ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಜಾಮೀನು ಸಿಕ್ಕಿದೆ. ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ರೂಪಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 24 ನೇ ಎಸಿಎಂಎಂ ಕೋರ್ಟ್ ಹಾಲ್‌ಗೆ ಇಂದು ಐಪಿಎಸ್ ಅಧಿಕಾರಿ ರೂಪಾ ಹಾಜರಾದರು.…
Author: Prajatv Kannada
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನ ಹಿರಿಯ ನಟಿ ಸುಲೋಚನಾ ಲಾತ್ಕರ್ ಚಿಕಿತ್ಸೆ ಪಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಸಂಜೆ 5.30ಕ್ಕೆ ದಾದರ್ ಸ್ಮಶಾನದಲ್ಲಿ ಸುಲೋಚನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮುಂಬೈನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಲೋಚನ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. 250ಕ್ಕೂ ಹೆಚ್ಚು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಮರಾಠಿ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಅವರು ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. 50ಕ್ಕೂ ಹೆಚ್ಚು ಮರಾಠಿ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದರು. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ 1999ರಲ್ಲಿ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಹಾರಾಷ್ಟ್ರ ಸರಕಾರವು ಮಹಾರಾಷ್ಟ್ರ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನ ಸಾಧನೆಗಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಸುಲೋಚನ ಪಡೆದುಕೊಂಡಿದ್ದರು.
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮದುವೆಯಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದ ರಜನಿ ಕೆಲಹೊತ್ತು ಸಮಯ ಕಳೆದು ಬಳಿಕ ಚೆನ್ನೈಗೆ ವಾಪಸ್ ಆಗಿದ್ದಾರೆ. ಸಾಕಷ್ಟು ವರ್ಷಗಳಿಂದ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಶ್ ಅವಿವಾ ಬಿಡಪ್ಪ ಇಂದು ಗೌಡರ ಸಂಪ್ರದಾಯದಂತೆ ಹಸೆಮಣೆ ಏರಿದ್ದಾರೆ. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಎಲ್ಲಾ ಸೆಲೆಬ್ರಿಟಿಗಳು ಭಾಗಿ ಆಗಿ ಔತಣ ಸ್ವೀಕರಿಸಲಿದ್ದಾರೆ. ಬಳಿಕ ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಔತಣ ಕೂಡ ಏರ್ಪಡಿಸಲಾಗಿದೆ.
ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹಕಾರ್ಯ ನೆರವೇರಿದ್ದು, ನವ ದಂಪತಿಗೆ ಸಾಕಷ್ಟು ಮಂದಿ ಶುಭಾಶಯ ಕೋರುತ್ತಿದ್ದಾರೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅಭಿಷೇಕ್ ಹಾಗೂ ಅವಿವಾ ಗೃಹಸ್ತ್ರಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಮುಂಜಾನೆಯೇ ಹೊಸ ಬಿಎಂಡಬ್ಲು ಕಾರಿನಲ್ಲಿ ಸುಮಲತಾ ಕುಟುಂಬದವರು ಚಾಮರ ವಜ್ರಕ್ಕೆ ಆಗಮಿಸಿದ್ದು, ಒಕ್ಕಲಿಗರ ಸಮುದಾಯದಂತೆ ಮದುವೆ ಶಾಸ್ತ್ರಗಳು ನೆರವೇರಿವೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಸೆಲೆಬ್ರಿಟಿಗಳ ದಂಡೇ ಹಾಜರಿತ್ತು. ಖ್ಯಾತ ನಟಿ ಸುಹಾಸಿನಿ, ಟಾಲಿವುಡ್ ನಟ ಮೋಹನ್ ಬಾಬು, ಮನೋಜ್ ಮಂಚು ಮೊದಲಾದವರು ಆಗಮಿಸಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಎಲ್ಲಾ ಸೆಲೆಬ್ರಿಟಿಗಳು ಭಾಗಿ ಆಗಿ ಔತಣ ಸ್ವೀಕರಿಸಲಿದ್ದಾರೆ. ಬಳಿಕ ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಔತಣ ಕೂಡ ಏರ್ಪಡಿಸಲಾಗಿದೆ.
ಬೆಳಗಾವಿ: ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಹಿಂದೆ ಮುಂದೆ ವಿಚಾರ ಮಾಡದೇ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿದರು. ಅಧಿಕಾರ ಹಿಡಿತದ ನಂತರ ಕರ್ನಾಟಕದ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿ ರಾಜೀವ್ ಟೋಪಣ್ಣವರ್ ಹೇಳಿದರು. ಆಮ್ ಆದ್ಮಿ ಪಕ್ಷ ಸರ್ಕಾರ ದೆಹಲಿಯಲ್ಲಿ ಸತತ 10 ವರ್ಷಗಳಿಂದ 200 ಯೂನಿಟ್ ಫ್ರೀ ಕೊಡುತ್ತಿದೆ. ಪಂಜಾಬ್‌ನಲ್ಲಿ 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. 200 ಯೂನಿಟ್‌ಗಿಂತ ಒಂದೇ ಯೂನಿಟ್ ಜಾಸ್ತಿ ಆದರೂ ಪೂರ್ತಿ ಬಿಲ್ ಕಟ್ಟಬೇಕಾದ ವ್ಯವಸ್ಥೆ ಇದೆ. ದೆಹಲಿಯಲ್ಲಿ ಪವರ್ ಪ್ಲಾಂಟ್ಸ್ ಇಲ್ಲ, ಹೊರಗಿಂದ ವಿದ್ಯುತ್ ಖರೀದಿಸಿ ಪೂರೈಕೆ ಮಾಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಆಗುತ್ತದೆ, ದೇಶದಲ್ಲೇ ಎರಡನೇ ಸ್ಥಾನ ಇದೆ. ದೆಹಲಿ ಮಾದರಿಯಲ್ಲಿ ಉಚಿತ ವಿದ್ಯುತ್ ನೀಡಿದರೆ ಯೋಜನೆ ಸಫಲವಾಗುತ್ತದೆ. ಈ ಯೋಜನೆ ಜಾರಿ ಮಾಡುವಲ್ಲಿ ಕಾಂಗ್ರೆಸ್ ಫೇಲ್ಯೂರ್ ಆಗುತ್ತಿದೆ. ಸರಾಸರಿ ನೋಡುತ್ತೇವೆ ಅಂತೆಲ್ಲಾ ಮಾತನಾಡುವುದನ್ನ ಬಂದ್ ಮಾಡಬೇಕು ಎಂದರು.
ಮಂಡ್ಯ : ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಕರ್ತವ್ಯವಲ್ಲ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪರಿಸರ ಉಳಿಸುವ ಜವಾಬ್ದಾರಿ ಇದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ಪಟ್ಟಣದ ಹೆಚ್.ಕೆ.ವೀರಣ್ಣಗೌಡ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಅವರಿಗೆ ಮರ ಗಿಡಗಳ ಮಹತ್ವ ಗೊತ್ತಿತ್ತು. ಹೀಗಾಗಿ ಹಿಂದೆಲ್ಲ ಒಂದು ಮರ ಕಡಿದರೆ, ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಯುವ ಜನತೆಗೆ ಆಸಕ್ತಿ ಕಡಿಮೆಯಾಗುತ್ತಿದೆ. ಹೆಚ್ಚು ಹೆಚ್ಚು ಕಾಡು ಬೆಳೆಸಬೇಕು. ಆಗ ಮಾತ್ರ ಪ್ರಕೃತಿ ವಿಕೋಪಗಳ ಸಂಖ್ಯೆ ಕಡಿಮೆ ಮಾಡಬಹುದು. ಇದು ಕೇವಲ ಅಧಿಕಾರಿಗಳ ಕೆಲಸ ಮಾತ್ರವಲ್ಲ, ಜನರ ಜವಾಬ್ದಾರಿಯು ಇದೆ ಎಂದು ಅಭಿಪ್ರಾಯಪಟ್ಟರು. ವಿಧ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಅನಿರ್ವಾಯತೆ ಬಗ್ಗೆ ಅರಿವನ್ನು ಮೂಡಿಸಿಕೊಂಡು…
ಮಂಡ್ಯ : ಕ್ಷೇತ್ರದ ಎಲ್ಲ ಧರ್ಮ, ಜಾತಿ – ಜನಾಂಗದವರು ತಮ್ಮನ್ನು ಚುನಾವಣೆಯಲ್ಲಿ ಪಕ್ಷಾತೀತವಾಗಿ ಬೆಂಬಲಿಸಿದ್ದು, ಈ ಗೆಲುವು ಕ್ಷೇತ್ರದ ಜನರ ಗೆಲುವಾಗಿದೆ. ನಿಮ್ಮ ಋಣವನ್ನು ನನ್ನ ಕೊನೆ ಉಸಿರಿರುವವರೆಗೆ ಮರೆಯಲ್ಲ ಎಂದು ಶಾಸಕ ಕೆ.ಎಂ.ಉದಯ್ ಭಾವುಕರಾದರು. ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಬಳಿ ಭಾನುವಾರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಮುಖಂಡ ಸಿ.ಟಿ.ಶಂಕರ್ ನೇತೃತ್ವದಲ್ಲಿ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬ ಆಚರಣೆ ಹಾಗೂ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಭೆಯ ಅಂಗವಾಗಿ ಬೆಳ್ಳಿ ಕಿರೀಟ ತೊಡಿಸಿ ಅದ್ದೂರಿ ಸನ್ಮಾನಿಸಲಾಯಿತು. ಬಳಿಕ ಬೃಹತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಕೆ.ಎಂ.ಉದಯ್ ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಕೋವಿಡ್ ನಂತ ಸಂದಿಗ್ಧ ಪರಿಸ್ಥಿತಿಯಲ್ಲಿ ಕ್ಷೇತ್ರದಲ್ಲಿ ನನ್ನ ಕೈಲಾದ ಮಟ್ಟಿಗೆ ಸಮಾಜಸೇವೆ ಮಾಡಬೇಕೆಂದು ಹೆಜ್ಜೆ ಇಟ್ಟಾಗ ನೀವೆಲ್ಲ ನನ್ನ ಸಮಾಜಮುಖಿ ಸೇವೆಗೆ ಬೆನ್ನೆಲುಬಾಗಿ ನಿಂತು ಬೆಂಬಲ ನೀಡಿದ್ದೀರಿ. ಬಳಿಕ ಸಮಾಜಸೇವೆ ಜೊತೆಗೆ ರಾಜಕೀಯದಲ್ಲೂ ಸ್ಥಾನ ಸಿಕ್ಕರೆ ಮತ್ತಷ್ಟು ಅಭಿವೃದ್ಧಿ ಮಾಡಬಹುದು ಎಂಬ ದೃಷ್ಟಿಯಿಂದ ಚುನಾವಣೆಯಲ್ಲಿ…
ಹಾಸನ: ರಾಜ್ಯದಲ್ಲಿ ಉಚಿತ ಕರೆಂಟ್ ಘೋಷಣೆ ಮಾಡಿ ದರ ಏರಿಕೆ ಮಾಡಿರುವ ವಿಚಾರವಾಗಿ ಮಾತನಾಡಿದ ಸಚಿವ ಭೈರತಿ ಸುರೇಶ್, ವಿದ್ಯುತ್ ದರ ಏರಿಕೆ ವಿಚಾರ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ. ನಾವು ಬಂದು ಕೇವಲ ಹದಿನೈದು ದಿನ ಆಗಿದೆ ದರ ಏರಿಕೆಗೆ ನಾವು ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ಹಳೆ ಸರ್ಕಾರ ಮಾಡಿರುವುದು, ಅದನ್ನ ಪರಿಶೀಲನೆ ಮಾಡಬಹುದು ಅನ್ನಿಸುತ್ತದೆ. ಉಚಿತ ಕೊಡುಗೆಯಿಂದ ಅಭಿವೃದ್ಧಿಗೆ ಹಿನ್ನಡೆ ಆಗುವುದಿಲ್ಲ.. ದೇಶದಲ್ಲಿ ಕೊಟ್ಟ ಮಾತು ಉಳಿಸಿಕೊಂಡಿದ್ದರೆ ಅದು ಕಾಂಗ್ರೇಸ್ ಸರ್ಕಾರ ಮಾತ್ರ ಎಂದರು. ಉಚಿತ ಕೊಡುಗೆಯಿಂದ ರಾಜ್ಯ ದಿವಾಳಿ ಆಗಲಿದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ಆರೋಪ ಮಾಡುವವರು ಹಿಂದೆ ಯಾಕೆ ಕೊಟ್ಟ ಮಾತಿನಂತೆ ಯೋಜನೆ ಜಾರಿ ಮಾಡಿ ಅಂತಾ ಪ್ರಶ್ನಿಸಿದರು.
ಉಡುಪಿ: ಮುದಿ ಹಸುಗಳನ್ನ ಕೊಲ್ಲಬಾರದೇಕೆ? ಪಶುಸಂಗೋಪನ ಸಚಿವರ ಹೇಳಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಪಶುಸಂಗೋಪನಾ ಸಚಿವರು ಗೋವುಗಳನ್ನ ಕಡಿದರೆ ಏನಾಗುತ್ತೆ ಅಂತ ಅಬ್ಬರದ ಮಾತನ್ನಾಡಿದ್ದಾರೆ. ಬಿಜೆಪಿ ಸರ್ಕಾರ ಎರಡೂ ಮನೆಗಳಲ್ಲಿ ಗೋ ಹತ್ಯೆ ನಿಷೇದ ಕಾನೂನು ಜಾರಿ ಮಾಡಿದೆ. ರೈತರು, ಸಾಧುಸಂತರು, ಮಹಾತ್ಮಗಾಂಧೀಜಿ ಅಭಿಪ್ರಾಯ ಗಮನದಲ್ಲಿಟ್ಟು ಈ ಕಾನೂನು ಜಾರಿ ಮಾಡಲಾಗಿದೆ. ಹಿಂದೂ ಧರ್ಮಕ್ಕೆ ಗೋವು ಪೂಜನೀಯ ಹಿನ್ನಲೆಯಲ್ಲಿ ಗೋ ಹತ್ಯೆ ನಿಷೇದ ಜಾರಿ ಮಾಡಲಾಗಿದೆ. ಪಶುಸಂಗೋಪನಾ ಮಂತ್ರಿಗಳಾಗಿ ಯಾವುದೇ ಸರ್ಕಾರ ಇದ್ರೂ ಗೋ ಶಾಲೆ ತೆರೆದು ಗೋ ರಕ್ಷಣೆ ಮಾಡುವ ಕ್ರಮ ಇದೆ. ಗೋವಿನ ರಕ್ಷಣೆ, ಹಾಲಿನ ಗುಣಮಟ್ಟ ಉತ್ತೇಜನ, ಕ್ಷೀರಾಭಿವೃದ್ದಿ , ಗೋತಳಿಗಳ ಬಗ್ಗೆ ಯೋಚನೆ ಮಾಡಬೇಕು. ಇವೆಲ್ಲವನ್ನ ಬಿಟ್ಟು ಗೋವು ಕಡಿಯುತ್ತೇವೆ ಎಂಬ ಧ್ರಾಷ್ಟ್ಯದ ಮಾತು ಆಡಿರುವುದು ಆಶ್ಚರ್ಯ. ಸಿದ್ದರಾಮಯ್ಯನವರೇ ನಿಮ್ಮ ಮಂತ್ರಿಗಳಿಗೆ ಗೋ ಸಂರಕ್ಷಣೆ ಕಾಯಿದೆ ಹಾಗೂ ಜನಸಾಮಾನ್ಯರ ಭಾವನೆ ಅರ್ಥಮಾಡಿಸಿ. ಗೋ ಹತ್ಯೆ ನಿಷೇದ ತಿದ್ದಯಪಡಿ ಮಾಡಿ ಗೋವುಗಳ ಮಾರಣ…
ವಿಜಯಪುರ : ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯಲ್ಲ. ಇನ್ಮುಂದೆ ಇಂಥ ನಾಟಕ ಮಾಡಿದರೆ ಜೈಲು ಗ್ಯಾರಂಟಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ವರ್ಷ ಸೂಲಿಬೆಲೆ ಏನ್ ಮಾಡಿದ್ದಾರೆ ಕೇಳಿ, ನಾಲ್ಕು ವರ್ಷ ಅನಾಹುತ ಮಾಡಿದ್ದು, ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ದೂರಿದರು. ಇವರಿಗೇನು ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು. ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ ಎಂದು ಹೇಳಿದರು. ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ 4ರಷ್ಟು ಮೀಸಲಾತಿ, ಮತಾಂತರ ನಿಷೇಧ…