ಹಾಸನ: ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು (soldiers) ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ. ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.
Author: Prajatv Kannada
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾವನೆ ಬಂದಿಲ್ಲ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಈಗಾಗಲೇ ಹೇಳಿದ್ದನ್ನೇ ಪುನರುಚ್ಚರಿಸುವೆ. ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಬಜೆಟ್ ಅಧಿವೇಶನ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನಮಂಡಲ ಬಜೆಟ್ ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುಶಃ ಈ ಕುರಿತು ಚರ್ಚೆಯಾಗಿ ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು: ಮಹಾಮಳೆಗೆ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿ ಯುವತಿ ಸಾವು ಪ್ರಕರಣ ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು,ಇಂದು ಲೋಕಾಯುಕ್ತ ಐಜಿಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ರು. ಘಟನ ಸ್ಥಳಕ್ಕೆ ಘಟನೆಗೆ ಕಾರಣವೇನು. ಏನೆಲ್ಲ ಸಮಸ್ಯೆಗಳಿಂದ ಅವಘಡ ಸಂಭವಿಸಿತು. ಏನೆಲ್ಲಾ ಲೋಪವಿತ್ತು. ಸಂಬಂಧಿಸಿದ ಅಧಿಕಾರಿಗಳು ಯಾರು ಎಂಬ ಮಾಹಿತಿ ಕಲೆ ಹಾಕಿದ್ರು ಅನೋದು ತೋರಿಸ್ತೀವಿ ನೋಡಿ. ಮೇ. 21ರಂದು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆ.ಆರ್. ಸರ್ಕಲ್ ನಲ್ಲಿ ಖಾಸಗಿ ಕಂಪನಿ ಉದ್ಯೋಗಿ ಭಾನು ರೇಖಾ ಎಂಬಾಕೆ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ಲು. ಆ ಘಟನೆಗೆ ಸಂಬಂಧಿಸಿದಂತೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದ ರಾಜ್ಯ ಲೋಕಾಯುಕ್ತ 15 ದಿನಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು. ಆ ಹಿನ್ನೆಲೆ ಇಂದು ಲೋಕಾಯುಕ್ತ ಐಜಿಪಿ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖಾ ತಂಡ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ರು. ಲೋಕಾಯುಕ್ತ ಪೊಲೀಸ್ ವಿಂಗ್ ನ…
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದಾನೆ. ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಬಸವನಗುಡಿ, ಜಯನಗರ, ವಿಧಾನಸೌಧ, ಕೋರಮಂಗಲ, ಹನುಮಂತ ನಗರ, ವಿದ್ಯಾಪೀಠ, ಕತ್ರಿಗುಪ್ಪೆ ಸೇರಿದಂತೆ ಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇನ್ನು ಈ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ಪರದಾಡಿದ್ದಾರೆ. ಈಗಾಗಲೇ ಮುಂಗಾರು ಪೂರ್ವ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾ ಹಾನಿಗಳು ಸಂಭವಿಸಿವೆ. ಮತ್ತೊಂದೆಡೆ ಇದೀಗ ಮುಂಗಾರು ಮಳೆ ಪ್ರವೇಶ ಮಾಡಲಿದ್ದು, ಇದರಿಂದ ಇನ್ನೆಷ್ಟು ಅನಾಹುತಗಳು ಆಗುತ್ತವೆಯೋ ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಹಾಗೆಯೇ ಇಂದು ಬೆಳಗ್ಗೆಯಿಂದಲೂ ಕೂಡ ಬಿಸಿಲು ಇದ್ದು, ಮಧ್ಯಾಹ್ನದ ವೇಳೆಗೆ ಇದ್ದಕ್ಕಿದ್ದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆರಾಯ ಆರ್ಭಟವನ್ನು ಶುರು ಮಾಡಿದ್ದಾನೆ.
ಬೆಂಗಳೂರು: ಸಚಿವರಾದ ಬಳಿಕ ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ನಿನ್ನೆ ಈಶ್ವರ್ ಖಂಡ್ರೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಖಂಡ್ರೆ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಮತ್ತು ಮಠಾಧೀಶರು ಯಾವುದೇ ಜಾತಿ, ಮತ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ಅನ್ನ, ಜ್ಞಾನ ನೀಡಿದ್ದಾರೆ. ಜಗತ್ತಿಗೆ ಸಾಮಾಜಿಕ ನ್ಯಾಯ ನೀಡಿದ್ದು ವೀರಶೈವ ಲಿಂಗಾಯತ ಸಮುದಾಯ. ಇಂತಹ ಸಮಾಜದಲ್ಲಿ ಇಂದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ತೀವ್ರ ಹಿಂದುಳಿದ ಅನೇಕ ಜನರಿದ್ದಾರೆ. ಅವರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ಮೀಸಲಾತಿ ದೊರಕಬೇಕು. ಇದಕ್ಕಾಗಿ ಮಹಾಸಭಾ ಶ್ರಮಿಸುತ್ತಿದೆ ಎಂದರು. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲು ಕಲ್ಪಿಸಬೇಕು ಎಂದು ಮಹಾಸಭಾ ಹಿಂದಿನಿಂದಲೂ ಆಗ್ರಹಿಸುತ್ತಿದೆ. ಇದಕ್ಕೆ ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಇದೇ ವೇಳೆ ಅವರು ಭರವಸೆ ಕೊಟ್ಟರು. ಸಮಾಜದ ಎಲ್ಲ ಒಳಪಂಗಡಗಳನ್ನು ಮತ್ತು ಸರ್ವರನ್ನೂ ಒಗ್ಗೂಡಿಸಿ ಸಮಾಜದಲ್ಲಿ ಒಟ್ಟಾಗಿ ತೆಗೆದುಕೊಂಡು ಹೋಗಲು ಪೂಜ್ಯರಾದ ಮ.ನಿ.ಪ್ರ. ಶ್ರೀ ಕುಮಾರಸ್ವಾಮಿ ಅವರು ಈ ಸಂಸ್ಥೆ ಕಟ್ಟಿದ್ದಾರೆ. ಅವರ…
ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಯಾವುದೇ ಷರತ್ತಿಲ್ಲದೆ ಗ್ಯಾರಂಟಿ ಘೋಷಿಸಿದ್ದವರು ಯಾರು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿಪಕ್ಷಗಳು ಜನರನ್ನು ಎತ್ತಿ ಕಟ್ಟುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು, ಗ್ಯಾರಂಟಿಗಳ ಬಗ್ಗೆ ಚರ್ಚೆ ಮಾಡಿ ವೇದಿಕೆ ಸಿದ್ಧ ಮಾಡಿದ್ದವರೇ ನೀವು, ಚುನಾವಣಾ ಪೂರ್ವದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಎಂದು ಹೇಳಿದ್ದ ನೀವು ಈಗ ಷರತ್ತು ವಿಧಿಸಿದ್ದಿರಿ. ವಿನಾಕಾರಣ ಜನರನ್ನು ಪ್ರತಿಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂಬ ಆರೋಪ ಮಾಡಲಾಗುತ್ತಿದೆ” ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕಳೆದ ಬಾರಿ ಇಂಧನ ಸಚಿವರು ಯಾರಿದ್ರು, ಸಿಎಂ ಯಾರಿದ್ರು, ಇವರೇ ತಾನೇ ಇದ್ದಿದ್ದು, ಆಗ ಏಕೆ ಈ ಬಗ್ಗೆ ಯೋಚನೆ ಮಾಡಿಲ್ಲ. ಸಿದ್ದರಾಮಯ್ಯನವರೇ ಎಲ್ಲರಿಗೂ 200 ಯುನಿಟ್ ಉಚಿತ ಎಂದು ಹೇಳಿದ್ದು ನೀವೆ ಅಲ್ಲವೇ? ಒಂದು ಮನೆಯಲ್ಲಿ ಮೂರು ಮಹಡಿ ಕಟ್ಟಿರುತ್ತಾರೆ. ಮೀಟರ್ ಒಬ್ಬರ ಹೆಸರಿನಲ್ಲಿ…
ಬೆಂಗಳೂರು: NEP ರದ್ದುಗೊಳಿಸುವ ಕುರಿತು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ನಾನು ಉನ್ನತ ಶಿಕ್ಷಣ ಸಚಿವ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ಬಳಿಕ, ಇಲಾಖೆ ವತಿಯಿಂದ ಶಿಕ್ಷಣ ನೀತಿ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದರು. ಇದರ ಸಾಧಕ ಭಾದಕದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹ ಮಾಡಲು ನಿರ್ಧಾರಿಸಲಾಗಿದೆ. ಅದರ ಭಾಗವಾಗಿ ಹಿರಿಯರನ್ನು ಕರೆದು ಚರ್ಚೆ ಮಾಡುತ್ತೇವೆ. ಈ ಹಿಂದೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಭೆ ಮಾಡಿದಾಗ ಯಾರೆಲ್ಲಾ ಭಾಗಿಯಾಗಿದ್ದರೋ ಅವರ ಜೊತೆ ನಾವು ಚರ್ಚೆ ಮಾಡಲಿದ್ದೇವೆ ಎಂದು ಸುಧಾಕರ್ ಹೇಳಿದರು. ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಶ್ರಾಂತ ಕುಲಪತಿಗಳ ನಿಯೋಗವು ಬಂದಿತ್ತು. ಅವರಿಂದಲೂ ಅಭಿಪ್ರಾಯ ಪಡೆಯಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಬಂದು ಒಂದು ವರ್ಷವಾಗಿದೆ. ಅದರ ಬಗ್ಗೆ ಪ್ರಾಧ್ಯಾಪಕರ ಬಳಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಎರಡು ದಿನಗಳ ಹಿಂದೆ ಅದ್ದೂರಿಯಾಗಿ ಹಸೆಮಣೆ ಏರಿದ್ದ ನಟ ಅಭಿಷೇಕ್ ಹಾಗೂ ಅವಿವಾ ಅವರ ಆರತಕ್ಷತೆ ಕಾರ್ಯಕ್ರಮ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ದತೆ ನಡೆದಿದ್ದು ಅರಮನೆ ಮೈದಾನ ಸುಂದರವಾಗಿ ಸಿಂಗಾರಗೊಂಡಿದೆ. ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸುತ್ತಿದ್ದು ಇದೀಗ ಸ್ವತಃ ನಟಿ ಹಾಗೂ ಸಂಸದೆ ಸಮಲತ ಮಗನ ಆರತಕ್ಷತೆಗೆ ಆಗಮಿಸುವಂತೆ ವಿಶೇಷಚೇತನ ಅಭಿಮಾನಿಗೆ ಆಹ್ವಾನಿಸಿದ್ದಾರೆ. ಧಾರವಾಡದ ವಿಶೇಷಚೇತನ ಹೆಣ್ಣುಮಗಳು ತಾವು ಸುಮಲತಾ ಅವರ ಅಭಿಮಾನಿಯಾಗಿದ್ದು,ಅಂಬರೀಶ್ ಮತ್ತು ಸುಮಲತಾr ಫೋಟೋಗಳನ್ನು ಕತ್ತರಿಸಿ ಪುಸ್ತಕದಲ್ಲಿ ಅಂಟಿಸಿರುವುದಾಗಿ ಮತ್ತು ಸುಮಲತಾ ಅವರನ್ನು ಭೇಟಿ ಮಾಡಲು ಕಾಯುತ್ತಿರುವುದಾಗಿ ತಿಳಿಸಿದ್ದರು. ಚುನಾವಣೆ ಮತ್ತು ಇತರ ಬಿಡುವಿಲ್ಲದ ಕೆಲಸದಿಂದಾಗಿ ಈವರೆಗೂ ಅಭಿಮಾನಿಯನ್ನು ಸುಮಲತಾ ಖುದ್ದಾಗಿ ಭೇಟಿ ಮಾಡಲು ಆಗಿರಲಿಲ್ಲ. ಫೋನ್ ನಲ್ಲಿ ಮಾತನಾಡಿದ್ದರು. ಇದೀಗ ಖುದ್ದಾಗಿ ಪುತ್ರನ ಆರತಕ್ಷತೆಗೆ ಬರುವಂತೆ ಆಹ್ವಾನ ಪತ್ರಿಕೆಯನ್ನು ಅಭಿಮಾನಿಗೆ ನೀಡಿದ್ದಾರೆ ಸುಮಲತಾ. ಧಾರವಾಡದ ಸೌಭಾಗ್ಯ ಯಮನೂರು ಎನ್ನುವ ಹೆಣ್ಣು ಮಗುವಿಗೆ ಸುಮಲತಾ ಅಂಬರೀಶ್ ಖುದ್ದಾಗಿ ಆಹ್ವಾನ ಪತ್ರಿಕೆ ನೀಡಿ…
ಭಾರತದ ಪ್ರತಿಭಾವಂತ ಶಾಟ್ ಪೂಟರ್ ಸಿದ್ಧಾರ್ಥ್ ಚೌಧರಿ ದಕ್ಷಿಣ ಕೊರಿಯಾದ ಯೆಚೊಯಾನ್ ನಲ್ಲಿ ನಡೆಯುತ್ತಿರುವ ಏಷ್ಯಾನ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗೆದ್ದರೆ, ಡಿಸ್ಕಸ್ ಥ್ರೋನಲ್ಲಿ ಭಾರತದ ಸುನೀಲ್ ಕುಮಾರ್ (38.79 ಮೀಟರ್) ಸ್ವರ್ಣ ಪದಕ ತಮ್ಮದಾಗಿಸಿಕೊಂಡು ದೇಶಕ್ಕೆ 4 ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. 17 ವರ್ಷದ ಭಾರತದ ಯುವ ಶಾಟ್ ಪೂಟರ್ ಸಿದ್ಧಾರ್ಥ್ ಚೌಧರಿ ಪದಕದ ಸುತ್ತಿನಲ್ಲಿ 3ನೇ ಪ್ರಯತ್ನದಲ್ಲಿ 19.52 ಮೀಟರ್ ಶಾಟ್ ಪುಟ್ ಎಸೆದು ಸ್ವರ್ಣ ಪದಕ ಗೆದ್ದು ಈ ಹಿಂದೆ 19.11 ದೂರ ಎಸೆದು ತಾವೇ ನಿರ್ಮಿಸಿದ್ದ ದಾಖಲೆ ಮುರಿದು ಸಂಭ್ರಮಿಸಿದ್ದಾರೆ. ಕತಾರ್ ನ ಜಿಬ್ರಿನ್ ಅಡೌಮ್ ಅಹ್ಮತ್ (18.85 ಮೀ) ಹಾಗೂ ದಕ್ಷಿಣ ಕೊರಿಯಾದ ಪಾರ್ಕ್ ಸಿಹೂನ್ (18.70 ಮೀ) ಕ್ರಮವಾಗಿ 2 ಮತ್ತು 3ನೇ ಸ್ಥಾನ ಅಲಂಕರಿಸಿದ್ದಾರೆ. ಭಾರತದ ಅಥ್ಲೆಟಿಕ್ ಗಳಿಂದ ಪದಕಗಳ ಬೇಟೆ ಜೂನ್ 4 ರಿಂದ 7ರವರೆಗೂ ನಡೆಯಲಿರುವ ಏಷ್ಯಾನ್ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನ…
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಬುಧವಾರ ಲಂಡನ್‌ನ ದಿ ಓವಲ್ ಮೈದಾನದಲ್ಲಿ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಪೈನಲ್ ಪಂದ್ಯದಲ್ಲಿ ಸೆಣಸಲಿವೆ. ಅಂದಹಾಗೆ 2023ರ ಐಪಿಎಲ್ ಟೂರ್ನಿಯಲ್ಲಿ 600ಕ್ಕೂ ಹೆಚ್ಚಿನ ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಇದೀಗ ಫೈನಲ್ ಪಂದ್ಯದಲ್ಲಿಯೂ ಅದೇ ಲಯವನ್ನು ಮುಂದುವರಿಸಲು ಎದುರು ನೋಡುತ್ತಿದ್ದಾರೆ. ಜಿಯೋ ಸಿನಿಮಾ ಜೊತೆ ಮಾತನಾಡಿದ ಎಬಿ ಡಿವಿಲಿಯರ್ಸ್, “ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಯಾವುದೇ ಸರಣಿಯಾದರೂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುವ ಆಟಗಾರ ವಿರಾಟ್ ಕೊಹ್ಲಿ. ವಿಶ್ವದ ಯಾವುದೇ ಪ್ರದೇಶಕ್ಕೆ ಪ್ರಯಾಣ ಬೆಳೆಸಿದರೂ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಾರೆ. ಅವರು ಕ್ರಿಕೆಟ್ ಅನ್ನು ಆನಂದಿಸುವುದನ್ನು ನೋಡಲು ತುಂಬಾ ಖುಷಿಯಾಗುತ್ತದೆ. ಇಂಗ್ಲೆಂಡ್‌ನಲ್ಲಿ ಕೊಹ್ಲಿ ಬ್ಯಾಟಿಂಗ್ ನೋಡಲು ಎದುರು ನೋಡುತ್ತಿದ್ದೇನೆ,” ಎಂದು ಹೇಳಿದ್ದಾರೆ. ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೂ ಮುನ್ನ ಭಾರತ ತಂಡ ಗಾಯಾಳುಗಳ ಸಮಸ್ಯೆಯನ್ನು ಎದುರಿಸಿದೆ. ಜಸ್‌ಪ್ರೀತ್ ಬುಮ್ರಾ, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ವಿಭಿನ್ನ ಗಾಯದ ಕಾರಣಗಳಿಂದಾಗಿ ಭಾರತ…