Author: Prajatv Kannada

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ ಇನ್ನೂ‌ ಸಹ ಒಂದು ತಿಂಗಳು ಕಳೆದಿಲ್ಲ. ಆದರೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಕೋಮುಭಾವನೆ ಕೆರಳುವಂತ ವಿಷಯಗಳ ಮೇಲೆ ರಾಜಕೀಯ ಗುದ್ದಾಟ ಶುರು ಮಾಡಿವೆ. ಅದರಲ್ಲೂ ಬಿಜೆಪಿ ಸರ್ಕಾರದ ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ವಿಚಾರಕ್ಕೆ ಕೈ ಹಾಕಿದ ಬೆನ್ನಲ್ಲೆ ಗದಗನಲ್ಲಿ ಇಂದು, ಗೋ ಪೂಜೆ ಮೂಲಕ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಶ್ರೀರಾಮಸೇನೆ ಇಳಿದಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಕಾಂಗ್ರೆಸ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. ಗದಗ ನಗರದ ಪಂಜರಪೋಳಾ ಮಹಾವೀರ ಗೋಶಾಲೆಯಲ್ಲಿ ಶ್ರೀರಾಮಸೇನೆ ಕಾರ್ತಕರ್ತರು ಗೋಪೂಜೆ ನೆರವೇರಿಸಿದರು.‌ ಗೋವಿಗೆ ಮಾಲೆ ಹಾಕಿ, ಬೆಲ್ಲ ತಿನ್ನಿಸಿ ಗೋಪೂಜೆ ಮಾಡುವ ಮೂಲಕ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಶ್ರೀರಾಮಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜು ಖಾನಪ್ಪನವರ್ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು. ಈ ವೇಳೆ ಕಾಯ್ದೆ ವಾಪಾಸ್ ಪಡೆದರೆ ಉಗ್ರ ಹೋರಾಟದ ಎಚ್ಚರಿಕೆಯನ್ನ ಶ್ರೀರಾಮಸೇನೆ ಕಾರ್ಯಕರ್ತರು ನೀಡಿದ್ರು.

Read More

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ  ಬೀರೇಶ್ವರ್ ಕೋ ಆಪ್ ಕ್ರೆಡಿಟ ಸೋಸೈಟಿ ಲಿ. ಯಕ್ಸಂಬಾ.(ಮಲ್ಟಿ-ಸ್ಟೇಟ್) ಸಂಸ್ಥೆಯ ರಬಕವಿ ಶಾಖೆಯ ಸದಸ್ಯರಾದ ವೀರಪಾಕ್ಷಪ್ಪ  ಈಶ್ವರಪ್ಪ ಮೂಡಲಗಿ ಸಾ// ರಬಕವಿ  ಇವರು ರಸ್ತೆ ಅಪಘಾತದಲ್ಲಿ  ಅಕಾಲಿಕ ನಿಧನರಾಗಿರುವ ಕಾರಣ ಅವರ ಸರಳ ವಾರಸುದಾರರಾದ ಅವರ ಹೆಂಡತಿ ಶ್ರೀಮತಿ ವೀಣಾ ವೀರಪಾಕ್ಷಪ್ಪ ಮೂಡಲಗಿ ಸಾ//ರಬಕವಿ  ಇವರಿಗೆ ಸಂಸ್ಥೆಯ ವತಿಯಿಂದ ಸದಸ್ಯರಿಗೆ ಲಭ್ಯವಿರುವ ಸದಸ್ಯರ ಕಲ್ಯಾಣ ನಿಧಿಯಿಂದ ರೂ. 1,00,000/_(ಒಂದು ಲಕ್ಷ ರೂಪಾಯಿಗಳು) ಅಪಘಾತ ವಿಮೇ ಪರಿಹಾರ ಸಹಾಯ ಧನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರಬಕವಿ ಶಾಖೆಯ ಅಧ್ಯಕ್ಷರಾಗಿರುವ ಧರೇಪ್ಪ ಗುರಪ್ಪ ಉಳ್ಳಾಗಡ್ಡಿ  ಹಾಗೂ ಸಲಹಾ ಸಮೀತಿ ಸದಸ್ಯರಾದ  ಪರಪ್ಪ ರಾಮಪ್ಪ ಪೂಜೇರಿ, ಪರಶುರಾಮ ಗಣಪತಿ ಕಾಖಂಡಕಿ, ಮಹಾಂತೇಶ ಜಯವಂತ ಗುಂಡಿ,ಮಲ್ಲಪ್ಪ ಸತ್ಯಪ್ಪ ಚೌಲಗಿ,ಬಸವರಾಜ ಹಣಮಂತ ಗೋಪಾಳಿ, ಚಂದ್ರಶೇಖರ ಶಿವಪ್ಪ ಬುಯ್ಯಾರ, ಅಶೋಕ ವೀರಪ್ಪ ಕೋತಿನ,ರವೀಂದ್ರ ತಮ್ಮಣೇಪ್ಪ ಗಡಾದ,ಸುನೀಲ ಕೇಶವರಾವ ಮಮದಾಪೂರ ಹಾಗೂ ಜಗದೀಶ ರಾಮಪ್ಪ ಕೋಣ್ಣುರ ಹಾಗೂ ಶಾಖಾ  ವ್ಯವಸ್ಥಾಪಕರು ಮತ್ತು ಸಿಬ್ಬಂದಿಯವರು…

Read More

ಬೆಂಗಳೂರು: ಕಾಂಗ್ರೆಸ್(Congress) ಜಾರಿ ಮಾಡಿದ ಗ್ಯಾರಂಟಿಗಳ(Congress Guarantee) ಸುತ್ತ ದಿನಕ್ಕೊಂದು ಗೊಂದಲ ಹುಟ್ಟಿಕೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗೋಕೆ ಸರ್ಕಾರ ಷರತ್ತುಗಳ ಸಂಕೋಲೆ ಹೊರಡಿಸೋಕೆ ಮುಂದಾಗ್ತಿದೆ ಅನ್ನೋ ಸುದ್ದಿ ನಡುವೆ, ಜನಸಾಮಾನ್ಯರು ಯೋಜನೆಗಳನ್ನ ಹೇಗೆ ಸದ್ಬಳಕೆ ಮಾಡಿಕೊಳ್ಳಬೇಕು ಅಂತ ತಲೆ ಕೆಡಿಸಿಕೊಂಡು ಕೂತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಮೊದಲು ಎಲ್ಲಾ ಗೃಹಿಣಿಯರಿಗೆ ₹2 ಸಾವಿರ ಕೊಡ್ತೀವಿ ಎಂದಿದ್ದರು. ಆದರೆ ಈಗ ಗೃಹ ಲಕ್ಷ್ಮೀ ಯೋಜನೆಗೆ ಕಂಡಿಷನ್ ಹಾಕುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್​ ವಿರುದ್ಧ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. APL, BPL ಮಹಿಳೆಯರಿಗೆ 2 ಸಾವಿರ ರೂ. ಕೊಡ್ತೀವಿ ಎಂದಿದ್ದರು. ಆದಾಯ ತೆರಿಗೆ ಪಾವತಿಸುತ್ತಿದ್ದರೆ ಹಣ ಸಿಗುವುದಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್​ನವರು ಮಾತಿಗೆ ತಪ್ಪುತ್ತಿರೋದು ಸರಿಯಲ್ಲ. ಮಹಿಳೆಯರು, ನಾಗರಿಕರ ಪರವಾಗಿ ನಾವು ಹೋರಾಟ ಮಾಡ್ತೇವೆ ಎಂದರು.

Read More

ಬೆಂಗಳೂರು: 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆದೇಶ ಹೊರಡಿಸಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಮಂಜುನಾಥ ಪ್ರಸಿದ್ಧಿ ಎನ್. ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರನ್ನು ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಮೋಹನ್ ರಾಜ್ ಕೆ.ಪಿ. ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

Read More

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾವನೆ ಬಂದಿಲ್ಲ ಎಂದು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಈಗಾಗಲೇ ಹೇಳಿದ್ದನ್ನೇ ಪುನರುಚ್ಚರಿಸುವೆ. ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಬಜೆಟ್ ಅಧಿವೇಶನ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನಮಂಡಲ ಬಜೆಟ್ ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುಶಃ ಈ ಕುರಿತು ಚರ್ಚೆಯಾಗಿ ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಹೇಳಿದ್ದಾರೆ.

Read More

ಬೆಂಗಳೂರು: ವಿಧಾನಪರಿಷತ್ತಿನ ಉಪಚುನಾವಣೆಗೆ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟವಾಗಿದ್ದು ಖಾಲಿ ಇರುವ 3 ಎಂಎಲ್‌ಸಿ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ ಆಗಿದೆ.ಬಾಬುರಾವ್ ಸಿಂಚನಸೂರು, ಆರ್. ಶಂಕರ್, ಲಕ್ಷ್ಮಣ್ ಸವದಿ ರಾಜಿನಾಮೆ ನೀಡಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಜೂನ್ 20 ನಾಪಮತ್ರ ಸಲ್ಲಿಕೆ ಮಾಡಲು ಕೊನೆ ದಿನವಾಗಿರುತ್ತದೆ. ನಾಮಪತ್ರ ಪಾಪಸ್ ಪಡೆಯಲು ಜೂನ್ 20 ರಂದು ಕೊನೆ ದಿನ ಹಾಗೆ ಜೂನ್ 30 ರಂದು ವಿಧಾನ ಪರಿಷತ್ ಸ್ಥಾನಕ್ಕೆ ಮತದಾನ ನಡೆಯಲಿದ್ದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯುತ್ತದೆ ಹಾಗೆ ಆ ದಿನ‌ ಸಂಜೆ 5 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು ನಂತರ ಫಲಿತಾಂಶ ಘೋಷಣೆ ಮಾಡಲಿರುವ ಚುನಾವಣೆ ಆಯೋಗ.

Read More

ಬೆಂಗಳೂರು: ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ. ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ. ನಗರದಲ್ಲಿ ಸುದ್ದಿಗಾರರೊಂದಿಗೆ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡುತ್ತಾ ಗೃಹಲಕ್ಷ್ಮಿ ಗೆ ಕಂಡಿಷನ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಸರ್ಕಾರ ನಾವು ತೀರ್ಮಾನ ಮಾಡುವುದಾಗಿ ಹೊಸ ವರಸೆ ತೆಗೆದರು. ಒಬ್ಬರಿಗೆ ಒಂದು ರೂಪಾಯಿ ಕೊಡಬೇಕಾದ್ರೆ ಅಕೌಂಟ್ ಇರಬೇಕು. ವೋಟರ್ ಐಡಿ (Voter ID), ಆಧಾರ್ ಕಾರ್ಡ್ (Adhar Card) ಇರಬೇಕು. ಅವರದ್ದೇ ಬ್ಯಾಂಕ್ ಅಕೌಂಟ್ ಇರಬೇಕು. ನಮ್ಮ ಬಳಿ ಎಲ್ಲಾ ದಾಖಲೆ ಇದೆ. ಮನೆ ಯಜಮಾನಿ ಅವರೇ…

Read More

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ, ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಗೆ ನೀಡಿಲ್ಲ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ  ಸ್ಪಷ್ಟನೆ ನೀಡಿದ್ದಾರೆ. ಇನ್ನೂ ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆ ಸಮಸ್ಯೆ ಬಗೆಹರಿಸಲು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ

Read More

ಬೆಂಗಳೂರು: ಪದ್ಮನಾಭ ನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಭೇಟಿ ಮಾಡಿದ್ದಾರೆ. ಮನೆಯ ಗೇಟ್ ಬಳಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಹೂಗುಚ್ಛ ನೀಡಿ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ದೇವೇಗೌಡರನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ, ಗೌಡರ ಆರೋಗ್ಯ ವಿಚಾರಿಸಿದರು. ಈ ವೇಳೆ ಇಬ್ಬರು ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ ಎಂ ಫಾರೂಕ್‌ ಹಾಜರಿದ್ದರು. 2024 ಕ್ಕೆ ಲೋಕಸಭೆ ಚುನಾವಣೆ ಬರುತ್ತಿರುವ ಹಿನ್ನೆಲೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Read More

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಮತಗಳನ್ನು ಪಡೆದ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. 4 ದಿನ 31 ಜಿಲ್ಲೆಗಳ ಪ್ರಮುಖರ ಜೊತೆ ಮಾಜಿ ಸಿಎಂ ಹೆಚ್​​ಡಿಕೆ ಸಭೆ ನಡೆಸಲಿದ್ದಾರೆ. ಇಂದು ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲಾ ನಾಯಕರ ಜತೆ ಸಭೆ ನಡೆಸಲಿದ್ದಾರೆ. BBMP, ಜಿ.ಪಂ., ತಾ.ಪಂ. ಚುನಾವಣೆ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಹಾಗೂ ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.

Read More