ಬೆಂಗಳೂರು: ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೆ ಬಗ್ಗೆ ಚರ್ಚೆ ಆಗಲಿದೆ. ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಸಾಹಿತಿಗಳು, ಚಿಂತಕರ ಅಭಿಪ್ರಾಯ ಸಂಗ್ರಹಿಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಸಚಿವ ಮಧುಬಂಗಾರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಪುಸ್ತಕ ಬದಲಾಯಿಸಲು ಸಾಧ್ಯವಿಲ್ಲದಿದ್ದರೆ ಮುಂದಿನ ವರ್ಷ ಪಠ್ಯಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ 3 ಕೋಟಿ ಪಠ್ಯ ಪುಸ್ತಕಗಳು ಮುದ್ರಣವಾಗಿವೆ. ಇವುಗಳನ್ನು ಹಿಂಪಡೆದು ಹೊಸದಾಗಿ ಮುದ್ರಣ ಮಾಡಲು 1 ತಿಂಗಳು ಬೇಕಾಗುತ್ತದೆ. ಅಲ್ಲಿವರೆಗೆ ಮಕ್ಕಳಿಗೆ ಪಾಠ ಇಲ್ಲದಂತಾಗುತ್ತದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕು.
Author: Prajatv Kannada
ಬೆಂಗಳೂರು: ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಕೋಲಾಹಲಾ ಎಬ್ಬಿಸಿದೆ. ಅದರ ಬಗ್ಗೆ ತೀವ್ರ ಮುಜುಗರ ಉಂಟಾಗಿದೆ. ಈ ಮಧ್ಯೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಚಿಂತನೆ ವಿಚಾರಕ್ಕೆ ಸಂಬಂಧಿಸಿ ಪ್ರಾಣಿಗಳನ್ನು ಕೊಲ್ಲಬಾರದು, ನಾನು ಪ್ರಾಣಿಹತ್ಯೆ ನಿಷೇಧದ ಪರ. ಆದರೆ ಸಂಪುಟದಲ್ಲಿ ಈ ಬಗ್ಗೆ ಹೇಳುವುದಿಲ್ಲ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. 84 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು. 84 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದರು.
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಗೋಹತ್ಯೆ ನಿಷೇಧ ಕಾಯ್ದೆ ಯಾಕೆ ಮುನ್ನೆಲೆಗೆ ಬರ್ತಿದೆ ಗೊತ್ತಿಲ್ಲ ಎಂದು ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ತಿಳಿಸಿದರು. ಅವರಿಗೆ ಅನಿಸಿದ್ದನ್ನು ಪಶುಸಂಗೋಪನಾ ಸಚಿವರು ಹೇಳಿದ್ದಾರೆ. ಕಾಯ್ದೆ ಬಗ್ಗೆ ಅಧಿವೇಶನ ಪ್ರಾರಂಭಕ್ಕೂ ಮುನ್ನ ಚರ್ಚೆ ಆಗಲಿದೆ. ಯಾವ ಬಿಲ್ ತರಬೇಕು, ಯಾವ್ಯಾವ ಬಿಲ್ ತರಬಾರದೆಂಬ ಚರ್ಚೆ ನಡೆಯುತ್ತೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ಹೂಂ ಎನ್ನಬೇಕು ಎಂದರು.
ಬೆಂಗಳೂರು: ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು? ಎಂಬ ಸಚಿವ ಕೆ.ವೆಂಕಟೇಶ್ ಹೇಳಿಕೆಗೆ ಚಕ್ರವರ್ತಿ ಸೂಲಿಬೆಲೆ ತಿರುಗೇಟು ಕೊಟ್ಟಿದ್ದಾರೆ. ಪಶುಸಂಗೋಪನೆ ಸಚಿವರು ಅಂದ್ರೆ ಪಶುಗಳನ್ನು ಕಾಪಾಡುವುದು. ಪಶುಸಂಗೋಪನೆ ಸಚಿವರೇ ಹಸು ಕಡಿಯಬೇಕು ಅಂತಾ ಹೇಳ್ತಾರೆ. ಸಚಿವರು ಹಸು ಕಡಿಯುವುದಕ್ಕೆ ಬೇರೆ ಬೇರೆ ಕಾರಣ ಕೊಡ್ತಿದ್ದಾರೆ. ಇದನ್ನೆಲ್ಲ ಬಿಟ್ಟು ಮೊದಲು 200 ಯೂನಿಟ್ ಕರೆಂಟ್ ಕೊಡಲಿ. ಯಾವುದೇ ಷರತ್ತು ಇಲ್ಲದೆ ಕರೆಂಟ್ ಕೊಡುವ ಕೆಲಸ ಮಾಡಲಿ. ಮುಸ್ಲಿಮರಿಂದ ಶೇ.80ರಷ್ಟು ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನರು ಸರ್ಕಾರದ ನಡೆಯನ್ನು ಸೂಕ್ಷ್ಯವಾಗಿ ಗಮನಿಸ್ತಿದ್ದಾರೆ. ಸರ್ಕಾರ ತನ್ನ ಅಸ್ತ್ರವನ್ನು ಹಿಟ್ಲರ್ ರೀತಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಡಿಕೆ ಶಿವಕುಮಾರ್ ತಡವಾಗಿ ವಿಧಾನಸೌಧಕ್ಕೆ ಆಗಮಿಸಿದ್ದು ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರ ಜೊತೆ ಸಭೆ ನಡೆಯುತ್ತಿದೆ. ಮಳೆ ನೀರು ಸಮಸ್ಯೆ, ಬಿಬಿಎಂಪಿ ಚುನಾವಣೆ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆ. ಡಿಸಿಎಂ ಕರೆದ ಸಭೆಗೆ ಕಾಂಗ್ರೆಸ್ ಶಾಸಕರೇ ಗೈರಾಗಿದ್ದಾರೆ. ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ, ಹ್ಯಾರೀಸ್, ಸಚಿವ ಬೈರತಿ ಸುರೇಶ್ ಗೈರು.
ಬೆಂಗಳೂರು: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023ರ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದರು. ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ. ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬಿಬಿಎಂಪಿ ಚುನಾವಣೆ ಮತ್ತೆ ಮುಂದೂಡುವ ಸಾಧ್ಯತೆ ಇದೆ. 243 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಕಾಂಗ್ರೆಸ್‌ನ ಆಂತರಿಕ ಸಮಿತಿ ಷರತ್ತುಬದ್ಧ ಒಪ್ಪಿಗೆ ನೀಡಿದ್ದರೂ, ಅದರ ಶಾಸಕರಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ಕಾಂಗ್ರೆಸ್ ಶಾಸಕರ ಪ್ರಕಾರ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ವಿಷಯವು ಜುಲೈನಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ನಿರೀಕ್ಷೆಯಿದೆ. ವಿಶೇಷವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾರ್ಡ್ ವಿಂಗಡಣೆಯನ್ನು ಪ್ರಶ್ನಿಸುವಲ್ಲಿ ಪಕ್ಷದ ನಾಯಕರು ತಮ್ಮ ಮುಂದಿನ ಕ್ರಮವನ್ನು ಇನ್ನೂ ನಿರ್ಧರಿಸಬೇಕಾಗಿದೆ. ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಆಂತರಿಕ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, 243 ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಶಿಫಾರಸು ಮಾಡಲಾಗುವುದು. ಬಿಜೆಪಿಯವರು ವೈಜ್ಞಾನಿಕವಾಗಿ ವಾರ್ಡ್‌ಗಳನ್ನು ಕೆತ್ತಿಲ್ಲ, ವಾರ್ಡ್‌ಗಳ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದರಿಂದ 243 ವಾರ್ಡ್‌ಗಳಲ್ಲಿ ಮುಂದುವರಿಯುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಅವರು ಹೇಳಿದರು.
ಬೆಂಗಳೂರು: ದೇಶದಲ್ಲಿ ಗೋಹತ್ಯೆ ನಿಷೇಧ ಆಗಬೇಕು ಅನ್ನೋದು ಎಲ್ಲರ ಆಶಯ. ಈ ಸರ್ಕಾರದಲ್ಲಿ ಉದ್ಧಟತನ ತೋರುತ್ತಿದ್ದಾರೆ. ಪೇಪರ್ ಹೇಳಿಕೆಗಳು ಬೇಕಾಗಿಲ್ಲ ಕೆಲಸ ಮಾಡುವುದಕ್ಕೆ ಶುರುಮಾಡಿ. 200 ಯೂನಿಟ್ ಫ್ರೀ ಅಂತಾ ಹೇಳಿ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಎಲ್ಲ ಕಡೆ ದರ ಕಡಿಮೆ ಮಾಡುತ್ತಿದ್ರೆ ಇವರೇಕೆ ಏರಿಕೆ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: “ವಿಶ್ವ ಪರಿಸರ ದಿನ” ಹಿನ್ನೆಲೆಯಲ್ಲಿ ರೋಟರಿ ಬೆಂಗಳೂರು ಸೌತ್ ಪರೇಡ್ ಹಾಗೂ ಅವರ ಅಂಗ ಸಂಸ್ಥೆ ಗಳ ಸಹಕಾರದಿಂದ ದೇವನಹಳ್ಳಿ ಟೌನ್ ಗೆ 2 ಲಕ್ಷ ಲೀಟರ್ ಕುಡಿಯುವ ನೀರಿನ ಘಟಕ ಉದ್ಘಾಟಿಸಲಾಯಿತು. ಇದೇ ವೇಳೆ ಹಣ್ಣಿನ ಗಿಡಗಳನ್ನೂ ಕೂಡ ನೆಟ್ಟು ಪರಿಸರ ದಿನ ಆಚರಿಸಲಾಯಿತು. ಕೆರೆಯ ನೀರು ಪಕ್ಕದ ಬಾವಿ ನೀರಿಗೆ ಭೂಮಿಗೆ ಹರಿಸಿ ಮತ್ತೆ ನೈಸರ್ಗಿಕ ಸೋಸುವ ವಿಧಾನ ಹಾಗೂ ಮತ್ತೆ ಅದನ್ನ ಕೊಳವೆ ಬಾವಿ ಮೂಲಕ ಮಗದೊಂದು ಸೋಸುವ ಸಲಕರಣೆಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುತ್ತಾರೆ. ಇದೇ ವೇಳೆ ರೋಟರಿ ಗೌರ್ನರ್ ಜಿತೇಂದ್ರ ಅನೇಜ, ರೋಟರಿ ಪ್ರೆಸಿಡೆಂಟ್ ಆನಂದ ರಾಮಚಂದ್ರ,ರೋಟರಿ ಸಂಸ್ಥೆಯ ಸುದರ್ಶನ್, ರೋಟೆರಿಯನ್ ಶಿವಕುಮಾರ್ ಹಾಗೂ ರೋಟೆರಿಯನ್ ಚಂದ್ರಶೇಖರ್ ಹಾಗೂ ಸೌತ್ ಪರೇಡ್ ನ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಈ ವೇಳೆ ದೇವನಹಳ್ಳಿ ಬಾಲಕಿಯರ ಶಾಲೆ ಗಣಕೀಕರಣ ಕೂಡ ನಡೆಸಲಾಯಿತು.
ದಾವಣಗೆರೆ: ನೂತನ ಕಾಂಗ್ರೆಸ್ (Congress) ಸರ್ಕಾರದ ಮೊದಲ ರಾಜ್ಯ ಬಜೆಟ್ (Budget) ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್…