ಭುವನೇಶ್ವರ: ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಒಡಿಶಾ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಯ್ಯಪ್ಪನಹಳ್ಳಿ SMVTನಿಂದ 994 ಮಂದಿ ರಿಸರ್ವ್ಡ್ ಪ್ಯಾಸೆಂಜರ್ಗಳು, 300 ಅನ್ ರಿಸರ್ವ್ಡ್ ಪ್ಯಾಸೆಂಜರ್ ಗಳು ಸೇರಿ ಒಟ್ಟು 1294 ಮಂದಿ ಪ್ರಯಾಣ ಮಾಡಿದ್ದರು. ಇದೀಗ ಅಪಘಾತ ಹಿನ್ನಲೆ ಇಂದಿನ ರೈಲುಗಳ ಪ್ರಯಾಣವನ್ನ ರದ್ದು ಮಾಡಲಾಗಿದೆ.
Author: Prajatv Kannada
ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ (Yeshwantpur) ಹೌರಾದೆಡೆಗೆ (Howrah) ಸಾಗುತ್ತಿದ್ದ ಮತ್ತೊಂದು ರೈಲು (Train) ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೇ ವಕ್ತಾರ ಅಮಿತಾಬ್ ಶರ್ಮಾ, ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಮತ್ತೊಂದು ಹಳಿ ಮೇಲೆ ಬಿದ್ದಿತ್ತು. ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಕ್ಕೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದು ಅದರ 3-4 ಬೋಗಿಗಳು ಹಳಿತಪ್ಪಿವೆ ಎಂದು ತಿಳಿಸಿದ್ದಾರೆ. ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 50 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ…
ಭುವನೇಶ್ವರ್: ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಹಲವರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ಮೂಲಗಳ ಪ್ರಕಾರ ಶಾಲಿಮಾರ್ – ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್ ಜಿಲ್ಲೆಯ ಬಹನಾಗಾ ರೈಲ್ವೇ ನಿಲ್ದಾಣದ ಬಳಿಕ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿನ 8 ಬೋಗಿಗಳು ಹಳಿತಪ್ಪಿವೆ. ಎಕ್ಸ್‌ಪ್ರೆಸ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದ್ದು, ಹಲವು ಸಾವಾಗಿರುವುದಾಗಿ ಶಂಕಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವದೆಹಲಿ: ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಜನರನ್ನು ಆಶ್ಚರ್ಯಗೊಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತು ಸಂಯುಕ್ತ ವಿರೋಧ ಪಕ್ಷದ ಬಲದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಲಿದೆ. ಇದು ಜನರನ್ನು ಆಶ್ಚರ್ಯಗೊಳಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಸುಮ್ಮನೆ ಲೆಕ್ಕಾಚಾರ ಮಾಡಿ, ಒಗ್ಗಟ್ಟಿನ ಪ್ರತಿಪಕ್ಷ ಬಿಜೆಪಿಯನ್ನು ತಾನಾಗಿಯೇ ಸೋಲಿಸುತ್ತದೆ’ ಎಂದಿದ್ದಾರೆ. ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಸೋಲಿಸಿದ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಮಾತನಾಡುತ್ತಾ, ಮುಂಬರುವ ರಾಜ್ಯ ಚುನಾವಣೆಗಳು ಭಾರತದ ರಾಜಕೀಯದಲ್ಲಿ ಬದಲಾವಣೆಯನ್ನು ತರಲಿವೆ. ಸಂಸತ್ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಿದ್ದು, ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ನಿಯಮಿತವಾಗಿ ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು. ರಾಜಸ್ಥಾನ ಮತ್ತು ಛತ್ತೀಸ್‌ಗಢ ಕಾಂಗ್ರೆಸ್ ಆಡಳಿತದ ರಾಜ್ಯಗಳಾಗಿದ್ದು, ಈ ವರ್ಷಾಂತ್ಯದಲ್ಲಿ ರಾಜ್ಯ ಚುನಾವಣೆಗೆ ತಯಾರಿ ನಡೆಸುತ್ತಿವೆ. ‘ಪ್ರತಿಪಕ್ಷಗಳು ಸಾಕಷ್ಟು ಒಗ್ಗಟ್ಟಾಗಿವೆ. ನಾವು ಎಲ್ಲಾ…
ಧಾರವಾಡ: ಒಡಿಸಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಒನೆ ಹಾಗೂ ಸುದ್ದಿಗೋಷ್ಠಿಯನ್ನು ರದ್ದು ಮಾಡಿದ್ದಾರೆ. ಕೇಂದ್ರ ಸರ್ಕಾರದ 9 ವರ್ಷಗಳ ಆಡಳಿತ ಅವಧಿಯ ಸಾಧನೆ ಕುರಿತು ಹುಬ್ಬಳ್ಳಿಯ ಚಿಟಗುಪ್ಪಿ ಆವರಣದ ಎಂ ಪಿ ಕಚೇರಿಯಲ್ಲಿ ಇಂದು 12 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿತ್ತು. ಜೊತೆಗೆ ಸಂಜೆ 5 ಗಂಟೆಗೆ ಧಾರವಾಡದ ಗಣೇಶನಗರ ಮತ್ತು ಶ್ರೀನಗರ ಕೆಯುಡಿ ಸರ್ಕಲ್ ಹತ್ತಿರದ ಲೆವೆಲ್ ಕ್ರಾಸಿಂಗ್ ನಂ: 300 ಹಾಗೂ 299 ಗಳ ರಸ್ತೆ ಕೆಳ ಸೇತುವೆಗಳ ಶಂಕುಸ್ಥಾಪನೆ ಹಾಗೂ ಕಲ್ಯಾಣನಗರದ ಲೆವೆಲ್ ಕ್ರಾಸಿಂಗ್ ಗೇಟ್ ನಂ 297ಕ್ಕೆ ನಿರ್ಮಿಸಲಾದ ರಸ್ತೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ಈಗ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ಹುಬ್ಬಳ್ಳಿ ಧಾರವಾಡದಲ್ಲಿ ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿಯವರು ಹಮ್ಮಿಕೊಂಡಿದ್ದ ಎಲ್ಲ…
ಶಿಡ್ಲಘಟ್ಟ: ಸರ್ಕಾರಿ ಇಲಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರಿಂದ ಹಣ ಲೂಟಿ ಹೊಡೆಯುವ ಕೆಲಸ ನಡೆದಿದೆ, ಅಧಿಕಾರಿಗಳು ಮದ್ಯವರ್ತಿಗಳಿಗೆ ಕಡಿವಾಣ ಹಾಕುವ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಬಿಎನ್ ರವಿಕುಮಾರ್ ತಾಲೂಕು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನಾನು ಈ ಕ್ಷೇತ್ರದ ಒಬ್ಬ ರೈತನಾಗಿ ಇಲ್ಲಿನ ರೈತರ ಹಾಗು ಜನಸಾಮಾನ್ಯರ ಕಷ್ಟಗಳನ್ನು ಅರಿತಿದ್ದೇನೆ, ಕೆಲ ಇಲಾಖೆಗಳಲ್ಲಿ ಅಕ್ರಮ ನಡೆದಿರುವುದು ನನ್ನ ಗಮನಕ್ಕಿದ್ದು, ಹಿಂದೆ ನಡೆದಿರುವುದನ್ನು ನಾನೀಗ ಪ್ರಶ್ನೆ ಮಾಡುವುದಿಲ್ಲ, ಇನ್ನು ಮುಂದೆ ಕ್ಷೇತ್ರದಲ್ಲಿ ಯಾವ ಅಕ್ರಮಕ್ಕೂ ಅವಕಾಶವಿಲ್ಲತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದರು. ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ ನಿಮಗೂ ತೊಂದರೆ ಆಗುತ್ತದೆ ಎಂಬುದನ್ನು ಅರಿತು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಂದಾಯ ಇಲಾಖೆಯಲ್ಲಿ ಮದ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸಾರ್ವಜನಿಕರನ್ನು ಸುಖಾ ಸುಮ್ಮನೆ ಅಲೆದಾಡಿಸದೆ ತ್ವರಿತವಾಗಿ ಕೆಲಸಗಳನ್ನು ಮಾಡಿ ಮುಗಿಸಬೇಕು ಎಂದು…
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನೇಕ ಮಹತ್ತರ ಕೊಡುಗೆಗಳನ್ನು ಕೊಡುವ ಮೂಲಕ ಸಾಕಷ್ಟು ಯೋಜನೆಗಳು ಅನುಷ್ಠಾನಗೊಂಡಿವೆ. ಬಹುತೇಕ ಯೋಜನೆಗಳು ತಾರ್ಕಿಕ ಅಂತ್ಯ ಕಂಡರೆ ಕೇಲವು ಇನ್ನು ಅಂಬೆಗಾಲು ಇಡುತ್ತಾ ಸಾಗಿವೆ. ಇದರಲ್ಲಿ ಧಾರವಾಡ- ಬೆಳಗಾವಿ ನೇರ ರೈಲು ಮಾರ್ಗದ ಅನುಷ್ಠಾನ ಸಹ ಒಂದು. ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಮಾರ್ಗವಾಗಿ ತೆರಳುವ ಈ ರೈಲು ಮಾರ್ಗದ ಜಾರಿಗಾಗಿ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭೂಮಿ ವಶಪಡಿಸಿಕೊಳ್ಳುವ ಕಾರ್ಯ ಇದುವರೆಗೂ ಆರಂಭಗೊಂಡಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ರೈಲು ಮಾರ್ಗ ಅಳವಡಿಕೆಗೆ ಬೇಕಾದ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ಭೂಮಿಯನ್ನು ಕಳೆದ ಮಾರ್ಚ್‌ನಲ್ಲಿಯೇ ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕಿತ್ತು. ಭೂಮಿ ಹಸ್ತಾಂತರಗೊಂಡ ನಂತರ ರೈಲ್ವೆ ಇಲಾಖೆ ಟೆಂಡರ್ ಕರೆಯುವ ಕಾರ್ಯ ಮಾಡಬೇಕಿತ್ತು. ಆದರೆ, ಕೆಐಎಡಿಬಿ (ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾ ಡೆವಲಪ್ ಮೆಂಟ್ ಬೋರ್ಡ್) ಇನ್ನೂ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಕಾರ್ಯವನ್ನೇ ಮಾಡಿಲ್ಲ. ಇನ್ನೂ ಧಾರವಾಡ- ಬೆಳಗಾವಿ ನೇರ…
ಕೊಪ್ಪಳ: ಇಲ್ಲಿ ನಡಿತಾ ಇರೋ ಮದುವೆಯ ವಧು (Bride) ಪಶ್ಚಿಮ ಬಂಗಾಳ ಮೂಲದ ಪೂಜಾ. 4 ವರ್ಷದ ಹಿಂದೆ ಟ್ಯೂಮರ್ ರೋಗಕ್ಕೆ ತುತ್ತಾಗಿ ತನ್ನ ಎರಡು ಕಣ್ಣುಗಳ ದೃಷ್ಠಿಯನ್ನೇ ಕಳೆದುಕೊಂಡಿದ್ದಾಳೆ. ಹೆತ್ತ ತಂದೆಯನ್ನು ಕಳೆದುಕೊಂಡ ಈ ಪೂಜಾಳ ಬಾಳು ಸಹ ಟ್ಯೂಮರ್ ರೋಗದಿಂದ ಕತ್ತಲಾಗಿ ಬಿಟ್ಟಿದೆ. ಸದ್ಯ ಈ ಕತ್ತಲೆಯ ಜೀವನದಲ್ಲಿ ಕೈ ಹಿಡಿದು ನಡೆಸಲು ಆಕೆಯ ಬಾಳಿಗೆ ದೀಪವಾಗಿ ಬಂದಿರುವ ಕನ್ನಡದ ಯುವಕ ಕೊಪ್ಪಳ (Koppala) ನಿವಾಸಿ ಮಂಜುನಾಥ್ ಶೆಟ್ಟಿ. ಕೊಪ್ಪಳದ ಮಂಜುನಾಥ್ ಶೆಟ್ಟಿ ಹಾಗೂ ಅಂಧ (Blind) ಯುವತಿ ಪೂಜಾ (ಶಿವಾನಿ) ಸದ್ಯ ಒಂದಾಗಿ ಬಾಳ ಪಯಣ ಶುರು ಮಾಡಿದ್ದಾರೆ. ಗುರುವಾರ ಕೊಪ್ಪಳದ ವಾಸವಿ ಕಲ್ಯಾಣ ಮಂಟಪದಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಣ್ಣಿಲ್ಲದ ಕತ್ತಲಲ್ಲಿ ಇದ್ದ ತನ್ನ ಜೀವನಕ್ಕೊಂದು ಅರ್ಥ ಸಿಕ್ಕಿದೆ. ಈಗ ನಾನು ತುಂಬಾ ಸಂತೋಷವಾಗಿದ್ದೇನೆ ಎಂದು ಶಿವಾನಿ ಭಾವುಕಳಾಗಿದ್ದಾಳೆ. ಮಂಜುನಾಥ್ ಶೆಟ್ಟಿ ಕೊಪ್ಪಳದಲ್ಲಿ ಸಣ್ಣ ಉದ್ಯಮಿ. ಸಿಸಿಟಿವಿ ಇನ್‌ಸ್ಟಾಲೇಶನ್, ಎಣ್ಣೆ ಗಾಣದ ಉದ್ಯಮ ನಡೆಸುತ್ತಾನೆ. ಮದುವೆಯಾದರೆ…
ಹುಬ್ಬಳ್ಳಿ: ಬಹು ನಿರೀಕ್ಷೆಯ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲಿನ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ. ದೆಹಲಿಯಲ್ಲಿ ಕೇಂದ್ರ ರೈಲ್ವೇ ಮಂತ್ರಿ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನರ ಬಹು ನಿರೀಕ್ಷಿತ ಈ ಉತ್ಕಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದೂ ಜೋಶಿ ಹೇಳಿದ್ದಾರೆ. ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ. ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದ ರೀತಿ ನಿರ್ಮಿಸಲಾಗಿದ್ದು, ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರೀಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ. ವಂದೇ ಭಾರತ್…
ಬೆಂಗಳೂರು: ಒಡಿಶಾದ ಬಹನಾಗ ನಿಲ್ದಾಣದ ಬಳಿ ಶುಕ್ರವಾರ 3 ರೈಲುಗಳ ನಡುವೆ ಡಿಕ್ಕಿಯಾಗಿದ್ದು, ದುರಂತ ಸ್ಥಳಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ. ಹೌದು ರಾಜ್ಯದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆತರಲು ಸಿಎಂ ಸಿದ್ದರಾಮಯ್ಯ ಅವರು ಸಂತೋಷ್ ಲಾಡ್ ಅವರನ್ನ ಒಡಿಶಾಗೆ ಕಳುಹಿಸಿದ್ದಾರೆ. ದುರಂತ ಸ್ಥಳದಲ್ಲಿರುವ ಕನ್ನಡಿಗರು ನನ್ನ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಸಚಿವ ಸಂತೋಷ್ ಲಾಡ್ ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ‘ ಕನ್ನಡಿಗರನ್ನ ಸುರಕ್ಷಿತವಾಗಿ ಕರೆತರುವುದು ನಮ್ಮ ಜವಾಬ್ದಾರಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ‘ವಿಶೇಷ ಏರ್ ಕ್ರಾಫ್ಟ್ ಮೂಲಕ ಮಧ್ಯಾಹ್ನ 2.30 ಕ್ಕೆ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಜೊತೆ ಭುವನೇಶ್ವರಕ್ಕೆ ಹೋಗುತ್ತಿದ್ದೇನೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸ್ಥಳಕ್ಕೆ ತೆರಳಬೇಕಾಗಿದೆ. ಸಂಜೆ 6-7 ಗಂಟೆಗೆ ನಾನು ದುರಂತ ಸ್ಥಳಕ್ಕೆ ತಲುಪಬಹುದು. ಅಲ್ಲಿ ಹೋದ ಮೇಲೆ ವ್ಯವಸ್ಥೆಗೆ ಏನು ಲಭ್ಯ ಇದೆ ಅಂತಾ ನೋಡಬೇಕಾಗುತ್ತದೆ. ಕನ್ನಡಿಗರಿಗೆ ಯಾವುದೇ ತೊಂದರೆ ಇದ್ದರೆ ಚಿಕಿತ್ಸೆ, ಸುರಕ್ಷಿತವಾಗಿ ಕರೆತರುವುದು ನಮ್ಮ ಜವಾಬ್ದಾರಿ…