Author: Prajatv Kannada

ಇಂದಿನಿಂದ ಭಾರತ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯವಾಡಲು ಎದುರು ನೋಡುತ್ತಿರುವ ಪ್ಯಾಟ್‌ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಅಜಿಂಕ್ಯ ರಹಾನೆ ತಲೆ ನೋವಾಗಿ ಪರಿಣಮಿಸಿದ್ದಾರೆ. ಇದಕ್ಕೆ ಬಲವಾದ ಕಾರಣವೇನೆಂದು ಇಲ್ಲಿ ವಿವರಿಸಲಾಗಿದೆ. ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಕೆಲ ಬದಲಾವಣೆ ಹೊರತುಪಡಿಸಿ ಇನ್ನುಳಿದಂತೆ ಬಹುತೇಕ ಅದೇ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶುಭಮನ್‌ ಗಿಲ್, ಮೂರನೇ ಸ್ಥಾನದಲ್ಲಿ ಚೇತೇಶ್ವರ್‌ ಪೂಜಾರ, ನಾಲ್ಕನೇ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಮತ್ತು ಐದನೇ ಸ್ಥಾನದಲ್ಲಿ ಅಜಿಂಕ್ಯ ರಹಾನೆ ಆಡುವುದು ಬಹುತೇಕ ಖಚಿತ. ಬರೋಬ್ಬರಿ 15 ತಿಂಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ರಹಾನೆ, ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡುವಂತೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈಗಾಗಲೇ ಸೂಚನೆ ನೀಡಿದ್ದಾರೆ. ತವರು ನೆಲಕ್ಕಿಂತ ವಿದೇಶಿ ನೆಲದಲ್ಲಿ ಅಜಿಂಕ್ಯ ರಹಾನೆ ಅತ್ಯುತ್ತಮ ಟೆಸ್ಟ್‌ ಕ್ರಿಕೆಟ್‌ ದಾಖಲೆ ಹೊಂದಿದ್ದಾರೆ.

Read More

ಬೆಂಗಳೂರು: ಕುಂಬಳಗೋಡು ಬಳಿ ಇರುವ ಕಣಮಿಣಿಕೆ ಟೋಲ್​ ಪ್ಲಾಜಾದಲ್ಲಿ ಕಾಂಗ್ರೆಸ್​ ಶಾಸಕ ನರೇಂದ್ರ ಸ್ವಾಮಿಗೆ ಟೋಲ್​ ಸಿಬ್ಬಂದಿ ಅವಾಜ್​ ಹಾಕಿರುವ ಘಟನೆ ಜರುಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಭಾನುವಾರ ದಂದು ಬೆಂಗಳೂರಿನಿಂದ ಮಳವಳ್ಳಿಯತ್ತ ಹೊರಟಿದ್ದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ಕಣಮಿಣಿಕೆ ಟೋಲ್​ ಬಳಿ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಕಾರಿನ ಚಾಲಕ ತಮ್ಮ ಬಳಿ ಪಾಸ್​ ಇದೆ ಎಂದು ಹೇಳಿದ್ದರು ಸಹ ಮುಂದಕ್ಕೆ ಬಿಡುವುದಿಲ್ಲ. ಟೋಲ್​ ಸಿಬ್ಬಂದಿ ದುರ್ವತನೆಯನ್ನು ಪ್ರಶ್ನಿಸಿದ ಶಾಸಕ ಹಾಗೂ ಅವರ ಕಾರಿನ ಚಾಲಕನೊಂದಿಗೆ ಏಕವಚನದಲ್ಲೇ ಮಾತನಾಡಲು ಪ್ರಾರಂಭಿಸಿದ್ದಾರೆ. ಘಟನೆಯ ವಿಡಿಯೋ ವೈರಲ್​ ಆಗಿದ್ದು ಶಾಸಕರಿಗೆ ಈ ರೀತಿ ಆದರೆ, ಸಾರ್ವಜನಿಕರ ಕಥೆಯೇನು ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ನರೇಂದ್ರ ಸ್ವಾಮಿ ಕಾರನ್ನು ತಡೆದು ಟೋಲ್​ ಸಿಬ್ಬಂದಿ ನಮ್ಮೊಂದಿಗೆ ಅನಗತ್ಯವಾಗಿ ವಾಗ್ವಾದ ನಡೆಸಿದ್ದಾರೆ. ಏಕವಚನದಲ್ಲೇ ಮಾತನಾಡಿದ್ದಾರೆ ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಉದ್ಯಾನವನಗಳ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಕುರಿತು ಬೆಂಗಳೂರಿನಲ್ಲಿ ಬಿಬಿಎಂಪಿ ಆದೇಶ ಹೊರಡಿಸಿದೆ. ಸಾರ್ವಜನಿಕರಿಗೆ ವಾಯುವಿವಾಹರಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಡುವ ಸಲುವಾಗಿ ಬಿಬಿಎಂಪಿ ಈ ಕ್ರಮಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇಷ್ಟು ದಿನ ಬೆಳಗ್ಗೆ 5ರಿಂದ 10 ಮತ್ತು ಸಂಜೆ 4ರಿಂದ 8ರವರೆಗೆ ಉದ್ಯಾನಗಳು ತೆರೆದಿರುತ್ತಿದ್ದವು. ಆದರೆ ಇನ್ನು ಮುಂದೆ ಬೆಳಗ್ಗೆ 5ರಿಂದ 10 ಮತ್ತು ಮಧ್ಯಾಹ್ನ 1.30ರಿಂದ ರಾತ್ರಿ 8ರ ವರೆಗೆ ಉದ್ಯಾನಗಳನ್ನು ತೆರೆದಿರುವಂತೆ ಬಿಬಿಎಂಪಿ ಆದೇಶಿಸಿದೆ. ಪಾರ್ಕ್ ನಿರ್ವಹಣೆ ಕುರಿತ ಕೆಲಸಗಳನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ಒಳಗೆ ಮುಗಿಸಿಕೊಳ್ಳಲು ಸೂಚಿಸಿರುವ ಪಾಲಿಕೆ, ಈ ಅವಧಿಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೋಸ್ಟ್ ಹಾಕಿದ್ರೆ ತಕ್ಷಣವೇ ಬಂಧಿಸಲಾಗುತ್ತದೆ. ಸೇವಾ ಸಂಸ್ಥೆಗಳ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ. ನಿಂದನೆ, ಹೀಯಾಳಿಸುವುದು ಸೇರಿದಂತೆ ಕೋಮು ಪ್ರಚೋದನೆ ಪೋಸ್ಟ್ ಹಾಕಿದ್ರೆ ಸಹಿಸುವುದಿಲ್ಲ. ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಗ್ರೂಪ್‌ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡಿದರೆ ಅಂತಹ ಗ್ರೂಪ್‌ ಅಡ್ಮಿನ್‌ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು: ಪಕ್ಷದ 13 ಸಂಸದರ ತೇಜೋವಧೆ ಮಾಡುವ ಕೆಲಸ ನಡೆಯುತ್ತಿದ್ದರೂ ಬಿಜೆಪಿ ನಾಯಕರ ಮೌನವೇಕೆ? ಎಂದು ಬಿಜೆಪಿ ಮುಖಂಡ ಸದಾನಂದಗೌಡ ಬೇಸರ ಹೊರ ಹಾಕಿದ್ದಾರೆ. ಬೆಂಗಳೂರಿನ ವಿವಿ ಟವರ್ ನಲ್ಲಿರುವ ಕಚೇರಿಯಲ್ಲಿ ಮಾತನಾಡಿದ ಅವರು, 13 ಮಂದಿ ಬಿಜೆಪಿ ಸಂಸದರ ಮಾನಹಾನಿ ಆಗುತ್ತಿರುವುದು ನೋಡಿಯೂ ಸ್ಪಷ್ಟನೆ ನೀಡದಿರುವುದು ತರವಲ್ಲ. ಇದು ರಾಜ್ಯಕ್ಕೆ ಬೇರೆ ರೀತಿಯ ಸಂದೇಶ ಹೋಗಲಿದೆ. ಆಗುತ್ತಿರುವ ಗೊಂದಲಕ್ಕೆ ಕೂಡಲೇ ಪರಿಹರಿಸುವ ಕೆಲಸವನ್ನು ಸಂಬಂಧಪಟ್ಟ ನಾಯಕರು ಮಾಡಬೇಕಿದೆ ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಒತ್ತಾಯಿಸಿದರು.

Read More

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 3 ವರ್ಷ ಕಠಿಣ‌ ಜೈಲು ಶಿಕ್ಷೆ ನೀಡಿ ಬೆಂಗಳೂರಿನ 1ನೇ ಹೆಚ್ಚುವರಿ ತ್ವರಿತಗತಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎನ್. ರೂಪಾ, ಬೆಂಗಳೂರು ನಗರದ ನಿವಾಸಿ ಪ್ರಬೀರ್ ಅದಕ್ ಅಲಿಯಾಸ್ ಗಣೇಶ್ ಅದಕ್ ಅಪರಾಧಿಯೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಕರಣದಲ್ಲಿ ಸಾಕ್ಷಿದಾರರ ಸಾಕ್ಷ್ಯ ಪರಿಗಣಿಸಿದ ವಿಶೇಷ ನ್ಯಾಯಾಲಯ, ಪ್ರಬೀರ್ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ ಎಂದು ತಿಳಿಸಿ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಪೊಲೀಸರ ಪರ ಸರ್ಕಾರಿ ಅಭಿಯೋಜಕಿ ಪಿ.ಕೃಷ್ಣವೇಣಿ ಅವರು ಪ್ರಬಲ ವಾದ ಮಂಡಿಸಿದ್ದರು.

Read More

ಬೆಂಗಳೂರು:  ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿನ್ನೆ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದ ಶ್ರೀಗಳು ಭೇಟಿ ಮಾಡಿದ್ದಾರೆ. ದಲಿತ ಮತ್ತು ಹಿಂದುಳಿದ ಜಾತಿ, ಸಮುದಾಯಗಳ ಸ್ವಾಮೀಜಿಗಳ ನಿಯೋಗ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು. ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದು, ಅವರಿಗೆ ಹಲವು ಮಠಾಧೀಶರು ಸಾಥ್​ ನೀಡಿದರು. ಒಕ್ಕೂಟದ ಸಂಚಾಲಕ ಭೋವಿಗುರುಪೀಠ ಚಿತ್ರದುರ್ಗ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕಾರ್ಯದರ್ಶಿ ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಡಾ.ಶ್ರೀ ಶಾಂತವೀರ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಶ್ರೀ ಗುರುಪೀಠ ಚಿತ್ರದುರ್ಗ, ವಾಲ್ಮೀಕಿ ಪ್ರಸನ್ನನಂದ ಸ್ವಾಮೀಜಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಹರಿಹರ, ಈಶ್ವರಾನಂದಪುರಿ ಸ್ವಾಮೀಜಿ ಶಾಖಾಮಠ ಹೊಸದುರ್ಗ, ರೇಣುಕಾನಂದ ಸ್ವಾಮೀಜಿ ನಾರಾಯಣ ಗುರುಪೀಠ ಶಿವಮೊಗ್ಗ, ಬಸವ ಮಾಚಿದೇವ ಸ್ವಾಮೀಜಿ ಮಡಿವಾಳ ಗುರುಪೀಠ ಚಿತ್ರದುರ್ಗ ಮತ್ತಿತರರು ಉಪಸ್ಥಿತರಿದ್ದರು.

Read More

ಬೆಂಗಳೂರು: ಗೃಹಜ್ಯೋತಿ ವಿದ್ಯುತ್ ಯೋಜನೆ ಸೌಲಭ್ಯ ಪಡೆಯುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಲ್ಲಿ ಇರಲಿ, ಬಾಡಿಗೆ ಕರಾರು ಪತ್ರ ಬೇಕು. ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಅಂತ ಪ್ರತ್ಯಕ್ಷವಾಗಿ ಅರ್ಜಿ ಹಾಕಲು ಅವಕಾಶ ಇದೆ ಎಂದರು. ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆಯಪ್  ಬಿಡುಗಡೆ ಮಾಡುತ್ತೇವೆ, ಜುಲೈ ತಿಂಗಳಿನ ಬಿಲ್ ಆಗಸ್ಟ್ ನಲ್ಲಿ ಪಾವತಿ ಮಾಡುವುದು ಬೇಡ ಎಂದರು. 2 ಕೋಟಿ 14 ಲಕ್ಷ ಗ್ರಾಹಕರಿಗೆ ಈ ಯೋಜನೆ ಲಾಭ ಸಿಗುತ್ತದೆ, 2 ತಿಂಗಳ ಸರಾಸರಿ ಆಧಾರದ ಮೇಲೆ 10% ಹೆಚ್ಚು ವಿದ್ಯುತ್ ಬಳಕೆ ಉಚಿತವಾಗಿರುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ (Congress) ಸರ್ಕಾರದ ಗೃಹಜ್ಯೋತಿ (Gruha Jyoti scheme) ಗ್ಯಾರಂಟಿಗೆ (Guarantee) ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ (KJ George) ಬುಧವಾರ ಸುದ್ದಿಗೋಷ್ಠಿ…

Read More

ಮಧ್ಯಪ್ರದೇಶ: 300 ಅಡಿ ಆಳದ ತೆರೆದ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ಮಧ್ಯಪ್ರದೇಶದ ಸೆಹೋರ್​ ಜಿಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೊರೆದಿದ್ದ 300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದೆ. ಸದ್ಯ 20 ಅಡಿ ಆಳದಲ್ಲಿ ಮಗು ಸಿಲುಕಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ. ಆಕೆಯನ್ನು ಸುರಕ್ಷಿತವಾಗಿ ಹೊರತರಲು ಜೆಸಿಬಿ ಹಾಗೂ ಪೊಕ್ಲಾನ್ ಯಂತ್ರದ ಸಹಾಯದಿಂದ ಅಗೆಯಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೂಚನೆ ನೀಡಿದ್ದಾರೆ. ಮನೆಯ ಸಮೀಪವಿರುವ ಹೊಲದಲ್ಲಿ ಆಟವಾಡುತ್ತಿದ್ದಾಗ ಬೋರ್‌ವೆಲ್‌ನ ತೆರೆದ ಗುಂಡಿಗೆ ಬಿದ್ದಿದ್ದಾಳೆ. ಸ್ಥಳದಲ್ಲಿಯೇ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜೆಸಿಬಿ ಹಾಗೂ ಪೊಕ್ಲೆನ್ ಯಂತ್ರದ ಸಹಾಯದಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಸಮಾನಾಂತರ ಹೊಂಡಗಳನ್ನು ತೋಡಿ, ಬಾಲಕಿಯ ಚಲನವಲನಗಳ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಂಡು ಆಮ್ಲಜನಕವನ್ನು ಸಹ ಸರಬರಾಜು ಮಾಡಲಾಗುತ್ತಿದೆ.

Read More

ರಾಂಚಿ: ಒಡಿಶಾದ ಬಾಲಸೋರ್ (Balasore Train Tragedy) ನಲ್ಲಿ ರೈಲು ದುರಂತ ಮಾಸುವ ನಡುವೆಯೇ ಜಾರ್ಖಂಡ್‍ (Jharkhand)ನಲ್ಲಿ ಭಾರೀ ರೈಲು ದುರಂತವೊಂದು ತಪ್ಪಿದೆ. ಜಾರ್ಖಂಡ್‍ನ ಬೊಕಾರೊದಲ್ಲಿ ಸಂತಾಲ್ದಿಹ್ ರೈಲ್ವೆ ಕ್ರಾಸಿಂಗ್ ಬಳಿ ರೈಲ್ವೆ ಗೇಟ್‍ಗೆ ಟ್ರಾಕ್ಟರ್ ಅಪ್ಪಳಿಸಿದ್ದು, ಭಾರೀ ಅವಘಡವೊಂದು ತಪ್ಪಿದಂತಾದ ಘಟನೆ ಮಂಗಳವಾರ ಸಂಜೆ ನಡೆದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವದೆಹಲಿ-ಭುವನೇಶ್ವರ ರಾಜಧಾನಿ ಎಕ್ಸ್ ಪ್ರೆಸ್ (Delhi-Bhubaneswar Rajdhani Express) ಸಂಜೆ ಭೋಜುದಿಹ್ ಎನ್ನುವ ರೈಲ್ವೆ ನಿಲ್ದಾಣ ( Bhojudih railway station) ಸಮೀಪಿಸುತ್ತಿತ್ತು. ಇದಕ್ಕೂ ಮುನ್ನ ಬರುವ ಸಂತಾಲ್‍ದಿಹ್ (Santhaldih) ಎಂಬಲ್ಲಿ ರೈಲ್ವೆ ಕ್ರಾಸಿಂಗ್‍ಗೆ ಡಿಕ್ಕಿ ಹೊಡೆದು ಟ್ರಾಕ್ಟರ್ ಸಿಲುಕಿತ್ತು. ದೂರದಿಂದಲೇ ಇದನ್ನು ಗಮನಿಸಿದ ಲೋಕೋ ಪೈಲಟ್ ಕೂಡಲೇ ರೈಲಿನ ವೇಗವನ್ನು ಕಡಿಮೆ ಮಾಡಿದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಟ್ರಾಕ್ಟರ್ (Tractor) ಕ್ರಾಸಿಂಗ್‍ನಲ್ಲಿ ಸಿಲುಕಿದ್ದರಿಂದ ಚಲಿಸದ ಸ್ಥಿತಿಯಲ್ಲಿತ್ತು. ಹೀಗಾಗಿ ರೈಲು ವೇಗವಾಗಿ ಬಂದಿದ್ದರೆ ಡಿಕ್ಕಿಯಾಗಿ ಮತ್ತೊಂದು ದುರಂತವನ್ನು ನಾವು ನೋಡಬೇಕಿತ್ತು. ಆದರೆ ಇದನ್ನು ಲೋಕೋ ಪೈಲಟ್ ಗಮನಿಸಿ…

Read More