ಚೆನ್ನೈ: ದಲಿತರಿಗೆ ದೇವಸ್ಥಾನ ಪ್ರವೇಶ ವಿಚಾರವಾಗಿ ಘರ್ಷಣೆಗಳ ವರದಿಯಾಗುತ್ತಿರುತ್ತದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ದ್ರೌಪದಿ ಅಮ್ಮನವರ ದೇವಾಲಯಕ್ಕೆ ದಲಿತರ ಪ್ರವೇಶಕ್ಕೆ ನಿರಾಕರಿಸಲಾಗಿದೆ. ಮೇಲ್ವರ್ಗ ಹಾಗೂ ದಲಿತರ ನಡುವಿನ ಸಂಘರ್ಷ ಮುಂದುವರೆದಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೇವಸ್ಥಾನಕ್ಕೆ ಬೀಗ ಜಡಿದಿದ್ದಾರೆ. ಇಲ್ಲಿ ದಲಿತ- ಮೇಲ್ವರ್ಗದ ಸಂಘರ್ಷ ಇದೇ ಮೊದಲೇನಲ್ಲ. ಏಪ್ರಿಲ್‌ನಲ್ಲಿ ಒಮ್ಮೆ ಇದೇ ರೀತಿ ವಿದ್ಯಮಾನ ನಡೆದಿತ್ತು. ದೇವಸ್ಥಾನವು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಧೀನದಲ್ಲಿದೆ. ಬಿಕ್ಕಟ್ಟು ನಿವಾರಿಸಲು ಜಿಲ್ಲಾಡಳಿತದಿಂದ ಹಲವು ಸುತ್ತಿನ ಮಾತುಕತೆ ನಡೆದರೂ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಸಿಗಲಿಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ದೇವಾಲಯಕ್ಕೆ ಪ್ರವೇಶಿಸಿದ್ದರು. ಇದನ್ನು ಪ್ರಬಲ ಜಾತಿಯವರು ವಿರೋಧಿಸಿದರು. ಇದಾದ ನಂತರ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹೇರಿದರು. ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಂದಿನಿಂದ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹಾಗಾಗಿ ಕಾನೂನು…
Author: Prajatv Kannada
ಮಹಿಳಾ ಹಕ್ಕುಗಳ ಕಾರ್ಯಕರ್ತೆ,ಕೇರಳ ಮೂಲದ ರೆಹಾನಾ ಫಾತಿಮಾ (Rehana Fathima) ವಿರುದ್ಧದ ಪೋಕ್ಸೊ ಪ್ರಕರಣವನ್ನು(POCSO case) ಕೇರಳ ಹೈಕೋರ್ಟ್ (Kerala High Court) ವಜಾ ಮಾಡಿದೆ. ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳು. ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಹೇಳಿ ನ್ಯಾಯಾಲಯ ಮೊಕದ್ದಮೆಯನ್ನು ವಜಾಗೊಳಿಸಿದೆ. 37ರ ಹರೆಯದ ಫಾತಿಮಾಳ ಅರೆ ನಗ್ನ ದೇಹದ ಮೇಲೆ ಆಕೆಯ ಅಪ್ರಾಪ್ತ ಮಕ್ಕಳು ಚಿತ್ರ ಬಿಡಿಸುತ್ತಿರುವ ವಿಡಿಯೊ 2020 ರಲ್ಲಿ ವೈರಲ್ ಆದ ನಂತರ ಆಕೆ ಮೇಲೆ ಕೇಸು ದಾಖಲಿಸಿ ಬಂಧಿಸಲಾಯಿತು.ಆಕೆಯ ಜಾಮೀನು ಅರ್ಜಿಗಳನ್ನು ನಿರಾಕರಿಸಲಾಯಿತು. ಕೇರಳ ಹೈಕೋರ್ಟ್ ನ್ಯಾಯಾಧೀಶರು ಈ ಕೃತ್ಯವನ್ನು “ಮುಗ್ಧ ಕಲಾತ್ಮಕ ಅಭಿವ್ಯಕ್ತಿ” ಎಂದು ಹೇಳಿದ್ದು ಈ ಕೃತ್ಯವು ಲೈಂಗಿಕ ರೀತಿಯದ್ದು ಎಂಬ ಆರೋಪವನ್ನು ತಳ್ಳಿಹಾಕಿದರು. ಮಕ್ಕಳನ್ನು ಅಶ್ಲೀಲತೆಗೆ ಬಳಸಲಾಗಿದೆ ಎಂದು ತೋರಿಸಲು ಏನೂ ಇಲ್ಲ. ವಿಡಿಯೊದಲ್ಲಿ ಲೈಂಗಿಕತೆಯ ಯಾವುದೇ ಸುಳಿವು ಇಲ್ಲ. ವ್ಯಕ್ತಿಯ…
ಬೆಂಗಳೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರೀತಿಸಿದ ಹುಡುಗಿಯ ಮೇಲೆ ಪ್ರಿಯಕರ ಹಾಗು ಸ್ನೇಹಿತನಿಂದ ರೇಪ್.ಪುರುಷೋತ್ತಮ್ ಹಾಗು ಚೇತನ್ ರಿಂದ ಗ್ಯಾಂಗ್ ರೇಪ್.ಪುರುಷೋತ್ತಮ್ ಹಾಗು ಯುವತಿ ಒಂದು ವರ್ಷದಿಂದ ಲವ್ ಮಾಡುತ್ತಿದ್ರು. ಮೂಲತಹ ತುಮಕೂರಿನ ನಿವಾಸಿಯಾದ ಯುವತಿ.ಫಸ್ಟ್ ಗ್ರೇಡ್ ಕಾಲೇಜ್ ನಲ್ಲಿ ಮೊದಲನೇ ವರ್ಷದ ಪ್ಯಾರಾ ಮೇಡಿಕಲ್ ವಿಧ್ಯಾಬ್ಯಾಸ ಮಾಡಿಕೊಂಡಿದ್ದ ಯುವತಿ.ತುಮಕೂರಿನ ಕೊರಟಗೆರೆ ನಿವಾಸಿ ಪುರುಷೋತ್ತಮ್ ಹಾಗು ಯುವತಿ ಒಂದು ವರ್ಷದಿಂದ ಲವ್. ಕಳೆದ ಒಂದು ವಾರದ ಹಿಂದೆ ಯುವತಿಯನ್ನ ಭೇಟಿ ಮಾಡಿದ್ದ ಆರೋಪಿ ಪುರುಷೋತ್ತಮ್. ನಂತರ ಯುವತಿಯ ಮೊಬೈಲ್ ಪಡೆದು ಬೆಂಗಳೂರಿಗೆ ಬಂದಿದ್ದವ ಆರೋಪಿ.ಎರಡು ದಿನಗಳ ಹಿಂದೆ ಪ್ರಿಯಕರನಿಗೆ ಕರೆ ಮಾಡಿ ನನ್ನ ಮೊಬೈಲ್ ವಾಪಸ್ ಕೊಡು ಅಂತ ತಿಳಿಸಿದ್ದ ಯುವತಿ.ಈ ವೇಳೆ ಬೆಂಗಳೂರಿನ ಮೆಜೆಸ್ಟಿಕ್ ಗೆ ಬಾ,ನಿನ್ನ ಮೊಬೈಲ್ ಕೊಡ್ತಿನಿ ಅಂದಿದ್ದ ಆರೋಪಿ.6 ನೇ ತಾರೀಖು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದ ಯುವತಿ.ಇನ್ನು ಯುವತಿಯನ್ನ ಗಿರಿನಗರದ ಈರಣ್ಣಗುಡ್ಡೆಯ ತನ್ನ ಸ್ನೇಹಿತ ಚೇತನ್ ಮನೆಗೆ ಕರೆದುಕೊಂಡು ಬಂದಿದ್ದ.ನನ್ನ ಮೊಬೈಲ್ ಕೊಡು ಊರಿಗೆ…
ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗೂಡುವಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಪದ್ಮನಾಭ ನಗರದ ನಿವಾಸದಲ್ಲಿ ಮಾತನಾಡಿದ ಅವರು, ನಾವೇನು ಕಾಂಗ್ರೆಸ್ ಜೊತೆ ಹೋಗೋಕೆ ಆಗುತ್ತಾ? ಈಗ ಕಾಂಗ್ರೆಸ್ನವರು ಬಹಳ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಜೊತೆ ನಾವು ಮಾತನಾಡುವುದಕ್ಕೆ ಆಗುತ್ತಾ? ಜನ ಅವರನ್ನು ಇವಾಗ ಮೇಲೆ ಇಟ್ಟಿದ್ದಾರೆ. ಜನ ಅವರನ್ನು ಕೆಳಗೆ ಇಳಿಸಬೇಕಲ್ಲಾ? ನೋಡೋಣ ಬನ್ನಿ ಮುಂದೆ ಏನಾಗಲಿದೆ ಅಂತಾ ಎಂದು ಹೆಚ್ಡಿಕೆ ಮಾರ್ಮಿಕವಾಗಿ ನುಡಿದರು. ಇನ್ನೂ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕುಮಾರಸ್ವಾಮಿ ಅವರು, ಮತ ಪಡೆಯಲು ಇವೆಲ್ಲಾ ಅನಿವಾರ್ಯ ಅಂತಾ ಹೇಳಿದ್ದಾರೆ. ಇವೆಲ್ಲಾ ಸತ್ಯ ನಿಧಾನವಾಗಿ ಒಂದೊಂದೇ ಹೊರಬರ್ತಾ ಇದೆ. ಇನ್ನೂ ಯಾರ್ಯಾರು ಏನು ಮಾತನಾಡುತ್ತಾರೋ ಕಾದು ನೋಡೋಣ ಎಂದರು. ಕಾಂತರಾಜು ವರದಿ ಬಹಿರಂಗ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಆ…
ಮೈಸೂರು: ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಜಿಷ್ಣ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ ಯುವತಿ ಜಿಷ್ಣ(20) ವರ್ಷದ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಈಕೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ನಿವಾಸಿ. ಮೈಸೂರಿನ ಶ್ರೀರಾಂಪುರದ ಖಾಸಗಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದಳು.ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮೈಸೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿತ್ರದುರ್ಗ: ನಿಂತಿದ್ದ ಲಾರಿಗೆ (Lorry) ಅಂಬುಲೆನ್ಸ್ (Ambulence) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ (Mallapura) ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ (Gujarat) ತಮಿಳುನಾಡಿಗೆ (Tamil Nadu) ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಅಂಬುಲೆನ್ಸ್‌ನಲ್ಲಿದ್ದ ಚಾಲಕ, ಕನಕಮಣಿ (72) ಮತ್ತು ಆಕಾಶ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತುಮಕೂರು: ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ (DK Suresh) ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ (Lok Sabha Elections) ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ. ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.
ದೇವೇಂದ್ರಪ್ಪ ಅವರು ಬಡ ಕುಟುಂಬದಲ್ಲಿ ಜನಿಸಿದ್ದು, ಕಷ್ಟಗಳನ್ನು ಹಾಸುಹೊದ್ದು ಮಲಗಿದವರು. ಒಂದು ಕಾಲದಲ್ಲಿ ಒಂದೊತ್ತಿನ ಊಟಕ್ಕೂ ಕಷ್ಟ ಪಟ್ಟಿದ್ದಾರೆ. 30 ವರ್ಷಗಳ ಕಾಲ ಸಂಸ್ಥೆಯಲ್ಲಿ ಜವಾನನಾಗಿ ಕೆಲಸ ಮಾಡಿರುವ ಇವರು ಇಡೀ ಜಗಳೂರು ತಾಲೂಕಿಗೆ ಚಿರಪರಿಚಿತರು.ಜವಾನ ಕೆಲಸದಿಂದ ನಿವೃತ್ತಿ ಹೊಂದಿದ ಬಳಿಕ ಚುನಾವಣಾ ಕಣಕ್ಕಿಳಿದ ದೇವೇಂದ್ರಪ್ಪ ಮೊದಲ ಬಾರಿಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಛಲಬಿಡದೇ ಜೆಡಿಎಸ್ ತೊರೆದು ಕಾಂಗ್ರೆಸ್ ಕೈ ಹಿಡಿದು ಟಿಕೆಟ್ ಆಕಾಂಕ್ಷಿಯಾಗಿದ್ದರು. ಮೊದಲ ಬಾರಿಗೆ ಕಾಂಗ್ರೆಸ್‌ನಿಂದ ಹಾಗು ಡಿಕೆಶಿ ಕೃಪಾಕಟಾಕ್ಷದಿಂದ ಟಿಕೆಟ್ ಕೂಡ ದಕ್ಕಿಸಿಕೊಂಡ ಇವರು ಕೇವಲ 800 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಜಗಳೂರು ಶಾಸಕರಾಗಿ ಆಯ್ಕೆಯಾದರೂ ದೇವೇಂದ್ರಪ್ಪ ತನಗೆ 30 ವರ್ಷಗಳಿಂದ ಅನ್ನ ನೀಡಿದ್ದ ಜವಾನ ವೃತ್ತಿಯನ್ನು ನೆನೆದು ಕೆಲಕಾಲ ತಾವು ದುಡಿದ ಕಾಲೇಜಿನಲ್ಲಿ ಸಂಬಳರಹಿತ ಕೆಲಸ ಮಾಡಿದರು. ನಾನು ರೌಡಿಯಲ್ಲ ಜನಸೇವಕ ‘‘ಚುನಾವಣೆಯಲ್ಲಿ ಸಂದರ್ಭದಲ್ಲಿ ನನ್ನನ್ನು ರೌಡಿ ಎಂದು ಕೆಲವರು ಅಪಪ್ರಚಾರ ಮಾಡಿದರು. ನಾನು ರೌಡಿಯಾಗಿದ್ದರೆ ನನ್ನನ್ನು ಜನ ಗೆಲ್ಲಿಸುತ್ತಿದ್ದರೇ…
ಬೆಂಗಳೂರು: ಸಿಎಂರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಉಮೇಶ್ ಶೆಟ್ಟಿ ದೂರು ನೀಡಿದ್ದಾರೆ, ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೈತಿಕ ಪೊಲೀಸ್ ಗಿರಿ ತೋರಿಸಿದ್ದಾರೆ ಎಂದು ಬಿಜೆಪಿ ಲೀಗಲ್ ಸೆಲ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಹೀಗಾಗಿ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸಿದ್ದೇವೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಗಡುವು ನೀಡಲಾಗಿದ್ದು, ವಿಡಿಯೋ ಹಾಗೂ ದಾಖಲೆಗಳನ್ನ ಪೊಲೀಸರು ಪರೀಶೀಲಿಸುತ್ತಿದ್ದು, ಘಟನೆ ಸಂಬಂಧ ಬಹುತೇಕ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಬೆಂಗಳೂರು: ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್ ಮಾತನಾಡಿ, ಮೆಟ್ರೋ ರೈಲು ನಿಗಮದ ಅಧಿಕಾರಿಗಳ ಸಭೆ ಮಾಡಿ, ಕಾರ್ಯವೈಖರಿ ಪರಿಶೀಲನೆ ಮಾಡಿದ್ದೇನೆ. ಮೆಟ್ರೋ ಕಾರ್ಯನಿರ್ವಹಣೆ, ಮುಂದಿನ ಕಾರ್ಯಯೋಜನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಮೆಟ್ರೋ ರೈಲು ನಂತರ ನಮ್ಮದು ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಆಗಿದ್ದು, ವಿಶ್ವದರ್ಜೆ ಮಟ್ಟದ ಸೇವೆ ನೀಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ನಮ್ಮ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. 48 ಕೋಟಿ ರೂ ಆದಾಯದಲ್ಲಿ 42 ಕೋಟಿ ರೂ.ಯಷ್ಟು ಹಣ ಕಾರ್ಯನಿರ್ವಹಣೆಗೆ ಖರ್ಚಾಗುತ್ತಿದೆ. ಬಂಡವಾಳ ಹೂಡಿಕೆ ಹೊರತಾಗಿ ಕೇವಲ 6 ಕೋಟಿ ರೂ ಲಾಭದಲ್ಲಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರ ಹೊರತಾಗಿ ಇತರೆ…