Author: Prajatv Kannada

ಬೆಂಗಳೂರು: ಒಡಿಶಾ ರೈಲು ಅಪಘಾತ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ರೈಲು ಅಪಘಾತ ದುರದೃಷ್ಟಕರ, ಕರ್ನಾಟಕ ಜನರ ದುಃಖ ಜೊತೆಯಲ್ಲಿದೆ. ಅಪಘಾತದ ಕಾರಣ ಹುಡುಕೋದು ಕಷ್ಟ. ಆದರೆ, ಮುಂದೆ ಈ ರೀತಿ ಆಗದ ಹಾಗೇ ನೋಡಿಕೊಳ್ಳಬೇಕು ಅಂದರೆ ಕಾರಣ ಹುಡುಕಬೇಕು ಎಂದಿದ್ದಾರೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಸೂರ್ಯೋದಯ: 05.52 AM, ಸೂರ್ಯಾಸ್ತ : 06.43 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ವಸಂತ ಋತು, ತಿಥಿ: ಇವತ್ತು ಚತುರ್ದಶಿ 11:16 AM ತನಕ ನಂತರ ಹುಣ್ಣಿಮೆ ನಕ್ಷತ್ರ: ಇವತ್ತು ವಿಶಾಖ 06:16 AM ತನಕ ನಂತರ ಅನುರಾಧ ಯೋಗ: ಇವತ್ತು ಶಿವ 02:48 PM ತನಕ ನಂತರ ಸಿದ್ದಿ ಕರಣ: ಇವತ್ತು ಗರಜ 12:07 AM ತನಕ ನಂತರ ವಣಿಜ 11:16 AM ತನಕ ನಂತರ ವಿಷ್ಟಿ 10:17 PM ತನಕ ನಂತರ ಬವ ರಾಹು ಕಾಲ: 09:00 ನಿಂದ 10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 07.11 PM to 08.42 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:48 ನಿಂದ ಮ.12:40 ವರೆಗೂ ಮೇಷ ರಾಶಿ: ಅವಿವಾಹಿತರಿಗೆ ಮದುವೆ ಯೋಗ,ಮರಳು ಕಂಪನಿ ಮಾಲಕರಿಗೆ ಆರ್ಥಿಕ ಚೇತರಿಕೆ,ಗೃಹ…

Read More

ಬೆಂಗಳೂರು: ಕಾಂಗ್ರೆಸ್ ನವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಾ ಇದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಾತನಾಡಿದ ಅವರು, ನಾವು ಖಂಡಿತವಾಗಿ ಗ್ಯಾರಂಟಿಗಳ ವಿಚಾರದಲ್ಲಿ ಸರ್ಕಾರಿ ಆದೇಶವಾದ ನಂತರ ಜನರ ಬಳಿ ಹೋಗುತ್ತೇವೆ. ಇದರಲ್ಲಿ ಸಾಕಷ್ಟು ಹಿಡನ್ ಅಜೆಂಡಾ ಇದೆ. ಚುನಾವಣಾ ಪೂರ್ವದಲ್ಲಿ ಜನರಿಗೆ ಬಹಳಷ್ಟು ದೊಡ್ಡ ಬೆಟ್ಟದಷ್ಟು ಭರವಸೆ ತೋರಿಸಿದ್ದರು. ಜನರ ನಿರೀಕ್ಷೆಗಳನ್ನು ದೊಡ್ಡಮಟ್ಟದಲ್ಲಿ ಇರಿಸಿ ಕಾಂಗ್ರೆಸ್ ಚುನಾವಣೆ ಗೆದ್ದಿದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಚುನಾವಣಾ ಪೂರ್ವದ ಮಾತು, ಚುನಾವಣಾ ನಂತರದ ಮಾತುಗಳಿಗೂ ಬಹಳಷ್ಟು ವ್ಯತ್ಯಾಸಗಳಿವೆ. ಎಲ್ಲರಿಗೂ 200 ಯೂನಿಟ್ ಕರೆಂಟ್ ಫ್ರೀ ಅಂತಾ ಘಂಟಾ ಘೋಷವಾಗಿ ಹೇಳಿದ್ದಾರೆ. ಅವರು ಹೇಳಿದ ಪ್ರಕಾರ ವಿದ್ಯುತ್ ಬಳಕೆ 200 ಯೂನಿಟ್ ಒಳಗೆ ಇದ್ದರೆ ಉಚಿತ ಕೊಡಬೇಕು. ಇಂದು ಸಿಎಂ ಮಾತಿನಲ್ಲಿ ಬಹಳ ವ್ಯತ್ಯಾಸ ಇದೆ. ಅಂದರೆ 200 ಯೂನಿಟ್ ಫ್ರೀ ಅಲ್ಲ ಸಾಮಾನ್ಯ ಜನ 75-80 ಯೂನಿಟ್ ಅಷ್ಟೇ ಬಳಸುತ್ತಾರೆ ಅಂತಾ…

Read More

ಬೆಂಗಳೂರು: 292 ಪೊಲೀಸ್ ಇನ್ಸ್​ಪೆಕ್ಟರ್​​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಈ ಸಂಬಂಧ ಆದೇಶ ಹೊರಡಿಸಲಾಗಿದೆ 292 ಪೊಲೀಸ್ ಇನ್ಸ್‍ಪೆಕ್ಟರ್ ಗಳನ್ನು ವರ್ಗಾವಣೆ ಮಾಡುವ ಮೂಲಕ ಪೊಲೀಸ್ ಇಲಾಖೆಯಲ್ಲಿ  ಸರ್ಕಾರವು ಮೇಜರ್ ಸರ್ಜರಿ ಮಾಡಿದೆ. ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಪೊಲೀಸ್ ಇನ್ಸ್‍ಪೆಕ್ಟರ್ ಗಳನ್ನು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಹಿಂತಿರುಗಿಸಿ ಸರಕಾರ ಆದೇಶಿಸಿದ್ದು, ವರ್ಗಾವಣೆಗೊಂಡಿರುವ ಪೊಲೀಸ್ ಅಧಿಕಾರಿಗಳು ತಕ್ಷಣ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದಿಂದ ಸೂಚಿಸಲಾಗಿದೆ.

Read More

ಬೆಂಗಳೂರು: ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್​ ಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ. ಒಸಿಐ ಕಾರ್ಡ್ ಅನ್ನು ರದ್ದುಗೊಳಿಸಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಬೆಂಗಳೂರಿನ  ಹೈಕೋರ್ಟ್ ವಿಸ್ತರಣೆ ಮಾಡಿದೆ. ಆ ಮೂಲಕ ಗಡಿಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು. ಆದರೆ ಚೇತನ್ ಅವರಿಂದ ಸಮಾಧಾನಕರ ಉತ್ತರ ಸಿಗದ ಹಿನ್ನೆಲೆ 2018 ರಲ್ಲಿ ನೀಡಿದ್ದ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ಅನ್ನು ಕೇಂದ್ರ ಸರಕಾರ ರದ್ದುಗೊಳಿಸಿತ್ತು. ಕೇಂದ್ರ ಸರಕಾರದ ಕ್ರಮದ ವಿರುದ್ಧ ಚೇತನ್ ಅಹಿಂಸಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಕೋರ್ಟ್ ಎ.21 ರಂದು ಚೇತನ್‍ಗೆ ಷರತ್ತುಬದ್ಧ ರಿಲೀಫ್ ನೀಡಿತ್ತು. ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಶುಕ್ರವಾರ ಜೂನ್ 20ರ ವರೆಗೆ ವಿಸ್ತರಿಸಿ ಆದೇಶಿಸಿದೆ.

Read More

ಬೆಂಗಳೂರು: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ನಡೆದ ಭೀಕರ ರೈಲು ಸರಣಿ ಅಪಘಾತ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 237 ಕ್ಕೆ ಏರಿಕೆಯಾಗಿದೆ. 900 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್, ಯಶವಂತಪುರ-ಹೌರಾ ರೈಲಿನಲ್ಲಿದ್ದ 110 ಕನ್ನಡಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ನಿವಾಸಿಗಳಾಗಿರುವ 110 ಕ್ಕೂ ಹೆಚ್ಚು ಕನ್ನಡಿಗರು, ಜೈನ ತೀರ್ಥ ಕ್ಷೇತ್ರವಾದ ಜಾರ್ಖಂಡ್‌ನ ಸಮ್ಮೇದ ಶಿಖರ್ಜಿಗೆ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಗಳೂರಿನಿಂದ ಹೊರಟಿದ್ದರು. ಬಾಲಸೋರ್‌ನಲ್ಲಿ ಸರಣಿ ಅಪಘಾತದ ವೇಳೆ, ಯಶವಂತಪುರ-ಹೌರಾ ರೈಲಿನ ಕೊನೇಯ ಮೂರು ಬೋಗಿಗಳಿಗೂ ಮತ್ತೊಂದು ಟ್ರೈನ್ ಡಿಕ್ಕಿ ಹೊಡೆದ ಪರಿಣಾಮ, ಈ ಬೋಗಿಗಳು ಕಳಚಿ ಸುಮಾರು ಒಂದುವರೆ ಕಿ.ಮೀ ದೂರಕ್ಕೆ ಉಳಿದಿದೆ. ಈ ಬೋಗಿಗಳಿದ್ದ ಪ್ರಯಾಣಿಕರಲ್ಲಿ ಹಲವರು ಗಾಯಗೊಂಡಿದ್ದಾರೆ, ಮೃತಪಟ್ಟಿದ್ದಾರೆ, ತಕ್ಷಣ ಸ್ಥಳೀಯರೆಲ್ಲ ಓಡಿ ಬಂದು ರಕ್ಷಣೆಗಿಳಿದಿದ್ದಾರೆ ಎಂದು ರೈಲಿನಲ್ಲಿ ಅಪಘಾತದಿಂದ ಬಚಾವಾದ ಕನ್ನಡಿಗರು ವಿವರಿಸಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ 12-30 ರವೇಳೆಗೆ ಯಶವಂತಪುರ- ಹೌರಾ ರೈಲು ಮತ್ತೆ ಪ್ರಯಾಣ ಮುಂದುವರಿಸಿದೆ ಎಂದು ಅವರು ತಿಳಿಸಿದ್ದಾರೆ.…

Read More

ಬೆಂಗಳೂರು: ಒಡಿಶಾ ರೈಲು ಅಪಘಾತದಲ್ಲಿ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ  ಸಿದ್ದರಾಮಯ್ಯ, ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ತಿಳಿಸಿದ್ದಾರೆ. ಇನ್ನೂ ಬಾಲಸೋರ್ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಕ್ಕೂ ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Read More

ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಅಧಿಕ ಜನ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

Read More

ಬೆಂಗಳೂರು: ​ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ. ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್​ ಆಗಿದ್ದು, ಘಟನಾ ಸ್ಥಳಕ್ಕೆ ರಾಜ್ಯ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

Read More

ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಯನ್ನು ಸ್ವಲ್ಪ ತಡವಾಗಿ ಜಾರಿಗೆ ತರಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಆಗಸ್ಟ್‌ 15ರಂದು ಚಾಲನೆ ನೀಡಲು ಉದ್ದೇಶಿಸಿದೆ. ತಾಂತ್ರಿಕ ಕಾರಣಗಳಿಂದ ಜೂನ್‌ನಲ್ಲಿಯೇ ಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರದ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಸಭೆಯ ವಿವರಗಳನ್ನು ನೀಡಿರುವ ಅವರು, ಚುನಾವಣೆ ಸಂದರ್ಭದಲ್ಲಿ ಘೋಷಿಸಿದಂತೆ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡಲಿದ್ದೇವೆ ಎಂದು ಹೇಳಿದ್ದು, ಯೋಜನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕಾಗಿ ಮನೆ ಯಜಮಾನಿಯು ಬ್ಯಾಂಕ್‌ ಖಾತೆ, ಆಧಾರ್‌ ಕಾರ್ಡ್‌ ಒದಗಿಸಬೇಕಾಗುತ್ತದೆ. ಹಾಗೂ ಯೋಜನೆಗಾಗಿ ಅರ್ಜಿ ಸಲ್ಲಿಸಬೇಕು. ಮನೆಯ ಯಜಮಾನಿ ಯಾರು ಎನ್ನುವುದನ್ನು ಮನೆಯವರೇ ತೀರ್ಮಾನಿಸಬೇಕಾಗುತ್ತದೆ. ಮನೆ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮಾ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ. ಜೂನ್‌ 15 – ಜುಲೈ 15 – ಅರ್ಜಿ ಸಲ್ಲಿಸಲು ಅವಕಾಶ; ಈ ಅವಧಿಯಲ್ಲಿ ಅರ್ಜಿದಾರರು ಅಂದರೆ ಮನೆ ಯಜಮಾನಿ ಬ್ಯಾಂಕ್‌ ಖಾತೆ ವಿವರ, ಆಧಾರ್‌ ಕಾರ್ಡ್‌ ವಿವರ ಹಾಗೂ…

Read More