Author: Prajatv Kannada

ಮೈಸೂರು: ಚುನಾವಣೆ ವೇಳೆ ಕಾಂಗ್ರೆಸ್​ನವರು ಷರತ್ತು ಬಗ್ಗೆ ಹೇಳಿರಲಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಕಂಡಿಷನ್​​ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಗಳು ಸಿಗಲ್ಲ ಅಂತಾ ಜನರಿಗೆ ಈಗ ಅರ್ಥವಾಗುತ್ತಿದೆ. ಜೂನ್ 11ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಅಂತಿದ್ದಾರೆ. ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತೆ ಅಂತಾ ಮುಂದೆ ಗೊತ್ತಾಗುತ್ತೆ. ಜನರಿಂದ ವೋಟ್​​​ ಹಾಕಿಸಿಕೊಳ್ಳಲು ಉಚಿತ ಎಂದು ಹೇಳಿದ್ದಾರೆ ಎಂದು ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Read More

ಮಂಡ್ಯ: ಇನ್ಮುಂದೆ ಸಹಾಯ ಕೇಳಿಕೊಂಡು ಯಾರೂ ನನ್ನ ಬಳಿ ಬರಬೇಡಿ ಎಂದು ಮಂಡ್ಯ ಜಿಲ್ಲೆ ಮದ್ದೂರು ಕ್ಷೇತ್ರದ ಕೊಪ್ಪದಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್​ ಪರಾಜಿತ ಅಭ್ಯರ್ಥಿ ಸುರೇಶ್​ಗೌಡ ಆಕ್ರೋಶದ ಮಾತುಗಳನ್ನಾಡಿದ್ದಾರೆ. ಇನ್ಮುಂದೆ ಯಾವುದೇ ಮದುವೆಗೆ ಬಂದರೂ ಮುಯ್ಯಿ ಕೂಡ ಹಾಕಲ್ಲ. ನಂಬಿದವರಿಂದಲೇ ನನಗೆ ಮೋಸ ಆಗಿದೆ, ನಾನೀಗ ಸೋತಿದ್ದೇನೆ. ಈ ಚುನಾವಣೆ ಸೋಲಿನಿಂದ ಬೇಸರವಾಗಿ ನನ್ನ ಮನಸ್ಸು ಕಲ್ಲಾಗಿದೆ. ವೈಯಕ್ತಿಕ ಕಷ್ಟ ಹೇಳಿಕೊಂಡು ಯಾರು ಕೂಡ ನನ್ನ ಬಳಿ ಬರಬೇಡಿ. ಚುನಾವಣೆ ಸೋತು‌ ಕಷ್ಟದಲ್ಲಿದ್ದೇನೆ, ಆದರೂ ಬಂದು ಸಹಾಯ ಕೇಳ್ತೀರಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Read More

ಪ್ರವಾಹದ ವೇಳೆ ಹಾನಿಯಾದ ಮನೆ ಹಂಚಿಕೆಯಲ್ಲಿ ಅಕ್ರಮ ಆರೋಪ ಸಂಬಂಧ ‘ಕೈ’ ಶಾಸಕ ಶಾಂತನಗೌಡ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಅತಿವೃಷ್ಟಿಯಿಂದ ಮನೆ ಹಾನಿಯಾದಾಗ ಪ್ರತಿ ಹಳ್ಳಿಗೂ ಭೇಟಿ ನೀಡಿದ್ದೇನೆ. ಮನೆ ಕಳೆದುಕೊಂಡವರಿಗೆ ಪಕ್ಷಾತೀತವಾಗಿ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೇನೆ. ಆದರೆ ಹಾಲಿ ಶಾಸಕರು ನನ್ನ ವಿರುದ್ಧ ಬಿಜೆಪಿಯವರಿಗೆ ಮಾತ್ರ ಮನೆ ಕೊಡಿಸಿದ್ದಾರೆಂದು, ಕಾಂಗ್ರೆಸ್​ನವರಿಗೆ ನೀಡಿದ್ದ ಮನೆ ಕ್ಯಾನ್ಸಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. 500 ಕ್ಕೂ ಹೆಚ್ಚು ಮನೆಗಳು ಬೋಗಸ್ ಆಗಿದ್ದು ಇದರಲ್ಲಿ ನನ್ನ ಹಸ್ತಕ್ಷೇಪ ಇದೇ ಎಂದು ಆರೋಪ ಮಾಡಿದ್ದಾರೆ ಎಂದರು.

Read More

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ‌(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ.  ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್​ನಲ್ಲಿ ಕಂಪನ ಸೃಷ್ಟಿಸಿದೆ. ಎಂಬಿಎ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಆಡಿಯೋದಲ್ಲಿದೆ. ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನೋ ಎಂದಿದ್ದಾಳೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಇದೀಗ ಈ ಆಡಿಯೋ ಫುಲ್ ವೈರಲ್ ಆಗಿದ್ದು,  ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ. 23 ನಿಮಿಷ…

Read More

ಮೈಸೂರು: ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಇದು ಜನಾಕ್ರೋಶಕ್ಕೆ ಕಾರಣವಾಗಲಿದೆ ಎಂದ ಮೈಸೂರಿನಲ್ಲಿ ಕೆ.ಆರ್​.ಕ್ಷೇತ್ರದ ಶಾಸಕ ಶ್ರೀವತ್ಸ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ಜನರನ್ನು ಗೊಂದಲ ಮಾಡುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಗ್ಯಾರಂಟಿ ಜಾರಿ ಎಂದಿದ್ದರು. ಅಧಿಕಾರಕ್ಕೆ ಬಂದು 20 ದಿನವಾದ್ರೂ ಗ್ಯಾರಂಟಿ ಜಾರಿ ಮಾಡಲು ಆಗಿಲ್ಲ. ಜನರಿಗೆ ತೆರಿಗೆ ಕಟ್ಟದಂತೆ ಪರೋಕ್ಷವಾಗಿ ಪ್ರೇರಣೆ ನೀಡಲಾಗುತ್ತಿದೆ ಎಂದರು.

Read More

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ 2-3 ದಿನ ಮಳೆ (Rain) ಯ ಜೊತೆಗೆ ಸಮುದ್ರದಲ್ಲಿ ಭಾರೀ ಅಲೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ. ವಾಯುಭಾರ ಕುಸಿತವು ಬೈಪೋರ್ಜಾಯ್ (Biporjoy Cyclone) ಹೆಸರಿನ ಚಂಡಮಾರುತವಾಗಿ ಬದಲಾಗಿದ್ದು, ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಆತಂಕ ಹೆಚ್ಚಾಗಿದ್ದು, 4 ದಿನ ಮೀನುಗಾರಾರು ಸಮುದ್ರಕ್ಕಿಳಿ ಯದಂತೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗುಜರಾತ್ ಕರಾವಳಿ ಭಾಗದಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ ಇದೆ. ಚಂಡಮಾರುತ ಹಿನ್ನೆಲೆ ಮುಂಗಾರು 4 ದಿನ ತಡವಾಗಿ ಕೇರಳ ಪ್ರವೇಶ ಮಾಡಲಿದೆ. ಅಲ್ಲದೆ ಈ ಬಾರಿಯ  ಮುಂಗಾರು ಪ್ರಬಲವಾಗಿರದೇ ದುರ್ಬಲವಾಗುವ ಸಾಧ್ಯತೆ ಇದೆ. ಈ ಹಿಂದೆ ಜೂನ್ 3 ಮತ್ತು 4 ರಂದು ಮುಂಗಾರು ಪ್ರವೇಶ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿತ್ತು. ಸದ್ಯ ಚಂಡಮಾರುತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ತಡವಾಗುವ…

Read More

ಮಂಗಳೂರು: ಮಳೆ ವಿಳಂಬದಿಂದ ಮಂಗಳೂರಿನಲ್ಲಿ ನೀರಿನ ಸಮಸ್ಯೆ(Water scarcity in Mangalore) ಉದ್ಭವ ಹಿನ್ನೆಲೆ ದ.ಕನ್ನಡ ಜಿಲ್ಲೆಯ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕೆಲವು ಕಡೆ ರಜೆ ಘೋಷಣೆ ಮಾಡಿದ್ದು ಕೆಲವು ಕಡೆ ಅರ್ಧ ದಿನ ತರಗತಿಗೆ ಸೂಚಿಸಲಾಗಿದೆ. ಕೆಲ ಕಾಲೇಜುಗಳಲ್ಲಿ ಆನ್​​ಲೈನ್ ತರಗತಿ ನಡೆಸ್ತಿದ್ದಾರೆ. ಮನೆಗಳು, ಕಚೇರಿ ಜತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲೂ ನೀರಿಗಾಗಿ ಪರದಾಟ ಹೆಚ್ಚಾಗಿದೆ. ಮಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ನೀರಿನ ರೇಶನಿಂಗ್‌ ಶುರುವಾಗಿದ್ದು ಮಂಗಳೂರು ಉತ್ತರ, ಮಂಗಳೂರು ನಗರ ಭಾಗಕ್ಕೆ 2 ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಮಂಗಳೂರು ಉತ್ತರ, ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರತೆ ಉಂಟಾಗಿದೆ. ಸದ್ಯ ಮಂಗಳೂರು ನಗರದ ಹಲವೆಡೆ ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.

Read More

ವಿಜಯಪುರ: ಯಾರೇ ಮಾತಾಡಿದ್ರು ಜೈಲಿಗೆ (Jail) ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ (Taliban) ಅಲ್ಲ, ಕರ್ನಾಟಕ (Karnataka) ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ. ಚಕ್ರವರ್ತಿ ಸೂಲಿಬೆಲೆಗೆ (Chakravarti Sulibele) ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದ ವಿಚಾರವಾಗಿ ಟ್ವೀಟ್ ಮೂಲಕ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಇದು ತಾಲಿಬಾನ್ ಅಲ್ಲ ಕರ್ನಾಟಕ ಎಂದ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕಿದ್ದಾರೆ. ಟ್ವೀಟ್‌ನಲ್ಲೇನಿದೆ? ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಅಂತ ಹೇಳೋಕೆ ಇದು ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನು ಎಂಬಿ ಪಾಟೀಲ್ ಮರೆಯಬಾರದು. ಎಫ್‌ಐಆರ್ ಮಾಡಿಸ್ತೀವಿ, ಜೈಲಿಗೆ ಕಳಿಸ್ತೀವಿ ಪದೇ ಪದೇ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲ ಸಲ್ಲದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಂತ್ರಿಗಳು ಅಸಹಿಷ್ಣು ಆಗಬಾರದು ಎಂದು ಟ್ವೀಟ್ ಮಾಡುವ ಮೂಲಕ ಯತ್ನಾಳ್ ಕಾಂಗ್ರೆಸ್ ಸರ್ಕಾರದ ಮಂತ್ರಿಗಳ ಕಾಲೆಳೆದಿದ್ದಾರೆ.

Read More

ತುಮಕೂರು: ಎರಡು ವಿಧನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಮಾಜಿ ಸಚಿವ ವಿ ಸೋಮಣ್ಣಗೆ (V Somanna) ತುಮಕೂರು (Tumkur) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ನೀಡಲು ಚಿಂತಿಸಲಾಗಿದೆ ಎಂಬ ಗುಟ್ಟನ್ನು ಹಾಲಿ ಸಂಸದ ಜಿಎಸ್ ಬಸವರಾಜು (GS Basavaraj) ಬಿಚ್ಚಿಟ್ಟಿದ್ದಾರೆ. ತುಮಕೂರು ನಗರದಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮವೊಂದರಲ್ಲಿ ಸಂಸದ ಬಸವರಾಜು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನನಗೆ ವಯಸ್ಸಾದ ಕಾರಣ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಮುಂದಿನ ಚುನಾವಣೆಗೆ ನಮ್ಮ ಸಮು ದಾಯದವರೇ ಆದ ವಿ ಸೋಮಣ್ಣಗೆ ಟಿಕೆಟ್ ಕೊಡುತ್ತಾರೆ. ದೆಹಲಿಗೆ ಹೋದಾಗ ನಾನು ಇದನ್ನು ಹೇಳಿದ್ದೇನೆ. ಹೀಗಾಗಿ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ನಮ್ಮ ನಮ್ಮಲ್ಲಿ ಕಿತ್ತಾಟ ಮಾಡಿಕೊಂಡು ಬೇರೆಯವರಿಗೆ ಅನುಕೂಲ ಮಾಡಿಕೊಡಬಾರದು ಎಂದು ಸಮಾಜದ ಜನರಿಗೆ ಕಿವಿ ಮಾತು ಹೇಳಿದ್ದಾರೆ. ಸಂಸದ ಜಿಎಸ್ ಬಸವರಾಜು ಅವರ ಈ ಮಾತು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಲೋಕಸಭಾ ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದ ಮಾಜಿ…

Read More

ಹುಬ್ಬಳ್ಳಿ: ಆಧುನಿಕ ಜಗತ್ತಿನ ಬೇಕು-ಬೇಡಗಳು, ಜಂಜಾಟ, ಸ್ವತಂತ್ರ ಮನೋಭಾವ ಪ್ರತಿಯೊಬ್ಬರ ಬದುಕಿಗೂ ಅವರದ್ದೇ ಆದ ದೃಷ್ಠಿಕೋನದಲ್ಲಿ ಒಂದೊಂದು ಅರ್ಥ ಕಲ್ಪಿಸಿಕೊಡುತ್ತವೆ. ಹಾಗಂತ ಇಲ್ಲಿ ಯಾರನ್ನೂ ವಹಿಸಿಕೊಳ್ಳಲಾಗದು, ಯಾರ ಪರವಾಗಿಯೂ ನಿಲ್ಲಲಾಗದು, ಯಾವುದನ್ನೂ ಜರಿಯಲೂ ಆಗದು. ಇಂಥ ಸಂದರ್ಭದಲ್ಲಿ ಕೆಲವೊಮ್ಮೆ ಅನಿರೀಕ್ಷಿತವಾಗಿ ಎದುರಾಗುವ ಪರಿಸ್ಥಿತಿ ಬದುಕನ್ನು ಹೇಗೆಲ್ಲ ಹೈರಾಣಾಗಿ ಸುತ್ತದೆ. ಅದಕ್ಕೆ ಸಾಮಾಜಿಕ ಮತ್ತು ಶ್ರೀಸಾಮಾನ್ಯನ ಪ್ರತಿಕ್ರಿಯೆ ಹೇಗಿರುತ್ತದೆ ಎನ್ನುವುದೇ ಈ ವಾರ ತೆರೆಗೆ ಬಂದಿರುವ “ಪಿಂಕಿ ಎಲ್ಲಿ?’ ಸಿನಿಮಾದ ವಸ್ತು ವಿಷಯ. ಇದೊಂದು ಸಾಮಾಜಿಕ ಕಳಕಳಿ ಹಾಗೂ ಕೌಟುಂಬಿಕ ಜೀವನದ ಸುತ್ತ ಗಿರಕಿ ಹೊಡೆಯುವ ಕಥೆವುಳ್ಳ ಸಿನಿಮಾ ಪಿಂಕಿ ಎಲ್ಲಿ? ಇನ್ಹರ್ ವ್ಹಿಲ್ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ ಟೌನ್ ಡಿಸ್ಟ್ರಿಕ್ಟ್ 317 ದಿಂದ ಚಾರಟಿ ಶೋ ನಡೆಸಿಕೊಡಲಾಯಿತು. ತಾಯಿಯ ಮಡಿಲಿನಲ್ಲಿ ಪ್ರೀತಿಯಿಂದ ಬೆಚ್ಚಗೆ ಬೆಳೆಯಬೇಕಾದ 8 ತಿಂಗಳ ಹೆಣ್ಣು ಮಗು ಪಿಂಕಿ, ತಂದೆ-ತಾಯಿ ಇದ್ದರೂ ಬೇರೊಬ್ಬರ ಜೋಳಿಗೆ ತುಂಬಿಸಲು ದುಡಿಯು ವ ಮಗುವಾಗುತ್ತದೆ. ಮನೆಯಿಂದ ಕಾಣೆಯಾಗುವ ಪಿಂಕಿಯ ಹುಡುಕಾಟದ ಸುತ್ತ…

Read More