ಮೈಸೂರು: ಮೈಸೂರಿನಲ್ಲಿ ನಿತ್ಯವೂ ನೂರಾರು ರೋಗಿಗಳಿಗೆ ಅನುಕೂಲವಾಗುವಂತೆ 100 ಹಾಸಿಗೆಯ ಡಯಾಲಿಸಿಸ್ ಸೇವೆ ಆರಂಭಿಸಲು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆ ನಿರ್ಧರಿಸಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ”ಮೈಸೂರಿನಲ್ಲಿ ಸಾಕಷ್ಟು ಮಂದಿ ಡಯಾಲಿಸಿಸ್ ಸೇವೆ ಪಡೆಯಲು ಪರದಾಡುವ ಸ್ಥಿತಿ ಇದೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಹೀಗಾಗಿ 100 ಹಾಸಿಗೆ ಸೇವೆ ಆರಂಭಿಸಲು ಬೇಕಾದ ಅನುದಾನ, ಎಲ್ಲಿಮಾಡಬಹುದು ಎಂಬುದನ್ನು ತಿಳಿಸಿದರೆ, ಅದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ಕೇಂದ್ರ ಸರಕಾರದಿಂದ ಕೊಡಿಸುತ್ತೇನೆ” ಎಂದು ತಿಳಿಸಿದರು. ”ಡಯಾಲಿಸಿಸ್ ಯಂತ್ರ ಖರೀದಿಗೆ 8 ಲಕ್ಷ ರೂ. ಬೇಕು. 20 ಯಂತ್ರ ಖರೀದಿಗೆ ಪ್ರಯತ್ನಿಸೋಣ. ಟೆಕ್ನಿಷಿಯನ್, ನರ್ಸ್ ಸಿಬ್ಬಂದಿ ನಿಯೋಜಿಸಬೇಕು. ಕೆ.ಆರ್.ಆಸ್ಪತ್ರೆ, ಪಿಕೆಟಿಬಿ, ಜಿಲ್ಲಾಸ್ಪತ್ರೆ, ಟ್ರಾಮಾ ಕೇರ್ ಸೆಂಟರ್‌ನಲ್ಲಿ ಖಾಲಿ ಇರುವ ಕಟ್ಟಡವನ್ನು ಬಳಸಿಕೊಳ್ಳಲು ಸಾಧ್ಯವೇ ಪರಿಶೀಲಿಸಿ” ಎಂದು ಸೂಚಿಸಿದರು.
Author: Prajatv Kannada
ಮಂಗಳೂರು: ಕೆಎಸ್ಆರ್ಟಿಸಿ ಬಸ್‌ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ‘ಶಕ್ತಿ’ ಯೋಜನೆಯನ್ನು(Shakti Scheme) ಜೂನ್ 11ರಿಂದ ಆರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಕರಾವಳಿ ಕರ್ನಾಟಕ ಭಾಗದ ಖಾಸಗಿ ಬಸ್ ನಿರ್ವಾಹಕರನ್ನು ಚಿಂತೆಗೀಡು ಮಾಡಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಿಸಿರುವುದು ಖಾಸಗಿ ಬಸ್ಗಳಿಗೆ ಹೊರೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳ ಸಂಖ್ಯೆಯೇ ಹೆಚ್ಚಿದೆ. ಸರ್ಕಾರದ ಯೋಜನೆಯಿಂದ ಖಾಸಗಿ ಬಸ್‌ಗಳ ಲಾಭದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮಧ್ಯೆ, ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡೀಸೆಲ್ ಸಬ್ಸಿಡಿ ರೂಪದಲ್ಲಿ ಪರಿಹಾರ ನೀಡುವ ಅಗತ್ಯವನ್ನು ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರು ನಗರವೊಂದರಲ್ಲೇ ಸುಮಾರು 328 ಬಸ್‌ಗಳನ್ನು ಖಾಸಗಿ ನಿರ್ವಾಹಕರು ನಡೆಸುತ್ತಿದ್ದು, 68 ಬಸ್‌ಗಳು ಗ್ರಾಮಾಂತರ ಪ್ರದೇಶದಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಆಧಾರದ ಮೇಲೆ ಕಾರ್ಯಾಚರಿಸುತ್ತಿವೆ. ಇಲ್ಲಿ ಖಾಸಗಿ…
ಸೂರ್ಯೋದಯ: 05.52 AM, ಸೂರ್ಯಾಸ್ತ : 06.44 PM ಶಾಲಿವಾಹನ ಶಕೆ1945, ಶೋಭಕೃನ್ನಾಮ ಸಂವತ್ಸರ, ಸಂವತ್2079, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಪಾಡ್ಯ 06:38 AM ತನಕ ನಂತರ ಬಿದಿಗೆ ನಕ್ಷತ್ರ: ಇವತ್ತು ಜೇಷ್ಠ 03:23 AM ತನಕ ನಂತರ ಮೂಲ ಯೋಗ: ಇವತ್ತು ಸಾಧ್ಯ 08:49 AM ತನಕ ನಂತರ ಶುಭ ಕರಣ: ಇವತ್ತು ಕೌಲವ 06:38 AM ತನಕ ನಂತರ ತೈತಲೆ 05:15 PM ತನಕ ನಂತರ ಗರಜ ದುರ್ಮುಹೂರ್ತ: ಮ.12:40 ನಿಂದ ಮ.1:32 ವರೆಗೂ; ಮ.3:16 ನಿಂದ ಸಂಜೆ.4:08 ವರೆಗೂ ವರ್ಜ್ಯಂ: ಬೆಳಗ್ಗೆ.10:07 ನಿಂದ ಬೆಳಗ್ಗೆ.11:34 ವರೆಗೂ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ:01:30 ನಿಂದ 03:00 ವರೆಗೂ ಅಮೃತಕಾಲ: 07.31 PM to 08.59 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:48 ನಿಂದ ಮ.12:40 ವರೆಗೂ ಜಾತಕ ಆಧಾರದ…
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದರು. ಬಿಜೆಪಿಯವರು ರೈತರಿಗೆ ಅನಾನುಕೂಲ ಆಗುವ ರೀತಿ ಮಾಡಿದ್ರು. ಬಿಜೆಪಿಯವರ ಸಂಘಟನೆಗಳು ಈ ಕಾಯ್ದೆಯ ಮೂಲಕ ವಸೂಲಿ ದಂಧೆ ಮಾಡಿಕೊಂಡಿದ್ದರು. ನಾವು ಕಾಯ್ದೆಯ ಕೆಲವು ನಿಯಮಗಳನ್ನು ಸಡಿಲಗೊಳಿಸಲಿದ್ದೇವೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಿಳಿಸಿದರು.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ “ವಿಶ್ವ ಪರಿಸರ ದಿನ” ಕಾರ್ಯಕ್ರಮದ ಅಂಗವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿಯವರಾದ ಡಿ.ಕೆ. ಶಿವಕುಮಾರ್ ಅವರು ರಾಚೇನಹಳ್ಳಿ ಕೆರೆ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದಾದ್ಯಂತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪರಿಸರ ಉಳಿಸುವ ಕೆಲಸ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ವಿಶ್ವ ಪರಿಸರ ದಿನದ ಅಂಗವಾಗಿ ಪಾಲಿಕೆ ಶಾಲಾ ವಿದ್ಯಾರ್ಥಿಗಳಿಂದ ರಾಚೇನಹಳ್ಳಿ ಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಲ್ನಡಿಗೆ ಹಾಗೂ ಸೈಕಲ್ ಜಾಥ ಮೂಲಕ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಲಾಯಿತು. ಈ ವೇಳೆ ಮಾನ್ಯ ಕಂದಾಯ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೃಷ್ಣ ಭೈರೇಗೌಡ, ಮಾನ್ಯ ಶಾಸಕರಾದ ಎ.ಸಿ ಶ್ರೀನಿವಾಸ್, ಮಾನ್ಯ ವಿಧಾನ ಪರಿಷತ್ ಸದಸ್ಯರಾದ ನಾಗರಾಜ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಪ್ರೀತಿ ಗೆಹ್ಲೋಟ್, ಡಾ. ಹರೀಶ್ ಕುಮಾರ್, ಡಾ. ದೀಪಕ್, ರೆಡ್ಡಿ ಶಂಕರ…
ಬೆಂಗಳೂರು: ನಗರದಲ್ಲಿ ದಿನದ 24 ಗಂಟೆಯೂ ಹೋಟೆಲ್ ತೆರೆಯಲು ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಬೆಂಗಳೂರು ಹೋಟೆಲುಗಳ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಹಕರ ಸೇವೆ ಹಾಗೂ ವ್ಯಾಪಾರಿಗಳ ಅನುಕೂಲತೆಗಾಗಿ 24×7 ಹೋಟೆಲ್ ಸೇರಿದಂತೆ ಇನ್ನಿತರ ಮಳಿಗೆ ತೆರಯಲು 30 ದಿನದೊಳಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದೆ. ಒಂದು ವೇಳೆ ಅನುಮತಿಸದಿದ್ದರೆ ಕಾನೂನು ಹೋರಾಟ ಮಾಡಲಾಗುವುದು ಎಂದರು. ಈ ಹಿಂದೆಯೆ ಕೇಂದ್ರ ಮತ್ತು ರಾಜ್ಯ ಸರ್ಕಾರ ತಡರಾತ್ರಿ 1 ಗಂಟೆವರೆಗೆ ಹೋಟೆಲ್ ಸೇವೆ ನೀಡಲು ಅನುಮತಿಸಿದ್ದವು. ಆದರೆ ಕೆಲವು ಕಾರಣ ನೀಡಿದ್ದ ಪೊಲೀಸ್ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಪೊಲೀಸ್ ಇಲಾಖೆ ನಡೆಯಿಂದ ಬೆಂಗಳೂರಿನ ಜನದಟ್ಟಣೆಯ ಭಾಗದ ಹೋಟೆಲ್, ಸ್ವೀಟ್ ಸ್ಟಾಲ್, ಐಸ್‌ಕ್ರೀಂ ಪಾರ್ಲರ್, ಬೇಕರಿಯಂತಹ ಇನ್ನಿತರ ವ್ಯಾಪಾರಿಗಳ ನಿರೀಕ್ಷೆ ಹುಸಿಯಾಗಿತ್ತು. ವ್ಯಾಪಾರ ಮಾರ್ಗಸೂಚಿ ಹೊರಡಿಸಿದ್ದರೂ ಇದರ ಪ್ರಯೋಜನವಾಗಿಲ್ಲ ಎಂದರು. ಕೊರೊನಾ ನಂತರ ನಿರಂತರ ಬೆಲೆ ಏರಿಕೆಗಳಿಂದ ವ್ಯಾಪಾರ…
ಬೆಂಗಳೂರು: ಬಜರಂಗ ದಳ ಬ್ಯಾನ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆಗೆ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್ ಕೊಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಅನೇಕ ಕಡೆ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಒದಗಿದೆ. ಪಂಚಾಯತ್ ಸಚಿವ ಸ್ನೇಹಿತ ಪ್ರಿಯಾಂಕ್ ಖರ್ಗೆ ಬಜರಂಗದಳ ನಿಷೇಧಿಸುವ ತವಕವನ್ನು ಕೈಬಿಟ್ಟು ರಾಜ್ಯದ ಜನತೆಗೆ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಲೆಂಬುದೇ ಆಗ್ರಹ ಎಂದು ಕೋರಿದ್ದಾರೆ. ಇದೆ ವೇಳೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಕಳುಹಿಸಬೇಕಾಗುತ್ತದೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಈಗ ಟ್ವೀಟ್ ಮೂಲಕ ಸೂಲಿಬೆಲೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಎಂ.ಬಿ ಪಾಟೀಲ್ ನುಡಿ ಅಚ್ಚರಿಯೆನಿಸಿದೆ. ಸೂಲಿಬೆಲೆಯನ್ನು ಜೈಲಿಗಟ್ಟಲು ಸೂಲಿಬೆಲೆ ಭಯೋತ್ಪಾದಕರಲ್ಲ ಬದಲಾಗಿ ರಾಷ್ಟ್ರೀಯವಾದಿಯೊಬ್ಬನನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಒಡಿಶಾದಲ್ಲಿ ಸಿಲುಕಿದ್ದ ರಾಜ್ಯದ 17 ಮಂದಿ ಜಾನಪದ ಕಲಾವಿದರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಚಿವರು, ಒಡಿಶಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರು ಸುರಕ್ಷಿತವಾಗಿದ್ದಾರೆ ಎಂದರು. ಜಾನಪದ ಕಲಾವಿದರು ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾರದೇ ಒಡಿಶಾದ ಪುರಿಯಲ್ಲಿ ಅತಂತ್ರ ಸ್ಥಿತಿಯಲ್ಲಿದ್ದರು. ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೊಲ್ಕತ್ತಾದ ಹೌರಾದಲ್ಲಿ ಉಳಿದಿದ್ದ 32 ಕ್ರೀಡಾಪಟುಗಳು ರವಿವಾರ ಬೆಳಗ್ಗೆ ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮೊದಲ ಹೋರಾಟ ರೂಪಿಸಿದೆ. ಇಂದು ಮತ್ತು ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ವಿದ್ಯುತ್ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ ಪ್ರೋತ್ಸಾಹ ಧನ ಕಡಿತ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂಬ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ಗೋವು ಕಳ್ಳ ಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿಖಾನೆ ತಡೆಗಟ್ಟಲು ಕಾನೂನು ತರಲಾಗಿದೆ. ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೇ ಬಲ ತುಂಬಿದ್ದೇವೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಯೋಚಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ಸಲಹೆ ನೀಡುವ ಅವಶ್ಯಕತೆಯಿದೆ,” ಎಂದಿದ್ದಾರೆ. ಭಾರತೀಯರಾದ ನಮಗೆ ಗೋವಿನೊಂದಿಗೆ ಭಾವನಾತ್ಮಕ ಸಂಬಂಧವಿದೆ. ತಾಯಿ ಸ್ಥಾನದಲ್ಲಿ ಪೂಜಿಸುಧಿತ್ತೇವೆ. ಸಚಿವ ವೆಂಕಟೇಶ್ ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ? ಗೋಹತ್ಯೆ ನಿಷೇಧವನ್ನು ಪ್ರಥಮವಾಗಿ ಪ್ರತಿಪಾದಿಸಿದ್ದು ಗಾಂಧೀಜಿ. ಅವರು ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವು ರಾಜ್ಯಗಳಲ್ಲಿ ಕಾನೂನಾಗಿ ತರಲಾಗಿದೆ,” ಎಂದಿದ್ದಾರೆ.…