್ಲಿ ಇರುತ್ತೆ.. ಇದೀಗ ಈ ನಗರಕ್ಕೆ ಹೊಸದೊಂದು ಪೊಲೀಸ್ ದಳ ಬರಲಿದೆ. ಅದರ ಹೆಸರು ಕೋಮುವಾದ ನಿಗ್ರಹ ದಳ..! ರಾಜ್ಯದಲ್ಲೇ ಮೊದಲ ಬಾರಿಗೆ ಇಂಥಾದ್ದೊಂದು ದಳವನ್ನ ಮಂಗಳೂರಿನಲ್ಲಿ ಸ್ಥಾಪನೆ ಮಾಡೋಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಆ್ಯಂಟಿ ಕಮ್ಯುನಲ್ ವಿಂಗ್ ರಚನೆ ಮಾಡೋಕೆ ನಿರ್ಧರಿಸಿದ್ದೇವೆ ಅಂತಾ ಹೇಳಿದ್ದಾರೆ.. ಹಾಗಾದ್ರೆ ಈ ದಳದ ಕೆಲಸ ಏನು? ಕೋಮುವಾದ ನಿಗ್ರಹಕ್ಕೆ ಈ ದಳ ಏನು ಮಾಡುತ್ತೆ? ಇಲ್ಲಿದೆ ಡೀಟೇಲ್ಸ್.. ಕೋಮುವಾದ ನಿಗ್ರಹ ದಳದ ಕೆಲಸ ಏನು..? ಮಂಗಳೂರು ಹೇಳಿ ಕೇಳಿ ಕೋಮು ಸಂಘರ್ಷದಿಂದಲೇ ಕುಖ್ಯಾತಿ ಪಡೆದಿರೋ ನಗರ.. ಇತ್ತೀಚೆಗಷ್ಟೇ ಉಳ್ಳಾಲದಲ್ಲಿ ನೈತಿಕ ಪೊಲೀಸ್ ಗಿರಿ…
ಧಾರವಾಡ: ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಮಾವಿನ ಹಣ್ಣಿನ ಸುಗ್ಗಿ ಮುಗಿಯುತ್ತ ಬಂದರೂ, ಅಲ್ಫಾನ್ಸೋ ಮಾವಿನ ತಳಿಗೆ ಹೆಸರಾದ ಧಾರವಾಡ ಜಿಲ್ಲೆಯಲ್ಲಿ ಸತತ 4ನೇ ವರ್ಷವೂ ಮಾವಿನ ಮೇಳ ನಡೆಯಲಿಲ್ಲ. ಇದರಿಂದ ಮಾವು ಪ್ರಿಯರಲ್ಲಿ ಹಾಗೂ ಬೆಳಗಾರರಲ್ಲಿ ನಿರಾಶೆ ಮೂಡಿದೆ. ಪ್ರತಿ ವರ್ಷ ಮೇ ತಿಂಗಳ 2 ಅಥವಾ 3ನೇ ವಾರ ಮಾವು ಮೇಳ ನಡೆಯುತ್ತದೆ. ಧಾರವಾಡದ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ನಡೆಯುವ ಈ ಮಾವು ಮೇಳದಲ್ಲಿ 100- 150 ಟನ್ ಮಾವು ಮಾರಾಟವಾಗಿ 1 ಕೋಟಿ ರೂ.ವರೆಗೂ ವಹಿವಾಟು ಆಗುತ್ತಿತ್ತು. ರೈತರು ಹಾಗೂ ಗ್ರಾಹಕರ ಮಧ್ಯೆ ನೇರವಾಗಿ ವ್ಯಾಪಾರದ ಸಂಪರ್ಕ ಕೊಂಡಿಯಾಗಿ ಕಳೆದ ಒಂದು ದಶಕದಿಂದ ಉತ್ತಮ ವೇದಿಕೆ ಕಲ್ಪಿಸಿದೆ ಈ ಮಾವು ಮೇಳ. ಮೇಳಕ್ಕೆ ಜನರಿಂದಲೂ ಉತ್ತಮ ಸ್ಪಂದನೆ ಇದೆ. ಒಂದು ಉತ್ಪನ್ನ ಎಲ್ಲಿ? ಆದರೆ, ಮೂರು ವರ್ಷಗಳ ಹಿಂದೆಯೇ ರದ್ದಾಗಿದ್ದ ಈ ಮಾವು ಮೇಳ ಈವರೆಗೂ ಆರಂಭವೇ ಆಗಿಲ್ಲ. ಈ ಬಾರಿ ಮೇಳ ನಡೆಯಲಿದೆ ಎಂಬ ನಿರೀಕ್ಷೆಯೂ ಹುಸಿಯಾಗಿದೆ. ಕೇಂದ್ರ ಸರಕಾರದ…
ಸೂರ್ಯೋದಯ: 05.53 AM, ಸೂರ್ಯಾಸ್ತ : 06.45 ಪಿಎಂ ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಷಷ್ಠಿ 04:20 PM ತನಕ ನಂತರ ಸಪ್ತಮಿ ನಕ್ಷತ್ರ: ಇವತ್ತು ಧನಿಷ್ಠ 05:09 PM ತನಕ ನಂತರ ಶತಭಿಷ ಯೋಗ: ಇವತ್ತು ವೈಧೃತಿ 03:46 PM ತನಕ ನಂತರ ವಿಷ್ಕುಂಭ ಕರಣ: ಇವತ್ತು ಗರಜ 05:37 AM ತನಕ ನಂತರ ವಣಿಜ 04:20 PM ತನಕ ನಂತರ ವಿಷ್ಟಿ ರಾಹು ಕಾಲ: 10:30 ನಿಂದ 12:00 ವರೆಗೂ ಯಮಗಂಡ: 03:00 ನಿಂದ 04:30 ವರೆಗೂ ಗುಳಿಕ ಕಾಲ: 07:30 ನಿಂದ 09:00 ವರೆಗೂ ಅಮೃತಕಾಲ: 07.33 AM to 09.01 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:49 ನಿಂದ ಮ.12:41 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ,…
ನಮ್ಮ ಸರ್ಕಾರ, ಸಚಿವರು ಇದ್ದಾಗ ಜನರಿಗೆ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಮುಖಂಡರು ಅಭ್ಯರ್ಥಿಗಳ ಮಾತಿಗೆ ಯಾವುದೇ ಬೆಲೆ ಕೊಡಲಿಲ್ಲ. ಸವದಿ ಬಿಜೆಪಿ ತೊರೆದಿದ್ದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೆಟ್ಟು ಬಿತ್ತು. ಬಿಜೆಪಿ ನಾಯಕರು ಮಾಡಿದ ತಪ್ಪಿನಿಂದ ನಾವು ಬಲಿಯಾದೆವು ಎಂದು ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಎಂಟಿಬಿ ನಾಗರಾಜ್ ಹೇಳಿಕೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ. ಡಾ.ಕೆ.ಸುಧಾಕರ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿ ಸ್ಥಾನವನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ನನ್ನ, ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ.ಕೆ.ಸುಧಾಕರ್ ಕಾರಣ. 40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಕೌಂಟರ್ ಅಟ್ಯಾಕ್ ಮಾಡಲಿಲ್ಲ. ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈದೆವು. ಚುನಾವಣೆ ವೇಳೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಪ್ರಮುಖ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಸೋಲಿನಿಂದ ಯಾರೂ ಧೃತಿಗೆಡಬೇಡಿ, ರಾಜ್ಯದಲ್ಲಿ 2 ಸ್ಥಾನದಿಂದ ಇಲ್ಲಿಯವರೆಗೆ ಪಕ್ಷ ಕಟ್ಟಿ ಬೆಳೆಸಿದ್ದೇನೆ ಎಂದು ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರ ಮಾತ್ರ ಇದ್ದೆವು. ಬಿಜೆಪಿ ಶಾಸಕರಾಗಿದ್ದ ವಸಂತ ಬಂಗೇರ ಪಕ್ಷ ಬಿಟ್ಟು ಹೋದರು. ಆಗ ನಾನು ಒಬ್ಬನೇ ಸದನದಲ್ಲಿ ನಿಂತು ಹೋರಾಟ ಮಾಡಿದ್ದೇನೆ. ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ, ನರೇಂದ್ರ ಮೋದಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ. ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಕಿವಿಮಾತು ಹೇಳಿದರು.
ಲೋಕಸಭಾ ಚುನಾವಣೆಗೆ ಹಲವು ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರಕ್ಕೆ ಸಂಬಂಧಿಸಿ ಟಿಕೆಟ್ ಇಲ್ಲ ಎಂಬ ವಿಚಾರ ಹರಿದಾಡುತ್ತಿದ್ದರೂ ಹೈಕಮಾಂಡ್ ಮೌನದ ಬಗ್ಗೆ ಹಿರಿಯ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗಾಗಲೇ ವರಿಷ್ಠರ ಮಧ್ಯಪ್ರವೇಶಕ್ಕೆ ಬಹಿರಂಗವಾಗಿ ಸಂಸದ ಡಿ.ವಿ. ಸದಾನಂದ ಗೌಡ ಆಗ್ರಹಿಸಿದ್ದರೆ. ಮತ್ತೊಂದೆಡೆ ಚುನಾವಣಾ ನಿವೃತ್ತಿ ಪಡೆಯುವುದಾಗಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಸಂಸದ ಸಂಗಣ್ಣ ಕರಡಿ ಕೂಡಾ ಆಪ್ತರ ಬಳಿ ಟಿಕೆಟ್ ಸಿಗದಿದ್ದಲ್ಲಿ ನಿವೃತ್ತಿಯ ಮಾತನಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಟಿಕೆಟ್ ಇಲ್ಲ ಎಂದು ವದಂತಿ ಹರಿದಾಡಿದರೆ ಇನ್ನೂ ಒಂದು ವರ್ಷ ಕ್ಷೇತ್ರದಲ್ಲಿ ಕೆಲಸ ಮಾಡುವುದು ಹೇಗೆ ಎಂಬ ಬಗ್ಗೆ ಸಂಸದರು ಆಕ್ಷೇಪ ಹೊಂದಿದ್ದಾರೆ. ಇಷ್ಟೆಲ್ಲಾ ಆದರೂ ಹೈ ಕಮಾಂಡ್ ಮೌನವಾಗಿದ್ದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಇರಲಿದ್ದಾರೆ.
ಬೆಂಗಳೂರು: ಪಠ್ಯ ಪರಿಷ್ಕರಣೆ ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ. ಈ ಹಿಂದೆಯೂ ಸಪ್ಲಿಮೆಂಟರಿ ಪರಿಷ್ಕರಣೆ ಆಗಿದ್ದಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒತ್ತಡ ಬೇಡ ಎಂದು ಹೇಳಿದ್ದಾರೆ. ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ. ಇದು ಬಹಳ ಸೂಕ್ಷ್ಮ ವಿಚಾರವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ ಸ್ವತಃ ಸಿಎಂ (Siddaramaiah) ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ಈ ಕ್ಷಣದಲ್ಲೂ ಕೂಡ ಪಠ್ಯ ಪುಸ್ತಕ (Syllabus) ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಕೇಸರೀಕರಣಕ್ಕೆ ಬ್ರೇಕ್ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಕ್ಕಳ…