ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಅಭಿವೃದ್ಧಿಯೇ ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಗರಂ ಆದ್ರು. ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ, ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದರು.
Author: Prajatv Kannada
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಬಂದ ಬಳಿಕ ಸಿದ್ದರಾಮಯ್ಯನವರು ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿ.ಪಂ ಸಭಾಂಗಣದಲ್ಲಿ ಸಿಎಂ ಸಭೆ ನಡೆಯಲಿದ್ದು ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷ ಸಹ (2023-24 ನೆ ಸಾಲಿನ) ಸಾರ್ಥಕ ಫೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಇಂದು ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭಾಗವಹಿಸಿದ್ದರು. ಬಸವನಗುಡಿಯ ಎನ್ ಆರ್. ಕಾಲೋನಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಇಂದು 200 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಈ ವೇಳೆ ವಿಸ್ತಾರ ಏರ್ ಲೈನ್ಸ್ ಚೇರ್ಮನ್ ಆಗಿರುವ ಭಾಸ್ಕರ್ ಭಟ್ , ವಿಧಾನಪರಿಷತ್ ಪರಿಷತ್ ಸದಸ್ಯ ಟಿ.ಎ.ಶರವಣ ಚೆಕ್ ವಿತರಿಸಿದರು. ಹಾಗೆ ಇವರನ್ನು ಸಾರ್ಥಕ ಫೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿವೇತನ (Scholarship), ವಿದ್ಯಾರ್ಥಿಗಳ ಜೀವನದ ಒಂದು ಅತ್ಯಮೂಲ್ಯ ನಿಧಿ ಎನ್ನಬಹುದು. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಥವಾ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ (Students) ರಾಜ್ಯ ಸರ್ಕಾರ, ಅನೇಕ ಇಲಾಖೆಗಳು ಮತ್ತು ನಿಗಮಗಳು, ದಾನಿಗಳು, ಯಾವುದಾದರೂ ಫೌಂಡೇಶನ್ ಹೀಗೆ…
ಬೆಂಗಳೂರು: ಇಂದು ಬೆಳಗ್ಗೆ 11 ಗಂಟೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಶಾಸಕರ ಸಭೆ ಕರೆದಿದ್ದಾರೆ. ಮಳೆಯಿಂದ ಮುಂಜಾಗ್ರತ ಕ್ರಮಗಳು, ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳು ಭಾಗಿಯಾಗಲಿದ್ದಾರೆ. ಸರ್ವ ಪಕ್ಷದ ನಾಯಕರುಗಳಿಂದ ಸಲಹೆ ಮತ್ತು ಅಭಿಪ್ರಾಯಗಳನ್ನ ಸಂಗ್ರಹಿಸಲಾಗುತ್ತಿದೆ. ಸಭೆಯಲ್ಲಿ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿಯೂ ಚರ್ಚೆ ಸಾಧ್ಯತೆ.
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಗೆ ಸಮಾನ ಮನಸ್ಕರ ವೇದಿಕೆ ಸೇರಿದಂತೆ ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಡ ಹೆಚ್ಚಾಗಿದೆ. ಬೇರೆ ಬೇರೆ ಸಂಘಟನೆಗಳಿಂದಲೂ ಕಾಯ್ದೆ ರದ್ದತಿಗೆ ತೆರೆಮರೆ ಒತ್ತಡವಿದ್ದು ಅದರಂತೆಯೇ ಕಾಂಗ್ರೆಸ್ ಸರ್ಕಾರ ಕಾಯ್ದೆ ವಾಪಸಾತಿಗೆ ಒಲವು ತೋರಿದೆ. ಕಾನೂನು ಇಲಾಖೆಯಿಂದ ಮಾಹಿತಿ ಪಡೆಯಲಿರುವ ಸರ್ಕಾರ, ಅಗತ್ಯವಿದ್ದರೆ ಸಂಪುಟ ಉಪಸಮಿತಿ ರಚಿಸಿ ವರದಿ ಪಡೆಯುವ ಸಾಧ್ಯತೆ ಇದೆ. ಆ ಬಳಿಕ ಸಂಪುಟ ಸಭೆಯಲ್ಲಿಟ್ಟು ಅಂತಿಮ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯಾಗಿದ್ದು ಹೊಸ, ಹೊಸ ಯೋಜನೆಗಳು ಜಾರಿಯಾಗಿವೆ. ಇದರ ನಡುವೆ ಈ ಹಿಂದೆ ಬಿಜೆಪಿ ಸರ್ಕಾರ(BJP Government) ಜಾರಿ ಮಾಡಿದ್ದ ಕೆಲ ಯೋಜನೆ, ಆದೇಶ, ಕಾನೂನುಗಳಿಗೆ ಕತ್ತರಿ ಹಾಕಲು ನೂತನ ಕಾಂಗ್ರೆಸ್ ಸರ್ಕಾರ( Congress Government) ಸಜ್ಜಾಗ್ತಿದೆ. ಅಲ್ಲದೆ ಗೋಹತ್ಯೆ ನಿಷೇಧ ಕಾಯ್ದೆ(Cattle slaughter) ರದ್ದು ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್(Minister Venkatesh) ಹೇಳಿದ್ದಾರೆ. ಅಷ್ಟೇ ಅಲ್ಲ ಕೋಣ, ಎಮ್ಮೆ ಕಡಿದ್ರೆ, ಆಕಳನ್ನ ಯಾಕೆ ಕಡಿಯಬಾರ್ದು ಅಂತಾ…
ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್ನಲ್ಲಿ ದಾವಣಗೆರೆಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ದಾವಣಗೆರೆ ಜಿ.ಪಂ ಸಭಾಂಗಣದಲ್ಲಿ ಸಿಎಂ ಸಭೆ ನಡೆಯಲಿದ್ದು ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ಬಳಿಕ ವಿಶೇಷ ಅಧಿಕಾರಿ ವಿಜಯಕುಮಾರ್ ಪುತ್ರಿ ಮದುವೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಗ್ಯಾರಂಟಿಗಳ ಜಾರಿ ಸವಾಲು ಮುಗಿದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಉಸ್ತುವಾರಿ ಹಂಚಿಕೆ ಕಸರತ್ತು ಕೈಗೆತ್ತಿಕೊಂಡಿದ್ದಾರೆ. ಇಂದು ಸಚಿವರಿಗೆ ಉಸ್ತುವಾರಿ ಹಂಚಿಕೆ ಸಂಬಂಧ ಅಧಿಕೃತ ಪಟ್ಟಿ ಹೊರಬೀಳುವ ನಿರೀಕ್ಷೆಯಿದೆ. ಸಂಪುಟದಲ್ಲಿ9 ಜಿಲ್ಲೆಗಳಿಗೆ ಪ್ರಾತಿನಿಧ್ಯವಿಲ್ಲ. ಆದರೆ, ಬೆಳಗಾವಿ, ಬೆಂಗಳೂರು, ಮೈಸೂರು, ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳನ್ನು ಹೆಚ್ಚು ಸಚಿವರು ಪ್ರತಿನಿಧಿಸುತ್ತಿದ್ದು, ಎಲ್ಲರೂ ಸ್ವಂತ ಜಿಲ್ಲೆಯ ಉಸ್ತುವಾರಿ ಬಯಸಿದ್ದಾರೆ. ಹಾಗಾಗಿ, ಈ ಪಟ್ಟಿ ಅಂತಿಮಗೊಳಿಸುವುದೂ ಸಿಎಂಗೆ ಸ್ವಲ್ಪಮಟ್ಟಿಗೆ ಇಕ್ಕಟ್ಟಿನ ಸಂದರ್ಭ ಸೃಷ್ಟಿಸಿದೆ. ಯಾವ ಯಾವ ಜಿಲ್ಲೆಗೆ ಯಾರು ಪಟ್ಟು? ತುಮಕೂರು ಜಿಲ್ಲೆಉಸ್ತುವಾರಿಗೆ ಡಾ.ಜಿ. ಪರಮೇಶ್ವರ್ ಮತ್ತು ರಾಜಣ್ಣ ಇಬ್ಬರೂ ಪಟ್ಟು ಹಿಡಿದಿದ್ದರೆ, ಬೆಳಗಾವಿ ಜಿಲ್ಲೆ ಮೇಲೆ ಹಿಡಿತ ಬಿಟ್ಟುಕೊಡಲು ಸತೀಶ್ ಜಾರಕಿಹೊಳಿ ಒಪ್ಪುವ ಸಾಧ್ಯತೆ ಇಲ್ಲ. ಬೆಂಗಳೂರು ನಗರದ ಉಸ್ತುವಾರಿಯನ್ನು ರಾಮಲಿಂಗಾರೆಡ್ಡಿ, ಕೆ.ಜೆ. ಜಾಜ್‌ರ್, ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ನಾಲ್ವರೂ ಬಯಸಿದ್ದಾರೆ. ವಿಜಯಪುರ ಉಸ್ತುವಾರಿಗಾಗಿ ಎಂ.ಬಿ. ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಪ್ರಯತ್ನ ನಡೆಸಿದ್ದಾರೆ. ಕರಡು…
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರು ಅವಿವ ಬಿಡಪ ಅವರ ಜೊತೆ ಸಪ್ತಪದಿ ತುಳಿದಿದ್ದಾರೆ. ಅವಿವ ಬಿಡಪ ಅವರಿಗೆ ಮಾಂಗಲ್ಯ ಧಾರಣೆ ಮಾಡುವ ವಿಡಿಯೊ ಇದೀಗ ವೈರಲ್ ಆಗಿದೆ. ಅಂಬರೀಷ್ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್ ದೀಪಗಳಿಂದ ಇಡೀ ಮನೆ ಅಲಂಕಾರಗೊಂಡಿದೆ. ಕುಟುಂಬದವರು, ಆಪ್ತರು ಹಾಗೂ ಗಣ್ಯರ ಸಮ್ಮುಖದಲ್ಲಿ ಮದುವೆ ನೆರವೇರಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ನಾಲ್ಕು ವರ್ಷಗಳಿಂದ ಅಭಿಷೇಕ್…
ಸಾಕಷ್ಟು ವಿವಾದದ ಮೂಲಕವೇ ಸದ್ದು ಮಾಡುತ್ತಿರುವ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ಸದ್ಯದಲ್ಲೇ ಬಿಡುಗಡೆ ಆಗಲಿದೆ. ರಿಲೀಸ್ಗೂ ಮುನ್ನವೇ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಟಾಲಿವುಡ್ ಅಂಗಳದಲ್ಲಿ ಸಖತ್ ಸದ್ದು ಮಾಡುತ್ತಿದೆ. ಓಂ ರಾವುತ್ ನಿರ್ದೇಶಿಸಿದ ‘ಆದಿಪುರುಷ್’ ಸಿನಿಮಾ ಮಹಾಕಾವ್ಯ ರಾಮಾಯಣ ಆಧರಿಸಿದ ಪೌರಾಣಿಕ ನಾಟಕವಾಗಿದ್ದು, ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ, ಸನ್ನಿ ಸಿಂಗ್ ಲಕ್ಷ್ಮಣನಾಗಿ ಮತ್ತು ಸೈಫ್ ಅಲಿ ಖಾನ್ ರಾವಣನಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್ ಜೊತೆಗೆ ಜೈ ಶ್ರೀರಾಮ್ ಎಂಬ ಲಿರಿಕಲ್ ಸಾಂಗ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 500 ಕೋಟಿ ರೂಪಾಯಿಗಳ ಬೃಹತ್ ಬಜೆಟ್ನಲ್ಲಿ ತಯಾರಾಗಿರುವ ಆದಿ ಪುರುಷ ಸಿನಿಮಾ ರಿಲೀಸ್ ಗೂ ಮುನ್ನವೇ 432 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಹೀಗಾಗಿ ಸಿನಿಮಾ ರಿಲೀಸ್ಗೂ ಮುನ್ನವೇ ಶೇಕಡ 85 ರಷ್ಟು ಬಜೆಟ್ ವಸೂಲಿ ಮಾಡಿದೆ ಎನ್ನಲಾಗಿದೆ. ಆದಿ ಪುರುಷ್ ಸಿನಿಮಾ ಸೌತ್ ಥಿಯೇಟ್ರಿಕಲ್ ರೈಟ್ಸ್ ಮೂಲಕ ಈ ಸಿನಿಮಾ ಸುಮಾರು…
ಅಶ್ವಿನಿ ನಕ್ಷತ್ರ ಧಾರವಾಹಿ ಮೂಲಕ ಖ್ಯಾತಿ ಘಳಿಸಿ ಬಳಿಕ ಒಂದಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿ ಬಿಗ್ ಮಾಸ್ ಮೂಲಕ ಮನೆ ಮಾತದ ನಟ ಜೆಕೆ ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಮಾಡೆಲಿಂಗ್ ಹಾಗೂ ಕಿರುತೆರೆಯಲ್ಲಿ ಬ್ಯುಸಿಯಾಗಿರುವ ಜೆಕೆ ಇದೀಗ ಕನ್ನಡ ಚಿತ್ರರಂಗಕ್ಕೆ ಗುಡ್ ಬಾಯ್ ಹೇಳಲು ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ. ‘ಅಶ್ವಿನಿ ನಕ್ಷತ್ರ’ ಧಾರವಾಹಿ ಸಮಯದಲ್ಲೇ ಎರಡು ದೋಣೆಯ ಮೇಲೆ ಕಾಲಿಡುವುದು ಸೂಕ್ತವಲ್ಲ ಎನಿಸಿ ಕೆಲಸ ಬಿಟ್ಟು ನಟನೆಯನ್ನು ಪೂರ್ಣ ವೃತ್ತಿಯನ್ನಾಗಿ ಮಾಡಿಕೊಂಡೆ. ನನ್ನ ಮೊದಲ ಸೀರಿಯಲ್‌ನಿಂದಲೇ ಜನ ಪ್ರೀತಿಸಲು ಶುರು ಮಾಡಿದ್ದರು. ನನ್ನ ನಟನೆಯನ್ನ ಒಪ್ಪಿಕೊಂಡರು. ನಾನು ಕನ್ನಡ ಭಾಷೆಯನ್ನು ಬಹುವಾಗಿ ಪ್ರೀತಿಸುತ್ತೇನೆ, ಆದರೆ ಕೆಲವರಿಗೆ ನಾನಿಲ್ಲಿ ಇರುವುದು ಇಷ್ಟವಿಲ್ಲ ಹಾಗಾಗಿ ನಾನು ಹೋಗುತ್ತಿದ್ದೇನೆ ಎಂದಿದ್ದಾರೆ. ಹಿಂದಿ ಧಾರಾವಾಹಿ ಮಾಡುತ್ತ, ಒಳ್ಳೆಯ ಹೆಸರು ಗಳಿಸಿದ್ದೆ. ಹಿಂದಿ ಸಿನಿಮಾ ಒಂದರ ಹಿಂದೆ ಮತ್ತೊಂದು ಅವಕಾಶ ಸಹ ನನಗೆ ದೊರಕಿತ್ತು ಇನ್ನೇನು ಚಿತ್ರೀಕರಣ ಪ್ರಾರಂಭವಾಗಬೇಕು ಅನ್ನೋವಷ್ಟರಲ್ಲಿ ಆ ಅವಕಾಶವನ್ನ ತಪ್ಪಿದ್ದರು. ನನಗೇ ನೇರವಾಗಿ ಸವಾಲು ಹಾಕಿ…