ದಾವಣಗೆರೆ: ನೂತನ ಕಾಂಗ್ರೆಸ್ (Congress) ಸರ್ಕಾರದ ಮೊದಲ ರಾಜ್ಯ ಬಜೆಟ್ (Budget) ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್…
Author: Prajatv Kannada
ಮುಂಬೈ: ಇದೇ ಜೂನ್ 7ರಿಂದ 11ರ ವರೆಗೆ ಭಾರತ ಮತ್ತು ಆಸ್ಟ್ರೇಲಿಯಾ (Australia) ನಡುವೆ ಲಂಡನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (WTC) ನಡೆಯಲಿದ್ದು, 10 ವರ್ಷಗಳ ಬಳಿಕ ಭಾರತ (Team India) ಮತ್ತೆ ಚಾಂಪಿಯನ್ ಪಟ್ಟಕ್ಕೇರಲು ಸಮರಾಭ್ಯಾಸ ನಡೆಸುತ್ತಿದೆ. 2021ರಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಸೋತು ನಿರಾಸೆ ಕಂಡಿತ್ತು. ಇದೀಗ ಮತ್ತೆ ಫೈನಲ್ ಪ್ರವೇಶಿಸಿದ್ದು, ಚಾಂಪಿಯನ್ ಪಟ್ಟಕ್ಕೇರುವ ತವಕದಲ್ಲಿದೆ. 2013ರಲ್ಲಿ ಎಂ.ಎಸ್ ಧೋನಿ (MS Dhoni) ನಾಯಕತ್ವದಲ್ಲಿ ಭಾರತ ಚಾಂಪಿಯನ್ ಟ್ರೋಫಿ ಗೆದ್ದಿತ್ತು. ಧೋನಿ ನಂತರ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma) ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ಆದ್ರೆ ಟ್ರೋಫಿ ಗೆಲ್ಲಿಸುವಲ್ಲಿ ಯಶಸ್ವಿಯಾಗಲಿಲ್ಲ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ 2014ರಲ್ಲಿ T20 ವಿಶ್ವಕಪ್ ಫೈನಲ್ ತಲುಪಿ ಶ್ರೀಲಂಕಾ (Sri Lanka) ವಿರುದ್ಧ 6 ವಿಕೆಟ್‌ಗಳಿಂದ ಸೋತಿತ್ತು. 2017ರಲ್ಲಿ ಚಾಂಪಿಯನ್‌ಶಿಪ್ ಟ್ರೋಫಿ ಫೈನಲ್ ತಲುಪಿ, ಪಾಕಿಸ್ತಾನದ (Pakistan) ಎದುರು…
ನವದೆಹಲಿ: ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಜೂನ್ 07ರಂದು ಲಂಡನ್‌ನ ದಿ ಓವಲ್ ಮೈದಾನದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಬಲಿಷ್ಠ ಭಾರತ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳು ಕಾದಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈ ಪ್ರಶಸ್ತಿ ಜಯಿಸಿ, ಕಳೆದೊಂದ ದಶಕದಿಂದ ಭಾರತ ಅನುಭವಿಸುತ್ತಾ ಬಂದಿರುವ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳಲು ಎದುರು ನೋಡುತ್ತಿದೆ. 2013ರಿಂದೀಚೆಗೆ ಭಾರತ ತಂಡವು ಹಲವು ಬಾರಿ ಐಸಿಸಿ ಟ್ರೋಫಿ ಸಮೀಪ ಬಂದು ಮುಗ್ಗರಿಸಿದೆ. 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಟೀಂ ಇಂಡಿಯಾ ಐಸಿಸಿ ಟೂರ್ನಿಯಲ್ಲಿ ಕಪ್ ಗೆಲ್ಲಲು ಪದೇ ಪದೇ ವಿಫಲವಾಗುತ್ತಲೇ ಬಂದಿದೆ. ಕಳೆದ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲೂ ಭಾರತ ತಂಡವು ಫೈನಲ್ ಪ್ರವೇಶಿಸಿತ್ತು. ಸೌಥಾಂಪ್ಟನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು 8 ವಿಕೆಟ್‌ಗಳ ಸೋಲು ಅನುಭವಿಸುವ ಮೂಲಕ ಭಾರತ ತಂಡವು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಎರಡನೇ ಆವೃತ್ತಿಯ ವಿಶ್ವ…
ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕ್ಯಾನ್ಸರ್ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನ ಕೇಳಿ ಮೆಗಾಸ್ಟಾರ್ ಅಭಿಮಾನಿಗಳು ಕಂಗಾಲಾಗಿದ್ದು ಇದೀಗ ಘಟನೆಯ ಕುರಿತು ಚಿರಂಜೀವಿ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ನಾನು ಕ್ಯಾನ್ಸರ್ ಸೆಂಟರ್ ಉದ್ಘಾಟನೆ ವೇಳೆ ಕ್ಯಾನ್ಸರ್ ಜಾಗೃತಿ ಬಗ್ಗೆ ಮಾತನಾಡಿದ್ದೆ. ಆಗಾಗ ವೈದ್ಯಕೀಯ ಪರೀಕ್ಷೆ ಮಾಡಿಸಿದರೆ ಕ್ಯಾನ್ಸರ್ ತಡೆಗಟ್ಟಬಹುದು ಅಂತ ಹೇಳಿದ್ದೆ. ನಾನೂ ಕೂಡ ಎಚ್ಚರಿಕೆ ವಹಿಸಿ, ಪರೀಕ್ಷೆ ಮಾಡಿಸಿದ್ದೆ. ನನ್ನಲ್ಲಿ ಕ್ಯಾನ್ಸರಸ್ ಅಲ್ಲದ ಊತ ಕಾಣಿಸಿತ್ತು. ಬಳಿಕ ಅದನ್ನು ತೆಗೆಯಲಾಯಿತು. ಆ ಪರೀಕ್ಷೆ ಮಾಡಿಸಿಕೊಳ್ಳದೇ ಇದ್ದಿದ್ದರೆ ಅದು ಕ್ಯಾನ್ಸರ್ ಆಗಿ ಬದಲಾಗುವ ಸಾಧ್ಯತೆ ಇತ್ತು. ಹಾಗಾಗಿಯೇ ಎಲ್ಲರೂ ಮುಂಜಾಗೃತೆ ವಹಿಸಿ, ಪರೀಕ್ಷೆ ಮಾಡಿಸಿಕೊಳ್ಳಬೇಕು ಅಂತ ಮಾತ್ರ ನಾನು ಹೇಳಿದ್ದೆ ಎಂದು ನಟ ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಕೆಲವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ನನಗೆ ಕ್ಯಾನ್ಸರ್ ಆಗಿದೆ ಮತ್ತು ಚಿಕಿತ್ಸೆಯಿಂದ ಬದುಕಿದೆ ಅಂತ ಸುದ್ದಿ ಮಾಡಿದ್ದಾರೆ. ಇದರಿಂದ ಅನಗತ್ಯವಾಗಿ ಗೊಂದಲ ಶುರುವಾಗಿದೆ. ಅನೇಕ ಹಿತೈಷಿಗಳು ನನಗೆ ಸಂದೇಶ ಕಳಿಸಲು…
ಜೂನ್ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5…
ನ್ಯೂಯಾರ್ಕ್ : ಪ್ರಧಾನಿ ನರೇಂದ್ರ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಅಪಘಾತವಾಗಿ ಕಾರು ನಿಂತಾಗ ಅದು ಯಾಕೆ ಮುಂದೆ ಹೋಗುತ್ತಿಲ್ಲ ಎಂದು ಯೋಚಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು. ‘ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ಆಗ ರೈಲ್ವೇ ಸಚಿವರು ‘ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ’ ಎಂದು ಹೇಳಿರಲಿಲ್ಲ. ‘ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ’ ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ’ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದರು. ‘ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ…
ದಕ್ಷಿಣ ಆಫ್ರಿಕಾ: ಪೂರ್ವ ದಕ್ಷಿಣ ಆಫ್ರಿಕಾದ ನಗರವಾದ ಡರ್ಬನ್ ಬಳಿಯ ಪುರುಷರ ಹಾಸ್ಟೆಲ್‌ನ ಕೊಠಡಿಯೊಂದಕ್ಕೆ ಏಕಾಏಕಿ ನುಗ್ಗಿದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು,. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಮೊದಲು ಏಳು ಮಂದಿ ಪುರುಷರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಬಳಿಕ ಘಟನೆಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 8ನೇ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರಲ್ಲಿ ಗುಂಡೇಟಿನಿಂದ ತಪ್ಪಿಸಿಕೊಳ್ಳಲು ಹಾಸ್ಟೆಲ್ ಕೋಣೆಯ ಕಿಟಕಿಯಿಂದ ಹೊರಗೆ ಹಾರಿದ ವ್ಯಕ್ತಿಯೂ ಸೇರಿದ್ದಾರೆ. ಕೊಠಡಿಯಲ್ಲಿ 12 ಮಂದಿ ಮದ್ಯ ಸೇವಿಸುತ್ತಿದ್ದರು. ಅವರಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಸ್ಲಾಮಾಬಾದ್: ರಿಮೋಟ್ ಕಂಟ್ರೋಲ್ ಬಾಂಬ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದ ಬಜೌರ್ ಜಿಲ್ಲೆಯಲ್ಲಿ ಸಂಭವಿಸಿದೆ. ಸ್ಫೋಟವು ಪಿಕಪ್ ವ್ಯಾನ್‌ಗೆ ಅಪ್ಪಳಿಸಿದ್ದು ಪರಿಣಾಮವಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಮತ್ತು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಗುತ್ತಿಗೆದಾರನಿಗೆ ಗಾಯಗಳಾಗಿವೆ ಎಂದು ಬಜೌರ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸತ್ತಾರ್ ಖಾನ್ ತಿಳಿಸಿದ್ದಾರೆ. ಸಂತ್ರಸ್ತರು ಬಜಾರ್‌ನ ಭದ್ರತಾ ಚೆಕ್ ಪೋಸ್ಟ್‌ಗೆ ವಾಹನದಲ್ಲಿ ಮರಳನ್ನು ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹ ಮತ್ತು ಗಾಯಾಳುಗಳನ್ನು ಬಜಾರ್‌ನ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡಿದ್ದ ಗುತ್ತಿಗೆದಾರ ಸಾವನ್ನಪ್ಪಿದ್ದಾನೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಕೆಪಿಯ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಚೆಹ್ಕನ್ ಪ್ರದೇಶದಲ್ಲಿ ನಡೆದ ಆತ್ಮಹತ್ಯಾ ಬಾಂಬರ್ ಪ್ರಕರಣದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಆ ದಾಳಿಯಲ್ಲಿ ಕನಿಷ್ಠ 22 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಈ ಸ್ಫೋಟವು ಆತ್ಮಹತ್ಯಾ ದಾಳಿಯಾಗಿದೆ ಎಂದು ಅಧಿಕೃತ ಮೂಲಗಳು ಬಹಿರಂಗಪಡಿಸಿವೆ. ಇದರಲ್ಲಿ ಮೋಟಾರು ಸೈಕಲ್‌ನಲ್ಲಿ ಸವಾರಿ ಮಾಡುತ್ತಿದ್ದ ಅಪರಿಚಿತ ಆತ್ಮಹತ್ಯಾ ಬಾಂಬರ್…
ಕೆರೇಬಿಯನ್ ರಾಷ್ಟ್ರ ಹೈಟಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದ್ದು ಹಲವು ಕಡೆ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೂ 15 ಮಂದಿ ಬಲಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ವಾರಾಂತ್ಯದ ಖುಷಿಯಲ್ಲಿದ್ದ ಹೈಟಿ ಮಂದಿಗೆ ಧಾರಾಕಾರ ಮಳೆ ದೊಡ್ಡ ಹೊಡೆತವನ್ನೇ ನೀಡಿದೆ. ಹೈಟಿಯ ಸಿವಿಲ್ ಪ್ರೊಟೆಕ್ಷನ್ ಏಜೆನ್ಸಿಯ ಪ್ರಕಾರ, ದೇಶದಾದ್ಯಂತ ನೂರಾರು ಮನೆಗಳು ನಾಶವಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದರಿಂದ ಸುಮಾರು 13,400 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತವಾಗಿ ಸುರಿದ ಭಾರಿ ಮಳೆಗೆ ಜನವಸತಿ ಪ್ರದೇಶಗಳು ಕೆರೆ ಹಾಗೂ ನದಿಗಳಂತಾಗಿ ಪರಿವರ್ತನೆಯಾಗಿವೆ. ದಿಢೀರ್ ಎಂದು ಉಂಟಾಗಿರುವ ಪ್ರವಾಹಕ್ಕೆ ಸುಮಾರು 7,400 ಕ್ಕೂ ಹೆಚ್ಚು ಕುಟುಂಬಗಳು ದಿವಾಳಿ ಆಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೈಟಿ ಜನರನ್ನು ಹೈರಾಣಾಗಿಸಿರುವ ಮಳೆ, ಬೆಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಿದೆ. ಪ್ರವಾಹದಿಂದ ಸಂತ್ರಸ್ತರಾದವರ ಅಗತ್ಯಗಳಿಗೆ ಸ್ಪಂದಿಸಲು ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ ಎಂದು ಹೈಟಿ…
ನವದೆಹಲಿ: ನೈಜ ಕೋಮುವಾದಿ ಗುಂಪುಗಳಿಗೆ ಜಾತ್ಯಾತೀತರು ಅಂತ ಟೈಟಲ್ ಕೊಟ್ಟು ಬಣ್ಣಿಸುತ್ತಿರುವ ರಾಹುಲ್ ಗಾಂಧಿ ನಡೆ ಹಾಸ್ಯಾಸ್ಪದವಾಗಿದ್ದು, ಅವರು ಇದಕ್ಕೆ ತಕ್ಷಣ ಅಂತ್ಯ ಹಾಡಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ವಿದೇಶಿ ನೆಲದಲ್ಲಿ ಹಿಂದು ಸಂಘಟನೆಗಳನ್ನ ಟೀಕಿಸಿರುವ ರಾಹುಲ್ ಗಾಂಧಿ (Rahul Gandhi) ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಲ್ಹಾದ್ ಜೋಶಿ (Pralhad Josh), ರಾಹುಲ್ ಗಾಂಧಿ ಮೊದಲು ಯಾರು ಕೋಮುವಾದಿ (Communalist), ಯಾರು ಜಾತ್ಯಾತೀತರು (Secular)? ಎಂಬುದನ್ನ ಅರಿತಿಕೊಳ್ಳಲಿ ಎಂದಿದ್ದಾರೆ. ದೇಶದಲ್ಲಿ ಕೋಮುವಾದವನ್ನ ಬಿತ್ತುತ್ತಿರುವ ನೈಜ ಕೋಮುವಾದಿ ಮುಸ್ಲಿಂ ಲೀಗ್ ಪಕ್ಷಗಳನ್ನ ಜಾತ್ಯಾತೀತರು ಎಂದು ನಕಲಿ ಗಾಂಧಿ ಬಣ್ಣಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ದೇಶದ ವಿಭಜನೆಗೆ ಹಾಗೂ ಲಕ್ಷಾಂತರ ಜನರ ಸಾವಿಗೆ ಕಾರಣವಾದ ಪಕ್ಷದವರು ಜಾತ್ಯಾತೀತರು ಹೇಗೆ ಆಗುತ್ತಾರೆ? ಆ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡವರಿಗೆ ರಾಹುಲ್ ಗಾಂಧಿ ಮಾಡಿದ ಅತ್ಯಂತ ದೊಡ್ಡ ಅವಮಾನವಿದು. ಇವರ ತುಷ್ಟಿಕರಣದ ರಾಜಕೀಯಕ್ಕೆ ಕೊನೆಯೇ ಇಲ್ಲ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.