Author: Prajatv Kannada

ಮಂಗಳೂರು: ಡ್ರೋನ್ (Drone) ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ (Central Government) ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು. ಡ್ರೋನ್‌ ಮೂಲಕ ಜಾಗದ ಅಳತೆ ಮಾಡಿ, ಹಕ್ಕುಪತ್ರ ನೀಡುವ ಕ್ರಮ ಮೊದಲಾದ ಅನೇಕ ಹೊಸ ಪದ್ಧತಿಗಳು ಸದ್ಯದಲ್ಲೆ ಬಳಕೆಗೆ ಬರಲಿವೆ. ದೇಶದ ಭವ್ಯ ಇತಿಹಾಸ, ಪರಂಪರೆ, ಸಂಸ್ಕೃತಿ ಹಿನ್ನೆಲೆಯಲ್ಲಿ ವರ್ತಮಾನದ ಸ್ಥಿತಿಯನ್ನು ಗಮನಿಸಿ ರಾಷ್ಟ್ರದ ಉಜ್ವಲ ಭವಿಷ್ಯ ರೂಪಿಸಬೇಕಾಗಿದೆ ಎಂದರು. ಧರ್ಮಸ್ಥಳದ ಬೀಡಿನಲ್ಲಿ ಶುಕ್ರವಾರ ‘ರಾಜ್ಯಸಭೆಯಲ್ಲಿ ರಾಜರ್ಷಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ರಾಜ್ಯಸಭೆ ಸದಸ್ಯನಾಗಿ ಸಂಸತ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಿ, ಪ್ರಶ್ನೆ ಕೇಳಿ ಮಾಹಿತಿ ಕಲೆ ಹಾಕಿದ್ದೇನೆ. ನನ್ನನ್ನು ಈಗಾಗಲೇ ಮೂರು ಪ್ರಮುಖ ಸಮಿತಿಗಳ ಸದಸ್ಯನಾಗಿ ನೇಮಕ ಮಾಡಿದ್ದಾರೆ. ಎಲ್ಲ ಸಂದರ್ಭಗಳನ್ನು ಸಚಿತ್ರವಾಗಿ ಬಿಡುಗಡೆಯಾದ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದು ತಿಳಿಸಿದರು. ಪುಸ್ತಕವು ಎಲ್ಲಾ ಚಟುವಟಿಕೆಗಳ ವಿವರವಾದ ಮಾಹಿತಿಯನ್ನು ಹೊಂದಿದೆ. ಮುಂಬರುವ ದಿನಗಳಲ್ಲಿ ನೂತನ ಸಂಸತ್ ಭವನದಲ್ಲಿ ನಡೆಯುವ…

Read More

ಹುಬ್ಬಳ್ಳಿ; ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಅದಿಕಾರಕ್ಕೆ ಬಂದ 15 ದಿನಗಳಲ್ಲಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಸರ್ಕಾರ ದೇಶಕ್ಕೆ ಮಾದರಿಯಾಗಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಆನಂದಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ್ದು 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂ., ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಪದವಿಧರರಿಗೆ ನಿರುದ್ಯೋಗ ಭತ್ಯೆ ಯೋಜನೆ ಜಾರಿಗೊಳಿಸುವ ಮೂಲಕ ಬಡವರ ಕೈಹಿಡಿದಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಈ ಹಿಂದಿನ ಡಬ್ಬಲ್ ಎಂಜಿನ್ ಸರ್ಕಾರದ ನೀತಿಗಳಿಂದ ಜನಸಾಮಾನ್ಯರ ಬದುಕು ಹೈರಾಣಾಗಿತ್ತು. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದರು. ನೋಟ್‍ಬ್ಯಾನ್, ಜಿಎಸ್‍ಟಿ, ಕೊರೋನ ಲಾಕ್‍ಡೌನ್‍ನಿಂದ ಜನರ ಬದುಕು ತಲ್ಲಣಗೊಂಡಿತ್ತು. ಪ್ರಸ್ತುತ ಈ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅವರ ಬದುಕಿಗೆ ಚೈತನ್ಯ ತುಂಬಿದೆ. ಯೋಜನೆಗಳು ಜನಸಾಮಾನ್ಯರಿಗೆ ಆಶಾದಾಯಕವಾಗವೆ. ಈ…

Read More

ಚಿಕ್ಕಮಗಳೂರು: ಒಡಿಸ್ಸಾದಲ್ಲಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ರೈಲಿನಲ್ಲಿದ್ದ ಕಳಸದ 110 ಮಂದಿ ಪ್ರಯಾಣಿಕರು ಸೇಫ್​ ಆಗಿದ್ದಾರೆಂದು, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಯಾತ್ರಿಕರ ಸಂಬಂಧಿ ಸತೀಶ್ ಜೈನ್ ಹೇಳಿದ್ದಾರೆ. ‘ನಮ್ಮ ಸಂಬಂಧಿಕರು 9 ಜನ ಯಾತ್ರೆಗೆ ತೆರಳಿದ್ರು. ಅಫಘಾತದ ವಿಚಾರ ತಿಳಿದು ನಮಗೆ ಗಾಬಾರಿಯಾಗಿತ್ತು. ಕರೆ ಮಾಡಿ ಮಾತನಾಡಿದಾಗ ಕ್ಷೇಮವಾಗಿರುವ ವಿಚಾರ ತಿಳಿದಾಗ ಸ್ವಲ್ಪ ಸಮಾಧಾನವಾಯ್ತು ಎಂದರು.

Read More

ಧಾರವಾಡ: ಓಡಿಸ್ಸಾ ರೈಲು ದುರಂತ ಹಿನ್ನೆಲೆ, ಧಾರವಾಡದ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ರದ್ದು ಮಾಡಲಾಗಿದೆ. ಹೌದು ನಗರದ ಕಲ್ಯಾಣ ನಗರದಲ್ಲಿ ನಿರ್ಮಾಣಗೊಂಡಿರುವ ಸೇತುವೆ ರೈಲ್ವೆ ಮೇಲ್ಸೇತುವೆ ಉದ್ಘಾಟನೆಯನ್ನ ಇಂದು(ಜೂ.3)ಸಂಜೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಉದ್ಘಾಟಿಸಿಬೇಕಿತ್ತು. ಜೊತೆಗೆ ಕಾರ್ಯಕ್ರಮ ಹಿನ್ನೆಲೆ ತಯಾರಿ ಕೂಡ ಮಾಡಕೊಳ್ಳಲಾಗಿತ್ತು. ಆದರೆ ರೈಲು ದುರಂತ ಹಿನ್ನೆಲೆ ಇಡೀ ಕಾರ್ಯಕ್ರಮವನ್ನ ರದ್ದು ಮಾಡಲಾಗಿದೆ.

Read More

ರಾಮನಗರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಮಾವಿನತೋಟ ಕಾಯುತ್ತಿದ್ದ ರೈತನ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ರೈತ ಸಾವನ್ನಪ್ಪಿದ್ದಾನೆ. ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದಲ್ಲಿ ಶನಿವಾರ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಕನಕಪುರ ಮೂಲದ ವೀರಭದ್ರಯ್ಯ (52) ಅಸುನೀಗಿದ್ದಾರೆ. ವೀರಭದ್ರಯ್ಯ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ಲೋಕೆಶ್ ಎಂಬುವವರ ಮಾವಿನ ತೋಟ ಕಾಯುತ್ತಿದ್ದರು. ಈ ತೋಟಕ್ಕೆ ಮುಂಜಾನೆ ಅನೆ ದಾಳಿಯಾಗಿದೆ. ರಾಮನಗದ ರೈತರು ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದು, ಇತ್ತೀಚೆಗಷ್ಟೇ ಕಬ್ಬಾಳು ಗ್ರಾಮ ಬಳಿಯೂ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗಿದೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  

Read More

ಮಂಡ್ಯ: ಮನ್ಮುಲ್(Manmul) ರೈತರಿಗೆ ಬಿಗ್ ಶಾಕ್ ಕೊಟ್ಟಿದೆ. ರೈತರಿಂದ(Farmer) ಖರೀದಿಸುವ ಹಾಲಿಗೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಲೀಟರ್ ಗೆ 1 ರೂ. ಕಡಿತ ಮಾಡಿ ಆದೇಶ ಹೊರಡಿಸಿದೆ. ಜೂನ್ 1ರಿಂದಲೇ ಪರಿಷ್ಕೃತ ಆದೇಶ ಜಾರಿ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರಿಷ್ಕೃತ ದರ ಮುಂದುವರಿಯಲಿದೆ. ಮೇ.26ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಜೂ.1 ರಿಂದ ಮುಂದಿನ ಆದೇಶದವರೆಗೆ ಈ ನೂತನ ದರ ಪರಿಷ್ಕರಣೆ ಮುಂದುವರಿಯುತ್ತದೆ ಎಂದು ಮನ್ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ ಪಿ.ಆರ್.ಮಂಜೇಶ್ ಸುತ್ತೋಲೆ ಹೊರಡಿಸಿದ್ದಾರೆ. ಜಿಲ್ಲಾ ಹಾಲು ಒಕ್ಕೂಟವು ಪ್ರತಿದಿನ 9,38,035 ಕೆಜಿ ಹಾಲನ್ನು ಸಂಗ್ರಹಿಸುತ್ತಿದೆ. ಬೇಸಿಗೆ ಕಾಲದಲ್ಲಿ ಹಸಿರು ಮೇವಿನ ಕೊರತೆಯಿಂದ ಉತ್ಪಾದಕರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಸದ್ಯ ನೂತನ ದರದಂತೆ ಸಂಘಗಳಿಗೆ ಶೇ 4.0 ಜಿಡ್ಡು ಮತ್ತು ಶೇ 8.5 ಜಿಡ್ಡೇತರ ಘನಾಂಶಕ್ಕೆ 33.15 ರೂ. ಬದಲು 32.15 ರೂ ಹಾಗೂ ಉತ್ಪಾದಕರಿಗೆ 32.25 ರೂ ಬದಲು 31.25 ರೂ. ನಿಗಧಿಗೊಳಿಸಲಾಗಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಅರಂಭವಾಗಿದ್ದು, ಹಸಿರು ಮೇವಿನ ಲಭ್ಯತೆ ಸುಧಾರಿಸಿದೆ. ಹೀಗಾಗಿ ದರ ಕಡಿತ ಮಾಡಲಾಗಿದೆ ಎಂದು ಮನ್‌ಮುಲ್ ಆಡಳಿತ ಮಂಡಳಿ ದರ ಇಳಿಕೆಗೆ ಸಮರ್ಥನೆ ನೀಡಿದ್ದಾರೆ.

Read More

ಮೈಸೂರು: ಪ್ಯೂಮಾ ಶೋ ರೂಂ ನ ಶೆಟರ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಜ್ವಲ್(20) ಬಂಧಿತ ಆರೋಪಿ.ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ.ಎರಡು ಮೊಬೈಲ್ ಹಾಗೂ 5500/ ರೂ ನಗದು ವಶಪಡಿಸಿಕೊಂಡಿದ್ದಾರೆ.ಷೆಟರ್ ಮುರಿದು ಷೋರೂಂ ನಲ್ಲಿದ್ದ 27 ಸಾವಿರ ನಗದು ಹಾಗೂ 20 ಸಾವಿರ ಮೌಲ್ಯದ ಪಾದರಕ್ಷೆಗಳು,ಕ್ಯಾಪ್ ಹಾಗೂ ಪರ್ಸ್ ಗಳನ್ನ ಮೇ 7 ರಂದು ಪ್ರಜ್ವಲ್ ದೋಚಿ ಪರಾರಿಯಾಗಿದ್ದ. ಪ್ರ ಕರಣ ದಾಖಲಿಸಿಕೊಂಡ ಕುವೆಂಪುನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾ ಗಿದ್ದಾರೆ. ಆರೋಪಿಯು ತನ್ನ ಸಹಚರರಾದ ನಿತಿನ್,ಭಾಷಾ,ಚೇತನ್ ಎಂಬುವರ ಜೊತೆ ಸೇರಿ ಮೈಸೂರು, ಬೆಂಗಳೂರು, ಹೊಸಪೇಟೆ, ಅರಸೀಕೆರೆ ಸೇರಿದಂತೆ ವಿವಿದೆಡೆ ಇದೇ ರೀತಿ ಅಪರಾಧಗಳಲ್ಲಿ ಪಾಲ್ಗೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಡಿಸಿಪಿ ಮುತ್ತುರಾಜ್ ಪ್ರಶಂಸಿಸಿದ್ದಾರೆ.

Read More

ಮೈಸೂರು : ಪಿಎಸ್ಐ ಹಗರಣ, ಬಿಟ್ ಕಾಯಿನ್ ವಿಚಾರ, 40 ಪರ್ಸೆಂಟ್ ವಿಚಾರ ಹಾಗೂಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲರದ ಬಗ್ಗೆ ತನಿಖೆ ಮಾಡಿ ಎಂದು  ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ (Pratap simha)ಒತ್ತಾಯಿಸಿದ್ದಾರೆ.ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ.ಕಾಂಗ್ರೆಸ್ ನವರು ಹೇಳಿದ್ದೆಲ್ಲಾ ಸತ್ಯ.ನೀವು ಸತ್ಯ ಸಂಧರು ಎಂಬುದನ್ನ ಸಾಬೀತು ಮಾಡಿ. ನಮ್ಮ ಪಕ್ಷದಲ್ಲಿ ಬಿಜೆಪಿಯವರೇ ತಪ್ಪು ಮಾಡಿದರೂ ಅವರನ್ನ ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರೊ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ.ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ.ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು.

Read More

ಮೈಸೂರು : ನೂತನ ಸಂಸತ್ ಭವನ ಉದ್ಘಾಟನೆಯಾದ ರೀತಿ ದೇಶದ ಸಂವಿಧಾನವನ್ನೇ ಅಣಕ‌ ಮಾಡಿದಂತಿದೆ. ಕಾರ್ಯಕ್ರಮ ಕೇವಲ ಪ್ರಧಾನಿ‌ ನರೇಂದ್ರ ಮೋದಿ ಅವರ ಪಟ್ಟಾಭಿಷೇಕದಂತಾಗಿದ್ದು ಅಂಬೇಡ್ಕರ್, ರಾಷ್ಟ್ರಪತಿಗೆ ಅಪಮಾನ ಮಾಡಲಾಗಿದೆ ಎಂದು ಎಂಎಲ್ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಜಿಲ್ಲಾ ಪತ್ರಕರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸತ್ತಿನ ಬಗ್ಗೆ ಅಪಾರ ಅಭಿಮಾನ,‌ ನಂಬಿಕೆಯಿಂದ. ಮೇ 28ರಂದು ನಡೆದ ಉದ್ಘಾಟನಾ ಕಾರ್ಯಕ್ರಮ ಸಂವಿಧಾನದ ಅಣಕದಂತಿದೆ. ಇದು ಪ್ರಧಾನಮಂತ್ರಿ ನೇತೃತ್ವದಲ್ಲಿ ಆಗಿದ್ದು‌ ನೋವು ತಂದಿದೆ. ಅಂದು ಅಂಬೇಡ್ಕರ್ ಅವರಿಗೂ ಗೌರವ ಕೊಡಲಿಲ್ಲ. ರಾಷ್ಟ್ರಪತಿ ಗಳನ್ನೂ ಕರೆಯಲಿಲ್ಲ. ಕಾರ್ಯಕ್ರಮ ಕೇವಲ ಮೋದಿ ಪಟ್ಟಾಭಿಷೇಕದಂತಿತ್ತು. ಸಂಸತ್ ಭವನ ಇರಲೇ ಇಲ್ಲವೇನೋ, ಯಾರೂ ದೇಶಕ್ಕೆ ಏನು ಮಾಡಲಿಲ್ಲವೇನೋ, ನಾನಷ್ಟೇ ದೇಶದ ಸಂರಕ್ಷಕ‌ ಎಂದು ಯುವಜನತೆಯಲ್ಲಿ ಭ್ರಮೆ ಬಿತ್ತುವ ಕೆಲಸವನ್ನು ಮೋದಿ ಮಾಡಿದರು. ಇದು ದೇಶದ 140 ಕೋಟಿ ಜನರಿಗೆ ಮಾಡಿದ ಅವಮಾನ ಎಂದು ಕಿಡಿ ಕಾರಿದರು.

Read More

ಮೈಸೂರು: ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಇಂದು ಸಂಜೆ ೬.೩೦ಕ್ಕೆ ಸರಸ್ವತಿಪುರಂ ಕೃಷ್ಣಧಾಮದಲ್ಲಿ ಕೆ.ಆರ್. ಕ್ಷೇತ್ರದ ನೂತನ ಶಾಸಕ ಟಿ.ಎಸ್. ಶ್ರೀವತ್ಸ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಡಿ.ಟಿ. ಪ್ರಕಾಶ್ ತಿಳಿಸಿದರು.ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆ.ಆರ್. ಕ್ಷೇತ್ರದಲ್ಲಿ ಚುನಾವಣೆ ಅಭ್ಯರ್ಥಿ ಘೋಷಿಸುವ ವೇಳೆ ಬದಲಾವಣೆ ತರಬೇಕೆಂದು ಬಿಜೆಪಿಯನ್ನು ಸಂಘ ಆಗ್ರಹಿಸಿತ್ತು. ಅದರಂತೆ ಹೊಸ ಮುಖ ಪ್ರಕಟಿಸಿದಾಗ ಕಾಂಗ್ರೆಸ್ ಗ್ಯಾರೆಂಟಿ ಕಾರ್ಯಕ್ರಮ, ಆಡಳಿತ ವಿರೋಧಿ ಅಲೆ ನಡುವೆ ಅವರನ್ನು ಗೆಲ್ಲಿಸುವಂತೆ ಮಾಡುವುದು ಸವಾಲಿನ ಕೆಲಸವಾಗಿತ್ತು. ಆದರೂ ಎಲ್ಲ ವಿಪ್ರ ಸಂಘಟನೆಗಳು ಒಗ್ಗೂಡಿ ಶ್ರಮಿಸಿ ಅವರ ಗೆಲುವಿಗೆ ಕಾರಣವಾಗಿರುವುದಾಗಿ ತಿಳಿಸಿದರು

Read More