ಬೆಂಗಳೂರು: ಸರ್ಕಾರ ರಚನೆ ಆದ ಬಳಿಕ ಮೊದಲ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ತೀರ್ಮಾನ ಮಾಡಿ ಆದೇಶ ಹೊರಡಿದ್ದೆವು. ಬಳಿಕ ಇಂದು ಕ್ಯಾಬಿನೆಟ್ ಸಭೆಯಲ್ಲಿ ಐದು ಗ್ಯಾರಂಟಿ ಚರ್ಚೆ ಮಾಡಿ ತೀರ್ಮಾನ ಮಾಡಲು ಕರೆದ ಸಭೆ ಆಗಿದೆ. ಸುದೀರ್ಘವಾಗಿ ಐದು ಗ್ಯಾರಂಟಿ ಚರ್ಚೆ ಮಾಡಿದ್ದೇವೆ. ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ನಿರ್ಧಾರವನ್ನು ಮಾಡಿದ್ದೇವೆ ನಾವು ಚುನಾವಣೆ ಸಂದರ್ಭದಲ್ಲಿ ಪಕ್ಷದ ವತಿಯಿಂದ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ನಾನು ಹಾಗೂ ಡಿಕೆ ಶಿವಕುಮಾರ್ ಗ್ಯಾರಂಟಿ ಕಾರ್ಡ್ ಗಳಿಗೆ ಸಹಿ ಹಾಕಿದ್ದೆವು. ಗ್ಯಾರಂಟಿ ಕಾರ್ಡ್ ಜಾರಿ ಮಾಡುತ್ತೇವೆ ಹಾಗೂ ಜನರಿಗೆ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದೆವು. ಮನೆಗಳಿಗೆ ಗ್ಯಾರಂಟಿ ಕಾರ್ಡ್ ಹಂಚುವ ಕೆಲಸ ಮಾಡಿದ್ದೆವು. ಆದರೆ ವಿರೋಧ ಪಕ್ಷಗಳು ಕೆಲವು ಟೀಕೆಗಳನ್ನು ಮಾಡಿದ್ದವು. ಮಾಧ್ಯಮಗಳು ತಮ್ಮದೇ ಆದ ರೀತಿಯಲ್ಲಿ ವರದಿ ಮಾಡಿದ್ದೀರಿ. ಆದರೆ ಕ್ಯಾಬಿನೆಟ್ ತೀರ್ಮಾನ ಜನರಿಗೆ ತಿಳಿಸಬೇಕು ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡಿದೆ.…
Author: Prajatv Kannada
ಬೆಂಗಳೂರು: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಪಾಸ್ಬುಕ್ ಜರಾಕ್ಸ್ ನೀಡಬೇಕು. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.
ಬೆಂಗಳೂರು: ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಯೋಜನೆ ಮಂಗಳಮಯಖಿಯರಿಗೂ ಸಹ ಅನ್ವಯಿಸುತ್ತದೆ ಎಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.
ಬೆಂಗಳೂರು: ಯುವನಿಧಿ ಯೋಜನೆ ಅಡಿ 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿ, ನೋಂದಾಯಿಸಿಕೊಂಡವರಿಗೆ ಪ್ರತಿ ತಿಂಗಳು ಪಧವಿದರರಿಗೆ 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ. 24 ತಿಂಗಳು ನೀಡುತ್ತೇವೆ. ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇವರು ನಿರುದ್ಯೋಗಿಗಳು ಎಂದು ಘೋಷಿಸಿಕೊಂಡಿರಬೇಕು. ಮತ್ತು ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್ ಒಳಗಡೆ ವಿದ್ಯುತ್ ಬಳಸುತ್ತಾರೆ ಅವರು ಬಿಲ್ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಶಕ್ತಿ ಯೋಜನೆ ಯೋಜನೆ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಶಕ್ತಿ ಯೋಜನೆ ನನ್ನ ಹೆಂಡತಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಶೇ. ೫೦% ಮಹಿಳೆಯರು ಸಮಾಜದಲ್ಲಿ ಇದ್ದಾರೆ. ಸ್ಟೂಡೆಂಟ್ ಸೇರಿ ಎಲ್ಲರಿಗೂ ಉಚಿತ ಬಸ್ ಪಾಸ್ ನೀಡಲಾಗುತ್ತದೆ. ಈ ತಿಂಗಳ ೧೧ ರಂದು ಈ ಯೋಜನೆ ಲಾಂಚ್ ಆಗುತ್ತದೆ. ಶಕ್ತಿ ಯೋಜನೆ ನನ್ನ ಹೆಂಡತಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್ ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆ ಎಸ್ ಆರ್ಟಿಸಿ ಬಸ್ನಲ್ಲಿ ಅವಕಾಶ…
ಬೆಂಗಳೂರು: ಕರ್ನಾಟಕ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದೆ. ಕೆಲವೇ ನಿಮಿಷಗಳಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಕಳೆದ ಹಲವು ದಿನಗಳಿಂದ ಭಾರತದ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗ್ಲೆ ಸಾಕಷ್ಟು ಮಂದಿ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿದ್ದು ಇದೀಗ ಬಹುಭಾಷ ನಟ ಕಿಶೋರ್ ಈ ಕುರಿತು ಸೋಷಿಯಲ್ ಮೀಡಯಾದಲ್ಲಿ ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕಿಶೋರ್, ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದಿದ್ದು ನಿಜವಾದರೆ, ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ. ಇಂದು ಅವರು ಸೋತರೆ ಭಾರತ ಸೋಲುತ್ತದೆ. ದೇಶದ ಗೌರವ ಹೆಚ್ಚಾಗುವುದು ಬೇರೆ ದೇಶದಲ್ಲೂ ನಮ್ಮ ಹಣ ಸುರಿದು ಜನರನ್ನು ಬಾಡಿಗೆಗೆ ತಂದು ಮಾಡುವ ರಾಜಕೀಯ ರ‍್ಯಾಲಿಯ ನಾಟಕಗಳಿಂದಲ್ಲ. ಜೀವ ತೇಯ್ದು ಬೆವರು ಹರಿಸಿ ಈ ಪಟುಗಳು ತಂದ ಮೆಡಲ್‌ಗಳಿಂದ ಎಂದಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ…
ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಭಿಷೇಕ್ ಅಂಬರೀಶ್ ಮದುವೆಗೆ ಕೌಂಟ್‌ಡೌನ್ ಶುರುವಾಗಿದ್ದು, ಸದ್ಯ ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿ ಅಭಿಷೇಕ್ ಕುಟುಂಬ ಮುಳುಗಿದೆ. ಅಭಿಷೇಕ್ ಅಂಬರೀಶ್, ಅವಿವ ಬಿಡಪ ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದು ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಜೂನ್ 5ರಂದು ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ. ಅಭಿಷೇಕ್- ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಸದ್ಯ ವೈಟ್ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ ಮಿಂಚಿದ್ದಾರೆ. 2022ರ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬದವರು, ಆಪ್ತರು, ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನಡೆದಿತ್ತು. ಈಗ ಮದುವೆಗೆ ಸಿದ್ಧತೆ ನಡೆಯುತ್ತಿದೆ. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ…
ದಿನ ಕಳೆದಂತೆ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಜನರು ಮನೆಯಿಂದ ಹೊರಬರಲಾರದ ಸ್ಥಿತಿಯುಂಟಾಗಿದೆ. ಬಿಸಿಲಿನಿಂದ ನಮ್ಮನ್ನು ನಾವು ಕಾಪಾಡಲು ಆರೋಗ್ಯಕರವಾದ ತಿಂಡಿ ತಿನಿಸುಗಳನ್ನು ಮತ್ತು ಫಲಾಹಾರಗಳನ್ನು ಜಾಸ್ತಿ ತಿಂದರೆ ಒಳ್ಳೆಯದು. ಅದೇ ರೀತಿ ಬಿಸಿಲಿನಲ್ಲಿ ಬಳಲಿ ಬಂದವರಿಗೆ ಎಳನೀರು ಶಕ್ತಿ ನೀಡುವುದರ ಜೊತೆಗೆ ಆರೋಗ್ಯವನ್ನು ಕಾಪಾಡುತ್ತದೆ. ಇವತ್ತು ನಾವು ಎಳನೀರಿನಿಂದ ತಯಾರಿಸಬಹುದಾದ ಒಂದು ರೆಸಿಪಿಯನ್ನು ತಿಳಿಸಿಕೊಡುತ್ತಿದ್ದೇವೆ. ಈ ರೆಸಿಪಿಯ ಹೆಸರು ಎಳನೀರು ಮಿಲ್ಕ್‌ಶೇಕ್. ಹಾಗಿದ್ದರೆ ಇದನ್ನು ಹೇಗೆ ತಯಾರಿಸುವುದು ಎಂದು ತಿಳಿದುಕೊಳ್ಳೋಣ. ಬೇಕಾಗುವ ಸಾಮಗ್ರಿಗಳು: ಎಳನೀರು- 1 ವೆನಿಲ್ಲಾ ಐಸ್‌ಕ್ರೀಮ್ – 1 ಕಪ್ ಹಾಲು- ಅರ್ಧ ಕಪ್ ಸಣ್ಣಗೆ ಹೆಚ್ಚಿದ ಬಾದಾಮ್ – ಸ್ವಲ್ಪ ಸಣ್ಣಗೆ ಹೆಚ್ಚಿದ ಪಿಸ್ತಾ – ಸ್ವಲ್ಪ ಕಂಡೆನ್ಸ್ಡ್ ಮಿಲ್ಕ್ – ಅಗತ್ಯಕ್ಕೆ ತಕ್ಕಷ್ಟು ಐಸ್ ಕ್ಯೂಬ್ಸ್ – 4ರಿಂದ 5 ಮಾಡುವ ವಿಧಾನ: ಮೊದಲಿಗೆ ಎಳನೀರಿನ ಗಂಜಿಯನ್ನು ತೆಗೆದು ಒಂದು ಮಿಕ್ಸಿ ಜಾರಿಗೆ ಹಾಕಿಕೊಳ್ಳಬೇಕು. ನಂತರ ಎಳನೀರಿನ ನೀರನ್ನು ಸಹಾ ಅದಕ್ಕೆ ಸೇರಿಸಿಕೊಳ್ಳಿ. ಬಳಿಕ 1 ಕಪ್ ವೆನಿಲ್ಲಾ…