ಬೆಂಗಳೂರು:- ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದೆ. ಆದರೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ಉಳಿದ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಸುತ್ತಮುತ್ತ ಚದುರಿದಂತೆ ಮಳೆ ಸುರಿಯಬಹುದು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ…
Author: Prajatv Kannada
ಬೆಂಗಳೂರು: ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲು ಸೇರಿದ ಮೇಲೆ ಅವರ ಅಭಿಮಾನಿಗಳು ಒಂದಿಲ್ಲ ಒಂದು ಹುಚ್ಚಾಟ ತೋರುತ್ತಿದ್ದಾರೆ. ಹಿಂದೊಮ್ಮೆ ಪರಪ್ಪನ ಅಗ್ರಹಾರದಲ್ಲಿ ಇದ್ದ ವೇಳೆ ದರ್ಶನ್ ಅವರ ಕೈದಿ ನಂಬರ್ ರಾತ್ರೋ ರಾತ್ರಿ ಟ್ರೆಂಡ್ ಆಗಿತ್ತು. ಅಲ್ಲದೇ ಬಳ್ಳಾರಿ ಜೈಲಿಗೆ ಬಂದ ಮೇಲು ಅವರ ಟೀ ಶರ್ಟ್ ಹಾಗೂ ಕೈದಿ ನಂಬರ್ ಟ್ರೆಂಡ್ ಆಗಿತ್ತು. ಬಳ್ಳಾರಿ ಜೈಲಿಗೆ ಸ್ಥಳಾಂತರ ಆದಮೇಲೆ ವಾಹನಗಳ ಮೇಲೆ ಆಕ್ಷೇಪಾರ್ಹ, ಪ್ರಚೋದನಾಕಾರಿ, ಬೇರೆ ನಟರ ಅಭಿಮಾನಿಗಳ ವಿರುದ್ಧ ಟಾಂಗ್ ಕೊಡುವಂತೆ ಸ್ಟಿಕ್ಕರ್, ಬರಹಗಳ ಅಳವಡಿಕೆ ಮಾಡುವುದು ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ಬೇರೆ ಬೇರೆ ರೀತಿಯ ಬರಹಗಳು ಹೆಚ್ಚಾಗಿವೆ. ಈ ಹಿಂದೆ ಈ ಮಟ್ಟಿಗೆ ಬರಹಗಳನ್ನು ವಾಹನಗಳ ಮೇಲೆ ಹಾಕಿರಲಿಲ್ಲ. ಇದು ಆರ್ಟಿಒ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದೆ. ಅನವಶ್ಯಕ, ಪ್ರಚೋದನಾಕಾರಿ ಬರಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ನೆಚ್ಚಿನ ನಟರ ಪೋಟೋಗಳನ್ನು ವಾಹನಗಳ ಮೇಲೆ ಹಾಕುವುದರ ಜತೆಗೆ ಪ್ರಚೋದನಾಕಾರಿ ಬರಹ, ಸ್ಟಿಕ್ಕರ್ ಅಂಟಿಸಲು ಅವಕಾಶವಿಲ್ಲ ಎಂದು…
ಬೆಂಗಳೂರು:- ಗೌರಿ-ಗಣೇಶನನ್ನ ಸ್ವಾಗತಿಸಲು ಸಿಟಿ ಮಂದಿ ಸಜ್ಜಾಗಿದ್ದು, ನಿನ್ನೆಯೇ ಕೆಆರ್ ಮಾರ್ಕೆಟ್ನಲ್ಲಿ ಖರೀದಿ ಜೋರಾಗಿತ್ತು. ಹೂವು, ಹಣ್ಣು, ಗರಿಕೆ, ಎಕ್ಕದ ಹಾರದ ಜೊತೆಗೆ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯಲ್ಲಿ ಗ್ರಾಹಕರು ವ್ಯಸ್ತರಾಗಿದ್ದರು. ಇತ್ತ ಪ್ರತಿ ಬಾರಿಯಂತೆ ಈ ಸಲ ಕೂಡ ಹೂ, ಹಣ್ಣುಗಳ ಬೆಲೆ ಕೊಂಚ ಏರಿಕೆಯಾಗಿದೆ. ಇದು ಗ್ರಾಹಕರಿಗೆ ಸ್ವಲ್ಪಮಟ್ಟಿಗೆ ಬಿಸಿ ಮುಟ್ಟಿಸಿತ್ತು. ಹೂ, ಹಣ್ಣುಗಳ ದರ ವಿವರ ಕನಕಾಂಬರ ಕೆಜಿಗೆ – 3000 ರೂ. ಮಲ್ಲಿಗೆ – ಕೆಜಿಗೆ 600 ರೂ. ಗುಲಾಬಿ- ಕೆಜಿಗೆ 250 ರೂ. ಸೇವಂತಿಗೆ – ಕೆಜಿಗೆ 180 ರೂ. ಸುಗಂಧರಾಜ-ಕೆಜಿಗೆ 240 ರೂ ಹಣ್ಣುಗಳ ದರ ಸೇಬು- ಕೆಜಿಗೆ 120 ರಿಂದ 200ರೂ. ದಾಳಿಂಬೆ- ಕೆಜಿಗೆ 160 ರೂ. ಏಲಕ್ಕಿ ಬಾಳೆ – ಕೆಜಿಗೆ 120 ರೂ. ಸೀತಾಫಲ- ಕೆಜಿಗೆ 100 ರೂ. ಸಪೋಟ- ಕೆಜಿಗೆ 100 ರೂ. ದ್ರಾಕ್ಷಿ- ಕೆಜಿಗೆ 120- 200 ರೂ. ಅನಾನಸ್- ಎರಡಕ್ಕೆ 100-120 ರೂ. ಹಬ್ಬದ…
ಬೆಂಗಳೂರು:- ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ವಿರುದ್ಧವೇ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು. ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. ಅಧಿಕಾರಿ ವರ್ಗ ನಿಮ್ಮ ಕೈಯಡಿ ಇದೆ. ನೀವೇ ಅಧಿಕಾರಿಗಳಿಗೆ ‘ಸರ್, ಸರ್’ ಎನ್ನುವ ಮೂಲಕ ಮಂತ್ರಿ ಸ್ಥಾನವನ್ನು ಕಡೆಗೆಣಿಸುತ್ತಿದ್ದೀರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇಲಾಖೆ ಬಗ್ಗೆ ಮಾಹಿತಿ ಕೊರತೆ ಇದ್ದರೆ ಅದಕ್ಕೆ ಬೇಕಾದ ಸೂಕ್ತ ಮಾಹಿತಿ ಅಧಿಕಾರಿಗಳಿಂದ ತರಿಸಿಕೊಳ್ಳಿ. ಅದರ ಬದಲಾಗಿ ಅದೇ ಇಲಾಖೆಯ ಇನ್ನೋರ್ವ ಅಧಿಕಾರಿಗೆ ‘ಸರ್ ಸರ್’ ಎಂದರೆ ಹೇಗೆ? ಅಧಿಕಾರಿಗಳು ಸದಾ ಆ ಸ್ಥಾನಕ್ಕೆ ಗೌರವಿಸುವಂತೆ ನಿಮ್ಮ ವರ್ತನೆ ಸಹ ಇರಬೇಕು ಎಂದು ಸಿಎಂ ನಿರ್ದೇಶನ ನೀಡಿದರು.
ಬೆಂಗಳೂರು:- ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಹಲವು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ. ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್ ಕಲ್ಯಾಣಿಯಲ್ಲಿ ಸೆಪ್ಟೆಂಬರ್ 7 ರಿಂದ 9ರವರೆಗೆ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಕೆರೆಯ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಈ ದಿನಾಂಕಗಳಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ನಿರ್ಬಂಧ ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇಜಿ ಕಡೆಯಿಂದ ಕನ್ನಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್…
ಬೆಂಗಳೂರು:- ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಶನಿವಾರ ಗಣೇಶ ಚರುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿ ಕೂಡ ನೀಡಲಾಗಿದೆ.
ಬಾಲಿವುಡ್ ಸಿನಿಮಾ ರಂಗದಲ್ಲಿ ಹೆಚ್ಚಿನ ನಟ, ನಟಿಯರು ಡ್ರಗ್ಸ್ ಗೆ ಅಡಿಕ್ಟ್ ಆಗಿದ್ದಾರೆ ಅನ್ನೋದು ಗೊತ್ತೇ ಇದೆ. ಖ್ಯಾತ ನಟ ಸುಶಾಂತ್ ಸಿಂಗ್ ನಿಧನದ ಬಳಿಕ ಡ್ರಗ್ಸ್ ಪ್ರಕರಣದಲ್ಲಿ ಅನೇಕರ ಹೆಸರು ಕೇಳಿ ಬಂದಿತ್ತು. ಇದೀಗ ಖ್ಯಾತ ಗಾಯಕ ಹನಿ ಸಿಂಗ್ ತಮಗೆ ಡ್ರಗ್ಸ್ ಚಟ ಅಂಟಿಸಿದ್ದೇ ಬಾಲಿವುಡ್ ನ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಹನಿ ಸಿಂಗ್, ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಶಾಲಿನಿ ತಲ್ವಾರ್ ಜೊತೆ ವಿಚ್ಛೇದನ ಪಡೆದಿದ್ದು, ಅದಕ್ಕೆ ಡ್ರಗ್ಸ್ ಚಟವೇ ಕಾರಣ ಎಂದಿದ್ದಾರೆ. ಮದುವೆ ಆದಾಗ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಯಶಸ್ಸು ತಲೆಗೆ ಏರುತ್ತಿದ್ದಂತೆ ಕುಟುಂಬವನ್ನು ಸಂಪೂರ್ಣವಾಗಿ ನೆಗ್ಲೆಟ್ ಮಾಡಿದರು. ಇದರಿಂದ ಸಾಂಸಾರಿಕ ಜೀವನ ಚಿದ್ರ ಚಿದ್ರವಾಯಿತು. ‘ಕೆಲ ಖ್ಯಾತ ನಾಮರು ನನಗೆ ಡ್ರಗ್ ಅಡಿಕ್ಷನ್ ಮಾಡಿಸಿದರು. ನೀನು ಪಂಜಾಬಿ, ಮದ್ಯ ಸೇವನೆ ಮಾಡುತ್ತಿಯಾ. ಇದನ್ನು ಮಾಡಿ ನೋಡು ಎಂದರು. ಇದರಲ್ಲಿ ಏನಿದೆ? ಮಾಡ್ತೀನಿ ಕೊಡಿ ಎಂದು ನಶೆ…
ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಆದಮೇಲೆ ವಾಹನಗಳ ಮೇಲೆ ಆಕ್ಷೇಪಾರ್ಹ, ಪ್ರಚೋದನಾಕಾರಿ, ಬೇರೆ ನಟರ ಅಭಿಮಾನಿಗಳ ವಿರುದ್ಧ ಟಾಂಗ್ ಕೊಡುವಂತೆ ಸ್ಟಿಕ್ಕರ್, ಬರಹಗಳ ಅಳವಡಿಕೆ ಮಾಡುವುದು ಹೆಚ್ಚಾಗಿದೆ. ಇದು ಆರ್ಟಿಒ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು, ಅನವಶ್ಯಕ, ಪ್ರಚೋದನಾಕಾರಿ ಬರಹಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಈವರೆಗೆ ನಂಬರ್ ಪ್ಲೇಟ್ ಮೇಲೆ ಮಾತ್ರ ಬರಹ, ಸ್ಟಿಕ್ಕರ್ ಇದ್ದರೆ ಗಮನಿಸುತ್ತಿದ್ದೆವು. ಇನ್ನುಮುಂದೆ ವಾಹನಗಳ ಇತರ ಭಾಗಗಳಲ್ಲಿ ಕೂಡ ಅನಧಿಕೃತ ಬರಹ ಹಾಕಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಆರ್ ಟಿಒ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳ ಮಾತನ್ನ ಉಲ್ಲಂಘಿಸಿ ಸ್ಟಿಕ್ಕರ್, ಬರಹ ಅಂಟಿಸಿದಲ್ಲಿ ಮೊದಲ ಬಾರಿಗೆ 500 ರೂಪಾಯಿ, ಎರಡನೇ ಬಾರಿ 1000 ರೂಪಾಯಿ, ಮೂರನೇ ಬಾರಿ ಅದೇ ತಪ್ಪು ಮಾಡಿದರೆ ಪರವಾನಗಿಯನ್ನೇ ರದ್ದು ಮಾಡುತ್ತೇವೆ ಎಂದು ಆರ್ಟಿಒ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಆರ್ಟಿಒ ಅಡಿಷನಲ್ ಕಮಿಷನರ್ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ನಂಬರ್ ಪ್ಲೇಟ್…
‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಕಳೆದ 15 ದಿನಗಳಿಂದ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್ನಲ್ಲಿ ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮಂಗಳವಾರ ಸಂಜೆ 5.10ರ ವೇಳೆಗೆ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ. 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ಮೋಹನ್ ಅಲ್ಲಿಂದ ಬಿದ್ದರು. ಶೂಟಿಂಗ್ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್ಗೆ ಸುರಕ್ಷತಾ ಸಾಧನಗಳನ್ನು ಕೊಡದೇ ಕೆಲಸ ಮಾಡಿಸುತ್ತಿದ್ದರು ಎಂಬ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಮೋಹನ್ ಕುಮಾರ್ ಮೇಲಿಂದ ಕೆಳಕ್ಕೆ ಬಿದ್ದಾಗ ತಲೆಗೆ ಏಟಾಗಿ…
ಬೀದರ ಜಿಲ್ಲೆಯ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟ ಅಳಿಸಲು ಹೆಚ್ಚು ಒತ್ತು ಜಿಲ್ಲೆಗೆ ಕ್ಷೀರಕ್ರಾಂತಿ ಗೆ ಪ್ರೇರಣೆ ರಾಜ್ಯಸಭಾ ಸದಸ್ಯರ ಅನುದಾನದಿಂದ ಹಾಲು ಉತ್ಪಾದಕ ಸಹಕಾರಿ ಸಂಘಗಳಿಗೆ 5 ಕೋಟಿ ಅನುದಾನ ವಿತರಣೆ. ಬೀದರ ಜಿಲ್ಲೆಯಲ್ಲಿ 86ಹಾಲು ಉತ್ಪಾದನೆ ಸಂಘಕ್ಕೆ ನೂತನ ತಂತ್ರಜ್ಞಾನದ ಪರಿಕರ ವಿತರಣೆ ಹಾಗು 15ನೂತನ ಹಾಲು ಉತ್ಪಾದಕರ ಸಂಘಗಳ ಕಟ್ಟಡ ನಿರ್ಮಾಣ ಸೇರಿದಂತೆ ಪರಿಕರ ವಿತರಣಗೆ ಚಾಲನೆ ನೀಡಿದರು. ಬೀದರ್ ನಗರದ ಬಿ ವ್ಹಿ ಬಿ ಕಾಲೇಜು ಆವರಣದಲ್ಲಿ ಆಯೋಜಿಸಿದ ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಧರ್ಮಸ್ಥಳ ಹಾಗು ಹಾಲು ಉತ್ಪಾದಕ ಸಹಕಾರಿ ಸಂಘಗಳ ಸಂಯುಕ್ತಾಶ್ರಯಲ್ಲಿ ಕ್ಷೀರಕ್ರಾಂತಿ ಕಾರ್ಯಕ್ರಮ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಡಾ ವೀರೇಂದ್ರ ಹೆಗ್ಗಡೆ ದೀಪ ಬೆಳಗುಲಿಸುವ ಮೂಲಕ ಚಾಲನೆ ನಿಡಿದ್ರು. ಡಾ ವೀರೇಂದ್ರ ಹೆಗ್ಗಡೆ ಮಾತನಾಡಿ ಬೀದರ ಜಿಲ್ಲೆಯ ಹಿಂದುಳಿದ ಜಿಲ್ಲೆಯ ಎಂಬ ಹಣ್ಣೆ ಪಟ್ಟಿ ಅಳುಸಲು ಕ್ಷೀರಕ್ರಾಂತಿ ಚಾಲನೆ. ಜಿಲ್ಲೆಯಲ್ಲಿ 461 ಹಾಲು ಉತ್ಪಾದಕ ಸಂಘ…