ಬೆಂಗಳೂರು: ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಯಲಹಂಕದಲ್ಲಿ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ. ಅಲ್ಲದೆ, ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ನುಡಿದರು. ಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರಕಾರ ನಮ್ಮದು. ನಮ್ಮ ಸರಕಾರ ಸರ್ವರಿಗೂ ಸಮಪಾಲು ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ ಎಂದ ಅವರು, ನಮ್ಮ ಸರಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲ ಧರ್ಮ, ಎಲ್ಲ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ ಎಂದು ನುಡಿದರು
Author: Prajatv Kannada
ಬೆಂಗಳೂರು: ಸುಳ್ಳು ಕೇಸ್ ದಾಖಲಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಹಿಂದೆ ಇದೇ ಠಾಣೆಯ ಹಾಗೂ ಹಾಲಿ ದೇವನಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಲಕ್ಷ್ಮಣ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. 2022ರಲ್ಲಿ ಅಮಾಯಕ ವೈದ್ಯರನ್ನ ಕರೆತಂದು ಡ್ರಗ್ಸ್ ಕೇಸ್ನಡಿ ಅಂದಿನ ಇನ್ಸ್ಪೆಕ್ಟರ್ ಲಕ್ಷ್ಮಣ್ ನಾಯಕ್ ಅವರು ಎಫ್‌ಐಆರ್ ದಾಖಲಿಸಿದ್ದರು. ವರ್ಗಾವಣೆ ಬಳಿಕ ಬಂದ ಮಂಜುನಾಥ್ ವೈದ್ಯರ ಮೇಲೆ ಚಾರ್ಜ್ ಶೀಟ್ ಹಾಕಿದ್ದರು. ಇಬ್ಬರು ಕಾನೂನು ಉಲ್ಲಂಘನೆ ಮಾಡಿ ಅಮಾಯಕ ಡಾಕ್ಟರ್ ಸಿಲುಕಿಸಿದ ಹಿನ್ನೆಲೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ವರದಿ ನೀಡಿದ್ದರು. ಡಿಸಿಪಿ ವರದಿ ಆಧಾರದ ಮೇಲೆ ಇಬ್ಬರನ್ನೂ ಕಮೀಷನರ್ ಬಿ ದಯಾನಂದ್ ಸಸ್ಪೆಂಡ್ ಮಾಡಿದ್ದಾರೆ.
ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಕಳಿಸಬೇಕಾಗುತ್ತದೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಯತ್ನಾಳ್ ಟ್ವೀಟ್ ಮೂಲಕ ಕಿಡಿಕಾರಿದರು. ಇದೀಗ ಯತ್ನಾಳ್ ಟ್ವೀಟ್ ಗೆ ಖಾರವಾಗಿ ರೀ ಟ್ವೀಟ್ ಮಾಡಿರುವ ಎಂಬಿ ಪಾಟೀಲ್, ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು. ಜೈಲಿಗೆ ಕಳುಹಿಸುತ್ತೇವೆ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧಿಕಾರಿಗಳೊಂದಿಗೆ ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಡಿಕೆಶಿ, ಸದ್ಯ ಬೆಂಗಳೂರು ಜಲಮಂಡಳಿಯ ಸ್ಥಿತಿ ಚಿಂತಾಜನಕವಾಗಿದೆ. 2014ರಿಂದ ಈವರೆಗೆ ನೀರು ಬಳಕೆ ಶುಲ್ಕ ಹೆಚ್ಚಳ ಮಾಡಿಲ್ಲ. ಹೀಗಾಗಿ ಜಲಮಂಡಳಿ ಆದಾಯ ತೀರಾ ಕಡಿಮೆಯಿದ್ದು, ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೀಗಾಗಿ ನೀರಿನ ಶುಲ್ಕ ಹೆಚ್ಚಳ ಸೇರಿ ಜಲಮಂಡಳಿಯನ್ನು ಆರ್ಥಿಕವಾಗಿ ಸಬಲಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಲಮಂಡಳಿ ಬಳಿ ಸಿಬ್ಬಂದಿ, ಅಧಿಕಾರಿಗಳಿಗೆ ವೇತನ ನೀಡಲೂ ಹಣವಿಲ್ಲದಂತಾಗಿದೆ. ಜಲಮಂಡಳಿ ಕಾರ್ಯದ ಬಗ್ಗೆ ಸೂಚನೆ ನೀಡಲು ಬಂದಿದ್ದ ನನಗೆ ಅವರ ಗೋಳು ಕೇಳುವಂತಾಯಿತು. ಬೆಸ್ಕಾಂನಿಂದ ರಿಯಾಯಿತಿ ದರದಲ್ಲಿ ಜಲಮಂಡಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಜಲಮಂಡಳಿಗೆ ವಾರ್ಷಿಕ 104 ಕೋಟಿ ಆದಾಯ ಬಂದರೆ 95 ಕೋಟಿ ವಿದ್ಯುತ್ ಬಿಲ್ ಪಾವತಿಗೇ ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದರಿಂದಾಗಿ ಬೃಹತ್…
ಬೆಂಗಳೂರು: ಪಠ್ಯ ಪರಿಷ್ಕರಣೆ ಗೊಂದಲ ಬಗೆಹರಿಸಲು ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚಿಸಿ ಪಠ್ಯ ಪರಿಷ್ಕರಣೆ ಗೊಂದಲ ನಿವಾರಿಸಲು ಪಠ್ಯ ಪರಿಷ್ಕರಣೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರು: ಕಾಲಮಿತಿಯಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ವಸತಿ ಸಚಿವ ಜಮೀರ್, ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ. ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು. ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕು. ಪ್ರತಿ ಯೋಜನೆಗೆ ಬೇಕಾದ ಹಣಕಾಸು ಹೊಂದಿಕೊಂಡು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಆದ ನಂತರವಷ್ಟೇ ಮತ್ತೊಂದು ಯೋಜನೆ ಪ್ರಾರಂಭಿಸಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ. ಇದು ಕಡ್ಡಾಯವಾಗಿ ಪಾಲನೆ ಆಗಲೇಬೇಕು ಎಂದು ಸೂಚನೆ ನೀಡಿದರು.
ಬೆಂಗಳೂರು: ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಬಗ್ಗೆ ಮಾತನಾಡುವಾಗ ಚುನಾವಣೆಯಲ್ಲಿ ಗೆಲ್ಲಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ ಮಾಡಬೇಕಾಗುತ್ತದೆ ಎಂದು ಹೇಳಿರುವುದು ಕಾಂಗ್ರೆಸ್‌ಗೆ ಇರಿಸು ಮುರಿಸು ತಂದಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೊಂದು ಸಿಕ್ಕಂತಾಗಿದ್ದು, ಮುಂದಿನ ಚುನಾವಣೆಗಳಲ್ಲಿ ಇದನ್ನೇ ಅಸ್ತ್ರವನ್ನಾಗಿಸುವ ಸಾಧ್ಯತೆ ಇದೆ. ಮಾಧ್ಯಮದವರೆ ಜೊತೆ ಮಾತನಾಡುವಾಗಲೇ ಚೆಲುವರಾಯಸ್ವಾಮಿ ಈ ಹೇಳಿಕೆಯನ್ನು ನೀಡಿದ್ದು, ಈಗ ಆ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ನೋಡುವುದಾದರೆ, ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲಾ ಚರ್ಚೆಯಾಯಿತು. ನಾವು ಕೂಡ ಚರ್ಚೆ ಮಾಡಿದೇವು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತೆ ಎಂಬುದರ ಬಗ್ಗೆ ಚರ್ಚೆಯಾಯಿತು ಎಂದಿದ್ದಾರೆ. ಅಷ್ಟೇ ಅಲ್ಲದೇ, ಈಗ ನಾವುಗಳು ಕೂಡ ಅದೇ ಲೈನ್‌ನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್ ಪ್ರಮುಖ ಆಯ್ತು. ಸರ್ಕಾರ ಬಂದ್ರೆ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಲವೆಡೆ ಇಂದಿನಿಂದ ಎರಡು ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಟಿಪಿಸಿಎಲ್ ಕೆಲವು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸಲಿರುವುದರಿಂದ ಜಯನಗರ ಮತ್ತು ಬಿಡಿಎ ಕಾಂಪ್ಲೆಕ್ಸ್ ಸೇರಿದಂತೆ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಪವರ್ ಕಟ್ ಇರಲಿದೆ. ಕೋಡಿಹಳ್ಳಿ, ದೊಡ್ಡಪೇಟೆ, ಮಂಜುನಾಥ್ ನಗರ, ಹುಳಿಯಾರು, ಮತ್ತಿಘಟ್ಟ, ಅಮ್ಮನಹಳ್ಳಿ, ಲಿಂಗಪ್ಪನಹಳ್ಳಿ, ಮತಿಹಳ್ಳಿ, ಬನಗಿರಿನಗರ, ಜಯನಗರ, ರಾಜೀವನಗರ, ಪದ್ಮನಾಭನಗರ, ಯಾರಬ್ ನಗರ, ಸಿದ್ದಾಪುರ, ಸೀಗೋನಹಳ್ಳಿ, ಯಪ್ಪನಹಳ್ಳಿ ಮಾದನಹಳ್ಳಿ, ಗೊಲ್ಲರದೊಡ್ಡಿ, ನಿಡೇಗಲ್ ಕಾಲೋನಿ, ಬೆಟ್ಟೇಗೌಡನದೊಡ್ಡಿ, ಸಿದ್ದೇಗೌಡನದೊಡ್ಡಿ ಮತ್ತು ಮಾದಪ್ಪನದೊಡ್ಡಿ ಸೇರಿದಂತೆ ಹಲವೆಡೆ ಇಂದು ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (H.D.Deve Gowda) ಹೇಳಿದ್ದಾರೆ. ಮಂಗಳವಾರ ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ರೈಲು ದುರಂತದಿಂದ ಸಂಭವಿಸಿದ ಬಳಿಕ ಅಲ್ಲಿನ ಪರಿಸ್ಥತಿಯನ್ನು ಸಹಜಸ್ಥಿತಿಗೆ ತರಲು ಅಶ್ವಿನಿ ವೈಷ್ಣವ್ ಅವರು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅವರು ನಿರಂತರವಾಗಿ ಕೆಲಸ ಮಾಡುತ್ತಿದ್ದು, ಈ ಹಂತದಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸುವುದು ಸರಿಯಲ್ಲ ಎಂದರು 2024ರ ಚುನಾವಣೆಗೆ ವಿರೋಧ ಪಕ್ಷಗಳು ಒಗ್ಗೂಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಯಾವುದೇ ಚರ್ಚೆಯನ್ನು ಮಾಡಿಲ್ಲ. ಮೊದಲನೆಯದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ನಾವು ಬಯಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟವಾಗಿದ್ದು ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮಹಿಳೆಯರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್ನಲ್ಲಿ ನಮೂದಾಗಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಥವಾ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕ್ ಖಾತೆ ಮತ್ತು ಆಧಾರ್ ಜೋಡಣೆ ಕಡ್ಡಾಯ ಮಾಡಲಾಗಿದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಯಜಮಾನಿ ಅಥವಾ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಯಜಮಾನಿ ಅಥವಾ ಪತಿ ಜಿಎಸ್ಟಿ ರಿಟರ್ನ್ ಸಲ್ಲಿಸುವವರರಾಗಿದ್ದಲ್ಲಿ ಈ ಯೋಜನೆಯ ಲಾಭ ಸಿಗುವುದಿಲ್ಲ. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ದಲ್ಲಿ ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು…