ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿಯವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಒಡಿಶಾ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಯ್ಯಪ್ಪನಹಳ್ಳಿ SMVTನಿಂದ 994 ಮಂದಿ ರಿಸರ್ವ್ಡ್ ಪ್ಯಾಸೆಂಜರ್ಗಳು, 300 ಅನ್ ರಿಸರ್ವ್ಡ್ ಪ್ಯಾಸೆಂಜರ್ ಗಳು ಸೇರಿ ಒಟ್ಟು 1294 ಮಂದಿ ಪ್ರಯಾಣ ಮಾಡಿದ್ದರು. ಇದೀಗ ಅಪಘಾತ ಹಿನ್ನಲೆ ಇಂದಿನ ರೈಲುಗಳ ಪ್ರಯಾಣವನ್ನ ರದ್ದು ಮಾಡಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
Author: Prajatv Kannada
ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಒಡಿಶಾದಲ್ಲಿ ಏಕಕಾಲಕ್ಕೆ ಒಂದಲ್ಲ, ಎರಡಲ್ಲ, ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿದೆ. ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಏಕಕಾಲಕ್ಕೆ ಎರಡು ಪ್ಯಾಸೆಂಜರ್ ಹಾಗೂ ಒಂದು ಗೂಡ್ಸ್ ರೈಲುಗಳ ಮಧ್ಯೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಮೊದಲು ಕೋರಮಂಡಲ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಹಳಿತಪ್ಪಿದ ಬೋಗಿಗಳು ಪಕ್ಕದ ಹಳಿಗಳ ಮೇಲೆ ಬಿದ್ದಿದೆ. ಆಗ, ಮತ್ತೊಂದು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ಡಿಕ್ಕಿಯಾಗಿವೆ. ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಲಾಗಿದೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.…
ನವದೆಹಲಿ:ದೆಹಲಿ ಮದ್ಯದ ಹಗರಣಕ್ಕೆ (Delhi liquor scam) ಸಂಬಂಧಿಸಿದಂತೆ ಫೆಬ್ರವರಿಯಿಂದ ಜೈಲಿನಲ್ಲಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗುವುದಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್ ನಿಂದ ಬಳಲುತ್ತಿರುವ ಪತ್ನಿಯನ್ನು ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ (Delhi High Court) ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರಿಗೆ ಅನುಮತಿ ನೀಡಿದೆ. ಯಾವುದೇ ಗ್ಯಾಜೆಟ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಮಾಧ್ಯಮದೊಂದಿಗೆ ಯಾವುದೇ ಸಂವಾದ ನಡೆಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ, ಎಎಪಿ ನಾಯಕ, ತಮ್ಮ ಪತ್ನಿಯ ಆರೋಗ್ಯವನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿದ್ದರು.. ಆರ್ಥಿಕ ಅಪರಾಧಗಳ ತನಿಖೆ ನಡೆಸುವ ಸಂಸ್ಥೆಯಾದ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ. ಏತನ್ಮಧ್ಯೆ, ಎಎಪಿ ನಾಯಕನ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಇಂದು ಕಾಯ್ದಿರಿಸಿದೆ
ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 280 ಮಂದಿ ಬಲಿಯಾಗಿದ್ದು, ಗಾಯಗೊಂಡ ವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ (Train Accident) ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೌದು.. ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು. ಈ ವೇಳೆ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈನ್‌ನಲ್ಲಿ ಸಂಜೆ 7:30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ (ಸಂಖ್ಯೆ: 12841) (Coromandel Express) ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿದೆ. ಇದರಿಂದಾಗಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ 3ನೇ ರೈಲು ಮಾರ್ಗದ ಮೇಲೆ ಬಿದ್ದಿವೆ.
ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ನಕಲಿ ನೋಟು (Fake Notes)ಬದಲಾಯಿಸೋ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ಆರ್‌ಬಿಐ(RBI) 2 ಸಾವಿರ ನೋಟ್ ಬ್ಯಾನ್ ಮಾಡಿದ್ದನ್ನೇ ಅಸ್ತ್ರವಾಗಿಸಿಕೊಂಡ ವಂಚಕರು. ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಲು ಮುಂದಾಗಿದ್ದರು. ಅದರಂತೆ ಆರೋಪಿಗಳಾದ ಮಹಾರಾಷ್ಟ್ರದ ಓರ್ವ ಪೊಲೀಸ್(Police) ಸೇರಿ ಮೂವರನ್ನ ಬಂಧಿಸಲಾಗಿದೆ. 500 ರೂ. ಮುಖ ಬೆಲೆಯ 5 ಲಕ್ಷ ನೋಟು ಕೊಟ್ಟು, 2 ಸಾವಿರ ಮುಖ ಬೆಲೆಯ 6 ಲಕ್ಷ ಪಡೆಯರಿ ಎಂದು ಹೇಳಿ, ನಕಲಿ ನೋಟು ತೋರಿಸಿ ಜನರನ್ನ ನಂಬಿಸಿ ಮೋಸ ಮಾಡುತ್ತಿದ್ದರು. ಇದೀಗ ಖದೀಮರನ್ನ ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮೀರ್ ಭೋಸಲೆ ಎಂಬುವವರನ್ನ ಅಥಣಿ ತಾಲೂಕಿನ ಮಂಗಸೂಳಿ ಗ್ರಾಮಕ್ಕೆ ಕರೆಸಿ, 500 ರೂ. ಮುಖ ಬೆಲೆಯ 5 ಲಕ್ಷ ಹಣವನ್ನ ಪಡೆದು ಎಸ್ಕೇಪ್ ಆಗಿದ್ದರು. ಹೌದು 5 ಲಕ್ಷ ರೂಪಾಯಿ ಕೈಗೆ ಸಿಗುತ್ತಿದ್ದಂತೆ ಪೋಲಿಸರು ಬಂದ್ರು, ಎಂದು ಸುಳ್ಳು ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ವಿಚಾರ ಗೊತ್ತಾಗಿ ಅಖಾಡಕ್ಕಿಳಿದಿದ್ದ…
ಇಂದು ವಿದ್ಯಾಸ್ಪಂದನ ಪುಸ್ತಕ ವಿತರಣೆಯ ದಶಮಾನೋತ್ಸವ ಕಾರ್ಯಕ್ರಮ -2023 ಪ್ರಯುಕ್ತ ವಿದ್ಯಾಸ್ಪಂದನ ಸಂಸ್ಥೆಯ ವತಿಯಿಂದ ಮೈಸೂರಿನ ಪರಸಯ್ಯನ ಹುಂಡಿಯಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮೂವತ್ತಕ್ಕೂ ಹೆಚ್ಚು ಮಕ್ಕಳಿಗೆ ನೋಟ್ ಪುಸ್ತಕ, ಪೆನ್ , ಪೆನ್ಸಿಲ್ ಕಿಟ್ , ಊಟದ ತಟ್ಟೆ ಹಾಗೂ ಚಾಪೆಗಳನ್ನು ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಶ್ರೀಧರ್ ಎಂ.ಎ ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ವಿವರಿಸಿ ಶಾಲೆಯ ಶಿಕ್ಷಕರಿಗೆ ಮನೆ ಮನೆ ಭೇಟಿ ನೀಡಿ ದಾಖಲಾತಿ ಹೆಚ್ಚಿಸಬೇಕು ಹಾಗೂ ವಿದ್ಯಾರ್ಥಿಗಳ ಮನೆಗಳಿಗೆ ಶಿಕ್ಷಕರು ಬೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣದ ಅರಿವು ಮೂಡಿಸಿ ವಿದ್ಯಾರ್ಥಿಗಳಿಗೆ ಹೆಚ್ಚು ಓದಲು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ತುಮಕೂರು: ಇನ್ನೆರಡು ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಘೋಷಣೆ ಆಗಲಿದೆ. ಯಾರ ಮೇಲೆ ವಿಶ್ವಾಸ ಇದೆಯೋ ಅಂತಹ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಿಗಲಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ (Dr G Parameshwara) ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನಿಭಾಯಿಸುತ್ತೇನೆ ಎಂದರು. ಹಾಲಿನ ಪ್ರೋತ್ಸಾಹಧನ ಕಡಿಮೆ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಕೆಲವು ಒಕ್ಕೂಟಗಳು ಹಾಲಿನ ಪೋತ್ಸಾಹಧನ ಕಡಿಮೆ ಮಾಡಿವೆ. ಆದರೆ ಸರ್ಕಾರ ಕೊಡುವ ಪ್ರೋತ್ಸಾಹಧನ ಕಡಿಮೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದ ಪರಮೇಶ್ವರ್, ಎತ್ತಿನಹೊಳೆ ಯೋಜನೆ 2 ವರ್ಷದಲ್ಲಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು. ಔರಾದ್ಕರ್ ವರದಿ ಬಗ್ಗೆ ಪರಿಶೀಲನೆ ಮಾಡಲಾಗುವುದು. ಪೊಲೀಸರಿಗೆ ಹೆಚ್ಚು ದಂಡ ವಸೂಲಿಗೆ ಯಾವ ಟಾರ್ಗೆಟ್ ನೀಡಿಲ್ಲ ಎಂದರು.
ಮಂಗಳೂರು: ಫಲಿತಾಂಶ ಬಂದ 24 ಗಂಟೆ ಒಳಗಡೆ ಕಾಂಗ್ರೆಸ್ ಗ್ಯಾರಂಟಿ (Congress Guarantee) ಘೋಷಣೆ ಮಾಡೋದಾಗಿ ಹೇಳಿ ಇದೀಗ ತಡವಾಗಿ ಆದರೂ ಘೋಷಣೆ ಮಾಡಿರೋದನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು ಗ್ಯಾರಂಟಿ ಈಡೇರಿಸಲು ಕಾಂಗ್ರೆಸ್ ಸರ್ಕಾರ ಹಣದ ಕ್ರೋಢೀಕರಣ ಹೇಗೆ ಮಾಡುತ್ತೆ? ಈ ಗ್ಯಾರಂಟಿ ಎಷ್ಟು ವರ್ಷ ಇರುತ್ತೆ? ಎನ್ನುವುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ. ನಿರುದ್ಯೋಗ ಭತ್ಯೆಗೆ ಮೊದಲು ಮಾನದಂಡ ಹೇಳದೆ ಈಗ ಮಾನದಂಡ ಹಾಕಿದ್ದಾರೆ. ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನು? ರಾಜ್ಯದ ಬೊಕ್ಕಸದ ಹಣದ ಗತಿ ಏನು? ಯಾರಿಗೂ ಹೊರೆ ಆಗದಂತೆ ಹೇಗೆ ನಿಯಂತ್ರಿಸುತ್ತಾರೆ? ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಸ್ಥಿತಿ ಕುಸಿಯಬಾರದು. ಅವರು ಆದಷ್ಟು ಬೇಗ ಈ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದಿದ್ದಾರೆ.
ಬೀದರ್ (ಜೂ.03): ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 230ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಕಹಿ ಸುದ್ದಿ ಕೇಳಿ ಮನಸ್ಸು ತುಂಬಾ ಭಾರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗದಿರಲಿ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂದೇಶ ಹಂಚಿಕೊಂಡಿರುವ ಅವರು, ದುರಂತಕ್ಕೆ ಸಿಲುಕಿದ ರೈಲಿನಲ್ಲಿ ಮೃತಪಟ್ಟ ಪ್ರಯಾಣಿಕರ ಕುಟುಂಬಗಳಿಗೆ ಸಂಬಂಧಿಸಿದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ನೀಡಲಿ. ಗಾಯಾಳುಗಳಿಗೆ ಸರ್ಕಾರದಿಂದಲೇ ಉಚಿತ ಮತ್ತು ಅತ್ಯುತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆಯಾಗಲಿ. ಘಟನೆಯಿಂದ ಧೈರ್ಯ ಕಳೆದುಕೊಂಡ ಪ್ರತಿಯೊಬ್ಬರಿಗೂ ಧೈರ್ಯ ತುಂಬುವ ಕೆಲಸವಾಗಲಿ ಎಂದಿದ್ದಾರೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕನ್ನಡಿಗರನ್ನು ರಕ್ಷಿಸಿ ರಾಜ್ಯಕ್ಕೆ ಕರೆ ತರುವ ಕೆಲಸ ಮತ್ತು…
ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಷರತ್ತುಗಳನ್ನು ವಿಧಿಸುವುದಾಗಿ ಹೇಳಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿಯೊಬ್ಬರ ಅಕೌಂಟ್ಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿದ್ದರು, ಕೊಟ್ಟಿದ್ದಾರಾ? ಎಂದು ವಿಪಕ್ಷಗಳು ಹಾಗೂ ಕಾರ್ಯಕರ್ತರು ಪ್ರಶ್ನಿಸಲು ಆರಂಭಿಸಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A Narayanaswamy) , ಸಿದ್ಧರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಅವರು ನೀಡಿದ ‘ಗ್ಯಾರಂಟಿ’ ಹೇಳಿಕೆಗಳು ಎಲ್ಲರ ಬಳಿ ಇವೆ. 15 ಲಕ್ಷ ಬಗ್ಗೆ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ್ದರೆ ಸಾಕ್ಷಿ ಕೊಡಿ, ಕ್ಷಮೆ ಕೇಳುತ್ತೇನೆ. 15 ಲಕ್ಷ ರೂ. ಕೊಡುತ್ತೇವೆ ಎಂದು ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಟೀಕಿಸಿದ ನಾರಾಯಣಸ್ವಾಮಿ, ರಾಜ್ಯದ ಜನರನ್ನು ಭಿಕ್ಷಾಟನೆ ಕೂಪಕ್ಕೆ ತಳ್ಳುವ ವ್ಯವಸ್ಥೆ ನಡೆದಿದೆ ಎಂದು ಆರೋಪಿಸಿದ್ದಾರೆ. ಜನರನ್ನು ಭಿಕ್ಷಾಟನೆ ಸರದಿಗೆ ನಿಲ್ಲಿಸಿ ಅಧಿಕಾರ ಪಡೆಯಲು ಷಡ್ಯಂತ್ರ ನಡೆಸಿದೆ. ಸ್ವತಂತ್ರ್ಯ ಹೋರಾಟಗಾರರ ಕನಸು ನುಚ್ಚುನೂರು ಮಾಡಿ, ಕಾಂಗ್ರೆಸ್ ಸಿದ್ಧಾಂತ ಗಾಳಿಗೆ ತೂರಿ ಮತದಾರರಿಗೆ ಆಮಿಷವೊಡ್ಡಿದೆ.…