ಬೆಂಗಳೂರು: ಆರ್‌ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನೃಪತುಂಗ ರಸ್ತೆಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಗುರುವಾರ ಪರಿಶೀಲಿಸಿದ್ದಾರೆ. ಹಲವು ಗಂಟೆಗಳ ಶೋಧದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಸಿಗದಿದ್ದರಿಂದ, ಇದೊಂದು ಹುಸಿ ಬಾಂಬ್ ಕರೆ ಎಂಬುದಾಗಿ ಪೊಲೀಸರು ಘೋಷಿಸಿದರು. ನಂತರ, ಕಚೇರಿ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಇನ್ನೂ ಆರ್‌ಬಿಐ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪದಡಿ ವೈಭವ್ ಭಗವಾನ್ ಎಂಬಾತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Author: Prajatv Kannada
ಬೆಂಗಳೂರು: ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ. ಈ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದ ಬಿಜೆಪಿ ಇನ್ನಾದರೂ ಮೌನದಿಂದ ಇರುವುದನ್ನು ಕಲಿಯಬೇಕು ಎಂದಿದ್ದಾರೆ. ರಾಜ್ಯ ಸರಕಾರವು ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರದ ಬಳಿಕ ಮಾತನಾಡಿದ ಅವರು, ಸರಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ವಾರಗಳಲ್ಲಿ ನಮ್ಮ ಇಚ್ಛಾಶಕ್ತಿಯನ್ನು ತೋರಿಸಿದ್ದೇವೆ. ಈ ಐದೂ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯದ ಜನತೆಯ ಸಬಲೀಕರಣ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಕೊಟ್ಟ ಮಾತನ್ನು ಪಾಲಿಸುವುದು ಕಾಂಗ್ರೆಸ್ಸಿಗೆ ಧರ್ಮವಿದ್ದಂತೆ. ಚುನಾವಣೆಗೆ ಮುಂಚೆ ಏನನ್ನು ಹೇಳಿದ್ದೆವೋ ಅದನ್ನೀಗ ಮಾಡಿ ತೋರಿಸಿದ್ದೇವೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ ಜಾರಿಗೆ ಬರಲಿವೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ನೇತೃತ್ವದಲ್ಲಿ ಬೆಂಗಳೂರಿನ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿದೆ. ಬಿಬಿಎಂಪಿ ಕಚೇರಿಯಲ್ಲಿ ಸಭೆ ಜರುಗಿದೆ. ಪ್ರಕೃತಿ ವಿಕೋಪ ತಡೆಗಟ್ಟಲು ಮಾಡಿಕೊಂಡಿರುವ ಕ್ರಮಗಳು, 63 ಉಪ ವಲಯಗಳಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಂಗಳಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು. BESCOM, BDA, BMRCL, KRide, DULT, BMTC, BWSSB ಮತ್ತು ಸಂಚಾರ ಪೋಲಿಸ್ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಡಾ. ಆರ್ ಎಲ್ ದೀಪಕ್, ಡಾ. ತ್ರಿಲೋಕ್ ಚಂದ್ರ, ಪ್ರೀತಿ ಗೆಹ್ಲೋಟ್, ರವೀಂದ್ರ, ರೆಡ್ಡಿ, ಶಂಕರ್ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಂಗಳೂರು: ರಾಜಧಾನಿ ಬೆಂಗಳೂರಿನ ಜಯನಗರದ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆರ್‌ಬಿಐ ಲೇಔಟ್, ಕೊತ್ತನೂರು, ಜೆಪಿ ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವನಗರ, ನಟರಾಜ ಲೇಔಟ್, ನೃಪತುಂಗನಗರ, ಜಂಬೂಸವಾರಿದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ, ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಕೆಂಪಮ್ಮ ಲೇಔಟ್, ಹುಳಿಮಾವು, ಭಗವತಿ ಲೇಔಟ್, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಾಲೇನಹಳ್ಳಿ, ನ್ಯಾನಪ್ಪನಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ 4ನೇ ಹಂತ, ಡಿಸಿ ಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಅನುಗ್ರಹ ಲೇಔಟ್, ವಿಬಿ ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಎಸ್‌ಬಿಐ ಲೇಔಟ್, ರೋಟರಿ ನಗರ, ಜಿಬಿ ಪಾಳ್ಯ, ಕುಡ್ಲು ಸೇರಿ ಹಲವೆಡೆ ಪವರ್ ಕಟ್ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಪ್ರಕರಣಕ್ಕೆ ಅನ್ವಯಿಸದ ಕಾಯಿದೆಯ ವಿವಿಧ ಸೆಕ್ಷನ್ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿವೆ. ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್ 20ರಂದು ಶರಣರ ವಿರುದ್ಧ ಆರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠವು ಚಿತ್ರದುರ್ಗದ ವಿಶೇಷ ನ್ಯಾಯಾಲಯದ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿತು.
ಲಂಡನ್: ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವನ್ ಸ್ಮಿತ್, ಶುಕ್ರವಾರ (ಜೂನ್ 2) ತಮ್ಮ 34ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ತಮ್ಮ ನೆಚ್ಚಿನ ಆಟಗಾರನ ಜನಮ ದಿನಕ್ಕೆ ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಶುಭ ಕೋರಿದ್ದಾರೆ. ಇದರ ನಡುವೆ ಇಂಗ್ಲೆಂಡ್ ತಂಡದ ಅಧಿಕೃತ ಅಭಿಮಾನಿ ಬಳಗ ‘ಬಾರ್ಮಿ ಆರ್ಮಿ’ ಸೋಶಿಯಲ್ ಮೀಡಿಯಾದಲ್ಲಿ ಆಸೀಸ್ ಮಾಜಿ ನಾಯಕನಿಗೆ ವಿಭಿನ್ನ ಶೈಲಿಯಲ್ಲಿ ಶುಭ ಕೋರಿ ಟ್ರೋಲ್ ಮಾಡಿದೆ. ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಟೀವನ್ ಸ್ಮಿತ್ ಅಳುತ್ತಿರುವ ಹಳೆಯ ಪೋಟೋವನ್ನು ಹಂಚಿಕೊಂಡ ಬಾರ್ಮಿ ಆರ್ಮಿ, “ಜನುಮ ದಿನದ ಶುಭಾಶಯ ಸ್ಟೀವನ್ ಸ್ಮಿತ್, ಆದಷ್ಟು ಬೇಗ ನಿಮ್ಮನ್ನು ನೋಡುತ್ತೇವೆ,” ಎಂಬ ಶೀರ್ಷಿಕೆಯನ್ನು ನೀಡಿದೆ. ಇದಕ್ಕೆ ಕೆಲ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಟೀವನ್ ಸ್ಮಿತ್ ಪ್ರಸ್ತುತ ಇಂಗ್ಲೆಂಡ್‌ನಲ್ಲಿದ್ದಾರೆ ಹಾಗೂ ಭಾರತ ವಿರುದ್ಧ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಲಂಡನ್‌ನ ದಿ ಓವಲ್ ಮೈದಾನದಲ್ಲಿ ಜೂನ್…
ದೆಹಲಿ: ಎರಡು ತಿಂಗಳು ಕಾಲ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಮನರಂಜನೆಯಲ್ಲಿ ಮುಳುಗೆದ್ದ ಕ್ರಿಕೆಟ್ ಪ್ರಿಯರು ಇದೀಗ ಟೆಸ್ಟ್ ಕ್ರಿಕೆಟ್‌ನ ವಿಶ್ವಕಪ್ ಫೈನಲ್ ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದಾರೆ. ಎರಡನೇ ಆವೃತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪೈಪೋಟಿ ನಡೆಸಲಿದ್ದು, ಲಂಡನ್‌ನ ದಿ ಓವಲ್ ಕ್ರೀಡಾಂಗಣದಲ್ಲಿ ಜೂನ್ 7ರಿಂದ 11ರವರೆಗೆ ಫೈನಲ್ ಹಣಾಹಣಿ ನಡೆಯಲಿದೆ. ಅಂದಹಾಗೆ ಭಾರತ ತಂಡ ಕೆಲ ಪ್ರಮುಖ ಆಟಗಾರರ ಸೇವೆ ಕಳೆದುಕೊಂಡಿದೆ. ಗಾಯದ ಸಮಸ್ಯೆ ಎದುರಿಸಿರುವ ಜಸ್‌ಪ್ರೀತ್ ಬುಮ್ರಾ, ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಪ್ರಮುಖವಾಗಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅಲಭ್ಯತೆ ಭಾರತ ತಂಡಕ್ಕೆ ಭಾರಿ ನಷ್ಟ ತಂದೊಡ್ಡಿದೆ. ಪಂತ್ ಅಲಭ್ಯತೆ ಕಾರಣ ಭಾರತ ತಂಡ ಯಾವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌ನ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲಕ್ಕೆ ಸಿಲುಕಿದೆ. ಸದ್ಯ ಭಾರತ ತಂಡದಲ್ಲಿ ಅನನುಭವಿಗಳಾದ ಕೆಎಸ್ ಭರತ್ ಮತ್ತು…
ಅದಾ ಶರ್ಮಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ದಿ ಕೇರಳ ಸ್ಟೋರಿ ಸಿನಿಮಾ ಸಾಕಷ್ಟು ವಿವಾದಗಳ ಮೂಲಕ ತೆರೆಕಂಡು ಸಾಕಷ್ಟು ಕಲೆಕ್ಷನ್ ಮಾಡಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರದ ಕುರಿತು ಪ್ರತಿಕ್ರಿಯಿಸಿದ್ದು ಇದೀಗ ನಟ ಕಮಲ್ ಹಾಸನ್ ಇಂಥಹ ಚಿತ್ರಗಳನ್ನು ಜನ ನೋಡಬೇಕು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ನಟ ಕಮಲ್ ಹಾಸನ್ ಚಿತ್ರರಂಗದಲ್ಲಿ ನಡೆಯುವ ಅನೇಕ ಆಗುಹೋಗುಗಳ ಬಗ್ಗೆ ಮಾತನಾಡುತ್ತಿರುತ್ತಾರೆ. ಇತ್ತೀಚೆಗೆ ಕಮಲ್ ಹಾಸನ್ ‘ದಿ ಕೇರಳ ಸ್ಟೋರಿ’ ಸಿನಿಮಾದ ಕುರಿತು ಅಪಸ್ವರ ತೆಗೆದಿದ್ದರು. ಈ ಬಾರಿ ಅವರು ಮತ್ತೆ ಅದೇ ವಿಚಾರದ ಕುರಿತು ಮಾತನಾಡಿದ್ದಾರೆ. ‘ಇಂಡಿಯಾ ಟುಡೇ ಕಾನ್ಕ್ಲೇವ್ ಸೌತ್ 2023’ನಲ್ಲಿ ಭಾಗಿ ಆಗಿ ಕಮಲ್ ಹಾಸನ್, ‘ನಾನು ಯಾವುದೇ ಸಿನಿಮಾ ಬ್ಯಾನ್ ಮಾಡಲು ಬಯಸಲ್ಲ. ಚಿತ್ರವನ್ನು ಮತ್ತು ಚಿತ್ರದ ಉದ್ದೇಶ ಏನು ಎಂಬುದನ್ನು ಜನರಿಗೆ ಅರ್ಥಮಾಡಿಸಲು ನಾನು ಪ್ರಯತ್ನಿಸುತ್ತೇನೆ’ ಎಂದಿದ್ದಾರೆ. ‘ವಿಶ್ವರೂಪಂ ಸಿನಿಮಾ ತಮಿಳುನಾಡಿನಲ್ಲಿ ಬ್ಯಾನ್ ಆಯಿತು. ಇದನ್ನು ಏಕೆ ನಿಷೇಧಿಸಲಾಯಿತು ಎಂಬ ಬಗ್ಗೆ ಜನರಿಗೆ ಇನ್ನೂ…
ಇಂದು (ಜೂನ್ 3) ತಾರೀಕು ವಿಶ್ವ ಸೈಕಲ್ ಅಥವಾ ಬೈಸಿಕಲ್ ದಿನವನ್ನು ಆಚರಿಸಲಾಗುತ್ತಿದೆ. ಸೈಕಲ್ ತುಳಿಯುವುದರಿಂದ ಎಲ್ಲಾ ವಯಸ್ಸಿನವರ ಆರೋಗ್ಯ ವೃದ್ಧಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ. ವಿಶ್ವ ಸಂಸ್ಥೆ ಗೊತ್ತುಪಡಿಸಿದ ಈ ದಿನವನ್ನು ವಿಶ್ವ ಸೈಕಲ್ ದಿನ ಎಂದು ಆಚರಿಸಲಾಗುತ್ತದೆ. ಕಡಿಮೆ ಖರ್ಚಿನಲ್ಲಿ ಪ್ರಯಾಣದ ಜತೆ ನಮ್ಮ ಉತ್ತಮ ಆರೋಗ್ಯವನ್ನು ಪಡೆಯಲು ಇರುವ ಒಂದೇ ಒಂದು ವಾಹನವಿದು. ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಎಲ್ಲರೂ ಮನೆಯಲ್ಲಿಯೇ ಸಿಲುಕಿಕೊಂಡಿರುವ ಪರಿಸ್ಥಿತಿ ಎದುರಾಯಿತು. ಹೀಗಿರುವಾಗ ಜನರು ಮಾನಸಿಕ ಸಮಸ್ಯೆ, ಕೀಲು ನೋವು, ಬೊಜ್ಜು ಉಂತಾದ ಸಮಸ್ಯೆಗಳಿಗೆ ಒಳಗಾಗಿರಬಹುದು. ದೇಹದ ತೂಕವೂ ಹೆಚ್ಚಾಗಿರಬಹುದು. ಹೀಗಿರುವಾಗ ಇನ್ನೇಕೆ ತಡ? ನಿಮ್ಮ ಮನೆಯ ಅಂಗಳದಲ್ಲಿಯೇ ಸೈಕಲ್ ತುಳಿದರೂ ಸಾಕು. ಅದೆಷ್ಟೋ ಆರೋಗ್ಯ ಸಮಸ್ಯೆಗಳಿಂದ ಹೊರಬರಬಹುದು. ವಿಶ್ವ ಸೈಕಲ್ ದಿನವನ್ನು ಏಕೆ ಆಚರಿಸಲಾಗುತ್ತದೆ? ಕಡಿಮೆ ಪರಿಸರ ಮಾಲಿನ್ಯ ಸೈಕಲ್ ಯಾವುದೇ ವಿಷಕಾರಕ ಅನಿಲವನ್ನು ಹೊರಸೂಸುವುದಿಲ್ಲ. ಸೈಕಲ್ ಪರಿಸರ ಸ್ನೇಹಿ. ದೇಹದ ಆರೋಗ್ಯವನ್ನೂ, ಮಾನಸಿಕ ಸದೃಢತೆಯ ಜತೆಗೆ ಸುತ್ತಮುತ್ತಲಿನ ವಾತಾವಣಕ್ಕೂ ಯಾವುದೇ ಹಾನಿ…
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಪಾಕಿಸ್ತಾನದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಮೇ ವೇಳೆಗೆ ದೇಶದ ಆರ್ಥಿಕ ಹಣದುಬ್ಬರ ಶೇ.37.97ರ ಏರಿಕೆಯೊಂದಿಗೆ ವಿಕೋಪಕ್ಕೆ ಹೋಗಿದ್ದು, ದಕ್ಷಿಣ ಏಷ್ಯಾದಲ್ಲೇ ಇದು ಅತಿ ಹೆಚ್ಚು ಹಣದುಬ್ಬರ ದಾಖಲಿಸಿರುವ ದೇಶವೆಂದು ವರದಿಯಲ್ಲಿ ಹೇಳಲಾಗಿದೆ. ತೀವ್ರ ಬಿಕ್ಕಟ್ಟಿಗೆ ಸಿಲುಕಿದ್ದ ನೆರೆ ರಾಷ್ಟ್ರ ಲಂಕಾದ ವಾರ್ಷಿಕ ಹಣದುಬ್ಬರ ಪ್ರಮಾಣ ಶೇ.25.2ರಷ್ಟಿತ್ತು. ಆದರೀಗ ಪಾಕಿಸ್ತಾನದ ಪರಿಸ್ಥಿತಿ ಲಂಕಾವನ್ನೂ ಮೀರಿಸಿದೆ. ಬ್ಯೂರೋ ಆಫ್ ಸ್ಟಾಟಿಸ್ಟಿಕ್ಸ್ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ರೂಪಾಯಿ ಮೌಲ್ಯ ಕುಸಿತ, ಬಾಹ್ಯ ಸಾಲ, ವಿದೇಶಿ ವಿನಿಮಯ ಬಾಕಿ ಪಾವತಿಯಂಥ ಸಮಸ್ಯೆ ಹಾಗೂ ಜಾಗತಿಕ ಇಂಧನ ಬಿಕ್ಕಟ್ಟು, 2020ರಲ್ಲಿ ಪಾಕ್‌ನಲ್ಲಿ ಸಂಭವಿಸಿದ ಪ್ರವಾಹಗಳಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪಾಕ್‌ನಲ್ಲಿ ಹಣದುಬ್ಬರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಇದಿಷ್ಟೇ ಅಲ್ಲದೇ, ವರ್ಷದಿಂದ ವರ್ಷಕ್ಕೆ ಹಣದುಬ್ಬರದ ಪ್ರಮಾಣ ಶೇ.50ರಷ್ಟು ಏರಿಕೆಯಾಗಿದ್ದು, ಆಹಾರ ಪದಾರ್ಥಗಳಾದ ಆಲೂಗಡ್ಡೆ, ಗೋಧಿ ಹಿಟ್ಟು, ಚಹಾ, ಮೊಟ್ಟೆ, ಅಕ್ಕಿಯ ಬೆಲೆ ತೀವ್ರ ಏರಿಕೆಯಾಗಿದೆ. ಆಹಾರ ಪದಾರ್ಥಗಳನ್ನು ಹೊರತುಪಡಿಸಿದರೆ ಟೆಕ್ಸ್ಟ್ ಬುಕ್ಸ್‌ಗಳು,…